Connect with us

    BANTWAL

    ಬಂಟ್ವಾಳ: ಗಾಂಜಾ ವ್ಯಸನಿಗಳಿಂದ ಪೆಟ್ರೋಲ್‌ ಸುರಿದು ಯುವಕನ ಬರ್ಬರ ಕೊಲೆ-ಗುಡ್ಡದಲ್ಲಿ ಶವ ಪತ್ತೆ..!

    Published

    on

    ಗಾಂಜಾ ವಹಿವಾಟಿನಲ್ಲಿ ಬಂಟ್ವಾಳ ಮೂಲದ ವ್ಯಕ್ತಿಯನ್ನು ಪೆಟ್ರೋಲ್ ಸುರಿದು ಮೂಡಿಗೆರೆಯಲ್ಲಿ ಕೊಲೆ ಮಾಡಲಾದ ಘಟನೆ ಬೆಳಕಿಗೆ ಬಂದಿದೆ.

    ಬಂಟ್ವಾಳ: ಗಾಂಜಾ ವಹಿವಾಟಿನಲ್ಲಿ ಬಂಟ್ವಾಳ ಮೂಲದ ವ್ಯಕ್ತಿಯನ್ನು ಪೆಟ್ರೋಲ್ ಸುರಿದು ಮೂಡಿಗೆರೆಯಲ್ಲಿ ಕೊಲೆ ಮಾಡಲಾದ ಘಟನೆ ಬೆಳಕಿಗೆ ಬಂದಿದ್ದು,ಇದೀಗ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಚಿಕ್ಕಮಗಳೂರು ಸರಕಾರಿ ಆಸ್ಪತ್ರೆಯಲ್ಲಿ ನಡೆಸಲಾಗಿದೆ.

    ಬಂಟ್ವಾಳ ತಾಲೂಕಿನ ಇರಾ ಗ್ರಾಮದ ನಿವಾಸಿ ಅಬ್ಬಾಸ್ ಅವರ ಪುತ್ರ ಸವಾದ್ (35) ಕೊಲೆಯಾದ ವ್ಯಕ್ತಿ.

    ಫವಾಜ್ ಎಂಬಾತನನ್ನು ಆರೋಪಿಗಳು ಪೆಟ್ರೋಲ್ ಸುರಿದು ಕೊಲೆ ಮಾಡಿ ಬಳಿಕ ಚಿಕ್ಕಮಗಳೂರು ಮೂಡಿಗೆರೆಯ ಬಣಕ್ಕಲ್ ಎಂಬಲ್ಲಿ ಗುಡ್ಡದಲ್ಲಿ ಬಿಸಾಡಿ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.

    ಈತನಿಗೆ ಮದುವೆಯಾಗಿದ್ದು, ಬಳಿಕ ಪತ್ನಿಯನ್ನು ದೂರ ಮಾಡಿದ್ದಾನೆ ಎಂದು ಹೇಳಲಾಗಿದೆ.

    ಈತ ಗಾಂಜಾ ಮಾರಾಟ ದಂದೆಯಲ್ಲಿ ತೊಡಗಿದ್ದಲ್ಲದೆ, ಗಾಂಜಾ ವ್ಯಸನಿಯಾಗಿದ್ದ.

    ಸುಸಂಸ್ಕೃತ ಕುಟುಂಬದ ಯುವಕನಾಗಿದ್ದ ಈತನ ಕೆಟ್ಟ ಬುದ್ದಿಯಿಂದ ಬೇಸೆತ್ತ ಮನೆಯವರು ಇವನನ್ನು ಮನೆಯಿಂದ ಹೊರಹಾಕಿದ್ದರು ಎನ್ನಲಾಗಿದೆ.

    ಗಾಂಜಾ ವಹಿವಾಟು ಜೋರಾಗಿ ನಡೆಸುತ್ತಿದ್ದ ಈತನಿಗೆ ಗಾಂಜಾ ಪೆಡ್ಲರ್ ಗಳ ಜೊತೆ ಅತಿಯಾದ ಸಂಪರ್ಕ ಇತ್ತು‌ ಎನ್ನಲಾಗಿದೆ.

    ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇವರೊಳಗೆ ಹಣಕಾಸಿನ ಅಥವಾ ಗಾಂಜಾ ವಿಚಾರದಲ್ಲಿ ವೈಮನಸ್ಸು ಉಂಟಾಗಿ ಈತನನ್ನು ಸುಮಾರು ಹತ್ತು ದಿನಗಳ ಹಿಂದೆ ಇರಾದಿಂದ ಕಿಡ್ನಾಪ್ ಮಾಡಿದ್ದರು ಎನ್ನಲಾಗಿದೆ.

