Connect with us

BANTWAL

Bantwala: ಬಡ ಕುಟುಂಬಕ್ಕೆ ನೂತನ ಮನೆ ನಿರ್ಮಾಣ – ವಿವಿಧ ಸಂಘಟನೆಗಳ ನೆರವು

Published

on

ವಗ್ಗ ಕುಲಾಲ ಸಂಘ ಸ್ಥಾಪನಾ ಸಮಿತಿ ಸದಸ್ಯ ಸದಾಶಿವ ಕುಲಾಲ್ ವಗ್ಗ ನಾರಾಯಣ ಇಜ್ಜದೋಡಿ ವಿವಿಧ ಸಂಘಟನೆಗಳ ನೆರವು ಪಡೆದು ಸುಸಜ್ಜಿತ ಕುಟೀರವನ್ನು ಕಮಲ ಅವರಿಗೆ ನಿರ್ಮಿಸಿ ಕೊಟ್ಟಿರುವ ಮನೆ ಜು. 9ರಂದು ನೂತನ ಗೃಹ ಪ್ರವೇಶಕ್ಕೆ ಸಜ್ಜಾಗಿದೆ.

ಬಂಟ್ವಾಳ: ಒಂದೆಡೆ ಬಡತನ ಮತ್ತೊಂದೆಡೆ ಮುರಿದು ಬೀಳಲು ಸಿದ್ದವಾದ ಮನೆಯಲ್ಲಿ ಕಷ್ಟದ ಜೀವನ ನಡೆಸುತಿದ್ದ  ಕಮಲ ಅವರ ಕಣ್ಣೀರ ಬದುಕಿಗೆ ಸಹಾಕಾರ ನೀಡಿದ ವಗ್ಗ ಕುಲಾಲ ಸಂಘ ಸ್ಥಾಪನಾ ಸಮಿತಿ ಸದಸ್ಯ ಸದಾಶಿವ ಕುಲಾಲ್ ವಗ್ಗ ನಾರಾಯಣ ಇಜ್ಜದೋಡಿ ವಿವಿಧ ಸಂಘಟನೆಗಳ ನೆರವು ಪಡೆದು ಸುಸಜ್ಜಿತ ಕುಟೀರವನ್ನು ಕಮಲ ಅವರಿಗೆ ನಿರ್ಮಿಸಿ ಕೊಟ್ಟಿರುವ ಮನೆ ಜು. 9ರಂದು ನೂತನ ಗೃಹ ಪ್ರವೇಶಕ್ಕೆ ಸಜ್ಜಾಗಿದೆ.

ಬಂಟ್ವಾಳ ತಾಲೂಕಿನ ಕಾವಳ ಮೂಡೂರು ಗ್ರಾಮದ ಕಲ್ಮಂಜ ಬಳಿಯ ಕಮಲ ಅವರು ಮಕ್ಕಳು ಬಾಲ್ಯವಸ್ಥೆಯಲ್ಲಿಯೇ ಇರುವಾಗ ಗಂಡನನ್ನು ಕಳೆದುಕೊಂಡಿದ್ದು, ಬಳಿಕ  ಬೀಡಿ ಕಟ್ಟಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡಿದರು.

ಕಮಲ ಇವರ  ಕಿರಿಯ ಪುತ್ರ ಐಟಿಐ ಶಿಕ್ಷಣ ಪಡೆದು ದುಡಿದು ತಾಯಿಗೆ ಆದಾರ ಆಗಲು ಸಿದ್ದರಾದಾಗ ಮಾರಕ ರೋಗವೊಂದು ಬಂದು ಶಾಶ್ವತ ಅಂಗವೈಕಲ್ಯ ಕಾಯಿಲೆಗೆ ತುತ್ತಾದರು.

ಹಿರಿಯ ಪುತ್ರ ಪುಟ್ಟ ಉದ್ಯೋಗ ಮಾಡುತ್ತಾ ಕುಟುಂಬಕ್ಕೆ ಆದಾರ ಆಗುತ್ತಿದ್ದರು. ಆದರೆ ವಿಧಿಯ ಕ್ರೂರ ಲೀಲೆ ಅವರನ್ನೂ ಬಿಡಲಿಲ್ಲ.

ಈತ ಕೆಲಸ ಮುಗಿಸಿ ಬರುವಾಗ ಅಪಘಾತ ಸಂಭವಿಸಿ ತನ್ನ ಕಾಲನ್ನು ಕಳೆದುಕೊಂಡರು.

