ಬಂಟ್ವಾಳ : ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಕುಡಿಯುವ ನೀರಿನ ಪೈಪ್ ಒಡೆದು ಹೋಗಿದ್ದು ರಸ್ತೆ ತುಂಬಾ ಕೃತಕ ನೆರೆ ಉಂಟಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪಾಣೆಮಂಗಳೂರು ಬಳಿ ಇಂದು ಬೆಳಿಗ್ಗೆ ನಡೆದಿದೆ.
ಇಲ್ಲಿ ಕಳೆದ ಕೆಲ ದಿನಗಳಿಂದ ಸರ್ವೀಸ್ ರಸ್ತೆ ನಿರ್ಮಾಣದ ಕಾಮಾಗಾರಿ ನಡೆಯುತ್ತಿದೆ.
ಕಾಮಾಗಾರಿ ವೇಳೆ ರಸ್ತೆಯ ಬದಿಯಲ್ಲಿ ಹಾಕಲಾಗಿದ್ಧ ಕುಡಿಯುವ ನೀರು ಸರಬರಾಜಿನ ಮುಖ್ಯ ಪೈಪ್ ಲೈನ್ ಮೇಲೆ ಹಾನಿಯಾಗಿದ್ದು, ಭಾರಿ ಪ್ರಮಾಣದಲ್ಲಿ ನೀರು ಪೋಲಾಗುತ್ತಿದೆ.
ಘಟನೆ ಬಗ್ಗೆ ಸ್ಥಳೀಯರು ನೀರಾವರಿ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು ದುರಸ್ಥಿ ಕಾರ್ಯ ನಡೆಸಲು ಉದ್ದೇಶಿಸಲಾಗಿದೆ.