    ಬಳಿಕ ಯಾವುದೋ ಅಜ್ಞಾತ ಸ್ಥಳದಲ್ಲಿ ಈತನನ್ನು ಕೂಡಿ ಇಟ್ಟು ಪೆಟ್ರೋಲ್ ಸುರಿದು ಕೊಲೆ ಮಾಡಲಾಗಿದೆ.

    ಕೊಲೆ ಮಾಡಿ ಬಣಕ್ಕಲ್ ಎಂಬಲ್ಲಿ ಗುಡ್ಡದಲ್ಲಿ ಬಿಸಾಡಿದ್ದಾರೆ.

    ವಗ್ಗ ಅಥವಾ ಕಾವಳಕಟ್ಟೆ ಮೂಲದ ಯುವಕರು ಈತನ ಕೊಲೆಯ ಹಿಂದೆ ಇರುವ ಆರೋಪಿಗಳು ಎಂಬ ಮಾಹಿತಿ ಪೋಲೀಸ್ ಇಲಾಖೆ ಲಭ್ಯವಾಗಿದೆ.

    ಸ್ನೇಹಿತ  ಗಾಂಜಾ ವ್ಯಸನಿಗಳಿಗೆ ಈತನ‌ ಕಿಡ್ನಾಪ್ ಬಗ್ಗೆ ಮಾಹಿತಿ ಇತ್ತು ಎನ್ನಲಾಗಿದೆ.

    ಸ್ನೇಹಿತರೇ ಈತನ‌ ಕೊಲೆ ಮಾಡಿದ್ದಾರೆ ಎಂಬ ಸಂಶಯ ವ್ಯಕ್ತವಾಗಿದ್ದು ಆರೋಪಿಗಳ ಪತ್ತೆಗಾಗಿ‌ ಪೋಲೀಸರು ಬಲೆ ಬೀಸಿದ್ದಾರೆ.

    ಇದೀಗ ಸವಾದ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಚಿಕ್ಕಮಗಳೂರು ಸರಕಾರಿ ಆಸ್ಪತ್ರೆಯಲ್ಲಿ ಇದೀಗ ನಡೆಸಲಾಗುತ್ತಿದ್ದು, ಸಂಜೆ ವೇಳೆ ಮೃತದೇಹವನ್ನು ಬಂಟ್ವಾಳದ ಇರಾ ಗ್ರಾಮದಲ್ಲಿರುವ ಅವರ ಮನೆಗೆ ತರಲು ಸಿದ್ಧತೆ ನಡೆದಿದೆ ಎಂದು ಮನೆ ಮಂದಿ ಮಾಹಿತಿ ನೀಡಿದ್ದಾರೆ.

    ಈ ಘಟನೆ ಮಾಸುವ ಮುನ್ನವೇ ಮತ್ತೆ ಇರಾ ನಿವಾಸಿಯನ್ನು ಕಿಡ್ಕಾಪ್ ಮಾಡಿ ಬಳಿಕ ಕೊಲೆಗೈದು ಬಣಕಲ್ ಅರಣ್ಯ ಪ್ರದೇಶದಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ.

    ಕೊಲೆ ಮಾಡಿದ ಹಾಗೂ ಅವರಿಗೆ ಪ್ರೇರಣೆ ನೀಡಿದ ಎಲ್ಲಾ ನೈಜ ಆರೋಪಿಗಳನ್ನು ಬಂಧಿಸಿ ಅವರ ಮೇಲೆ ಸೂಕತವಾದ ಕಾನೂನು ಕ್ರಮಕೈಗೊಳ್ಳಬೇಕು.

    ಜತೆಗೆ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಕಾರ ಮತ್ತು ಪೋಲೀಸ್ ಇಲಾಖೆ ಗ್ರಾಮದ ಜನರ ಸಹಕಾರ ಪಡೆದು ಕಟ್ಟುನಿಟ್ಟಿನ ಕ್ರಮವಹಿಸಬೇಕು ಎಂದು ಗ್ರಾಮಸ್ಥರು ವಿನಂತಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    BANTWAL

    ಬ್ರೇಕಪ್ ಆದ್ರೂ ಬಿಡದ ಪಾಗಲ್ ಪ್ರೇಮಿ; ನಿಮಿಷಕ್ಕೊಮ್ಮೆ ಗೂಗಲ್ ಪೇ ಮಾಡಿ ಹಿಂಸೆ..!

