Connect with us

    BANTWAL

    ಬಂಟ್ವಾಳ: ಅನ್ಯಕೋಮಿನ ಯುವಕನೊಂದಿಗೆ ಬೆಂಗಳೂರಿಗೆ ಹೊರಟಿದ್ದ ಯುವತಿ-ಬಸ್ ತಡೆದು ಜೋಡಿಯನ್ನು ಠಾಣೆಗೊಪ್ಪಿಸಿದ ಹಿಂದೂ ಕಾರ್ಯಕರ್ತರು

    Published

    on

    ಬಂಟ್ವಾಳ: ಅನ್ಯಕೋಮಿನ ಯುವಕನ ಜೊತೆಯಲ್ಲಿ ಯುವತಿಯೋರ್ವಳು ಬೆಂಗಳೂರಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ಧಾಳೆ ಎಂಬ ಕಾರಣಕ್ಕಾಗಿ ಹಿಂದೂ ಸಂಘಟನೆಯ ಕಾರ್ಯಕರ್ತರ ಬಸ್‌ನ್ನು ತಡೆದು ನಿಲ್ಲಿಸಿ, ಪೊಲೀಸರಿಗೆ ಒಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.


    ಮಂಗಳೂರಿನಿಂದ ಖಾಸಗಿ ಬಸ್ ನಲ್ಲಿ ಅನ್ಯಕೋಮಿನ ಯುವಕನ ಜೊತೆ ಯುವತಿಯೋರ್ವಳು‌ ಪ್ರಯಾಣಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಕಲ್ಲಡ್ಕ ಪ್ರಖಂಡದ ವಿಶ್ವ ಹಿಂದೂ ಪರಿಷತ್ ಭಜರಂಗದಳದ ಕಾರ್ಯಕರ್ತರು ದಾಸಕೋಡಿ ಎಂಬಲ್ಲಿ ಬಸ್ ತಡೆದು ನಿಲ್ಲಿಸಿದ್ದಾರೆ.

    ಆ ಬಳಿಕ ಬಸ್ ನಲ್ಲಿ ಕಾರ್ಯಕರ್ತರು ಹಾಗೂ ಪ್ರಯಾಣಿಕರ ಮಧ್ಯೆ ಮಾತಿನ ಚಕಮಕಿ ನಡೆದ ವಿಡಿಯೋ ವೈರಲ್ ಆಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಆಗಮಿಸಿ ಕಾರ್ಯಕರ್ತರು ಹಾಗೂ ಯುವಕ ಹಾಗು ಯುವತಿ ಠಾಣೆಗೆ ತೆರಳಿದ್ದಾರೆ.

    ಠಾಣೆಯಲ್ಲಿ ಮಾತುಕತೆ ನಡೆಸಿದ ಬಳಿಕ ಮನೆಯವರ ಜೊತೆ ಕಳುಹಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

     

    Click to comment

    Leave a Reply

    Your email address will not be published. Required fields are marked *

    BANTWAL

    ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

    Published

    on

    ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

    ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

    ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

    ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

    Continue Reading

    BANTWAL

    ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

    Published

    on

    ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

    Continue Reading

    BANTWAL

    ಬಂಟ್ವಾಳ: ಹಂಚಿಕಟ್ಟೆಯಲ್ಲಿ ಸಾಗಾಟದ ಲಾರಿಯಲ್ಲಿದ್ದ ಸಿಎನ್‌ಜಿ ಸೋರಿಕೆ

    Published

    on

    ಬಂಟ್ವಾಳ: ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಯ ವಗ್ಗ ಸಮೀಪದ ಹಂಚಿಕಟ್ಟೆಯಲ್ಲಿ ಗೇಲ್ ಕಂಪನಿಯ ಸಿಎನ್‌ಜಿ ಗ್ಯಾಸ್ ಸಾಗಾಟದ ಲಾರಿಯಲ್ಲಿದ್ದ ಸಿಎನ್‌ಜಿ ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾದ ಘಟನೆ ನಡೆದಿದೆ.

    ಸಿಎನ್‌ಜಿ ಸೋರಿಕೆ ಗಮನಕ್ಕೆ ಬಂದ ತಕ್ಷಣ ಲಾರಿ ಚಾಲಕ ಹೆದ್ದಾರಿ ಬದಿಗೆ ನಿಲ್ಲಿಸಿದ್ದು, ಬಳಿಕ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿದ್ದಾರೆ.

    ಅದಾಗಲೇ ಸೋರಿಕೆಯನ್ನು ಚಾಲಕ ಹಾಗೂ ಸ್ಥಳೀಯರು ಸೇರಿ ತಡೆದಿದ್ದಾರೆ.

    Continue Reading

    LATEST NEWS

    Trending