Wednesday, October 5, 2022

ಬಂಟ್ವಾಳದಲ್ಲಿ ಭೂಕುಸಿತ ಘಟನೆ: ಸ್ಥಳಕ್ಕೆ ಮಾಜಿ ಸಚಿವ ರೈ ಭೇಟಿ

ಬಂಟ್ವಾಳ: ಬಂಟ್ವಾಳದ ಪಂಜಿಕಲ್ಲು ಗ್ರಾಮದ ಮುಕ್ಕುಡದಲ್ಲಿ ಭಾರೀ ಮಳೆಯ ಪರಿಣಾಮ ನಡೆದ ಭೂಕುಸಿತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟ ಪ್ರದೇಶಕ್ಕೆ ಮಾಜಿ ಸಚಿವ ಬಿ. ರಮಾನಾಥ ರೈ ಭೇಟಿ ನೀಡಿ ಸೂಕ್ತ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಕರೆಯ ಮೂಲಕ ಸೂಚಿಸಿದರು.


ಈ ಸಂದರ್ಭದಲ್ಲಿ ಪಿಯೂಸ್ ಎಲ್ ರೊಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಬೇಬಿ ಕುಂದರ್, ಸುದರ್ಶನ್ ಜೈನ್, ಸುರೇಶ್ ಜೋರ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


ಭಾರೀ ಮಳೆಯಿಂದ ಬುಧವಾರ ಸಂಜೆ ಹೆನ್ರಿ ಕಾರ್ಲೊ ಅವರ ಮನೆಯ ಬಳಿಯ ಭೂಕುಸಿತ ದಿಂದ ಶೆಡ್ ನಲ್ಲಿ ಉಳಿದುಕೊಂಡು ರಬ್ಬರ್ ತೋಟಗಳಲ್ಲಿ ಕೆಲಸ ಮಾಡುತ್ತಿದ್ದ ಐವರ ಪೈಕಿ ನಾಲ್ವರು ಗುಡ್ಡ ಜರಿದು ಶೆಡ್ ನೊಳಗೆ ಸಿಲುಕಿಕೊಂಡಿದ್ದು ಅದರಲ್ಲಿ ಮೂವರು ಮೃತಪಟ್ಟಿದ್ದರು.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...

ಮಹಾನವಮಿ ಸಂಭ್ರಮ: ಕಟೀಲು ಕ್ಷೇತ್ರದಲ್ಲಿ ಮಹಾ ರಂಗ ಪೂಜೆ

ಮಂಗಳೂರು: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಹಾನವಮಿ ಪ್ರಯುಕ್ತ ಮಹಾ ರಂಗ ಪೂಜೆ ನಡೆಯಿತು. ಆರು ನೂರಕ್ಕೂ ಹೆಚ್ಚು ವಿಶಿಷ್ಟ ಆರತಿಗಳಿಂದ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆದ ಮಹಾಪೂಜೆಯನ್ನು...

‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ.ಸಂಜೆ 4 ಗಂಟೆಗೆ ಶಾರದಾ...