Connect with us

BANTWAL

Bantwala: ರೇಶನ್‌ ಅಕ್ಕಿಯಲ್ಲಿ ಗೋಲ್ ಮಾಲ್ ಶಂಕೆ-ಅವ್ಯವಹಾರ ಆರೋಪ..!

Published

on

ಬಂಟ್ವಾಳ ತಾಲೂಕಿನ‌ ಪಡಿತರ ಚೀಟಿದಾರರಿಗೆ ವಿತರಿಸಲು ಭಾರತೀಯ ಆಹಾರ ನಿಗಮದಿಂದ ಪೂರೈಕೆಯಾದ ಸುಮಾರು 40 ಲೋಡ್ ಅಂದರೆ ಅಂದಾಜು ಒಂದುವರೆ ಕೋಟಿ ರೂಪಾಯಿ ಮೌಲ್ಯದ ಅಕ್ಕಿಯ ಲೆಕ್ಕಾಚಾರದಲ್ಲಿ ವ್ಯತ್ಯಾಸ ಕಂಡು ಬಂದಿದ್ದು, ಭಾರೀ ಅವ್ಯವಹಾರದ ಶಂಕೆ ವ್ಯಕ್ತವಾಗಿದೆ.

ಬಂಟ್ವಾಳ: ಬಂಟ್ವಾಳ ತಾಲೂಕಿನ‌ ಪಡಿತರ ಚೀಟಿದಾರರಿಗೆ ವಿತರಿಸಲು ಭಾರತೀಯ ಆಹಾರ ನಿಗಮದಿಂದ ಪೂರೈಕೆಯಾದ ಸುಮಾರು 40 ಲೋಡ್ ಅಂದರೆ ಅಂದಾಜು ಒಂದುವರೆ ಕೋಟಿ ರೂಪಾಯಿ ಮೌಲ್ಯದ ಅಕ್ಕಿಯ ಲೆಕ್ಕಾಚಾರದಲ್ಲಿ ವ್ಯತ್ಯಾಸ ಕಂಡು ಬಂದಿದ್ದು, ಭಾರೀ ಅವ್ಯವಹಾರದ ಶಂಕೆ ವ್ಯಕ್ತವಾಗಿದೆ.

ಈ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಶಾಸಕ ರಾಜೇಶ್‌ ನಾಯ್ಕ್‌ ಅವರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ ಹಾಗೂ ಇದೇ ವೇಳೆ ಮಂಗಳೂರಿನ ಸಹಾಯಕ ಆಯುಕ್ತ ಹಾಗೂ ತಾಲೂಕು ದಂಡಾಧಿಕಾರಿಯವರು ಬಂಟ್ವಾಳದ ಬಿ.ಸಿ.ರೋಡು ತಲಪಾಡಿ ಎಂಬಲ್ಲಿರುವ ಆಹಾರ ನಿಗಮದ ಗೋದಾಮಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರಿನಲ್ಲಿರುವ ಭಾರತೀಯ ಆಹಾರ ನಿಗಮದ ಗೋದಾಮಿನಿಂದ ಬಂಟ್ವಾಳದ ಬಿ.ಸಿ. ರೋಡ್‌ ನ ಗೋದಾಮಿಗೆ ಸರಬರಾಜು ಆಗಿರುವ ಸುಮಾರು 40 ಲೋಡ್‌ ಅಕ್ಕಿ ಕಾಣೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಈ ಬಗ್ಗೆ ಶಾಸಕ ರಾಜೇಶ್‌ ನಾಯ್ಕ್‌ ಅವರು ಜಿಲ್ಲಾಧಿಕಾರಿಗೆ ಬರೆದ ಪತ್ರದಲ್ಲಿ ‘ಬಂಟ್ವಾಳ ತಾಲೂಕಿನ ಪಡಿತರ ಚೀಟಿದಾರರಿಗೆ ವಿತರಿಸಲು ಪೂರೈಕೆಯಾದ ಅಕ್ಕಿಗೆ ಸಂಬಂಧಿಸಿ ಅವ್ಯವಹಾರ ನಡೆಯುತ್ತಿರುವ ಬಗ್ಗೆ ಸಾರ್ವಜನಿಕ ವಲಯದಿಂದ ದೂರುಗಳು ಬಂದಿವೆ.