ಇಂತಹ ಪರಿಸ್ಥಿತಿಯನ್ನು ಮನಗಂಡ ಸದಾಶಿವ ಕುಲಾಲ್ ವಗ್ಗ ನಾರಾಯಣ ಇಜ್ಜದೋಡಿ ವಿಶ್ವಹಿಂದುಪರಿಷದ್ ಕುಂಟಾಲಫಲ್ಕೆ ಘಟಕದ ಅಧ್ಯಕ್ಷ ಸತೀಶ್ ಕುಲಾಲ್ ಮದ್ವ ಇವರ ಮುಂಚೂಣಿಯಲ್ಲಿ ಹಾಗೂ ಉತ್ಸಾಹಿ ತರುಣ ವೃಂದ ವಗ್ಗ, ಓಂಕಾರ ಪ್ರೆಂಡ್ಸ್ ಮಧ್ವ, ಜೇಸಿಐ ಬಂಟ್ವಾಳ, ವಿಶ್ವಹಿಂದೂಪರಿಷದ್ ಭಜರಂಗದಳ ಸಿಂತಾನಿಕಟ್ಟೆ ಶಾಖೆ, ಪೂಪಾಡಿಕಟ್ಟೆ ಘಟಕ, ಕುಂಟಾಲಫಲ್ಕೆ ಘಟಕ, ವಗ್ಗ ಕುಲಾಲ ಸಂಘ, ಬಂಟ್ವಾಳ ಕುಲಾಲ ಸುಧಾರಕ ಸಂಘ, ಕುಲಾಲ ಯುವವೇದಿಕೆ ಸಿದ್ದಕಟ್ಟೆ, ಕುಲಾಲ ಸಂಘ ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನ ನಂದಾದೀಪ ಮಂಗಳೂರು, ಸಿದ್ದಕಟ್ಟೆ ಕುಲಾಲ್ ಯುವವೇದಿಕೆ, ಶರಭೆಶ್ವರ ಅಸೋಸಿಯೇಟ್ಸ್, ಕಾವೂರು ಮಂಗಳೂರು ಇವರ ಸಹಕಾರದೊಂದಿಗೆ ಕಮಲ ಅವರಿಗೆ ಸುಸಜ್ಜಿತ ಮನೆ ನಿರ್ಮಾಣ ಮಾಡುವಲ್ಲಿ ಸಹಕರಿಸಿದವು.

BANTWAL

Bantwala: ಹೃದಯ ಸಂಬಂಧಿ ಖಾಯಿಲೆಯಿಂದ 4 ವರ್ಷದ ಬಾಲಕಿ ನಿಧನ..!

Published

on

ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ಬಂಟ್ವಾಳದ ಮಿತ್ತೂರಿನಲ್ಲಿ ನಡೆದಿದೆ.

ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ನಡೆದಿದೆ.

ಮೃತ ಬಾಲಕಿಯನ್ನು ಬಂಟ್ವಾಳ ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ತಿಳಿದು ಬಂದಿದೆ.

ಜಮೀಲಾ  ಬಾಲಕಿ ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿದ್ದಳು.

ಈಕೆ ಅನಾರೋಗ್ಯದಿಂದ ಇದ್ದು, ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

Continue Reading

BANTWAL

Bantwala: ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾ – ಕರೆಂಟ್ ಕಂಬಕ್ಕೆ ಗುದ್ದಿದ ಬಸ್..!

Published

on

ಬಂಟ್ವಾಳ: ಸರಕಾರಿ ಬಸ್ ಒಂದು ಓವರ್ ಟೇಕ್ ಮಾಡುತ್ತಿದ್ದ ಟೆಂಪೋ ರಿಕ್ಷಾವನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಗುದ್ದಿದ ಘಟನೆ ಬಂಟ್ವಾಳದ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ.

ಮೆಲ್ಕಾರಿನಿಂದ ಬರುತ್ತಿದ್ದ ಇಲ್ಯಾಸ್ ಟೆಂಪೋ ರಿಕ್ಷಾ ಚಾಲಕನು ಕಂದೂರಿನ ಬಜಾರ್ ಅಡಿಟೋರಿಯಮ್ ಬಳಿ ಬರುತ್ತಿದ್ದ ಆಕ್ಟಿವಾ ಗಾಡಿಯೊಂದನ್ನು ಓವರ್ ಟೇಕ್ ಮಾಡುತ್ತಿದ್ದ.

ಈ ವೇಳೆ ಮುಡಿಪು ಮಾರ್ಗವಾಗಿ ಬರುತ್ತಿದ್ದ ಕಾಸರಗೋಡು ಬಿ.ಸಿ.ರೋಡ್ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಬಸ್ ಗುದ್ದಿದ್ದ ರಭಸಕ್ಕೆ ಕರೆಂಟ್ ಕಂಬ ತುಂಡಾಗಿದೆ.

