Connect with us

BANTWAL

Bantwala : ತುಂಬೆ ಬ್ರಹ್ಮಸನ್ನಿಧಿ ತೆರವಿಗೆ ಕಡೆಗೂ ಒಪ್ಪಿಗೆ-15 ವರ್ಷಗಳ ತಿಕ್ಕಾಟದ ಬಳಿಕ ಸ್ಥಳಾಂತರಕ್ಕೆ ತೀರ್ಮಾನ..!

Published

on

ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆಯ ಬ್ರಹ್ಮರಕೂಟ್ಲು ಬ್ರಹ್ಮಸನ್ನಿಧಿಯನ್ನು  ಸ್ಥಳಾಂತರಿಸಲು ಕೊನೆಗೂ ನಿರ್ಧರಿಸಲಾಗಿದೆ.

ಬಂಟ್ವಾಳ : ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆಯ ಬ್ರಹ್ಮರಕೂಟ್ಲು ಬ್ರಹ್ಮಸನ್ನಿಧಿಯನ್ನು  ಸ್ಥಳಾಂತರಿಸಲು ಕೊನೆಗೂ ನಿರ್ಧರಿಸಲಾಗಿದೆ. 

ಭಾರತದಲ್ಲಿ ಎರಡು ಕಡೆಗಳಲ್ಲಿ ಮಾತ್ರ ಇರುವ ಇತಿಹಾಸ ಪ್ರಸಿದ್ಧ ಶ್ರೀ ಬ್ರಹ್ಮ ದೇವರ ಸನ್ನಿಧಿ ಕಳ್ಳಿಗೆ ಗ್ರಾಮದ ಪುಣ್ಯಭೂಮಿಯಲ್ಲೆ ಶೀಘ್ರದಲ್ಲೇ ನೂತನ ದೇವಾಲಯವಾಗಿ ಕಂಗೊಳಿಸಲಿದೆ.

ಹೆದ್ದಾರಿ ಮಧ್ಯದಲ್ಲಿರುವ ಈ ಸನ್ನಿಧಿಯಿಂದ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೇ ತೊಡಕಾಗಿರುವ ಕಾರಣ ಬೇರೆ ಕಡೆ ನಿರ್ಮಿಸಲು ಆಸ್ತಿಕರು ಪ್ರಶ್ನಾ ಚಿಂತನೆಯ ಬಳಿಕ ನಿರ್ಧರಿಸಿದ್ದಾರೆ.

2006-07ರಲ್ಲಿ ರಾಷ್ಟ್ರೀಯ ಹೆದ್ದಾರಿ 75ರ ಚತುಷ್ಪಥ ಕಾಮಗಾರಿ ಆರಂಭವಾದಾಗ ಬ್ರಹ್ಮ ಸನ್ನಿಧಿ ತೆರವುಗೊಳಿಸಲು ಹೆದ್ದಾರಿ ಇಲಾಖೆ ಅಧಿಕಾರಿಗಳು ಮುಂದಾಗಿದ್ದರು.

ಸನ್ನಿಧಿ ತೆರವುಗೊಳಿಸುವುದಕ್ಕೆ ಜನವಿರೋಧ ವ್ಯಕ್ತವಾಗಿತ್ತು. ಆ ವೇಳೆ, ಪವಾಡವೊಂದು ನಡೆದಿತ್ತು.

ಸನ್ನಿಧಿ ಕೆಡವಲು ಪ್ರಯತ್ನ ನಡೆದ ಸಂದರ್ಭದಲ್ಲಿ ಯಂತ್ರವು ಹಠತ್ತಾಗಿ ಕೆಟ್ಟುಹೋಗಿ ಕಾಮಗಾರಿಗೆ ತಡೆಯಾಯಿತು.

ಮರುದಿನ 2009 ನವೆಂಬರ್ 8ರಂದು ಬ್ರಹ್ಮರಕೂಟ್ಲು ಶ್ರೀ ಬ್ರಹ್ಮ ಸನ್ನಿಧಿ ಉಳಿಸಿ ಹೋರಾಟ ಸಮಿತಿ ರಚಿಸಿ ಗ್ರಾಮಸ್ಥರು ಸನ್ನಿಧಿಯ ಪಕ್ಕ ಜಮಾಯಿಸಿ ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದರು.