ಹಾಗಾಗಿ ಈ ಬಗ್ಗೆ ಕೂಡಲೇ ತನಿಖೆ ನಡೆಸಬೇಕು. ಒಂದೊಮ್ಮೆ ದುರುಪಯೋಗ ಆಗಿರುವುದು ಕಂಡು ಬಂದಿದ್ದರೆ ತಪ್ಪಿತಸ್ಥರ ಮೇಲೆ ಕೂಡಲೇ ಕ್ರಮ ಕೈಗೊಳ್ಳ ಬೇಕು’ ಎಂದು ಒತ್ತಾಯಿಸಿದ್ದಾರೆ.

ಶಾಸಕರ ದೂರಿನ ಬೆನ್ನಲ್ಲೇ ಮಂಗಳೂರಿನ ಸಹಾಯಕ ಆಯುಕ್ತರು ಬಿ.ಸಿ. ರೋಡ್‌ ನ ಗೋದಾಮಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು ‘ಪೂರೈಕೆಯಾದ ಅಕ್ಕಿ ಬಗ್ಗೆ ಲೆಕ್ಕಾಚಾರ ಮತ್ತು ಇತರ ವಿಷಯಗಳ ಸ್ಪಷ್ಟವಾದ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.

ತನಿಖೆಯ ಹಿತ ದೃಷ್ಟಿಯಿಂದ ಈಗ ಮಾಹಿತಿ ನೀಡಲು ಸಾಧ್ಯವಿಲ್ಲ.

ತನಿಖೆ ಮುಗಿದ ಬಳಿಕ ಮಾಹಿತಿ ನೀಡಲಾಗುವುದು’ ಎಂದು ತಿಳಿಸಿದ್ದಾರೆ.

BANTWAL

Bantwala: ಹೃದಯ ಸಂಬಂಧಿ ಖಾಯಿಲೆಯಿಂದ 4 ವರ್ಷದ ಬಾಲಕಿ ನಿಧನ..!

Published

on

ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ಬಂಟ್ವಾಳದ ಮಿತ್ತೂರಿನಲ್ಲಿ ನಡೆದಿದೆ.

ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ನಡೆದಿದೆ.

ಮೃತ ಬಾಲಕಿಯನ್ನು ಬಂಟ್ವಾಳ ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ತಿಳಿದು ಬಂದಿದೆ.

ಜಮೀಲಾ  ಬಾಲಕಿ ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿದ್ದಳು.

ಈಕೆ ಅನಾರೋಗ್ಯದಿಂದ ಇದ್ದು, ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

Continue Reading

BANTWAL

Bantwala: ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾ – ಕರೆಂಟ್ ಕಂಬಕ್ಕೆ ಗುದ್ದಿದ ಬಸ್..!

Published

on

ಬಂಟ್ವಾಳ: ಸರಕಾರಿ ಬಸ್ ಒಂದು ಓವರ್ ಟೇಕ್ ಮಾಡುತ್ತಿದ್ದ ಟೆಂಪೋ ರಿಕ್ಷಾವನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಗುದ್ದಿದ ಘಟನೆ ಬಂಟ್ವಾಳದ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ.

ಮೆಲ್ಕಾರಿನಿಂದ ಬರುತ್ತಿದ್ದ ಇಲ್ಯಾಸ್ ಟೆಂಪೋ ರಿಕ್ಷಾ ಚಾಲಕನು ಕಂದೂರಿನ ಬಜಾರ್ ಅಡಿಟೋರಿಯಮ್ ಬಳಿ ಬರುತ್ತಿದ್ದ ಆಕ್ಟಿವಾ ಗಾಡಿಯೊಂದನ್ನು ಓವರ್ ಟೇಕ್ ಮಾಡುತ್ತಿದ್ದ.

ಈ ವೇಳೆ ಮುಡಿಪು ಮಾರ್ಗವಾಗಿ ಬರುತ್ತಿದ್ದ ಕಾಸರಗೋಡು ಬಿ.ಸಿ.ರೋಡ್ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಬಸ್ ಗುದ್ದಿದ್ದ ರಭಸಕ್ಕೆ ಕರೆಂಟ್ ಕಂಬ ತುಂಡಾಗಿದೆ.

ಬಸ್ಸಿನಲ್ಲಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೋಲಿಸರು ಆಗಮಿಸಿ, ಪರಿಶೀಲನೆ ನಡೆಸಿದರು.

