BANTWAL
Bantwala : ಅಮ್ಟಾಡಿಯಲ್ಲಿ ಗುಡ್ಡ ಬಿರುಕು-ಸಂಪರ್ಕ ಕಡಿತದ ಆತಂಕದಲ್ಲಿ ಗ್ರಾಮಸ್ಥರು..!
ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಜಗದಂಬಿಕಾ ಭಜನಾ ಮಂದಿರದ ಸಮೀಪದ ಗುಡ್ಡ ಬಿರುಕು ಕಂಡು ಬಂದಿದ್ದು, ಈ ಭಾಗದಲ್ಲಿ ಸಂಚರಿಸುವ ಗ್ರಾಮಸ್ಥರು ಆತಂಕಕ್ಕೊಳಪಟ್ಟಿದ್ದಾರೆ.
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪ್ರದೇಶದಲ್ಲಿ ಕಳೆದ ವಾರ ಸುರಿದ ಭಾರೀ ಮಳೆಗೆ ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ರಸ್ತೆಗೆ ಗುಡ್ಡ ಜರಿದು ಭಾರಿ ಹಾನಿಯಾಗುವ ಸಂಭವವಿದೆ.
ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಜಗದಂಬಿಕಾ ಭಜನಾ ಮಂದಿರದ ಸಮೀಪದ ಗುಡ್ಡ ಬಿರುಕು ಕಂಡು ಬಂದಿದ್ದು, ಈ ಭಾಗದಲ್ಲಿ ಸಂಚರಿಸುವ ಗ್ರಾಮಸ್ಥರು ಆತಂಕಕ್ಕೊಳಪಟ್ಟಿದ್ದಾರೆ.
ರಸ್ತೆಯ ಬದಿಯಲ್ಲೇ ಇರುವ ಕೆಂಪುಗುಡ್ಡೆಯ ಗುಡ್ಡಪ್ರದೇಶ ಬಿರುಕು ಬಿಟ್ಟಿದ್ದು, ರಸ್ತೆಯಿಂದ ಕೆಳಗೆ ಇಳಿಜಾರು ಪ್ರದೇಶದಲ್ಲಿ ವಾಸ್ತವ್ಯ ಇರುವ ಮನೆಗಳು, ಕೃಷಿಭೂಮಿ ಅಪಾಯದಲ್ಲಿದೆ.
ರಸ್ತೆ ಬದಿಯಲ್ಲಿ ಉದ್ದಕ್ಕೆ ಸುಮಾರು 500 ಮೀಟರ್ ಉದ್ದದಲ್ಲಿ ಗುಡ್ಡ ಬಿರುಕು ಬಿಟ್ಟಿದೆ. ಅಷ್ಟು ಮಾತ್ರವಲ್ಲೇ ಗುಡ್ಡದ ನೇರ ಭಾಗದಲ್ಲೂ ಗುಡ್ಡ ಇಬ್ಬಾಗವಾಗಿರುವುದು ಕಾಣಿಸಿದೆ.
ಕೆಲವು ವರ್ಷಗಳ ಹಿಂದೆ ಗುಡ್ಡವನ್ನು ಸಮತಟ್ಟು ಮಾಡಿದ ಪರಿಣಾಮ ಗುಡ್ಡದ ಮತ್ತೊಂದು ಬದಿಯಲ್ಲಿ ಗುಡ್ಡ ಬಿರುಕು ಬಿಟ್ಟಿದೆ.
ಗುಡ್ಡೆ ಬಿರುಕು ಕಂಡು ಬಂದಂತೆ ಅಮ್ಟಾಡಿ ಪಂಚಾಯತ್‌ನಿಂದ ಸಾರ್ವಜನಿಕರಿಗೆ ತಿಳಿಯಪಡಿಸಲು ರಸ್ತೆ ಇರುವ ಎರಡು ಬದಿಯಲ್ಲೂ ಸೂಚನಾ ಫಲಕವನ್ನೂ ಹಾಕಿದ್ದಾರೆ.
