Connect with us

BANTWAL

Bantwala: ಕಾರುಗಳ ನಡುವೆ ಸರಣಿ ಅಪಘಾತ..!

Published

on

ಪಾಣೆಮಂಗಳೂರು ಸೇತುವೆಯಲ್ಲಿ 2 ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸುಮಾರು ಒಂದು ತಾಸಿಗಿಂತಲೂ ಅಧಿಕವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಂದರೆಯಾದ ಘಟನೆ ನಡೆದಿದೆ.

ಬಂಟ್ವಾಳ: ಪಾಣೆಮಂಗಳೂರು ಸೇತುವೆಯಲ್ಲಿ 2 ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸುಮಾರು ಒಂದು ತಾಸಿಗಿಂತಲೂ ಅಧಿಕವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಂದರೆಯಾದ ಘಟನೆ ನಡೆದಿದೆ.

ಪಾಣೆಮಂಗಳೂರು ಸೇತುವೆಯಲ್ಲಿ ಎರಡು ಕಾರುಗಳು ಡಿಕ್ಕಿಯಾಗಿದ್ದು, ಇದರ ಹಿಂಬದಿಯಿಂದ ಬಂದ ಮತ್ತೆ ಎರಡು ವಾಹನಗಳು ಢಿಕ್ಕಿ ಯಾಗಿದೆ.

ಡಿಕ್ಕಿಯ ರಭಸಕ್ಕೆ ಎರಡು ಕಾರುಗಳು ಜಖಂಗೊಂಡಿದೆ.

ಆದರೆ ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯವಾಗದೆ ಪಾರಾಗಿದ್ದಾರೆ.

ಇದರ ಜೊತೆಗೆ ಸೇತುವೆ ಸಮೀಪ ನೆಹರು ನಗರ ಎಂಬಲ್ಲಿ ಲಾರಿಯೊಂದರ ಟಯರ್ ಕೆಟ್ಟು ಹೋಗಿ ನಿಂತಿತ್ತು.

ಹೀಗಾಗಿ ತಾಸುಗಟ್ಟಲೆ ವಾಹನಗಳು ಸಾಲಾಗಿ ನಿಂತಿದ್ದವು.

ಸೇತುವೆಯಲ್ಲಿ ಅಪಘಾತ ಸಂಭವಿಸಿದ ಪರಿಣಾಮ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು.

ವಾಹನಗಳನ್ನು ಕ್ಲಿಯರ್ ಮಾಡಲು ಟ್ರಾಫಿಕ್ ಪೋಲೀಸರು ಹರಸಹಾಸ ಪಟ್ಟರು.

ಅಪಘಾತ ನಡೆದು ಕೆಲವೇ ಹೊತ್ತಿನಲ್ಲಿ ವಾಹನಗಳ ಸಾಲು ಸುಮಾರು ಉದ್ದಕ್ಕೆ ತಲುಪಿತ್ತು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾದ ಹಿನ್ನೆಲೆಯಲ್ಲಿ ವಾಹನ ಸವಾರರು ಪಾಣೆಮಂಗಳೂರು ‌ಪೇಟೆ ಮೂಲಕ ಹಳೆ ಸೇತುವೆ ಮೂಲಕ ಸಂಚಾರಕ್ಕೆ ಪ್ರಯತ್ನ ಮಾಡಿದರಾದರೂ ಅಲ್ಲಿಯೂ ಟ್ರಾಫಿಕ್ ಸಮಸ್ಯೆ ಉಂಟಾಯಿತು.

ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ವಾಹನಗಳು ಹೋಗಿ ಸಾಲು ಸಾಲಾಗಿ ನಿಂತಿರುವ ಪೋಟೋ ವೈರಲ್ ಆಗಿದೆ.

ರಾತ್ರಿ ಹೊತ್ತು ವಾಹನಗಳ ಲೈಟ್ ಮತ್ತು ನೇತ್ರಾವತಿ ನದಿಯ ನೀರು ಕಂಗೊಳಿಸುವ ಚಿತ್ರವನ್ನು ಪಾಣೆಮಂಗಳೂರು ಮಂಗಳೂರು ಹೊಸ ಸೇತುವೆಯಿಂದ ಕ್ಲಿಕ್ ಮಾಡಿದ್ದಾರೆ.

ಪೊಲೀಸ್ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನ ಮಾಡಿದರು.

BANTWAL

Bantwala: ಅಕ್ಕಪಕ್ಕ ಮನೆಯ ಯುವಕ-ಯುವತಿ ಒಂದೇ ದಿನ ನಾಪತ್ತೆ..!

