BANTWAL
Bantwala: ಕಲ್ಲಡ್ಕ ಪ್ರಭಾಕರ್ ಭಟ್ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿ-ದೂರು ದಾಖಲು..!
Published
1 year agoon
By
Adminಆರ್ ಎಸ್.ಎಸ್.ಪ್ರಮುಖ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಆಕ್ಷೇಪ ಅರ್ಹ ಬರಹಗಳನ್ನು ಬರೆದು ಸಮಾಜದಲ್ಲಿ ಅಶಾಂತಿ ಹಬ್ಬಲು ಕೆಲವು ಕಿಡಿಗೇಡಿಗಳು ಪ್ರಯತ್ನಿಸುತ್ತಿದ್ದು, ಇವರ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಮಂಗಳೂರು ಸೈಬರ್ ಕ್ರೈಮ್ ಪೋಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ಬಂಟ್ವಾಳ: ಆರ್ ಎಸ್.ಎಸ್.ಪ್ರಮುಖ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಆಕ್ಷೇಪ ಅರ್ಹ ಬರಹಗಳನ್ನು ಬರೆದು ಸಮಾಜದಲ್ಲಿ ಅಶಾಂತಿ ಹಬ್ಬಲು ಕೆಲವು ಕಿಡಿಗೇಡಿಗಳು ಪ್ರಯತ್ನಿಸುತ್ತಿದ್ದು, ಇವರ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಮಂಗಳೂರು ಸೈಬರ್ ಕ್ರೈಮ್
ಆರ್.ಎಸ್.ಎಸ್.ಪ್ರಮುಖರಾಗಿರುವ ಕಲ್ಲಡ್ಕ ಶ್ರೀರಾಮವಿದ್ಯಾಕೇಂದ್ರದ ಸಂಸ್ಥಾಪಕ, ಪುತ್ತೂರು ವಿವೇಕಾನಂದ ವಿದ್ಯಾ ವರ್ದಕ ಸಂಘದ ಅಧ್ಯಕ್ಷರಾಗಿರುವ ಹಿಂದೂ ಸಾಮ್ರಾಟ್ ಎಂದೇ ಕರೆಯಲ್ಪಡುವ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಅವರ ಹೆಸರಿನಲ್ಲಿ ನಕಲಿ ಪೇಸ್ ಬುಕ್ ಖಾತೆಯನ್ನು ತೆರದು ಆಕ್ಷೇಪ ಆರ್ಹ ಸುದ್ದಿಗಳನ್ನು ಬಿತ್ತರಿಸುತ್ತಿರುವ ಬಗ್ಗೆ ದೂರು ದಾಖಲಾಗಿದೆ.
ಕಲ್ಲಡ್ಕ ಡಾ ಭಟ್ ಅವರ ಪೇಸ್ ಬುಕ್ ಖಾತೆಯಾಗಲಿ, ಅಥವ ಇನ್ನಿತರ ಯಾವುದೇ ಸಾಮಾಜಿಕ ಜಾಲತಾಣದಲ್ಲಿ ಖಾತೆಯನ್ನು ಹೊಂದಿರುವುದಿಲ್ಲ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಅಲ್ಲದೆ ಈ ಖಾತೆಯ ಮೂಲಕ ಸಮಾಜದಲ್ಲಿ ಅಶಾಂತಿ ಹಬ್ಬಿಸುವ ಪ್ರಯತ್ನ ಮತ್ತು ಹೆಸರನ್ನು ಕೆಡಿಸುವ ಕೆಲಸ ಮಾಡಲಾಗುತ್ತಿದ್ದು, ಈ ಬಗ್ಗೆ ಪೋಲೀಸರು ಸೂಕ್ತವಾದ ತನಿಖೆ ನಡೆಸುವಂತೆ ಮತ್ತು ಅವರ ಮೇಲೆ ಕಾನೂನು ಕ್ರಮವನ್ನು ಕೈಗೊಂಡು ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಪುನರಾವರ್ತನೆ ಕಂಡುಬರದಂತೆ ಪೋಲೀಸರು ನಿಗಾವಹಿಸುವಂತೆಯೂ ಅವರು ತಿಳಿಸಿದ್ದಾರೆ.
ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.
ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್ ಸಪ್ವಾನ್( 25), ಮಹಮ್ಮದ್ ರಿಜ್ವಾನ್ (25), ಇರ್ಪಾನ್(27), ಅನೀಸ್ ಅಹಮ್ಮದ್ (19), ನಾಸೀರ್ (27), ಇಬ್ರಾಹಿಂ, ಶಾಕೀರ್ (18)ನನ್ನು ಬಂಧಿಸಲಾಗಿದೆ.
ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್ ಮುಸ್ತಾಫ್ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.
ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ
ಮಹಮ್ಮದ್ ಮುಸ್ತಾಫ್ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್ ಮುಸ್ತಾಫ್ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.
ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.
ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
LATEST NEWS
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
ಶೀಘ್ರದಲ್ಲೇ ಉಬರ್ನಿಂದ ಶಟಲ್ ಬಸ್ ಸೇವೆ; ಯಾವಾಗ ಪ್ರಾರಂಭ?
ಉತ್ತರ ಕನ್ನಡದಲ್ಲಿ ಮಂಗನಬಾವು ಸೋಂಕು 125 ಕ್ಕೆ ಏರಿಕೆ
ಸದ್ದಿಲ್ಲದೇ ನಡೆಯಿತು ನಟಿ ರಕ್ಷಿತಾ ಸಹೋದರ ರಾಣಾ ಎಂಗೇಜ್ಮೆಂಟ್; ಪ್ರೇಮ್ ಇರಲಿಲ್ಲ ಯಾಕೆ?
ಧರ್ಮಸ್ಥಳದಲ್ಲಿ ಪೊಣ್ಣಂ ಪ್ರಭಾಕರ್ ವಿಶೇಷ ಪೂಜೆ
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS5 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LATEST NEWS2 days ago
ಡೇಟಿಂಗ್ಗೆ 11,650 ರೂ. , ಫೋಟೋಗೆ 760 ರೂ. ಕ್ಯಾಶ್ ರಿವಾರ್ಡ್: ಟೆಕ್ ಕಂಪನಿ