Connect with us

    BANTWAL

    ಬಂಟ್ವಾಳ : ಸೌಜನ್ಯ ಪ್ರಕರಣದಲ್ಲಿ ನೈಜ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗುವಂತೆ ಕಾರಿಂಜೇಶ್ವರ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ.!

    Published

    on

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನೈಜ ಆರೋಪಿಗಳಿಗೆ  ತಕ್ಕ ಶಿಕ್ಷೆಯಾಗಲಿ ಎಂದು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾರಣಿಕದ ಕ್ಷೇತ್ರ ಕಾರಿಂಜದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. 

    ಬಂಟ್ವಾಳ : ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನೈಜ ಆರೋಪಿಗಳಿಗೆ  ತಕ್ಕ ಶಿಕ್ಷೆಯಾಗಲಿ ಎಂದು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾರಣಿಕದ ಕ್ಷೇತ್ರ ಕಾರಿಂಜದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

    ವಿಶ್ವಹಿಂದೂಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಕಾರಣಿಕ ಕ್ಷೇತ್ರ ಕಾರಿಂಜೇಶ್ವರ ಸನ್ನಿದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.

    ವಿಶ್ವ ಹಿಂದೂ ಪರಿಷದ್ ಭಜರಂಗದಳದ ಜಿಲ್ಲಾ ಪ್ರಮುಖರು ಹಾಗೂ ಬಂಟ್ವಾಳ ಪ್ರಖಂಡದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

    ನೈಜ ಆರೋಪಿಗಳಿಗೆ ಕಾನೂನು ಶಿಕ್ಷೆ ಆಗಲಿ ಆದರೂ ದೈವ ದೇವರ ಮೇಲೆ ನಂಬಿಕೆ ಇರಿಸಿದವರು ನಾವು ತಪ್ಪು ಮಾಡಿದವರಿಗೆ ಕಾನೂನಿನಲ್ಲಿ ತಪ್ಪಿಸಿಕೊಂಡರೂ ಕಾರ್ಣಿಕ ಕ್ಷೇತ್ರವಾದ ಕಾರಿಂಜೇಶ್ವರ ದೇವರ ಅನುಗ್ರಹದಿಂದ ನಿಜವಾದ ಆರೋಪಿಗಳು ಯಾರೇ ಆಗಿರಲಿ ಅವರಿಗೆ ಹುಚ್ಚು ಹಿಡಿದು ಅವರೇ ಆರೋಪಿಗಳೆಂದು ಸಮಾಜಕ್ಕೆ ಆದಷ್ಟು ಬೇಗ ತಿಳಿದು ಬರಬೇಕು ಎಂದು ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.

    Click to comment

    Leave a Reply

    Your email address will not be published. Required fields are marked *

    BANTWAL

    ಬಂಟ್ವಾಳ: ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಮೃ*ತ್ಯು

    Published

    on

    ಬಂಟ್ವಾಳ: ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ವೋರ್ವರು ಮೃ*ತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ.

    ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್ (35) ಮೃ*ತಪಟ್ಟ ದುರ್ದೈವಿ.

    ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿರುವ ದೇವದಾಸ್ ಗುರುವಾರ ಸಂಜೆ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ಮನೆಯೊಂದರ ವಯರಿಂಗ್ ಕೆಲಸ ಮಾಡಿ, ಮನೆಯ ಹೊರಗಡೆಯಲ್ಲಿದ್ದ ಮೈನ್ ಸ್ವಿಚ್ ಬಳಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿದೆ. ಪರಿಣಾಮ ಕೆಳಗೆ ಬಿದ್ದು ಗಾಯಗೊಂಡಿದ್ದರು ಎನ್ನಲಾಗಿದೆ. ತಕ್ಷಣ ಸ್ಥಳದಲ್ಲಿದ್ದವರು ಗಾಯಾಳುವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿನ ವೈದ್ಯರು ಪರೀಕ್ಷಿಸಿದಾಗ ದೇವದಾಸ್ ರವರು ಮೃ*ತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ.

    ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

    Continue Reading

    BANTWAL

    ಬಂಟ್ವಾಳ | ಗಣೇಶೋತ್ಸವ ಶೋಭಾಯಾತ್ರೆ ವೇಳೆ ಪಾನೀಯ, ಸಿಹಿತಿಂಡಿ ನೀಡಬೇಡಿ: ಮಸೀದಿಗೆ ಭಜನಾ ಮಂದಿರದಿಂದ ಪತ್ರ

    Published

    on

    ಕೋಮು ಸೂಕ್ಷ್ಮ ಪ್ರದೇಶವಾಗಿ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬೋಳಂತೂರಿನಲ್ಲಿ ಈ ಹಿಂದೆ ಗಣೇಶೋತ್ಸವ ಮೆರವಣಿಗೆ ವೇಳೆ ಮುಸ್ಲಿಮರು ಸಿಹಿ ತಿಂಡಿ, ಪಾನೀಯ ಹಂಚಿ ಸೌಹಾರ್ದತೆಯನ್ನು ಮೆರೆದಿದ್ದರು. ಅದು ಭಾರೀ ಸುದ್ದಿಯಾಗಿತ್ತು. ಆದರೆ, ಈ ಬಾರಿ ಕಳೆದ ವರ್ಷದಂತೆ ಸಿಹಿ ತಿಂಡಿ, ಪಾನೀಯ ಹಂಚಬಾರದು ಎಂದು ಗಣೇಶೋತ್ಸವ ಆಯೋಜಿಸುವ ಸಮಿತಿಯವರೇ ಮುಸ್ಲಿಂ ಸಮುದಾಯದವರಿಗೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಹಿಂದೂ – ಮುಸ್ಲಿಂ ಸೌಹಾರ್ದತೆಗೆ ಬ್ರೇಕ್‌ ಬಿದ್ದಿದೆ. ಮಸೀದಿಯೊಂದಕ್ಕೆ ಗಣೇಶೋತ್ಸವ ಆಯೋಜಕರು ಬರೆದ ಪತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

    ಕಳೆದ ವರ್ಷ ಗಣೇಶೋತ್ಸವದ ವೇಳೆ ಇಲ್ಲಿನ ಮುಸಲ್ಮಾನ ಸಮಾಜ ಬಾಂಧವರು ಹಂಚಿದ ಸಿಹಿ ತಿಂಡಿ ತಿಂದು ನಮ್ಮ ಕೆಲವು ಮಕ್ಕಳು ಅಸ್ವಸ್ಥರಾಗಿದ್ದಾರೆ. ಹೀಗಾಗಿ ಈ ಬಾರಿ ಗಣೇಶೋತ್ಸವ ಮೆರವಣಿಗೆಯಲ್ಲಿ ಸಿಹಿ ತಿಂಡಿ, ತಂಪು ಪಾನೀಯ ಹಂಚಬೇಡಿ ಎಂದು ಶ್ರೀ ಸಿದ್ಧಿವಿನಾಯಕ ವಿಶ್ವಸ್ಥ ಮಂಡಳಿಯಿಂದ ಬೋಳಂತೂರು ಮಸೀದಿಗೆ ಪತ್ರ ಬರೆದು ಮನವಿ ಮಾಡಲಾಗಿದೆ. ಕಳೆದ ವರ್ಷ ಮಾತ್ರವಲ್ಲದೆ, ಕಳೆದ ಕೆಲವು ವರ್ಷಗಳಿಂದ ಗಣೇಶೋತ್ಸವ ಮೆರವಣಿಗೆ ವೇಳೆ ಮುಸ್ಲಿಂ ಸಮಾಜದವರು ಸಿಹಿ ತಿಂಡಿ ಹಂಚುತ್ತಿರುವುದು ನಡೆದುಕೊಂಡು ಬಂದಿತ್ತು.

    ಆದರೆ, ಕಳೆದ ವರ್ಷ ತಂಪು ಪಾನೀಯ, ಸಿಹಿ ತಿಂಡಿ ಸೇವಿಸಿದ ಹಿಂದೂ ಮಕ್ಕಳು ಅಸ್ವಸ್ಥರಾದ ಆರೋಪದಲ್ಲಿ ಈ ಬಾರಿ ಅದಕ್ಕೆ ಅವಕಾಶ ನಿರಾಕರಿಸಲಾಗಿದೆ. ಇದರಿಂದಾಗಿ ಎರಡು ಸಮುದಾಯಗಳ ನಡುವಣ ಸಾಮರಸ್ಯ ಕೆಡುವ ಆತಂಕವೂ ಎದುರಾಗಿದೆ. ಸಿದ್ಧಿವಿನಾಯಕ ವಿಶ್ವಸ್ಥ ಮಂಡಳಿಯು ಮಸೀದಿಗೆ ಬರೆದಿರುವ ಪತ್ರದ ಬಗ್ಗೆ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆಯಾಗುತ್ತಿದೆ. ಕಳೆದ ವರ್ಷದ ಸಾರ್ವಜನಿಕ ಗಣೇಶೋತ್ಸವದ ಮೆರವಣಿಗೆ ಸಂದರ್ಭದಲ್ಲಿ ಪಾನೀಯ ಮತ್ತು ಸಿಹಿತಿಂಡಿ ವಿತರಣೆಯನ್ನು ತಮ್ಮ ಸಮಾಜ ಬಾಂಧವರು ನೀಡಿರುತ್ತಾರೆ.