ಅಜೆಕಲ-ಕೆಂಪುಗುಡ್ಡೆ-ಕಲ್ಪನೆ ರಸ್ತೆ ಕಾಮಗಾರಿಗೆ ಕೇಂದ್ರೀಯ ರಸ್ತೆ ನಿಧಿ ಯೋಜನೆಯಡಿ 2013ರಲ್ಲಿ ಸುಮಾರು 4 ಕೋಟಿ ಅನುದಾನದ ಮೂಲಕ ಅಭಿವೃದ್ಧಿ ಮಾಡಲಾಗಿತ್ತು.
ಬಂಟ್ವಾಳ ಉಪವಿಭಾಗದ ಲೋಕೋಪಯೋಗಿ ಇಲಾಖೆಗೆ ಸೇರಿದ ಸುಸಜ್ಜಿತ ರಸ್ತೆಗೆ ಗುಡ್ಡದಿಂದ ನೀರು ನಿರಂತರವಾಗಿ ಇಳಿದು ಬರುವುದರಿಂದ ರಸ್ತೆಯೂ ಹಾಳಾಗಿರುತ್ತದೆ.
ಅತ್ಯಂತ ಉಪಯೋವಾಗುವ ರಸ್ತೆ ಇದಾಗಿದ್ದು ಸಂಪರ್ಕದ ಕೊಂಡಿಯಾಗಿದೆ. ಈ ಭಾಗದಿಂದ ಕಲ್ಪನೆಗೆ ಕೇವಲ 8 ಕಿ.ಮೀ. ದೂರ ಇರುವುದು.
ಇಲ್ಲಿಂದ ಬೆಂಜನಪದವು ಮಾರ್ಗವಾಗಿ ನೀರುಮಾರ್ಗ-ಮಂಗಳೂರು, ಫರಂಗಿಪೇಟೆ-ಮಂಗಳೂರು ತಲುಪಬಹುದು. ಅದೇ ರೀತಿ ಪುಣ್ಯ ಕ್ಷೇತ್ರಗಳಾದ ಕಲ್ಪನೆ-ಪೊಳಲಿ, ಕಟೀಲು ಹಾಗೂ ಬಜಪೆ ವಿಮಾನ ನಿಲ್ದಾಣವನ್ನೂ ತಲುಪಬಹುದು.
ಬಂಟ್ವಾಳ ಹಾಗೂ ಸುತ್ತಲಿನ ಗ್ರಾಮೀಣ ಪ್ರದೇಶದ ಜನರಿಗೆ ಬಿ.ಸಿ.ರೋಡು ಹೋಗುವ ಬದಲು ಈ ಮಾರ್ಗವಾಗಿ ಮೇಲಿನ ಸ್ಥಳಗಳನ್ನು ತಲುಪುವುದು ಸುಲಭ ಸಾಧ್ಯವಾಗಿದೆ.
ಅಮ್ಟಾಡಿ ಗ್ರಾಮದ ಈ ರಸ್ತೆ ಗ್ರಾಮೀಣ ಭಾಗದಲ್ಲಿ ಮುಖ್ಯ ರಸ್ತೆಯಾಗಿರುತ್ತದೆ.
ಈ ರಸ್ತೆಯಲ್ಲಿ ಯಾವುದೇ ಬಸ್ಸಿನ ವ್ಯವಸ್ಥೆ ಇಲ್ಲದಿದ್ದರೂ ಅಟೋ ರಿಕ್ಷಾದ ಮೂಲಕ ಪ್ರಯಾಣ ಮಾಡುತ್ತಾರೆ.
ಖಾಸಗಿ ಸ್ಥಳವಾದರೂ ಹಚ್ಚ ಹಸುರಾಗಿರುವ ಕೆಂಪುಗುಡ್ಡ ಪ್ರದೇಶವನ್ನು ಉಳಿಸಿಕೊಳ್ಳುವುದು ಜನರ ಕರ್ತವ್ಯ.
