Connect with us

BANTWAL

ಬಂಟ್ವಾಳ ಮನೆ ಮೇಲೆ ಗುಡ್ಡ ಕುಸಿತ ಪ್ರಕರಣ: ಮನೆ ಮಾಲಕಿ ವಿರುದ್ಧ FIR

Published

on

ಬಂಟ್ವಾಳ: ದ.ಕ ಜಿಲ್ಲೆಯ ಬಂಟ್ವಾಳದ ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ಕಾರ್ಮಿಕರು ಉಳಿದುಕೊಂಡ ಮನೆಯ ಮೇಲೆ ಗುಡ್ಡ ಕುಸಿದ ಘಟನೆಯಲ್ಲಿ ಶೆಡ್ ನೊಳಗೆ ಸಿಲುಕಿಕೊಂಡು ಕೇರಳ ರಾಜ್ಯದ ಮೂವರು ಕಾರ್ಮಿಕರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮನೆಯ ಮಾಲಕಿಯ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮ ಕರಣಿಕರ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜುಲೈ 05 ರಂದು ಸಂಜೆ ಗುಡ್ಡ ಕುಸಿತದ ಬಗ್ಗೆ ಭೇಟಿ ನೀಡಿ ಪರಿಶೀಲಿಸಿ ಹಳೆ ಮನೆ ಕಟ್ಟಡದಲ್ಲಿ ವಾಸವಿದ್ದ ಕಾರ್ಮಿಕರನ್ನು ತೆರವುಗೊಳಿಸುವಂತೆ, ಜಾಗ್ರತೆ ವಹಿಸಲು ಮೌಖಿಕವಾಗಿ ಸೃಷ್ಟ ಸೂಚನೆಗಳನ್ನು ನೀಡಲಾಗಿತ್ತು. ಆದರೂ ಕೂಡ ಮನೆ ಮಾಲಕಿ ಬೆನಡಿಕ್ಟ ಕಾರ್ಲೋರವರವರು ಯಾವುದೇ ಮುಂಜಾಗ್ರತೆ ಕ್ರಮವನ್ನು ವಹಿಸದೆ ಬೇಜವಾಬ್ದಾರಿ ಮತ್ತು ನಿರ್ಲಕ್ಷ ತೋರಿಸಿದ್ದಾರೆ.


ಹೀಗಾಗಿ ನಿನ್ನೆ ಸಂಜೆ ಸುಮಾರು 6.45 ಗಂಟೆಗೆ ಅದೇ ಗುಡ್ಡ ಪುನಃ ಕುಸಿತ ಗೊಂಡು ಮಣ್ಣು ಹಳೆಯ ಮನೆಯ ಹಂಚಿನ ಛಾವಣಿಯ ಮೇಲೆ ಬಿದ್ದಿದೆ. ಇದರಿಂದ ಮನೆಯ ಒಳಗೆ ಇದ್ದ ಕಾರ್ಮಿಕರು ಮಣ್ಣಿನಲ್ಲಿ ಸಿಲುಕಿಕೊಂಡು, ನಾಲ್ವರಲ್ಲಿ ಮೂವರು ಕಾರ್ಮಿಕರು ಮೃತ ಪಡಲು ಮನೆ ಮಾಲಕಿ ಬೆನಡಿಕ್ಟ ಕಾರ್ಲೋರವರು ಕಾರಣರಾಗಿರುತ್ತಾರೆ ಎಂದು ಗ್ರಾಮ ಕರಣೀಕ ಸಂತೋಷ್ ಅವರ ದೂರಿನಂತೆ 304 A ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ.

ಆದರೆ ದೂರಿಗೆ ಸಂಬಂಧಿಸಿ ಮನೆ ಮಾಲಕಿ ಹೇಳುವಂತೆ ಜುಲೈ 5 ರಂದೇ ಗುಡ್ಡ ಕುಸಿಯುವ ಕುರಿತಾಗಿ ಗ್ರಾಮಕರಣಿಕರಿಗೆ ಮಾಹಿತಿ ನೀಡಿದ್ದರೂ ಗ್ರಾಮಕರಣಿಕರು ಈ ಕುರಿತಾಗಿ ಯಾವುದೇ ಮುನ್ನೆಚ್ಚರಿಕೆ ವಹಿಸಿಲ್ಲ.

