Connect with us

BANTWAL

Bantwala: ಕೋಕ್ ಸಾಗಿಸುತ್ತಿದ್ದ ಲಾರಿ ಪಲ್ಟಿ..!

Published

on

ಕೋಕ್ ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಗೆ ಜಾರಿ ಪಲ್ಟಿಯಾದ ಘಟನೆ ಮಾಣಿ ಸಮೀಪದ ಹಳೀರ ಎಂಬಲ್ಲಿ ಆ.1ರಂದು  ನಡೆದಿದೆ.

ಬಂಟ್ವಾಳ: ಕೋಕ್ ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಗೆ ಜಾರಿ ಪಲ್ಟಿಯಾದ ಘಟನೆ ಮಾಣಿ ಸಮೀಪದ ಹಳೀರ ಎಂಬಲ್ಲಿ ಆ.1ರಂದು  ನಡೆದಿದೆ.

ಮಾಣಿ ಹಳೀರ ಎಂಬಲ್ಲಿ ಮಂಗಳೂರಿನಿಂದ ಬೆಂಗಳೂರು ಕಡೆಗೆ ಕೋಕ್ ತುಂಬಿಸಿಕೊಂಡು ಬರುತ್ತಿದ್ದ ಟೆನ್ ವೀಲ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಘಟನೆಯಿಂದ ಲಾರಿಚಾಲಕ ಮತ್ತು ಕ್ಲೀನರ್ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾನೆ.

ಬಿಸಿ ರೋಡಿನಿಂದ ಅಡ್ಡಹೊಳೆ ವರೆಗೆ ರಾಷ್ಟ್ರೀಯ ಹೆದ್ದಾರಿ ಚತುಷ್ಪತ ಕಾಮಗಾರಿ ನಡೆಯುತ್ತಿದ್ದು.

ಕುದ್ರೆಬೆಟ್ಟುವಿನಿಂದ ಮಾಣಿ ಹಳೀರವರೆಗೆ ಕಾಂಕ್ರೀಟ್ ರಸ್ತೆ ನಿರ್ಮಾಣವಾಗಿದೆ ಉಳಿದ ಭಾಗ ಅಂದರೆ ಮಾಣಿವ ರೆಗೆ ಒವರ್ ಬ್ರಿಡ್ಜ್ ಕಾಮಗಾರಿ ನಡೆಯುತ್ತಿದ್ದು, ಒಂದೇ ಭಾಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಡಲಾಗಿದೆ.

ಆದರೆ ಕಾಮಗಾರಿಯ ಹಿನ್ನೆಲೆಯಲ್ಲಿ ತಾತ್ಕಾಲಿಕ ಸರ್ವೀಸ್ ರಸ್ತೆ ನಿರ್ಮಾಣ ಮಾಡಲಾಗಿದ್ದು, ಮಣ್ಣು ಹಾಕಿ ರಸ್ತೆ ಮಾಡಲಾಗಿದೆ.

ಮಳೆಗಾಲದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿದು, ಮಣ್ಣಿನ ರಸ್ತೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಗೆ ತೆರಳಿ ಲಾರಿ ಪಲ್ಟಿಯಾಗಿದೆ.

ಕಾಮಗಾರಿ ನಡೆಯುತ್ತಿದೆ ಎಂದು ಗುತ್ತಿದೆ ವಹಿಸಿರುವ ಕೆ.ಎನ್.ಆರ್.ಸಿ.ಕಂಪೆನಿ ಎಚ್ಚರಿಕೆ ಯ ಬೋರ್ಡ್ ಅಳವಡಿಸಿಲ್ಲ ಎಂಬ ಆರೋಪ ಕೂಡ ಕೇಳಿ ಬಂದಿದೆ.

Click to comment

Leave a Reply

Your email address will not be published. Required fields are marked *

BANTWAL

ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ-ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

Published

on

ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ.

ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸುವ ಕಾರ್ಯ ಮಾಡಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ನೀಡಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Continue Reading

BANTWAL

Bantwala: ಹೃದಯ ಸಂಬಂಧಿ ಖಾಯಿಲೆಯಿಂದ 4 ವರ್ಷದ ಬಾಲಕಿ ನಿಧನ..!

Published

on

ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ಬಂಟ್ವಾಳದ ಮಿತ್ತೂರಿನಲ್ಲಿ ನಡೆದಿದೆ.

ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ನಡೆದಿದೆ.

ಮೃತ ಬಾಲಕಿಯನ್ನು ಬಂಟ್ವಾಳ ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ತಿಳಿದು ಬಂದಿದೆ.

ಜಮೀಲಾ  ಬಾಲಕಿ ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿದ್ದಳು.

ಈಕೆ ಅನಾರೋಗ್ಯದಿಂದ ಇದ್ದು, ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

Continue Reading

BANTWAL

Bantwala: ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾ – ಕರೆಂಟ್ ಕಂಬಕ್ಕೆ ಗುದ್ದಿದ ಬಸ್..!

Published

on

ಬಂಟ್ವಾಳ: ಸರಕಾರಿ ಬಸ್ ಒಂದು ಓವರ್ ಟೇಕ್ ಮಾಡುತ್ತಿದ್ದ ಟೆಂಪೋ ರಿಕ್ಷಾವನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಗುದ್ದಿದ ಘಟನೆ ಬಂಟ್ವಾಳದ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ.

ಮೆಲ್ಕಾರಿನಿಂದ ಬರುತ್ತಿದ್ದ ಇಲ್ಯಾಸ್ ಟೆಂಪೋ ರಿಕ್ಷಾ ಚಾಲಕನು ಕಂದೂರಿನ ಬಜಾರ್ ಅಡಿಟೋರಿಯಮ್ ಬಳಿ ಬರುತ್ತಿದ್ದ ಆಕ್ಟಿವಾ ಗಾಡಿಯೊಂದನ್ನು ಓವರ್ ಟೇಕ್ ಮಾಡುತ್ತಿದ್ದ.

ಈ ವೇಳೆ ಮುಡಿಪು ಮಾರ್ಗವಾಗಿ ಬರುತ್ತಿದ್ದ ಕಾಸರಗೋಡು ಬಿ.ಸಿ.ರೋಡ್ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಬಸ್ ಗುದ್ದಿದ್ದ ರಭಸಕ್ಕೆ ಕರೆಂಟ್ ಕಂಬ ತುಂಡಾಗಿದೆ.

ಬಸ್ಸಿನಲ್ಲಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೋಲಿಸರು ಆಗಮಿಸಿ, ಪರಿಶೀಲನೆ ನಡೆಸಿದರು.

Continue Reading

LATEST NEWS

Trending