Connect with us

    BANTWAL

    Bantwala: ಮನೆಗೆ ನುಗ್ಗಿ ನಗ-ನಗದು ಕಳವುಗೈದ ಆರೋಪಿಗಳ ಬಂಧನ..!

    Published

    on

    ಬಂಟ್ವಾಳ: ಮನೆಗೆ ನುಗ್ಗಿ ನಗ- ನಗದು ಕಳವುಗೈದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, ಸುಮಾರು 27 ವರೆ ಲಕ್ಷ ಹಣ ಹಾಗೂ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ.

    ಮಂಜೇಶ್ವರದ ಮಂಗಲ್ಪಾಡಿ ಮೂಲದ ಅಶ್ರಫ್ ಆಲಿ ಹಾಗೂ ಬೆಂಗ್ರೆಯ ಕಬೀರ್ ಬಂಧಿತ ಆರೋಪಿಗಳು. ಆರೋಪಿಗಳು ಅ.18ರಂದು ಬಂಟ್ವಾಳದ ಪುದು ಕೋಡಿಮಜಲಿನ ಮಹಮ್ಮದ್ ಜಾಫರುಲ್ಲಾ ಅವರ ಮನೆಗೆ ನುಗ್ಗಿ ಸುಮಾರು 27,50,000 ನಗದು, 4,60,000 ಚಿನ್ನಾಭರಣ ಕಳವುಗೈದಿದ್ದಾರೆ. ಕಳವು ಗೈದ ಆರೋಪಿಗಳನ್ನು ಬಂಧಿಸಿ ಅವರಿಂದ 4 ಲಕ್ಷ ನಗದು ಹಾಗೂ 4,50,000 ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    BANTWAL

    ಯಕ್ಷಸಿರಿ ಪ್ರಶಸ್ತಿಗೆ ದಿವಾಕರ್ ದಾಸ್ ಕಾವಳಕಟ್ಟೆ ಆಯ್ಕೆ

    Published

    on

    ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2023ನೇ ಸಾಲಿನ ಪ್ರಶಸ್ತಿಗಳನ್ನು ಘೋಷಿಸಿದೆ. ಪ್ರತಿಷ್ಠಿತ ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ತೆಂಕುತಿಟ್ಟಿನ ಪ್ರಸಾಧನ ಕಲಾವಿದರು ಮತ್ತು ವೇಷಧಾರಿಯಾದ ದಿವಾಕರ್ ದಾಸ್ ಕಾವಳಕಟ್ಟೆ ಅವರನ್ನು ಆಯ್ಕೆ ಮಾಡಲಾಗಿದೆ.

    ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರು ಶನಿವಾರ(ಸೆ.14) ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದರು. ನವೆಂಬರ್ ತಿಂಗಳಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಯಕ್ಷಸಿರಿ ಪ್ರಶಸ್ತಿ ಪುರಸ್ಕೃತರಿಗೆ ನಗದು, ಪ್ರಶಸ್ತಿ ಫಲಕ, ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು ಎಂದರು.

    ದಿವಾಕರ್ ದಾಸ್ ಕಾವಳಕಟ್ಟೆ ಇವರ ಬಗ್ಗೆ:

    ಬಂಟ್ವಾಳ ತಾಲೂಕು ಕಾವಳಮೂಡೂರು ಗ್ರಾಮದ ಕಾವಳಕಟ್ಟೆ ಶ್ರುತಿ ಆರ್ಟ್ಸ್ ಸಂಸ್ಥೆಯ ಸಂಸ್ಥಾಪಕ, ಯಕ್ಷಗಾನ ಕಲಾವಿದ, ಸಂಘಟಕ ದಿವಾಕರ ದಾಸ್ ಕಾವಳಕಟ್ಟೆ. ಯಕ್ಷ ಕಲೆಯನ್ನು ಅತ್ಯಂತ ಒಲವಿನಿಂದ ಮೈಗೂಡಿಸಿಕೊಂಡು ಬೆಳೆಸುತ್ತ ಬೆಳೆದವರು.

