BANTWAL
Bantwala: ಅನಾಥವಾಗಿ ಪಾಳು ಬಿದ್ದ ಉಜಿರಂಡಿಪಲ್ಕೆಯ ಹಾಸ್ಟೆಲ್ ಕಟ್ಟಡ..!
ವಿದ್ಯಾರ್ಥಿಗಳಿಗೆ ವಸತಿಯ ಜತೆಗೆ ಅನ್ನವನ್ನೂ ನೀಡಿದ್ದ ಹಾಸ್ಟೆಲ್ ಕಟ್ಟಡವೊಂದು ಇದೀಗ ಅನಾಥವಾಗಿ ಪಾಳು ಬಿದ್ದು ವರ್ಷ ಕಳೆದಂತೆ ಶಿಥಿಲಾವಸ್ಥೆಗೆ ತಲುಪುತ್ತಿದೆ.
ಬಂಟ್ವಾಳ: ಒಂದು ಕಾಲದಲ್ಲಿ ನೂರಾರು ವಿದ್ಯಾರ್ಥಿಗಳಿಗೆ ವಸತಿಯ ಜತೆಗೆ ಅನ್ನವನ್ನೂ ನೀಡಿದ್ದ ಹಾಸ್ಟೆಲ್ ಕಟ್ಟಡವೊಂದು ಇದೀಗ ಅನಾಥವಾಗಿ ಪಾಳು ಬಿದ್ದು ವರ್ಷ ಕಳೆದಂತೆ ಶಿಥಿಲಾವಸ್ಥೆಗೆ ತಲುಪುತ್ತಿದೆ.
ನಿವೇಶನ ಹಾಗೂ ಕಟ್ಟಡದ ಮಾಲಕತ್ವ ಹೊಂದಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಯಾವುದೇ ಸರಕಾರಿ ಇಲಾಖೆಯ ಬಳಕೆಗೆ ನೀಡಲು ಸಿದ್ಧವಿದ್ದರೂ ಯಾರೂ ಕೂಡ ಬಳಸಲು ಮುಂದೆ ಬಂದಿಲ್ಲ.
ಇದು ಮಣಿನಾಲ್ಕೂರು ಗ್ರಾಮದ ಉಜಿರಂಡಿಪಲ್ಕೆಯಲ್ಲಿರುವ ಹಾಸ್ಟೆಲ್ ಕಟ್ಟಡದ ಸ್ಥಿತಿಯಾಗಿದೆ.
ಸುಮಾರು 28 ವರ್ಷಗಳ ಇತಿಹಾಸ ಹೊಂದಿರುವ ಈ ಕಟ್ಟಡದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳ ಬಾಲಕರ ಹಾಸ್ಟೆಲ್ ಕಾರ್ಯಾಚರಿಸುತ್ತಿದ್ದು, ಅಲ್ಲಿನ ವಿದ್ಯಾರ್ಥಿಗಳು ಪಕ್ಕದಲ್ಲೇ ಇರುವ ಮಣಿನಾಲ್ಕೂರು ಸರಕಾರಿ ಪ್ರೌಢಶಾಲೆಗೆ ತೆರಳುತ್ತಿದ್ದರು.
ಹಲವೆಡೆ ಹೊಸ ಪ್ರೌಢಶಾಲೆಗಳು ಮಂಜೂರಾದ ಪರಿಣಾಮ ಈ ಹಾಸ್ಟೆಲ್‌ಗೆ ಬರುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿ ಮುಚ್ಚಬೇಕಾದ ಸ್ಥಿತಿ ನಿರ್ಮಾಣವಾಯಿತು.
ಮುಚ್ಚಿದ ಹಾಸ್ಟೆಲ್ ಕಟ್ಟಡದಲ್ಲಿ ಸುಮಾರು 7 ವರ್ಷಗಳ ಹಿಂದೆ ಬಂಟ್ವಾಳಕ್ಕೆ ಮಂಜೂರಾದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯವನ್ನು ನಡೆಸುವುದಕ್ಕೆ ಕಟ್ಟಡ ಸಿಗದ ಹಿನ್ನೆಲೆಯಲ್ಲಿ ಇದೇ ಕಟ್ಟಡದಲ್ಲಿ ನಡೆಸಲಾಯಿತು.
ಆದರೆ ಇಲ್ಲಿಂದ ವಿದ್ಯಾರ್ಥಿಗಳು ಸುಮಾರು 2೦ ಕಿ.ಮೀ. ದೂರದಲ್ಲಿರುವ ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್‌ಗೆ ಆಗಮಿಸಬೇಕಾಗಿದ್ದು, ಹೀಗಾಗಿ ವಿದ್ಯಾರ್ಥಿಗಳು ಹಾಸ್ಟೆಲ್‌ಗೆ ಬರಲು ಹಿಂದೇಟು ಹಾಕುತ್ತಿದ್ದರು.
ಈ ಕಾರಣದಿಂದ ಕೆಲವು ವರ್ಷಗಳ ಹಿಂದೆ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ತಲಪಾಡಿಯ ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರಗೊಳಿಸಲಾಗಿತ್ತು.
ಹೀಗಾಗಿ ಈ ಕಟ್ಟಡ ಮತ್ತೆ ಹಾಗೇ ಪಾಳು ಬಿದ್ದ ಸ್ಥಿತಿಗೆ ಮುಂದುವರಿಯಿತು.
