Connect with us

    BANTWAL

    Bantwala: ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಚಡ್ಡಿ- ಲಂಗ ಒಣಗಲು ಹಾಕಿದ ಪ್ರಯಾಣಿಕರು..!!

    Published

    on

    ವಾಯುವ್ಯ ಕರ್ನಾಟಕ ಸಾರಿಗೆ ಬಸ್ ನಲ್ಲಿ ಬಟ್ಟೆ ಒಣಗಲು ಹಾಕಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗ್ತಾ ಇದ್ದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. 

    ಬಂಟ್ವಾಳ: ವಾಯುವ್ಯ ಕರ್ನಾಟಕ ಸಾರಿಗೆ ಬಸ್ ನಲ್ಲಿ ಬಟ್ಟೆ ಒಣಗಲು ಹಾಕಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗ್ತಾ ಇದೆ.

    ಬಸ್ಸಿನಲ್ಲಿ ಪ್ರಯಾಣಿಕರಿಗೆ ಅಸಹ್ಯ ಹುಟ್ಟಿಸುವ ಬಟ್ಟೆಗಳು ನೇತಾಡುತ್ತಿದ್ದು, ಇದು ಬಸ್ ನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಕಿರಿಕಿರಿಯಾಗಿದೆ.

    ಸುಬ್ರಹ್ಮಣ್ಯದಿಂದ ಕಾರವಾರ ಕ್ಕೆ ಪ್ರಯಾಣಿಸುವ ಬಸ್ ನಲ್ಲಿ ಈ ದೃಶ್ಯ ಕಂಡು ಬಂದಿದ್ದು, ಬಸ್ ನ ಕಿಟಕಿಯಲ್ಲಿ ಬಟ್ಟೆಗಳನ್ನು ಒಣಗಲು ಹಾಕಿದ್ದಾರೆ.

    ಇದೀಗ ಸಾಮಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗ್ತಾ ಇದೆ.

     

    Click to comment

    Leave a Reply

    Your email address will not be published. Required fields are marked *

    BANTWAL

    ಪೊಲೀಸರ ರ್ಯಾಪಿಡ್ ಆಕ್ಷನ್ ಫೋರ್ಸ್ ಲಾರಿ ಪಲ್ಟಿ ; ಇಬ್ಬರಿಗೆ ಗಾಯ

    Published

    on

    ಪುಂಜಾಲಕಟ್ಟೆ; ಬಂಟ್ವಾಳ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿ ಮೂರ್ಜೆ ಸಮೀಪದ ಕುದ್ರೋಟಿಕಟ್ಟೆಯಲ್ಲಿ ಪೊಲೀಸರ ರ್ಯಾಪಿಡ್ ಆಕ್ಷನ್ ಫೋರ್ಸ್ ಲಾರಿ ಮುಗುಚಿ ಕೆಳಗೆ ಬಿದ್ದಿದೆ.


    ಚಾಲಕನ ನಿಯಂತ್ರಣ ತಪ್ಪಿದ ಕಾರಣದಿಂದಾಗಿ ಆರ್‌ಎಎಫ್ ನ ಲಗೇಜು ತುಂಬಿದ ಲಾರಿ ಭದ್ರಾವತಿಯಿಂದ ಬಿ.ಸಿ.ರೋಡ್‌ ಗೆ ಬರುತ್ತಿರುವಾಗ ಪಲ್ಟಿಯಾಗಿದೆ. ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಹಾಗೂ ಮತ್ತೋರ್ವ ಸಿಬ್ಬಂದಿ ಸಾಂತಪ್ಪ ನಾಯಕ್‌ರನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
    ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

    Continue Reading

    BANTWAL

    ಬಂಟ್ವಾಳ: ಈದ್ ಮಿಲಾದ್ ಮೆರವಣಿಗೆಯಲ್ಲಿ ಸಿಹಿ ಹಂಚಿ ಸೌಹಾರ್ದತೆ ಮೆರೆದ ಹಿಂದೂ ಬಾಂಧವರು.!

    Published

    on

    ಬಂಟ್ವಾಳ: ಸಂಘಪರಿವಾರದ ವಿವಾದದ ನಡುವೆಯೂ ಹಿಂದೂ ಬಾಂಧವರು ಈದ್ ಮಿಲಾದ್ ಮೆರವಣಿಗೆಯಲ್ಲಿ ಸಾಗಿ ಬಂದು ಮುಸ್ಲಿಮರಿಗೆ ಸಿಹಿ ಹಂಚಿ ಸೌಹಾರ್ದತೆ ಮೆರೆದ ಘಟನೆ ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ನಡೆದಿದೆ.