Continue Reading

BANTWAL

Bantwala: ಕಾರುಗಳ ನಡುವೆ ಸರಣಿ ಅಪಘಾತ..!

Published

on

ಪಾಣೆಮಂಗಳೂರು ಸೇತುವೆಯಲ್ಲಿ 2 ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸುಮಾರು ಒಂದು ತಾಸಿಗಿಂತಲೂ ಅಧಿಕವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಂದರೆಯಾದ ಘಟನೆ ನಡೆದಿದೆ.

ಬಂಟ್ವಾಳ: ಪಾಣೆಮಂಗಳೂರು ಸೇತುವೆಯಲ್ಲಿ 2 ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸುಮಾರು ಒಂದು ತಾಸಿಗಿಂತಲೂ ಅಧಿಕವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಂದರೆಯಾದ ಘಟನೆ ನಡೆದಿದೆ.

ಪಾಣೆಮಂಗಳೂರು ಸೇತುವೆಯಲ್ಲಿ ಎರಡು ಕಾರುಗಳು ಡಿಕ್ಕಿಯಾಗಿದ್ದು, ಇದರ ಹಿಂಬದಿಯಿಂದ ಬಂದ ಮತ್ತೆ ಎರಡು ವಾಹನಗಳು ಢಿಕ್ಕಿ ಯಾಗಿದೆ.

ಡಿಕ್ಕಿಯ ರಭಸಕ್ಕೆ ಎರಡು ಕಾರುಗಳು ಜಖಂಗೊಂಡಿದೆ.

ಆದರೆ ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯವಾಗದೆ ಪಾರಾಗಿದ್ದಾರೆ.

ಇದರ ಜೊತೆಗೆ ಸೇತುವೆ ಸಮೀಪ ನೆಹರು ನಗರ ಎಂಬಲ್ಲಿ ಲಾರಿಯೊಂದರ ಟಯರ್ ಕೆಟ್ಟು ಹೋಗಿ ನಿಂತಿತ್ತು.

ಹೀಗಾಗಿ ತಾಸುಗಟ್ಟಲೆ ವಾಹನಗಳು ಸಾಲಾಗಿ ನಿಂತಿದ್ದವು.

ಸೇತುವೆಯಲ್ಲಿ ಅಪಘಾತ ಸಂಭವಿಸಿದ ಪರಿಣಾಮ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು.

ವಾಹನಗಳನ್ನು ಕ್ಲಿಯರ್ ಮಾಡಲು ಟ್ರಾಫಿಕ್ ಪೋಲೀಸರು ಹರಸಹಾಸ ಪಟ್ಟರು.

ಅಪಘಾತ ನಡೆದು ಕೆಲವೇ ಹೊತ್ತಿನಲ್ಲಿ ವಾಹನಗಳ ಸಾಲು ಸುಮಾರು ಉದ್ದಕ್ಕೆ ತಲುಪಿತ್ತು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾದ ಹಿನ್ನೆಲೆಯಲ್ಲಿ ವಾಹನ ಸವಾರರು ಪಾಣೆಮಂಗಳೂರು ‌ಪೇಟೆ ಮೂಲಕ ಹಳೆ ಸೇತುವೆ ಮೂಲಕ ಸಂಚಾರಕ್ಕೆ ಪ್ರಯತ್ನ ಮಾಡಿದರಾದರೂ ಅಲ್ಲಿಯೂ ಟ್ರಾಫಿಕ್ ಸಮಸ್ಯೆ ಉಂಟಾಯಿತು.

ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ವಾಹನಗಳು ಹೋಗಿ ಸಾಲು ಸಾಲಾಗಿ ನಿಂತಿರುವ ಪೋಟೋ ವೈರಲ್ ಆಗಿದೆ.

ರಾತ್ರಿ ಹೊತ್ತು ವಾಹನಗಳ ಲೈಟ್ ಮತ್ತು ನೇತ್ರಾವತಿ ನದಿಯ ನೀರು ಕಂಗೊಳಿಸುವ ಚಿತ್ರವನ್ನು ಪಾಣೆಮಂಗಳೂರು ಮಂಗಳೂರು ಹೊಸ ಸೇತುವೆಯಿಂದ ಕ್ಲಿಕ್ ಮಾಡಿದ್ದಾರೆ.

ಪೊಲೀಸ್ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನ ಮಾಡಿದರು.

Continue Reading

LATEST NEWS

Trending