ಗುಡ್ಡದ ಮೇಲೆ ಮಣ್ಣು ಅಗೆತ, ಗುಡ್ಡ ಒಂದು ಬದಿಯಿಂದ ಕುಸಿಯಲು ಪ್ರಾರಂಭವಾದರೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ.
ಮಳೆ ಕೇವಲ ನಾಲ್ಕು ದಿನ ಬಂದಿರುವುದು. ಜೋರು ಮಳೆ ಇನ್ನು ಬರಬೇಕಷ್ಟೆ. ಮಳೆಯು ಎಡೆಬಿಡದೆ ಸುರಿಯಲು ಆರಂಭವಾದರೆ ಮಾತ್ರ ಅಪಾಯ ಕಟ್ಟಿಟ್ಟ ಬುತ್ತಿ.
ಕೆಂಪುಗುಡ್ಡೆಯಲ್ಲಿ ಬಿರುಕು ಕಂಡು ಬಂದಿರುವುದರಿಂದ ಅಮ್ಟಾಡಿ ಪಂಚಾಯತ್‌ನಿಂದ ರಸ್ತೆಯ ಎರಡೂ ಬದಿಗಳಲ್ಲಿ ಸಾರ್ವಜನಿಕರಿಗೆ ಗೊತ್ತಾಗುವಂತೆ ಬ್ಯಾನರ್ ಅಳವಡಿಸಲಾಗಿದೆ.
ಲೋಕೋಪಯೋಗಿ ಇಲಾಖೆಗೆ ಗಮನ ತಂದಿದ್ದು, ಇಂಜಿನಿಯರ್ ಸ್ಥಳಕ್ಕೆ ಆಗಮಿಸಿ ಬಿರುಕು ಪರಿಶೀಲನೆ ಮಾಡಿದ್ದಾರೆ. ಮಳೆ ಕಡಿಮೆಯಾದ ನಂತರ ರಸ್ತೆ ಹಾಳಾಗದಂತೆ ಸೂಕ್ತ ಕ್ರಮ ಜರಗಿಸುವುದೆಂದು ಅಮ್ಟಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುನೀಲ್ ಬಿ ತಿಳಿಸಿದ್ದಾರೆ.
ಕಳೆದ ವರ್ಷವೇ ಈ ಸ್ಥಳದಲ್ಲಿ ರಸ್ತೆಯ ಬದಿಯಲ್ಲಿ ಬಿರುಕು ಬಿಟ್ಟಿರುತ್ತದೆ. ಗುಡ್ಡದಿಂದ ನಿರಂತರವಾಗಿ ರಸ್ತೆಯಲ್ಲೇ ನೀರು ಸಂಚರಿಸುತ್ತಿದೆ. ದಿನಂಪ್ರತಿ ಇದೇ ರಸ್ತೆಯಲ್ಲಿ ನಾವು ದ್ವಿಚಕ್ರ ವಾಹನದ ಮುಖಾಂತರ ಸಂಚರಿಸುತ್ತಾ ಇದ್ದೇವೆ.
ಯಾವುದೇ ಗಂಡಾಂತರ ಬಾರದಂತೆ ಈ ಮಳೆಗಾಲ ಕಳೆಯಲಿ ಎಂಬುದೇ ನಮ್ಮ ಆಶಯವಾಗಿದೆ ಎಂದು ಸ್ಥಳೀಯರಾದ ಉಮೇಶ್ ಕಲ್ಪನೆ ಹೇಳಿದ್ದಾರೆ.
