Connect with us

BANTWAL

ಸೌಹಾರ್ದಯುತ ಬಂಟ್ವಾಳ ನಿರ್ಮಾಣ ಈ ಬಾರಿಯ ಗೆಲುವಿಗೆ ಕಾರಣ-ರಾಜೇಶ್ ನೈಕ್‌

Published

on

ನಮ್ಮ ಪಕ್ಷದ ಶಾಸಕರು ಶ್ರದ್ಧೆ, ನಿಷ್ಠೆಯಿಂದ ದುಡಿದ ಪರಿಣಾಮ ಹಾಗೂ ಕಳೆದ 5 ವರ್ಷಗಳ ಅಭಿವೃದ್ಧಿ ಕಾರ್ಯ, ಶಾಂತಿ, ಸೌಹಾರ್ದಯುತ ಬಂಟ್ವಾಳ ನಿರ್ಮಾಣ ಈ ಬಾರಿಗೆಯ ಗೆಲುವಿಗೆ ಕಾರಣವಾಗಿದೆ ಎಂದು ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನೈಕ್‌ ಉಳಿಪ್ಪಾಡಿ ಹೇಳಿದರು.

ಬಂಟ್ವಾಳ: ನಮ್ಮ ಪಕ್ಷದ ಶಾಸಕರು ಶ್ರದ್ಧೆ, ನಿಷ್ಠೆಯಿಂದ ದುಡಿದ ಪರಿಣಾಮ ಹಾಗೂ ಕಳೆದ 5 ವರ್ಷಗಳ ಅಭಿವೃದ್ಧಿ ಕಾರ್ಯ, ಶಾಂತಿ, ಸೌಹಾರ್ದಯುತ ಬಂಟ್ವಾಳ ನಿರ್ಮಾಣ ಈ ಬಾರಿಗೆಯ ಗೆಲುವಿಗೆ ಕಾರಣವಾಗಿದೆ ಎಂದು ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನೈಕ್‌ ಉಳಿಪ್ಪಾಡಿ ಹೇಳಿದರು.

ಗೆಲುವು ಸಾಧಿಸಿ ಬಳಿಕ ಬಂಟ್ವಾಳ ಬಿಜೆಪಿ ಕಚೇರಿಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು ವಿರೋಧ ಪಕ್ಷದಲ್ಲಿದ್ದುಕೊಂಡು ಕೆಲಸ ಮಾಡಬೇಕಾದ ಸ್ಥಿತಿ ಇದ್ದು, ಸಿಕ್ಕ ಅವಕಾಶಗಳನ್ನು ಉಪಯೋಗಿಸಿಕೊಂಡು ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಿದ್ದೇನೆ.

ಈ ಬಾರಿ ವಿರೋಧ ಪಕ್ಷದಲ್ಲಿದ್ದು, ಆಡಳಿತ ಪಕ್ಷದಲ್ಲಿದ್ದರೆ ಹಿಂದಿಗಿಂತ ಹೆಚ್ಚಿನ ಅಭಿವೃದ್ಧಿ ಮಾಡುವುದಕ್ಕೆ ಅವಕಾಶವಾಗುತ್ತಿತ್ತು.

ಆದರೂ ಗರಿಷ್ಠ ಪ್ರಯತ್ನ ಮಾಡಿ ಅನುದಾನ ತಂದು ಅಭಿವೃದ್ಧಿ ಕಾರ್ಯ ಮಾಡಲಿದ್ದೇನೆ.

ಜತೆಗೆ ಬಂಟ್ವಾಳದಲ್ಲಿ ಬಿಜೆಪಿಯಿಂದ 2ನೇ ಬಾರಿಗೆ ಗೆದ್ದ ಮೊದಲ ಶಾಸಕನಾಗಿರುವುದಕ್ಕೆ ಹೆಚ್ಚು ಸಂತೋಷ ಪಡುತ್ತೇನೆ ಎಂದರು.

BANTWAL

ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು

Published

on

ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್‌ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.


ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು

ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.

Continue Reading

BANTWAL

ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು

Published

on

ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಲೋಕೇಶ್ ಅವರು  ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.

ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್

ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್‌ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BANTWAL

ಗಂಡ ಹೆಂಡತಿಗೆ ನಾಲ್ವರಿಂದ ಹಲ್ಲೆ..!!

Published

on

ಬಂಟ್ವಾಳ; ಅಪಘಾತದ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ಮಾಡಿರುವ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಎ.15ರಂದು ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಹಲ್ಲೆಗೊಳಗಾದವರು. ಹಲ್ಲೆಗೊಳಗಾದವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಮಂಜುನಾಥ್ ಅವರು ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ಪ್ರಶ್ನಿಸಿದಕ್ಕೆ ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕರಿಂಗಾಣ ಕ್ರಾಸ್ ಎಂಬಲ್ಲಿ ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿಗೆ ಏಟಾಗಿದ್ದು, ಅವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಘಟನೆ ನಡೆದ ಕೂಡಲೇ ಸಂಚಾರ ಪೊಲೀಸರು ಭೇಟಿ ನೀಡಿ ವಾಹನವನ್ನು ಹಾಗೂ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಪೊಲೀಸ್‌ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಭಜರಂಗದಳ, ವಿಶ್ವಹಿಂದೂಪರಿಷತ್ ಕಲ್ಲಡ್ಕ ಪ್ರಖಂಡ ಖಂಡನೆ ವ್ಯಕ್ತಪಡಿಸಿದ್ದಾರೆ.

Continue Reading

LATEST NEWS

Trending