ನವೆಂಬರ್ 9ರಂದು ಮತ್ತೆ ಬೇರೆ ಯಂತ್ರಗಳನ್ನು ತಂದು ಕಾಮಗಾರಿ ಮುಂದುವರಿಸಲು ಮುಂದಾದಾಗ ಗ್ರಾಮಸ್ಥರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಅದೇ ಸಂದರ್ಭದಲ್ಲಿ ತರಾತುರಿಯಲ್ಲಿ ಟೋಲ್ ಗೇಟ್ ನಿರ್ಮಾಣ ಕಾಮಗಾರಿ ಸದ್ದಿಲ್ಲದೆ ನಡೆಸಿ ಇರ್ಕಾನ್ ಇಂಜಿನಿಯರ್ ದರ್ಪವನ್ನು ತೋರಿ ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾದರು.

ಕೂಡಲೇ ಎಚ್ಚೆತ್ತ ಗ್ರಾಮಸ್ಥರು ನವೆಂಬರ್‌ 10ರಂದು ಸಾವಿರಾರು ಸಂಖ್ಯೆಯಲ್ಲಿ ಸೇರಿ ಜಡಿಮಳೆಯನ್ನು ಲೆಕ್ಕಿಸದೆ ಸುಮಾರು 3 ತಾಸು ಕಾಲ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಿದ್ದರು.

ಬಳಿಕ ಹೆದ್ದಾರಿ ಇಲಾಖೆ ಅಧಿಕಾರಿಗಳು ಮತ್ತು ಗ್ರಾಮಸ್ಥರು ಸೇರಿ ಸನ್ನಿಧಿಯಲ್ಲಿ ಅಷ್ಟಮಂಗಳ ಪ್ರಶ್ನೆ ಇರಿಸಿದಾಗ, ಸನ್ನಿಧಿ ತೆರವುಗೊಳಿಸಲು ದೇವರ ಒಪ್ಪಿಗೆ ಇಲ್ಲ.

ಇದ್ದ ಜಾಗದಲ್ಲೇ ಮೇಲಕ್ಕೆ ಏರಿಸಲು ಮಾತ್ರ ಅನುಮತಿ ದೊರೆಯುವಂತಾಗಿತ್ತು‌. ಇದರಿಂದಾಗಿ ಹೆದ್ದಾರಿ ಕಾಮಗಾರಿ ಈ ಭಾಗದಲ್ಲಿ ಉಳಿದು ಹೋಗಿದ್ದಲ್ಲದೆ, ಏಕಮುಖ ರಸ್ತೆಯಲ್ಲೇ ವಾಹನಗಳು ಸಂಚರಿಸುವಂತಾಗಿತ್ತು.

ಆದರೆ ಇದೀಗ ಎಲ್ಲದಕ್ಕೂ ಉತ್ತರ ಸಿಕ್ಕಿದ್ದು ಕ್ಷೇತ್ರವು ಬೆಳಗಲಿದೆ.. ಸ್ವಚ್ಚ ಸುಂದರ ಶಿಲಾಮಯ ದೇಗುಲ ನಿರ್ಮಾಣವಾಗಲಿದೆ.

ಹಾಗಾಗಿ ಬ್ರಹ್ಮರಕೂಟ್ಲು ಶ್ರೀ ಬ್ರಹ್ಮ ಸನ್ನಿಧಿ ಉಳಿಸಿ ಹೋರಾಟ ಸಮಿತಿ ಕಳೆದ 14 ವರ್ಷಗಳಿಂದ ನಿರಂತರವಾಗಿ ನಡೆಸಿಕೊಂಡು ಬಂದಂತಹ ಹೋರಾಟವನ್ನು ಕೈಬಿಟ್ಟು, ದೇವರ ಅಪ್ಪಣೆಯಂತೆ ಮುಂದಿನ ವಿಧಿವಿಧಾನಗಳನ್ನು ನೆರವೇರಿಸಲು ಅವಕಾಶ ನೀಡುತ್ತಿದೆ.

ಬ್ರಹ್ಮ ಸನ್ನಿಧಿ

ಎಲ್ಲವೂ ಅಂದುಕೊಂಡಂತೆ ನಿರ್ವಿಘ್ನವಾಗಿ ನೆರವೇರಿದಲ್ಲಿ ಕರಾವಳಿಯು ಅನನ್ಯ ಬ್ರಹ್ಮ ಸನ್ನಿಧಿಗೆ ಸಾಕ್ಷಿಯಾಗಲಿದೆ.

