Connect with us

    BANTWAL

    ಬಂಟ್ವಾಳ: ಪ್ರಭಾವಿಗಳಿಂದ ಫೋರ್ಜರಿ ಲೋನ್ – ನೊಟೀಸ್ ಗೆ ಹೆದರಿ ರೈತನಿಂದ ಆತ್ಮಹತ್ಯೆ ಯತ್ನ..!

    Published

    on

    ಸಾಲ ಮರುಪಾವತಿ ಮಾಡಿ, ತಪ್ಪಿದ್ದಲ್ಲಿ ಏಲಂಗೆ ಮುಂದಾಗುವ ಬಗ್ಗೆ ಬ್ಯಾಂಕ್ ನೋಟಿಸ್ ನೀಡಲು ಮುಂದಾಗಿದೆ ಎಂದು ಸುದ್ದಿ ತಿಳಿದ ರೈತನೋರ್ವ ಮಾಡದ ತಪ್ಪಿಗೆ ಮನನೊಂದು ಆತ್ಮಹತ್ಯೆ ಗೆ ಯತ್ನಿಸಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ತಡರಾತ್ರಿ ವೇಳೆ ನಡೆದಿದೆ.

    ಬಂಟ್ವಾಳ: ಸಾಲ ಮರುಪಾವತಿ ಮಾಡಿ, ತಪ್ಪಿದ್ದಲ್ಲಿ ಏಲಂಗೆ ಮುಂದಾಗುವ ಬಗ್ಗೆ ಬ್ಯಾಂಕ್ ನೋಟಿಸ್ ನೀಡಲು ಮುಂದಾಗಿದೆ ಎಂದು ಸುದ್ದಿ ತಿಳಿದ ರೈತನೋರ್ವ ಮಾಡದ ತಪ್ಪಿಗೆ ಮನನೊಂದು ಆತ್ಮಹತ್ಯೆ ಗೆ ಯತ್ನಿಸಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ತಡರಾತ್ರಿ ವೇಳೆ ನಡೆದಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಾವಳಮೂಡೂರು ಪಂಜಾಡಿ ನಿವಾಸಿ ಗುರು ಪ್ರಸಾದ್ ಅವರು ಆತ್ಮ ಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದು,ದೀಪಾ ಪ್ರಭು ಅವರು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ತಿಳಿಸಿದ್ದಾರೆ.

    ಕಾವಳ ಮೂಡೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಸದಸ್ಯರಾಗಿರುವ ಗುರುಪ್ರಸಾದ್ ಇವರ ಹೆಸರಿನಲ್ಲಿ ಅವರಿಗೆ ತಿಳಿಯದಂತೆ ಪ್ರಭಾವಿಗಳು ಪೋರ್ಜರಿಯಾಗಿ ಲೋನ್ ಪಡೆದು ಈಗ ಎಲಂ ನೊಟೀಸ್ ನೀಡಿದ್ದಾರೆ ಎಂದು ತಿಳಿದ ಅವರು ನೊಂದು ಆತ್ಮಹತ್ಯೆಗೆ ಪ್ರಯತ್ನಿಸಿ ಕೆ.ಎಂ.ಸಿ ಆಸ್ಪತ್ರೆಯಲ್ಲಿ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಈ ಬಗ್ಗೆ ಸ್ವತಃ ಗುರುಪ್ರಸಾದ್ ಒಂದು ವಿಡಿಯೋ ಕೂಡ ಮಾಡಿದ್ದು, ಅದರಲ್ಲಿ ನಾನು ಯಾವುದೇ ಸಾಲ ಮಾಡಿಲ್ಲ.ಆದರೆ ನನ್ನ ಹೆಸರನ್ನು ಬಳಸಿಕೊಂಡು ಕೆಲವರು ಹೆಸರನ್ನು ಉಲ್ಲೇಖಮಾಡಿದ್ದು, ಅವರು ಸಾಲ ಮಾಡಿದ್ದಾರೆ , ಆದರೆ ಪ್ರಸ್ತುತ ಅವರನ್ನು ಸಾಲಕಟ್ಟದೆ ನನಗೆ ತೊಂದರೆಯಾಗಿದೆ.

    ಲಕ್ಷಾಂತರ ರೂ ಸಾಲವನ್ನು ಬಡ ರೈತನಾಗಿರುವ ನನ್ನಿಂದ ಕಟ್ಟಲು ಸಾಧ್ಯವಿಲ್ಲ. ನಾನು ಏನು ಮಾಡದ ಸ್ಥಿತಿಯಲ್ಲಿದ್ದೇನೆ ಎಂದು ವಿಡಿಯೋ ದಲ್ಲಿ ಇದೆ.

    ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗುರು ಪ್ರಸಾದ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್, ಸುದರ್ಶನ್ ಬಜ, ಅಜಿತ್ ಶೆಟ್ಟಿ ಮತ್ತು ಬಿಜೆಪಿ ಪ್ರಮುಖರು ಭೇಟಿಯಾಗಿ ಧೈರ್ಯ ತುಂಬಿದ್ದು. ಈ ಸೊಸೈಟಿಯ ಅವ್ಯವಹಾರದ ಬಗ್ಗೆ ನೂರಾರು ದೂರು ಬಂದಿರುವ ಕಾರಣ ಪ್ರಕರಣದ ತನಿಖೆ ನಡೆಯುತ್ತಿದೆ.

    ಸದ್ಯ ಗುರುಪ್ರಸಾದ್ ಅವರ ಪತ್ನಿ ದೀಪಾ ಅವರು ಪುಂಜಾಲಕಟ್ಟೆ ಪೋಲೀಸ್ ಠಾಣೆಗೆ ದೂರು ನೀಡಿದ್ದು,ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಇಲ್ಲಿನ ಪೋಲೀಸರು ಮಾಹಿತಿ ನೀಡಿದ್ದಾರೆ.

    BANTWAL

    ಕಲ್ಲಡ್ಕದಲ್ಲಿ ಸರ್ವೀಸ್ ರಸ್ತೆಗೆ ಡಾಮರು

    Published

    on

    ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.

    ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    Continue Reading

    BANTWAL

    ಮಂಗಳೂರು: ಯುವತಿ ವಿಚಾರದಲ್ಲಿ ಯುವಕನಿಗೆ ಥಳಿತ; ಆರೋಪಿಗಳು ಅರೆಸ್ಟ್

    Published

    on

    ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್‌ ಸಪ್ವಾನ್( 25), ಮಹಮ್ಮದ್‌ ರಿಜ್ವಾನ್‌ (25), ಇರ್ಪಾನ್‍(27), ಅನೀಸ್‍ ಅಹಮ್ಮದ್‍ (19), ನಾಸೀರ್‍ (27), ಇಬ್ರಾಹಿಂ, ಶಾಕೀರ್‍ (18)ನನ್ನು ಬಂಧಿಸಲಾಗಿದೆ.

    ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್‍ ಮುಸ್ತಾಫ್‍ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.

     

    ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ

     

    ಮಹಮ್ಮದ್‍ ಮುಸ್ತಾಫ್‍ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್‍ ಮುಸ್ತಾಫ್‍ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.

    Continue Reading

    BANTWAL

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕ ಆತ್ಮಹ*ತ್ಯೆ

    Published

    on

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.

    ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.

    ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    Continue Reading

    LATEST NEWS

    Trending