    ಕಳೆದ 30 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ಕಲಾವಿದನಾಗಿ, ತರಬೇತುದಾರನಾಗಿ, ಯಕ್ಷಗಾನ ಸಂಘಟಕನಾಗಿ, ತಲಕಲ, ಕಾಂತಾವರ, ಸುರತ್ಕಲ್, ಮಂಗಳಾದೇವಿ ಮೇಳಗಳಲ್ಲಿ 14 ವರ್ಷ ಸ್ತ್ರೀ ವೇಷದಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 1999ರಲ್ಲಿ ಕಾವಳಕಟ್ಟೆಯಲ್ಲಿ ಶೃತಿ ಆರ್ಟ್ಸ್ ಕಲಾ ಸಂಸ್ಥೆ ಸ್ಥಾಪಿಸಿ ಕಲಾ ಪ್ರದರ್ಶನಗಳಿಗೆ ಬೇಕಾದ ವೇಷಭೂಷಣ ತಯಾರಿಸಿ, ಕರ್ನಾಟಕ ರಾಜ್ಯದ ಬಹುತೇಕ ಪ್ರಸಾದನ ಸಂಸ್ಥೆ, ಶಾಲಾ-ಕಾಲೇಜು, ಸಂಘ-ಸಂಸ್ಥೆಗಳಿಗೆ ಹಾಗೂ ಕಲಾ ತಂಡಗಳಿಗೆ ವೇಷಭೂಷಣ ಒದಗಿಸಿರುವ ಇವರು ವಿದ್ಯಾರ್ಥಿಗಳಿಗೆ, ಯಕ್ಷಗಾನ ಆಸಕ್ತರಿಗೆ ನಾಟ್ಯ ಮತ್ತು ಅರ್ಥಗಾರಿಕೆಯ ತರಬೇತಿ ನೀಡಿದ್ದಾರೆ. ಅಲ್ಲದೇ ತೆಂಕುತಿಟ್ಟಿನ ಹೆಚ್ಚಿನ ಯಕ್ಷಗಾನ ಮೇಳಗಳಿಗೆ ವೇಷಭೂಷಣವನ್ನು ತಯಾರಿಸಿ ಕೊಡುತ್ತಿದ್ದಾರೆ.

    ಜಿಲ್ಲೆಯ ಪ್ರಸಿದ್ಧ ಯಕ್ಷಗಾನ ಕಲಾವಿದರನ್ನು ಒಟ್ಟು ಸೇರಿಸಿ ಅಲ್ಲಲ್ಲಿ ಯಕ್ಷಗಾನ, ತಾಳಮದ್ದಳೆ ಕೂಟಗಳನ್ನು ಸಂಘಟಿಸುತ್ತಿರುವ ಇವರು ಬೆಳಗಾವಿಯಲ್ಲಿ ನಡೆದ ವಿಶ್ವಕನ್ನಡ ಸಮ್ಮೇಳನದಲ್ಲಿ ಯಕ್ಷಗಾನ ತಂಡದೊಂದಿಗೆ ಭಾಗವಹಿಸಿ ಕಲಾ ಪ್ರದರ್ಶನ, ಹಂಪಿ ಉತ್ಸವದಲ್ಲಿ ಯಕ್ಷಗಾನ ಪ್ರದರ್ಶನ, ವಿಶ್ವ ಯುವಜನ ಮೇಳದಲ್ಲಿ ಯಕ್ಷಗಾನ ಪ್ರದರ್ಶನ, ರಾಜ್ಯ ಮಟ್ಟದ ಯುವಜನ ಮೇಳಗಳಲ್ಲಿ ಯಕ್ಷಗಾನ ಪ್ರದರ್ಶನ, ಆಫ್ರೀಕಾ ಶೃಂಗಸಭೆ, ದೆಹಲಿಯಲ್ಲಿ ಯಕ್ಷಗಾನ ನೃತ್ಯ ರೂಪಕ, ಮೈಸೂರು ದಸರಾ ಉತ್ಸವಗಳಲ್ಲಿ ಯಕ್ಷಗಾನ ಕಾರ್ಯಕ್ರಮಗಳನ್ನು ಪ್ರದರ್ಶಿಸಿದ್ದಾರೆ. 2014ರಲ್ಲಿ ಸರಕಾರದ ಉದ್ಯೋಗ ಖಾತರಿ ಯೋಜನೆಯ ಜಾಗೃತಿ ಯಕ್ಷಗಾನ ಪ್ರದರ್ಶನ ನೀಡಿರುವ ಇವರು ಕೆದ್ದಳಿಕೆ ಸರಕಾರಿ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಶಾಲೆಯನ್ನು ರಾಜ್ಯದಲ್ಲೇ ಮಾದರಿಯಾಗಿ ರೂಪಿಸುವಲ್ಲಿ ಪ್ರಯತ್ನಿಸಿದ್ದಾರೆ.

    ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ, ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ರಾಜ್ಯ ಮಟ್ಟದ ಸುವರ್ಣ ಕರ್ನಾಟಕ ಸಾಧನಾಶ್ರೀ ಪ್ರಶಸ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸುವರ್ಣ ಕರ್ನಾಟಕ ಜಯಂತಿ ಪ್ರಶಸ್ತಿ, ಕೆದ್ದಳಿಕೆ ಶಾಲೆಯ ಎಸ್.ಡಿ.ಎಂ.ಸಿ.ಗೆ ರಾಜ್ಯ ಮಟ್ಟದ ಉತ್ತಮ ಅಧ್ಯಕ್ಷ ಪ್ರಶಸ್ತಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಗೌರವ, ಉತ್ತಮ ಸ್ತ್ರೀ ವೇಷಧಾರಿ ಪ್ರಶಸ್ತಿ ಸೇರಿ ಸುಮಾರು 60ಕ್ಕೂ ಹೆಚ್ಚಿನ ಪ್ರಶಸ್ತಿಗಳು ಲಬಿಸಿವೆ.

    Continue Reading

    BANTWAL

    ಬಂಟ್ವಾಳ: ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಮೃ*ತ್ಯು

    Published

    on

    ಬಂಟ್ವಾಳ: ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ವೋರ್ವರು ಮೃ*ತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ.

    ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್ (35) ಮೃ*ತಪಟ್ಟ ದುರ್ದೈವಿ.

    ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿರುವ ದೇವದಾಸ್ ಗುರುವಾರ ಸಂಜೆ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ಮನೆಯೊಂದರ ವಯರಿಂಗ್ ಕೆಲಸ ಮಾಡಿ, ಮನೆಯ ಹೊರಗಡೆಯಲ್ಲಿದ್ದ ಮೈನ್ ಸ್ವಿಚ್ ಬಳಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿದೆ. ಪರಿಣಾಮ ಕೆಳಗೆ ಬಿದ್ದು ಗಾಯಗೊಂಡಿದ್ದರು ಎನ್ನಲಾಗಿದೆ. ತಕ್ಷಣ ಸ್ಥಳದಲ್ಲಿದ್ದವರು ಗಾಯಾಳುವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿನ ವೈದ್ಯರು ಪರೀಕ್ಷಿಸಿದಾಗ ದೇವದಾಸ್ ರವರು ಮೃ*ತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ.

    ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

    Continue Reading

    BANTWAL

    ಬಂಟ್ವಾಳ | ಗಣೇಶೋತ್ಸವ ಶೋಭಾಯಾತ್ರೆ ವೇಳೆ ಪಾನೀಯ, ಸಿಹಿತಿಂಡಿ ನೀಡಬೇಡಿ: ಮಸೀದಿಗೆ ಭಜನಾ ಮಂದಿರದಿಂದ ಪತ್ರ

    Published

    on

    ಕೋಮು ಸೂಕ್ಷ್ಮ ಪ್ರದೇಶವಾಗಿ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬೋಳಂತೂರಿನಲ್ಲಿ ಈ ಹಿಂದೆ ಗಣೇಶೋತ್ಸವ ಮೆರವಣಿಗೆ ವೇಳೆ ಮುಸ್ಲಿಮರು ಸಿಹಿ ತಿಂಡಿ, ಪಾನೀಯ ಹಂಚಿ ಸೌಹಾರ್ದತೆಯನ್ನು ಮೆರೆದಿದ್ದರು. ಅದು ಭಾರೀ ಸುದ್ದಿಯಾಗಿತ್ತು. ಆದರೆ, ಈ ಬಾರಿ ಕಳೆದ ವರ್ಷದಂತೆ ಸಿಹಿ ತಿಂಡಿ, ಪಾನೀಯ ಹಂಚಬಾರದು ಎಂದು ಗಣೇಶೋತ್ಸವ ಆಯೋಜಿಸುವ ಸಮಿತಿಯವರೇ ಮುಸ್ಲಿಂ ಸಮುದಾಯದವರಿಗೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಹಿಂದೂ – ಮುಸ್ಲಿಂ ಸೌಹಾರ್ದತೆಗೆ ಬ್ರೇಕ್‌ ಬಿದ್ದಿದೆ. ಮಸೀದಿಯೊಂದಕ್ಕೆ ಗಣೇಶೋತ್ಸವ ಆಯೋಜಕರು ಬರೆದ ಪತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