ಪ್ರಸ್ತುತ ಗುಡ್ಡೆ ಬಿರುಕು ಕಂಡು ಬಂದಂತೆ ಅಮ್ಟಾಡಿ ಪಂಚಾಯತ್‌ನಿಂದ ಸಾರ್ವಜನಿಕರಿಗೆ ತಿಳಿಯಪಡಿಸಲು ರಸ್ತೆ ಇರುವ ಎರಡು ಬದಿಯಲ್ಲೂ ಸೂಚನಾ ಫಲಕವನ್ನೂ ಹಾಕಿದ್ದಾರೆ. ಆದ್ರೆ ಸವಾರರು ಮತ್ತು ಸಾರ್ವಜನಿಕರು ಈ ಭಾಗದಲ್ಲಿ ಸಂಚರಿಸುವಾಗ ಮುಂಜಾಗೃತೆ ಅತೀ ಅಗತ್ಯವಾಗಿದೆ.
BANTWAL
ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ-ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ.
ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸುವ ಕಾರ್ಯ ಮಾಡಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ನೀಡಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
BANTWAL
Bantwala: ಹೃದಯ ಸಂಬಂಧಿ ಖಾಯಿಲೆಯಿಂದ 4 ವರ್ಷದ ಬಾಲಕಿ ನಿಧನ..!
ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ಬಂಟ್ವಾಳದ ಮಿತ್ತೂರಿನಲ್ಲಿ ನಡೆದಿದೆ.
ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ನಡೆದಿದೆ.
ಮೃತ ಬಾಲಕಿಯನ್ನು ಬಂಟ್ವಾಳ ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ತಿಳಿದು ಬಂದಿದೆ.
ಜಮೀಲಾ ಬಾಲಕಿ ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿದ್ದಳು.
ಈಕೆ ಅನಾರೋಗ್ಯದಿಂದ ಇದ್ದು, ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
BANTWAL
Bantwala: ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾ – ಕರೆಂಟ್ ಕಂಬಕ್ಕೆ ಗುದ್ದಿದ ಬಸ್..!
ಬಂಟ್ವಾಳ: ಸರಕಾರಿ ಬಸ್ ಒಂದು ಓವರ್ ಟೇಕ್ ಮಾಡುತ್ತಿದ್ದ ಟೆಂಪೋ ರಿಕ್ಷಾವನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಗುದ್ದಿದ ಘಟನೆ ಬಂಟ್ವಾಳದ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ.
ಮೆಲ್ಕಾರಿನಿಂದ ಬರುತ್ತಿದ್ದ ಇಲ್ಯಾಸ್ ಟೆಂಪೋ ರಿಕ್ಷಾ ಚಾಲಕನು ಕಂದೂರಿನ ಬಜಾರ್ ಅಡಿಟೋರಿಯಮ್ ಬಳಿ ಬರುತ್ತಿದ್ದ ಆಕ್ಟಿವಾ ಗಾಡಿಯೊಂದನ್ನು ಓವರ್ ಟೇಕ್ ಮಾಡುತ್ತಿದ್ದ.
ಈ ವೇಳೆ ಮುಡಿಪು ಮಾರ್ಗವಾಗಿ ಬರುತ್ತಿದ್ದ ಕಾಸರಗೋಡು ಬಿ.ಸಿ.ರೋಡ್ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಬಸ್ ಗುದ್ದಿದ್ದ ರಭಸಕ್ಕೆ ಕರೆಂಟ್ ಕಂಬ ತುಂಡಾಗಿದೆ.
ಬಸ್ಸಿನಲ್ಲಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೋಲಿಸರು ಆಗಮಿಸಿ, ಪರಿಶೀಲನೆ ನಡೆಸಿದರು.
- FILM7 days ago
Film: ಹಂದಿ ಮಾಂಸ ಸೇವಿಸಿದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು ಶಿಕ್ಷೆ..!
- bangalore6 days ago
ಹುಡುಗಿ ಚೇಂಜ್ ಆದ್ರೂ ಡ್ರೆಸ್ ಚೇಂಜ್ ಆಗಿಲ್ಲ ಅಲ್ವಾ ಶೆಟ್ರೇ?
- bengaluru5 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA5 days ago
ಮುಂದಿನ ವರ್ಷದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್- ಮಧು ಬಂಗಾರಪ್ಪ