ಕಾರ್ಮಿಕರು ವಾಸ್ತವ್ಯವಿದ್ದ ಗುಡ್ಡ ಕುಸಿಯುವ ಯಾವ ಪರಿಕಲ್ಪನೆಯೂ ಇರಲಿಲ್ಲ. ದುರ್ಘಟನೆ ನಡೆಯುವವರೆಗೂ ಯಾರೊಬ್ಬರೂ ಮನೆ ಖಾಲಿ ಮಾಡುವಂತೆ ಹೇಳಿಲ್ಲ. ವಿವಿ ಸುಳ್ಳು ಹೇಳುತ್ತಿದ್ದು ನನ್ನ ವಿರುದ್ಧವೇ ಸುಳ್ಳುದೂರು ನೀಡಿದ್ದಾರೆ ಎಂದು ಬೆನೆಡಿಕ್ಟ್ ಕಾರ್ಲೋ ಹೇಳಿಕೊಂಡಿದ್ದಾರೆ.

ಇನ್ನು ಈ ಘಟನೆಯಲ್ಲಿ ಕೇರಳ ಮೂಲದ ನಾಲ್ವರು ಕಾರ್ಮಿಕರ ಪೈಕಿ ಮೂವರು ಕಾರ್ಮಿಕರಾದ 45 ವರ್ಷದ ಬಿಜು ಪಾಲಕ್ಕಾಡ್, 46 ವರ್ಷದ ಸಂತೋಷ್ ಆಲಕ್ಕುಯ್ಯ,46 ವರ್ಷದ ಬಾಬು ಕೊಟ್ಟಾಯಂ ಮೃತ ಪಟ್ಟ ಕಾರ್ಮಿಕರಾಗಿದ್ದು, ಅವರಲ್ಲಿ ಸದ್ಯ ಜಾನಿ ಕಣ್ಣೂರು ಎಂಬಾತ ಚಿಕಿತ್ಸೆ ಪಡೆಯುತ್ತಿದ್ದಾನೆ.

 

BANTWAL

ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು

Published

on

ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಲೋಕೇಶ್ ಅವರು  ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.

ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್

ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್‌ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BANTWAL

ಗಂಡ ಹೆಂಡತಿಗೆ ನಾಲ್ವರಿಂದ ಹಲ್ಲೆ..!!

Published

on

ಬಂಟ್ವಾಳ; ಅಪಘಾತದ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ಮಾಡಿರುವ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಎ.15ರಂದು ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಹಲ್ಲೆಗೊಳಗಾದವರು. ಹಲ್ಲೆಗೊಳಗಾದವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಮಂಜುನಾಥ್ ಅವರು ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ಪ್ರಶ್ನಿಸಿದಕ್ಕೆ ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕರಿಂಗಾಣ ಕ್ರಾಸ್ ಎಂಬಲ್ಲಿ ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿಗೆ ಏಟಾಗಿದ್ದು, ಅವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಘಟನೆ ನಡೆದ ಕೂಡಲೇ ಸಂಚಾರ ಪೊಲೀಸರು ಭೇಟಿ ನೀಡಿ ವಾಹನವನ್ನು ಹಾಗೂ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಪೊಲೀಸ್‌ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಭಜರಂಗದಳ, ವಿಶ್ವಹಿಂದೂಪರಿಷತ್ ಕಲ್ಲಡ್ಕ ಪ್ರಖಂಡ ಖಂಡನೆ ವ್ಯಕ್ತಪಡಿಸಿದ್ದಾರೆ.

Continue Reading

BANTWAL

ಹಿಂದೂ ಸಂಘಟನೆಯ ಮುಖಂಡನಿಗೆ ಸ್ನೇಹಿತನಿಂದಲೆ ಚೂ*ರಿ ಇರಿತ

Published

on

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂ*ರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ(ಎ.14) ರಾತ್ರಿ ನಡೆದಿದೆ.

ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂ*ರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂ*ರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆರೋಪಿ ರವಿ ಚೂ*ರಿ ಇರಿದು ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ‌ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

LATEST NEWS

Trending