Friday, July 1, 2022

ಬಂಟ್ವಾಳ: ಪ್ರಾಧ್ಯಾಪಕಿಗೆ ಕಿರುಕುಳ ಪ್ರಕರಣ- ಆರೋಪಿಗಳಿಗೆ ಜಾಮೀನು

ಬಂಟ್ವಾಳ: ಕಾಲೇಜೊಂದರ ಪ್ರಾಧ್ಯಾಪಕಿಗೆ ಕೀಳು ಮಟ್ಟದ ಭಾಷೆಯಲ್ಲಿ ಹಾಗೂ ಮಾನಹಾನಿಕರವಾಗಿ ಪತ್ರ ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್‌ಗಳನ್ನು ಅಂಟಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ.


ಕಾಲೇಜಿನ ಸಂಚಾಲಕ, ಅರ್ಥಶಾಸ್ತ್ರ ಉಪನ್ಯಾಸಕ ಬಂಟ್ವಾಳ ಸಿದ್ಧಕಟ್ಟೆ ಮೇಗಿನ ಉಳಿರೋಡಿ ನಿವಾಸಿ ಪ್ರದೀಪ್ ಪೂಜಾರಿ ಹಾಗೂ ಕ್ರೀಡಾ ತರಬೇತಿದಾರ ಹೆಬ್ರಿ ನಾಡ್ಪಾಲು ನಿವಾಸಿ ತಾರಾನಾಥ ಬಿ ಎಸ್ ಶೆಟ್ಟಿಗೆ ಎಂಬವರಿಗೆ ನ್ಯಾಯಾಲಯ ಜಾಮೀನು ನೀಡಿದೆ.

ಪ್ರಮುಖ ಆರೋಪಿ ಕಾಲೇಜಿನ ಸಂಚಾಲಕ ಬೆಳ್ತಂಗಡಿಯ ಲಾಯಿಲ ನಿವಾಸಿ ಪ್ರಕಾಶ್ ಶೆಣೈಗೆ ನ್ಯಾಯಾಲಯ ಕಳೆದ ಶುಕ್ರವಾರ ಜಾಮೀನು ನೀಡಿತ್ತು.

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿ: ಬೀದಿ ಬದಿ ಅಂಗಡಿ ತೆರವು ಪ್ರಕರಣದ ವಿರುದ್ಧ ಪ್ರತಿಭಟನೆ

ಬೆಳ್ತಂಗಡಿ: ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಿಂದ ಕೊಕ್ಕಡ ಸಂಪರ್ಕಿಸುವ ನಿಡ್ಲೆ ಪಂಚಾಯತ್‌ ವ್ಯಾಪ್ತಿಯ ಪಾರ್ಪಿಕಲ್‌ ರಸ್ತೆಯಲ್ಲಿರುವ ಬೀದಿ ಬದಿ ವ್ಯಾಪಾರಸ್ಥರನ್ನು PWD ತೆರವುಗೊಳಿಸಿರುವ ವಿರುದ್ಧ ಬೃಹತ್ ಪ್ರತಿಭಟನೆ ಇಂದು ಬೆಳ್ತಂಗಡಿಯ ಪಿಡಬ್ಲ್ಯೂಡಿ...

ಕ್ಷುಲ್ಲಕ ಕಾರಣಕ್ಕೆ ಮಗುವನ್ನು ಕತ್ತು ಹಿಸುಕಿ ಕೊಂದು ತಾಯಿ ಜೀವಾಂತ್ಯ

ಬೆಂಗಳೂರು: ಮೂರೂವರೆ ವರ್ಷದ ಮಗುವನ್ನು ವೇಲ್‌ನಿಂದ ನೇಣು ಬಿಗಿದು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ RR ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.ದೀಪಾ (31) ತನ್ನ ಮಗು...

ಮಂಗಳೂರಿನಲ್ಲಿ ಅಗ್ನಿವೀರ್ ಪ್ರವೇಶ ಪರೀಕ್ಷೆ: ಅವಿವಾಹಿತ ಪುರುಷರಿಂದ ಅರ್ಜಿ ಆಹ್ವಾನ

ಮಂಗಳೂರು: ಭಾರತೀಯ ವಾಯುಪಡೆಯಿಂದ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಶೇ.50ರಷ್ಟು ಅಂಕ ಮತ್ತು...