ಬ್ರಹ್ಮ ಸನ್ನಿಧಿ ವಿಶೇಷ :
ಬ್ರಹ್ಮನಿಗೆ ಪೂಜೆ ಸಲ್ಲಿಸುವ ಗುಡಿ ದೇಶದಲ್ಲಿ ಕಾಣಸಿಗುವುದೇ ಭಾರೀ ಅಪರೂಪ. ಅಂದಾಜು ಪ್ರಕಾರ, ಅಸ್ಸಾಂ ರಾಜ್ಯದ ಬ್ರಹ್ಮಪುತ್ರಾ ನದಿ ದಡದಲ್ಲಿ ಒಂದು ಗುಡಿ ಬಿಟ್ಟರೆ, ಮತ್ತೊಂದು ಬ್ರಹ್ಮ ದೇವರ ಗುಡಿ ಇರುವುದು ಕರ್ನಾಟಕ ರಾಜ್ಯದ ಬಂಟ್ವಾಳದಲ್ಲಿ ಮಾತ್ರ ಎನ್ನಲಾಗುತ್ತದೆ.

1 Comment

1 Comment

  1. jagadishachappa

    10/07/2023 at 10:30 AM

    raod can be bypassed why shift it

Leave a Reply

Your email address will not be published. Required fields are marked *

BANTWAL

ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ-ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

Published

on

ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ.

ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸುವ ಕಾರ್ಯ ಮಾಡಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ನೀಡಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Continue Reading

BANTWAL

Bantwala: ಹೃದಯ ಸಂಬಂಧಿ ಖಾಯಿಲೆಯಿಂದ 4 ವರ್ಷದ ಬಾಲಕಿ ನಿಧನ..!

Published

on

ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ಬಂಟ್ವಾಳದ ಮಿತ್ತೂರಿನಲ್ಲಿ ನಡೆದಿದೆ.

ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ನಡೆದಿದೆ.

ಮೃತ ಬಾಲಕಿಯನ್ನು ಬಂಟ್ವಾಳ ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ತಿಳಿದು ಬಂದಿದೆ.

ಜಮೀಲಾ  ಬಾಲಕಿ ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿದ್ದಳು.

ಈಕೆ ಅನಾರೋಗ್ಯದಿಂದ ಇದ್ದು, ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

Continue Reading

BANTWAL

Bantwala: ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾ – ಕರೆಂಟ್ ಕಂಬಕ್ಕೆ ಗುದ್ದಿದ ಬಸ್..!

Published

on

ಬಂಟ್ವಾಳ: ಸರಕಾರಿ ಬಸ್ ಒಂದು ಓವರ್ ಟೇಕ್ ಮಾಡುತ್ತಿದ್ದ ಟೆಂಪೋ ರಿಕ್ಷಾವನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಗುದ್ದಿದ ಘಟನೆ ಬಂಟ್ವಾಳದ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ.

ಮೆಲ್ಕಾರಿನಿಂದ ಬರುತ್ತಿದ್ದ ಇಲ್ಯಾಸ್ ಟೆಂಪೋ ರಿಕ್ಷಾ ಚಾಲಕನು ಕಂದೂರಿನ ಬಜಾರ್ ಅಡಿಟೋರಿಯಮ್ ಬಳಿ ಬರುತ್ತಿದ್ದ ಆಕ್ಟಿವಾ ಗಾಡಿಯೊಂದನ್ನು ಓವರ್ ಟೇಕ್ ಮಾಡುತ್ತಿದ್ದ.

ಈ ವೇಳೆ ಮುಡಿಪು ಮಾರ್ಗವಾಗಿ ಬರುತ್ತಿದ್ದ ಕಾಸರಗೋಡು ಬಿ.ಸಿ.ರೋಡ್ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಬಸ್ ಗುದ್ದಿದ್ದ ರಭಸಕ್ಕೆ ಕರೆಂಟ್ ಕಂಬ ತುಂಡಾಗಿದೆ.

ಬಸ್ಸಿನಲ್ಲಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೋಲಿಸರು ಆಗಮಿಸಿ, ಪರಿಶೀಲನೆ ನಡೆಸಿದರು.

Continue Reading

LATEST NEWS

Trending