Published

on

ಬಂಟ್ವಾಳ: ಅಕ್ಕ ಪಕ್ಕದ ಮನೆಯ ಯುವಕ ಮತ್ತು ಯುವತಿ ಒಂದೇ ದಿನ ನಾಪತ್ತೆ ಯಾದ ಘಟನೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದಲ್ಲಿ ನಡೆದಿದ್ದು, ಈ ಕುರಿತಂತೆ ಎರಡೂ ಮನೆಯವರು ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಆಯಿಷತ್‌ ರಸ್ಮಾ (18) ಮತ್ತು  ಮಹಮ್ಮದ್‌ ಸಿನಾನ್‌ (23) ನಾಪತ್ತೆಯಾದವರು. ರಸ್ಮಾ ನಡುಪದವು ಖಾಸಗಿ ಕಾಲೇಜಿನಲ್ಲಿ ಫಾರ್ಮಸಿ ವಿದ್ಯಾರ್ಥಿನಿಯಾಗಿದ್ದಾರೆ. ಅವರು ನ. 23ರ ರಾತ್ರಿ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದು, ಮರುದಿನ ಬೆಳಗ್ಗೆ ಎದ್ದು ನೋಡಿದಾಗ ನಾಪತ್ತೆಯಾಗಿದ್ದರು. ಸಿನಾನ್‌ ಕೆಲವು ವರ್ಷಗಳ ಕಾಲ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಬಳಿಕ ಊರಿಗೆ ಬಂದು ಕೂಲಿ ಕೆಲಸ ಮಾಡಿಕೊಂಡಿದ್ದರು. ಅವರು ನ. 23ರ ರಾತ್ರಿ ಊಟ ಮಾಡಿ ಮಲಗಿದವರು ಮರುದಿನ ಬೆಳಗಾಗುವಷ್ಟರಲ್ಲಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ಎರಡೂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

Continue Reading

BANTWAL

Bantwala: ಅಕ್ರಮ ಮರ ಸಾಗಾಟ-ಇಬ್ಬರು ಆರೋಪಿಗಳು ವಶ..!

Published

on

ಬಂಟ್ವಾಳ: ಅಕ್ರಮ ಮರ ಸಾಗಟ ಮಾಡುತ್ತಿದ ಸ್ಥಳಕ್ಕೆ ಖಚಿತ ಮಾಹಿತ ಪಡೆದ ಬಂಟ್ವಾಳ ಅರಣ್ಯ ಇಲಾಖೆಯವರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಹಾಗೂ ಉಳ್ಳಾಲ ತಾಲೂಕಿನ ಸಜೀಪಪಡು ಗ್ರಾಮದ ಕೋಟೆಕಣಿಯಲ್ಲಿ ನಡೆದಿದೆ.

ಮರ ಹಾಗೂ ವಿವಿಧ ಜಾತಿಯ ದಿಮ್ಮಿಗಳನ್ನು ಪಿಕಪ್ ಮೂಲಕ ಆಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹಾಗೂ 2 ಪಿಕಪ್ ವಾಹನ,6 ಲಕ್ಷ ರೂ ಮೌಲ್ಯದ ದಿಮ್ಮಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಗಲು ಪಾಲ್ಗೊಂಡಿದ್ದರು. ವಲಯ ಅರಣ್ಯ ಅಧಿಕಾರಿ ಪ್ರಪುಲ್ ಶೆಟ್ಟಿ ಪಿ.ಅವರು ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ.

Continue Reading

BANTWAL

ಇಂಡೋನೇಷ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಬಂಟ್ವಾಳದ ಧನೇಶ್‌ ಶೆಟ್ಟಿ ಆಯ್ಕೆ

Published

on

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕ ಇಂಡೋನೇಶ್ಯಾದ ರಾಷ್ಟ್ರೀಯ ಕ್ರಿಕೆಟ್‌ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಕುಕ್ಕಿಪ್ಪಾಡಿ ಹುಣಸೆಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಅವರ ಪುತ್ರ ಧನೇಶ್ ಶೆಟ್ಟಿ ಇಂಡೋನೇಶ್ಯಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದವರು. ವಿವಾಹಿತರಾಗಿರುವ ಧನೇಶ್ ಅವರು ತನ್ನ ಪತ್ನಿಯೊಂದಿಗೆ ಇಂಡೋನೇಶ್ಯಾದಲ್ಲಿ ನೆಲೆಸಿದ್ದು, ಆರೋಗ್ಯ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ನಲ್ಲಿ ಆಸಕ್ತಿ ಹೊಂದಿದ್ದ ಇವರು ಇದೀಗ ಇಂಡೋನೇಸ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

Continue Reading

LATEST NEWS

Trending