BANTWAL
Bantwala: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಬಂಟ್ವಾಳ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಮಂಗಳೂರು ಕೊಟೆಕಾರ್ ಮಜಲು ನಿವಾಸಿ ಮೂಸಬ್ಬ ಅವರ ಮಗ ಸಿದ್ದೀಕ್ ಬಂಧಿತ ಆರೋಪಿ.
ಆರೋಪಿ ಸಿದ್ದೀಕ್ 2015 ರ ಡಿಸೆಂಬರ್ ನಲ್ಲಿ ಸಾರ್ವಜನಿಕ ಸ್ಥಳವೊಂದರಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ವೇಳೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.
ಈತ ಷರತ್ತು ಬದ್ದ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ.
ಆ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ.
ಜು.1ರಂದು ಪೊಲೀಸ್ ನಿರೀಕ್ಷಕ ವಿವೇಕಾನಂದ, ಪೊಲೀಸ್ ಉಪ ನಿರೀಕ್ಷಕ ಹರೀಶ್ ಎಂ ಆರ್, ಅಕ್ಷಯ್ ಡವಗಿ, ಸಂಜೀವ ಕೆ, ಹಾಗೂ ಭಾರತಿ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿ ಗಣೇಶ ಪ್ರಸಾದ್, ಯೋಗೇಶ್ ಡಿ ಎಲ್ ಹಾಗೂ ವಿಜಯ್ ರವರು ಮಾಹಿತಿ ಸಂಗ್ರಹಿಸಿ ಕೇರಳ ಗಡಿ ಭಾಗದ ತಲಪಾಡಿ ಎಂಬಲ್ಲಿ ದಸ್ತಗಿರಿ ಮಾಡಿಕೊಂಡು ಬಂದು ಜು. 2 ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ನ್ಯಾಯಾಲಯವು ಆರೋಪಿ ಸಿದ್ದೀಕ್ ಗೆ ನ್ಯಾಯಾಂಗ ಬಂಧನ ವಿಧಿಸಿದೆ.
BANTWAL
ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ-ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ.
ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸುವ ಕಾರ್ಯ ಮಾಡಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ನೀಡಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
BANTWAL
Bantwala: ಹೃದಯ ಸಂಬಂಧಿ ಖಾಯಿಲೆಯಿಂದ 4 ವರ್ಷದ ಬಾಲಕಿ ನಿಧನ..!
ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ಬಂಟ್ವಾಳದ ಮಿತ್ತೂರಿನಲ್ಲಿ ನಡೆದಿದೆ.
ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ನಡೆದಿದೆ.
ಮೃತ ಬಾಲಕಿಯನ್ನು ಬಂಟ್ವಾಳ ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ತಿಳಿದು ಬಂದಿದೆ.
ಜಮೀಲಾ ಬಾಲಕಿ ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿದ್ದಳು.
ಈಕೆ ಅನಾರೋಗ್ಯದಿಂದ ಇದ್ದು, ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
BANTWAL
Bantwala: ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾ – ಕರೆಂಟ್ ಕಂಬಕ್ಕೆ ಗುದ್ದಿದ ಬಸ್..!
ಬಂಟ್ವಾಳ: ಸರಕಾರಿ ಬಸ್ ಒಂದು ಓವರ್ ಟೇಕ್ ಮಾಡುತ್ತಿದ್ದ ಟೆಂಪೋ ರಿಕ್ಷಾವನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಗುದ್ದಿದ ಘಟನೆ ಬಂಟ್ವಾಳದ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ.
ಮೆಲ್ಕಾರಿನಿಂದ ಬರುತ್ತಿದ್ದ ಇಲ್ಯಾಸ್ ಟೆಂಪೋ ರಿಕ್ಷಾ ಚಾಲಕನು ಕಂದೂರಿನ ಬಜಾರ್ ಅಡಿಟೋರಿಯಮ್ ಬಳಿ ಬರುತ್ತಿದ್ದ ಆಕ್ಟಿವಾ ಗಾಡಿಯೊಂದನ್ನು ಓವರ್ ಟೇಕ್ ಮಾಡುತ್ತಿದ್ದ.
ಈ ವೇಳೆ ಮುಡಿಪು ಮಾರ್ಗವಾಗಿ ಬರುತ್ತಿದ್ದ ಕಾಸರಗೋಡು ಬಿ.ಸಿ.ರೋಡ್ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಬಸ್ ಗುದ್ದಿದ್ದ ರಭಸಕ್ಕೆ ಕರೆಂಟ್ ಕಂಬ ತುಂಡಾಗಿದೆ.
ಬಸ್ಸಿನಲ್ಲಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೋಲಿಸರು ಆಗಮಿಸಿ, ಪರಿಶೀಲನೆ ನಡೆಸಿದರು.
- bangalore6 days ago
ಹುಡುಗಿ ಚೇಂಜ್ ಆದ್ರೂ ಡ್ರೆಸ್ ಚೇಂಜ್ ಆಗಿಲ್ಲ ಅಲ್ವಾ ಶೆಟ್ರೇ?
- bengaluru5 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA5 days ago
ಮುಂದಿನ ವರ್ಷದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್- ಮಧು ಬಂಗಾರಪ್ಪ
- DAKSHINA KANNADA4 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!