ಬಸ್ಸಿನಲ್ಲಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೋಲಿಸರು ಆಗಮಿಸಿ, ಪರಿಶೀಲನೆ ನಡೆಸಿದರು.

Continue Reading

BANTWAL

Bantwala: ಕಾರುಗಳ ನಡುವೆ ಸರಣಿ ಅಪಘಾತ..!

Published

on

ಪಾಣೆಮಂಗಳೂರು ಸೇತುವೆಯಲ್ಲಿ 2 ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸುಮಾರು ಒಂದು ತಾಸಿಗಿಂತಲೂ ಅಧಿಕವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಂದರೆಯಾದ ಘಟನೆ ನಡೆದಿದೆ.

ಬಂಟ್ವಾಳ: ಪಾಣೆಮಂಗಳೂರು ಸೇತುವೆಯಲ್ಲಿ 2 ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸುಮಾರು ಒಂದು ತಾಸಿಗಿಂತಲೂ ಅಧಿಕವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಂದರೆಯಾದ ಘಟನೆ ನಡೆದಿದೆ.

ಪಾಣೆಮಂಗಳೂರು ಸೇತುವೆಯಲ್ಲಿ ಎರಡು ಕಾರುಗಳು ಡಿಕ್ಕಿಯಾಗಿದ್ದು, ಇದರ ಹಿಂಬದಿಯಿಂದ ಬಂದ ಮತ್ತೆ ಎರಡು ವಾಹನಗಳು ಢಿಕ್ಕಿ ಯಾಗಿದೆ.

ಡಿಕ್ಕಿಯ ರಭಸಕ್ಕೆ ಎರಡು ಕಾರುಗಳು ಜಖಂಗೊಂಡಿದೆ.

ಆದರೆ ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯವಾಗದೆ ಪಾರಾಗಿದ್ದಾರೆ.

ಇದರ ಜೊತೆಗೆ ಸೇತುವೆ ಸಮೀಪ ನೆಹರು ನಗರ ಎಂಬಲ್ಲಿ ಲಾರಿಯೊಂದರ ಟಯರ್ ಕೆಟ್ಟು ಹೋಗಿ ನಿಂತಿತ್ತು.

ಹೀಗಾಗಿ ತಾಸುಗಟ್ಟಲೆ ವಾಹನಗಳು ಸಾಲಾಗಿ ನಿಂತಿದ್ದವು.

ಸೇತುವೆಯಲ್ಲಿ ಅಪಘಾತ ಸಂಭವಿಸಿದ ಪರಿಣಾಮ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು.

ವಾಹನಗಳನ್ನು ಕ್ಲಿಯರ್ ಮಾಡಲು ಟ್ರಾಫಿಕ್ ಪೋಲೀಸರು ಹರಸಹಾಸ ಪಟ್ಟರು.

ಅಪಘಾತ ನಡೆದು ಕೆಲವೇ ಹೊತ್ತಿನಲ್ಲಿ ವಾಹನಗಳ ಸಾಲು ಸುಮಾರು ಉದ್ದಕ್ಕೆ ತಲುಪಿತ್ತು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾದ ಹಿನ್ನೆಲೆಯಲ್ಲಿ ವಾಹನ ಸವಾರರು ಪಾಣೆಮಂಗಳೂರು ‌ಪೇಟೆ ಮೂಲಕ ಹಳೆ ಸೇತುವೆ ಮೂಲಕ ಸಂಚಾರಕ್ಕೆ ಪ್ರಯತ್ನ ಮಾಡಿದರಾದರೂ ಅಲ್ಲಿಯೂ ಟ್ರಾಫಿಕ್ ಸಮಸ್ಯೆ ಉಂಟಾಯಿತು.

ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ವಾಹನಗಳು ಹೋಗಿ ಸಾಲು ಸಾಲಾಗಿ ನಿಂತಿರುವ ಪೋಟೋ ವೈರಲ್ ಆಗಿದೆ.

ರಾತ್ರಿ ಹೊತ್ತು ವಾಹನಗಳ ಲೈಟ್ ಮತ್ತು ನೇತ್ರಾವತಿ ನದಿಯ ನೀರು ಕಂಗೊಳಿಸುವ ಚಿತ್ರವನ್ನು ಪಾಣೆಮಂಗಳೂರು ಮಂಗಳೂರು ಹೊಸ ಸೇತುವೆಯಿಂದ ಕ್ಲಿಕ್ ಮಾಡಿದ್ದಾರೆ.

ಪೊಲೀಸ್ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನ ಮಾಡಿದರು.

Continue Reading

LATEST NEWS

Trending