ಖಾಲಿ ಇರುವ ಹಾಸ್ಟೆಲ್ ಕಟ್ಟಡವನ್ನು ಬಳಸುವ ದೃಷ್ಟಿಯಿಂದ ಕಿಯೋನಿಕ್ಸ್ ಸಂಸ್ಥೆ ಹಿಂದುಳಿದ ವರ್ಗಗಳ ಇಲಾಖೆಯವರ ಬಳಿ ಕೇಳಿದ್ದು, ಇಲಾಖೆ ಕೂಡ ಅದಕ್ಕೆ ಒಪ್ಪಿಗೆಯನ್ನು ನೀಡಿತ್ತು.
ಆದರೆ ಈ ಪ್ರಸ್ತಾಪ ಪ್ರಗತಿ ಕಾಣದ ಹಿನ್ನೆಲೆಯಲ್ಲಿ ಹಾಸ್ಟೆಲ್ ಖಾಲಿಯಾಗಿದ್ದು, ಯಾವುದೇ ನಿರ್ವಹಣೆ ಇಲ್ಲದೆ ವರ್ಷ ಕಳೆದಂತೆ ಶಿಥಿಲಾವಸ್ಥೆಗೆ ತಲುಪುತ್ತಿದೆ.
ಪ್ರಸ್ತುತ ಕಟ್ಟಡದ ಸುತ್ತಲೂ ಪೊದೆ ಬೆಳೆದುಕೊಂಡಿದ್ದು, ಇನ್ನೂ ಒಂದಷ್ಟು ವರ್ಷಗಳ ಕಾಲ ಹಾಗೇ ಬಿಟ್ಟರೆ ಕುಸಿದು ಬೀಳುವ ಸಾಧ್ಯತೆಯೂ ಇದೆ.
ಹಾಸ್ಟೆಲ್ ಒಳ ಭಾಗದಲ್ಲಿ ಇದ್ದ ಬಹುತೇಕ ಸೊತ್ತುಗಳು ಈಗಾಗಲೇ ಕಳವಾಗಿ ಹೋಗಿದೆ ಎಂದು ಸ್ಥಳೀಯರು ಹೇಳುತ್ತಾರೆ.
BANTWAL
ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ-ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ.
ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸುವ ಕಾರ್ಯ ಮಾಡಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ನೀಡಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
BANTWAL
Bantwala: ಹೃದಯ ಸಂಬಂಧಿ ಖಾಯಿಲೆಯಿಂದ 4 ವರ್ಷದ ಬಾಲಕಿ ನಿಧನ..!
ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ಬಂಟ್ವಾಳದ ಮಿತ್ತೂರಿನಲ್ಲಿ ನಡೆದಿದೆ.
ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ನಡೆದಿದೆ.
ಮೃತ ಬಾಲಕಿಯನ್ನು ಬಂಟ್ವಾಳ ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ತಿಳಿದು ಬಂದಿದೆ.
ಜಮೀಲಾ ಬಾಲಕಿ ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿದ್ದಳು.
ಈಕೆ ಅನಾರೋಗ್ಯದಿಂದ ಇದ್ದು, ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
BANTWAL
Bantwala: ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾ – ಕರೆಂಟ್ ಕಂಬಕ್ಕೆ ಗುದ್ದಿದ ಬಸ್..!
ಬಂಟ್ವಾಳ: ಸರಕಾರಿ ಬಸ್ ಒಂದು ಓವರ್ ಟೇಕ್ ಮಾಡುತ್ತಿದ್ದ ಟೆಂಪೋ ರಿಕ್ಷಾವನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಗುದ್ದಿದ ಘಟನೆ ಬಂಟ್ವಾಳದ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ.
ಮೆಲ್ಕಾರಿನಿಂದ ಬರುತ್ತಿದ್ದ ಇಲ್ಯಾಸ್ ಟೆಂಪೋ ರಿಕ್ಷಾ ಚಾಲಕನು ಕಂದೂರಿನ ಬಜಾರ್ ಅಡಿಟೋರಿಯಮ್ ಬಳಿ ಬರುತ್ತಿದ್ದ ಆಕ್ಟಿವಾ ಗಾಡಿಯೊಂದನ್ನು ಓವರ್ ಟೇಕ್ ಮಾಡುತ್ತಿದ್ದ.
ಈ ವೇಳೆ ಮುಡಿಪು ಮಾರ್ಗವಾಗಿ ಬರುತ್ತಿದ್ದ ಕಾಸರಗೋಡು ಬಿ.ಸಿ.ರೋಡ್ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಬಸ್ ಗುದ್ದಿದ್ದ ರಭಸಕ್ಕೆ ಕರೆಂಟ್ ಕಂಬ ತುಂಡಾಗಿದೆ.
ಬಸ್ಸಿನಲ್ಲಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೋಲಿಸರು ಆಗಮಿಸಿ, ಪರಿಶೀಲನೆ ನಡೆಸಿದರು.
- bengaluru6 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA5 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- DAKSHINA KANNADA7 days ago
ಮುಂದಿನ ವರ್ಷದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್- ಮಧು ಬಂಗಾರಪ್ಪ
- DAKSHINA KANNADA6 days ago
ಮಂಗಳೂರಿನ ಆಟೋಮ್ಯಾಟ್ರಿಕ್ಸ್ ಶೋ ರೂಮ್ ನಲ್ಲಿ ಟಾಟಾ ನೆಕ್ಸಾನ್, ಇ.ವಿ ಬಿಡುಗಡೆ