    Published

    on

    ಪ್ರೀತಿ ಒಂದು ಮಾಯೆ. ಯುವಕ – ಯುವತಿಯ ನಡೆವಿನ ಅನ್ಯೋನ್ಯತೆ, ಹೊಂದಿಕೊಳ್ಳುವುದರ ಮೇಲೆ ಎಲ್ಲವೂ ಅವಲಂಬಿತವಾಗಿರುತ್ತವೆ. ಪ್ರೀತಿ ಎಂದರೆ ಕೇವಲ ಆಕರ್ಷಣೆಯಲ್ಲ. ಅಥವಾ ಒಂದು ಹೆಣ್ಣಿನ ಅಂಗಾಂಗ ನೋಡಿ ಉಕ್ಕಿ ಬರುವ ಭಾವವೂ ಅಲ್ಲ. ಅದೊಂದು ಪವಿತ್ರ ಬಂಧ. ಎಲ್ಲಿ ಸರಿಯಾದ ಹೊಂದಾಣಿಕೆ ಇರುವುದಿಲ್ಲವೋ ಅಲ್ಲಿ ಬ್ರೇಕಪ್ ಆಗುತ್ತದೆ. ಅಷ್ಡು ಮಾತ್ರವಲ್ಲದೇ ಯಾವುದೋ ಒತ್ತಡ, ಕೌಟುಂಬಿಕ ಕಲಹಗಳಿಂದಲೂ ಪ್ರೇಮಿಗಳ ಸಂಬಂಧಕ್ಕೆ ಬಿರುಕು ಬೀಳುತ್ತದೆ.

    ಪ್ರೇಮಿಗಳ ನಡುವೆ ಬ್ರೇಕಪ್ ಸರ್ವೇ ಸಾಮಾನ್ಯ. ಆದರೆ, ಆ ನೋವಿನಿಂದ ಹೊರಬರುವುದಂತೂ ತುಂಬಾ ಕಷ್ಟ. ಕೆಲವರು ಹಳೆಯ ಪ್ರೇಮಿಯ ನೆನಪಲ್ಲಿ ದಿನ ಕಳೆದರೆ, ಇನ್ನು ಕೆಲವರು ಕೈ ಕೊಟ್ಟ ಪ್ರಿಯತಮೆಗೆ ಬುದ್ಧಿ ಕಲಿಸಲು ಮುಂದಾಗುತ್ತಾರೆ. ಆದರೆ, ಇಲ್ಲೊಬ್ಬ ಯುವಕ ಬ್ರೇಕಪ್ ಬಳಿಕ ಮಾಜಿ ಪ್ರಿಯತಮೆಗೆ ವಿಚಿತ್ರವಾಗಿ ಹಿಂಸೆ ನೀಡಿದ್ದಾನೆ ಎಂದು ಉಲ್ಲೇಖವಾಗಿದೆ. ಈ ಕುರಿತು ಸ್ವತಃ ಯುವತಿಯೇ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾಳೆ.

    ಬ್ರೇಕಪ್‌ ಬಳಿಕ ಯುವತಿಯು ಮಾಜಿ ಪ್ರಿಯಕರನ ನಂಬರನ್ನು ಎಲ್ಲ ಕಡೆಯೂ ಬ್ಲಾಕ್ ಮಾಡಿದ್ದಾಳೆ. ಆದರೆ ಅವನು ತನ್ನ ಪ್ರೇಯಸಿಯನ್ನು ಹಿಂಸಿಸಲು ಗೂಗಲ್ ಪೇ ಆಯ್ಕೆ ಮಾಡ್ಕೊಂಡಿದ್ದಾನೆ. ಬ್ರೇಕಪ್ ನಂತರ ಅವನು ಗೂಗಲ್ ಪೇ ನಲ್ಲಿ ನಿಮಿಷಕ್ಕೆ ಒಂದು ರೂಪಾಯಿ ಸೆಂಡ್ ಮಾಡುತ್ತಿದ್ದಾನಂತೆ.