    ಸೋಮವಾರ ಕರ್ನಾಟಕದಾದ್ಯಂತ ಮುಸ್ಲಿಂ ಬಾಂಧವರು ಈದ್ ಮಿಲಾದ್ ಅದ್ದೂರಿಯಾಗಿ ಆಚರಿಸಿದರು. ಪ್ರಚೋದನಕಾರಿ ಹೇಳಿಕೆಯಿಂದ ಸಂಘಪರಿವಾರದ ಕಾರ್ಯಕರ್ತರು ಬಿಸಿ ರೋಡಿನಲ್ಲಿ ಜಮಾಯಿಸಿ ಘೋಷಣೆಗಳನ್ನು ಕೂಗಿ ಪ್ರತಿಭಟನೆ ಮಾಡಿದರು. ಕೆಲಕಾಲ ಬಿಗುವಿನ ವಾತಾವರಣ ಕಂಡುಬಂತು.

    ಇದೆಲ್ಲದರ ನಡುವೆ ಮಾಣಿಯಲ್ಲಿ ಹಿಂದೂ ಬಾಂಧವರು ಮೆರವಣಿಗೆಯಲ್ಲಿ ಸಾಗಿ ಬಂದ ಮಸ್ಲಿಮರಿಗೆ ಸಿಹಿತಿಂಡಿ ವಿತರಿಸಿ ಸೌಹಾರ್ದತೆಗೆ ಪಾತ್ರರಾದರು.

    ಅಲ್ಲದೆ ಅಂತ್ಯದಿನದವರೆಗೂ ನಮ್ಮ ಊರಲ್ಲಿ ಶಾಂತಿ ಸೌಹಾರ್ದತೆ ನೆಲೆ ನಿಲ್ಲಲಿ ಎಂದು ಹಾರೈಸಿದರು.

    Continue Reading

    BANTWAL

    ಬಿ.ಸಿ.ರೋಡ್‍ನಲ್ಲಿ ಜಮಾಯಿಸಿದ ಸಂಘಪರಿವಾರದ ಕಾರ್ಯಕರ್ತರು: ಸದ್ಯ ಪರಿಸ್ಥಿತಿ ಶಾಂತ

    Published

    on

    ಬಂಟ್ವಾಳ: ಸಂಘಪರಿವಾರದ ಮುಖಂಡ ಶರಣ್ ಪಂಪ್ ವೆಲ್ ಮತ್ತು ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ರ ಪ್ರಚೋದನಕಾರಿ ಹೇಳಿಕೆಗಳ ಹಿನ್ನೆಲೆಯಲ್ಲಿ ಸೋಮವಾರ ಬಿಸಿರೋಡ್‌ನಲ್ಲಿ ಭಾರೀ ಸಂಖ್ಯೆಯಲ್ಲಿ ಸಂಘಪರಿವಾರದ ಕಾರ್ಯಕರ್ತರು ಜಮಾಯಿಸಿ ಘೋಷಣೆಗಳನ್ನು ಕೂಗಿದ್ದಾರೆ.

    ಪೊಲೀಸರು ಬಿ.ಸಿ.ರೋಡ್​ನಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದಾರೆ. ನಿಗದಿಕ್ಕಿಂತ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಎಸ್​​ಪಿ ಯತೀಶ್ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಬಂದೋಬಸ್ತ್ ಮಾಡಲಾಗಿದೆ.

    ಬಿ.ಸಿ.ರೋಡ್ ರಕ್ತೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಸಂಘ ಪರಿವಾರದ ನೂರಾರು ಕಾರ್ಯಕರ್ತರು ಜಮಾಯಿಸಿದ್ದಾರೆ. ಗುಂಪು ಜಮಾಯಿಸಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಪೊಲೀಸರು ಬಿಗು ಬಂದೋಬಸ್ತ್ ಕಲ್ಪಿಸಿದ್ದಾರೆ. ಸದ್ಯ ಪರಿಸ್ಥಿತಿ ಶಾಂತವಾಗಿದೆ‌.

    Continue Reading

    LATEST NEWS

    Trending