    ಅದನ್ನು ಸ್ವೀಕರಿಸಿದ ನಮ್ಮ ಕೆಲವು ಮಕ್ಕಳು ಅಸ್ವಸ್ಥರಾಗಿರುತ್ತಾರೆ. ಇದರಿಂದ ನಮ್ಮ ಸಾಮರಸ್ಯ ಕೆಡುತ್ತದೆ. ಇದರ ಮುಂಜಾಗ್ರತೆಗಾಗಿ ತಮ್ಮಲ್ಲಿ ಮನವಿ ಮಡುವುದೇನೆಂದರೆ, ಇನ್ನು ಮುಂದಕ್ಕೆ ಶೋಭಾಯಾತ್ರೆಯಲ್ಲಿ ತಮ್ಮ ಸಮಾಜ ಬಾಂಧವರು ಯಾವುದೇ ಪಾನೀಯ ಹಾಗೂ ತಿಂಡಿ ತಿನಿಸುಗಳನ್ನು ನೀಡಬಾರದಾಗಿ ಈ ಮೂಲಕ ವಿನಂತಿಸುತ್ತೇವೆ. ಆದ್ದರಿಂದ ನಮ್ಮ ಶೋಭಾಯಾತ್ರೆಗೆ ನಿಮ್ಮ ಎಲ್ಲಾ ಸಮಾಜ ಬಾಂಧವರು ಸಹಕರಿಸುವಂತೆ ನಿಮ್ಮಲ್ಲಿ ಈ ಮೂಲಕ ಮನವಿ ಮಾಡುತ್ತೇವೆ’’ ಎಂದು ಸಿದ್ಧಿವಿನಾಯಕ ವಿಶ್ವಸ್ಥ ಮಂಡಳಿ ಬರೆದಿದ್ದು ಎನ್ನಲಾದ ವೈರಲ್ ಆಗಿರುವ ಪತ್ರದಲ್ಲಿ ಉಲ್ಲೇಖವಾಗಿದೆ.

    Continue Reading

    BANTWAL

    ಕಾರು-ಲಾರಿ ಮುಖಾಮುಖಿ ಡಿಕ್ಕಿ; ಕಾರಿನಲ್ಲಿದ್ದ ವ್ಯಕ್ತಿ ಗಂಭೀ*ರ

    Published

    on

    ಬಂಟ್ವಾಳ: ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪದ ಮಾರ್ನಬೈಲು ಎಂಬಲ್ಲಿ ಕ್ರೆಟ್ಟಾ ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಎರಡೂ ವಾಹನಗಳು ಅತ್ಯಂತ ವೇಗವಾಗಿ ಸಂಚರಿಸುತ್ತಿದ್ದ ಸಂದರ್ಭದಲ್ಲಿ ನಡೆದ ಈ ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಸಜಿಪ ಎಂಬಲ್ಲಿ ಅಂಗಡಿ ನಡೆಸುತ್ತಿದ್ದ ಬೋಳಂಗಡಿಯ ಮುಸ್ತಾಫ ಎಂಬವರಿಗೆ ಸೇರಿದ ಕಾರು ಇದಾಗಿದ್ದು ಕಾರಿನಲ್ಲಿದ್ದ ಮುಸ್ತಾಫ ಅವರಿಗೆ ಗಂಭೀರ ಗಾಯವಾಗಿದೆ.

     

    ಅಪಘಾತ ನಡೆದ ತಕ್ಷಣ ಸ್ಥಳೀಯರು ಕಾರಿನಲ್ಲಿ ಸಿಲುಕಿದ್ದ ಮುಸ್ತಾಫ ಅವರನ್ನು ಕಾರಿನಿಂದ ಹೊರಗೆ ತೆಗೆದು ಆಸ್ಪತ್ರೆಗೆ ರವಾನಿಸಿದ್ದಾರೆ.

    ಪ್ರೀತಿಗಾಗಿ ಪೀಡಿಸಿದ ಅನ್ಯಮತೀಯ ಯುವಕ ಪೊಲೀಸ್ ವಶಕ್ಕೆ..!

    ತೀವ್ರ ಸ್ವರೂಪದ ಗಾಯವಾಗಿರುವ ಮುಸ್ತಾಫ ಅವರಿಗೆ ಬಂಟ್ವಾಳದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದೆ. ಗಾಯಾಳು ಮುಸ್ತಾಫ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

    Continue Reading

    LATEST NEWS

    Trending