    ಆಯುಷಿ ಎಂಬುವವರು ತಮ್ಮ ಎಕ್ಸ್ ಖಾತೆ @ShutupAyushiii ಯಲ್ಲಿ ಮಾಜಿ ಪ್ರಿಯಕರ ಬಗ್ಗೆ ಬರೆದುಕೊಂಡಿದ್ದಾಳೆ. ಪೋಸ್ಟ್ ನಲ್ಲಿ, ‘ಎಲ್ಲ ಕಡೆ ಆತನನ್ನು ಬ್ಲಾಕ್ ಮಾಡಿದ ಮೇಲೆ ಗೂಗಲ್ ಪೇನಲ್ಲಿ ಪ್ರತಿ ನಿಮಿಷಕ್ಕೆ ಒಂದು ರೂಪಾಯಿ ಸೆಂಡ್ ಮಾಡ್ತಿದ್ದಾನೆ’ ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದು, ಅದರೊಂದಿಗೆ ಅಳುವ ಎಮೋಜಿ ಹಾಕಿದ್ದಾಳೆ. ಈ ಪೋಸ್ಟ್ ನೋಡಿದರೆ ಒಂದು ಕ್ಷಣ ಹೀಗೂ ಹಿಂಸೆ ಕೊಡುತ್ತಾರಾ ? ಎಂದೆನಿಸುತ್ತದೆ.

    ಈ ಪೋಸ್ಟ್ ಒಂದು ಲಕ್ಷದವರೆಗೆ ವೀಕ್ಷಣೆ ಕಂಡಿದ್ದು, ನೆಟ್ಟಿಗರು ವಿಧವಿಧವಾಗಿ ಕಾಮೆಂಟ್ ಮಾಡಿದ್ದಾರೆ.ಒಬ್ಬರು, ‘ನಿಮ್ಮ ಮಾಜಿ ಇದೇ ಕೆಲಸ ಮುಂದುವರೆಸಿದ್ರೆ ತಿಂಗಳಿಗೆ ನೀವು 40 ಸಾವಿರಕ್ಕಿಂತ ಹೆಚ್ಚು ಸಂಪಾದನೆ ಮಾಡಬಹುದು. ಏನೂ ಕೆಲಸ ಮಾಡದೆ ಕುಳಿತಲ್ಲೇ ಹಣ ಬರುತ್ತೆ ಅಂದ್ರೆ ಟೆನ್ಷನ್ ಏಕೆ’ ಎಂದಿದ್ದಾರೆ. ಇನ್ನೊಬ್ಬರು, ‘ನಿಮಿಷದ ಲೆಕ್ಕದಲ್ಲಿ ನೋಡೋದಾದ್ರೆ ನೀವು ದಿನಕ್ಕೆ 1440 ರೂಪಾಯಿ ಪಡೆಯುತ್ತೀರಿ’ ಎಂದಿದ್ದಾರೆ. ಮತ್ತೊಬ್ಬರು, ‘ಎರಡು ದಿನ ಮಾಡ್ತಾನೆ, ಹಣ ಖಾಲಿ ಆದ್ಮೇಲೆ ಆತನೇ ಸುಮ್ಮನಾಗ್ತಾನೆ’ ಎಂದು ಕಾಮೆಂಟ್ ಮಾಡಿದ್ದಾರೆ.

    Continue Reading

    BANTWAL

    ಕಲ್ಲಡ್ಕದಲ್ಲಿ ಸರ್ವೀಸ್ ರಸ್ತೆಗೆ ಡಾಮರು

    Published

    on

    ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.

    ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    Continue Reading

    BANTWAL

    ಮಂಗಳೂರು: ಯುವತಿ ವಿಚಾರದಲ್ಲಿ ಯುವಕನಿಗೆ ಥಳಿತ; ಆರೋಪಿಗಳು ಅರೆಸ್ಟ್

    Published

    on

    ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್‌ ಸಪ್ವಾನ್( 25), ಮಹಮ್ಮದ್‌ ರಿಜ್ವಾನ್‌ (25), ಇರ್ಪಾನ್‍(27), ಅನೀಸ್‍ ಅಹಮ್ಮದ್‍ (19), ನಾಸೀರ್‍ (27), ಇಬ್ರಾಹಿಂ, ಶಾಕೀರ್‍ (18)ನನ್ನು ಬಂಧಿಸಲಾಗಿದೆ.

    ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್‍ ಮುಸ್ತಾಫ್‍ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.

     

    ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ

     

    ಮಹಮ್ಮದ್‍ ಮುಸ್ತಾಫ್‍ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್‍ ಮುಸ್ತಾಫ್‍ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.

    Continue Reading

    LATEST NEWS

    Trending