    ಕಳೆದ ವರ್ಷ ಗಣೇಶೋತ್ಸವದ ವೇಳೆ ಇಲ್ಲಿನ ಮುಸಲ್ಮಾನ ಸಮಾಜ ಬಾಂಧವರು ಹಂಚಿದ ಸಿಹಿ ತಿಂಡಿ ತಿಂದು ನಮ್ಮ ಕೆಲವು ಮಕ್ಕಳು ಅಸ್ವಸ್ಥರಾಗಿದ್ದಾರೆ. ಹೀಗಾಗಿ ಈ ಬಾರಿ ಗಣೇಶೋತ್ಸವ ಮೆರವಣಿಗೆಯಲ್ಲಿ ಸಿಹಿ ತಿಂಡಿ, ತಂಪು ಪಾನೀಯ ಹಂಚಬೇಡಿ ಎಂದು ಶ್ರೀ ಸಿದ್ಧಿವಿನಾಯಕ ವಿಶ್ವಸ್ಥ ಮಂಡಳಿಯಿಂದ ಬೋಳಂತೂರು ಮಸೀದಿಗೆ ಪತ್ರ ಬರೆದು ಮನವಿ ಮಾಡಲಾಗಿದೆ. ಕಳೆದ ವರ್ಷ ಮಾತ್ರವಲ್ಲದೆ, ಕಳೆದ ಕೆಲವು ವರ್ಷಗಳಿಂದ ಗಣೇಶೋತ್ಸವ ಮೆರವಣಿಗೆ ವೇಳೆ ಮುಸ್ಲಿಂ ಸಮಾಜದವರು ಸಿಹಿ ತಿಂಡಿ ಹಂಚುತ್ತಿರುವುದು ನಡೆದುಕೊಂಡು ಬಂದಿತ್ತು.

    ಆದರೆ, ಕಳೆದ ವರ್ಷ ತಂಪು ಪಾನೀಯ, ಸಿಹಿ ತಿಂಡಿ ಸೇವಿಸಿದ ಹಿಂದೂ ಮಕ್ಕಳು ಅಸ್ವಸ್ಥರಾದ ಆರೋಪದಲ್ಲಿ ಈ ಬಾರಿ ಅದಕ್ಕೆ ಅವಕಾಶ ನಿರಾಕರಿಸಲಾಗಿದೆ. ಇದರಿಂದಾಗಿ ಎರಡು ಸಮುದಾಯಗಳ ನಡುವಣ ಸಾಮರಸ್ಯ ಕೆಡುವ ಆತಂಕವೂ ಎದುರಾಗಿದೆ. ಸಿದ್ಧಿವಿನಾಯಕ ವಿಶ್ವಸ್ಥ ಮಂಡಳಿಯು ಮಸೀದಿಗೆ ಬರೆದಿರುವ ಪತ್ರದ ಬಗ್ಗೆ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆಯಾಗುತ್ತಿದೆ. ಕಳೆದ ವರ್ಷದ ಸಾರ್ವಜನಿಕ ಗಣೇಶೋತ್ಸವದ ಮೆರವಣಿಗೆ ಸಂದರ್ಭದಲ್ಲಿ ಪಾನೀಯ ಮತ್ತು ಸಿಹಿತಿಂಡಿ ವಿತರಣೆಯನ್ನು ತಮ್ಮ ಸಮಾಜ ಬಾಂಧವರು ನೀಡಿರುತ್ತಾರೆ.

    ಅದನ್ನು ಸ್ವೀಕರಿಸಿದ ನಮ್ಮ ಕೆಲವು ಮಕ್ಕಳು ಅಸ್ವಸ್ಥರಾಗಿರುತ್ತಾರೆ. ಇದರಿಂದ ನಮ್ಮ ಸಾಮರಸ್ಯ ಕೆಡುತ್ತದೆ. ಇದರ ಮುಂಜಾಗ್ರತೆಗಾಗಿ ತಮ್ಮಲ್ಲಿ ಮನವಿ ಮಡುವುದೇನೆಂದರೆ, ಇನ್ನು ಮುಂದಕ್ಕೆ ಶೋಭಾಯಾತ್ರೆಯಲ್ಲಿ ತಮ್ಮ ಸಮಾಜ ಬಾಂಧವರು ಯಾವುದೇ ಪಾನೀಯ ಹಾಗೂ ತಿಂಡಿ ತಿನಿಸುಗಳನ್ನು ನೀಡಬಾರದಾಗಿ ಈ ಮೂಲಕ ವಿನಂತಿಸುತ್ತೇವೆ. ಆದ್ದರಿಂದ ನಮ್ಮ ಶೋಭಾಯಾತ್ರೆಗೆ ನಿಮ್ಮ ಎಲ್ಲಾ ಸಮಾಜ ಬಾಂಧವರು ಸಹಕರಿಸುವಂತೆ ನಿಮ್ಮಲ್ಲಿ ಈ ಮೂಲಕ ಮನವಿ ಮಾಡುತ್ತೇವೆ’’ ಎಂದು ಸಿದ್ಧಿವಿನಾಯಕ ವಿಶ್ವಸ್ಥ ಮಂಡಳಿ ಬರೆದಿದ್ದು ಎನ್ನಲಾದ ವೈರಲ್ ಆಗಿರುವ ಪತ್ರದಲ್ಲಿ ಉಲ್ಲೇಖವಾಗಿದೆ.

    Continue Reading

    LATEST NEWS

    Trending