Connect with us

BANTWAL

ಬಂಟ್ವಾಳ : ಸರಪಾಡಿ ರಥಬೀದಿ ಬಳಿ ಧರೆಗುರುಳಿದ ಅಶ್ವತ್ಥ ಮರ-ಶ್ರೀ ಶರಭೇಶ್ವರನ ಪವಾಡದಿಂದ ತಪ್ಪಿದ ಜೀವಹಾನಿ..!

Published

on

ಬೃಹತ್ ಗಾತ್ರದ ಮರವೊಂದು ವಿದ್ಯುತ್ ತಂತಿಯ ಮೇಲೆ ಬಿದ್ದು ಕಂಬಗಳು ಧರೆಗೆ ಉರುಳಿ ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.

ಬಂಟ್ವಾಳ : ಬೃಹತ್ ಗಾತ್ರದ ಮರವೊಂದು ವಿದ್ಯುತ್ ತಂತಿಯ ಮೇಲೆ ಬಿದ್ದು ಕಂಬಗಳು ಧರೆಗೆ ಉರುಳಿ ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.

ಬಂಟ್ವಾಳದ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ರಥಬೀದಿಯಲ್ಲಿದ್ದ ಬೃಹತ್ ಅರಳಿ ಮರ ಉರುಳಿ ಈ ಅವಘಡ ಸಂಭವಿಸಿದೆ.

ಘಟನೆಯಲ್ಲಿ 5 ರಿಂದ 6 ವಿದುತ್ತ್ ಸರಬರಾಜು ಕಂಬಗಳಿಗೆ ಹಾನಿಯಾಗಿದೆ.

ಮರ ಬಿದ್ದ ಪರಿಣಾಮ ಕೆಲವೊತ್ತು ಸಂಚಾರ ವ್ಯತ್ಯಯ ಉಂಟಾಗಿದೆ.

ಬೆಳ್ಳಗ್ಗಿನ ಹೊತ್ತು ಜನಸಂಚಾರ ಹಾಗೂ ವಾಹನ ಸಂಚಾರ ಹೆಚ್ಚಿರುವ ಸಮಯವಾದರೂ ಯಾವುದೇ ಜೀವಹಾನಿ ಉಂಟಾಗಿಲ್ಲ.

ಕಳೆದೆರಡು ದಿನಗಳಲ್ಲಿ ಮರದ ರೆಂಬೆಗಳು ಬಿದ್ದಿದ್ದು, ಆಗಲೂ ಯಾವುದೇ ಹಾನಿ ಉಂಟಾಗಿಲ್ಲ.

ಇಂದು ಬೆಳಗ್ಗಿನ ಹೊತ್ತು ಮರ ಏಕಾಏಕಿ ಬುಡದ ಭಾಗದಲ್ಲಿ ತುಂಡಾಗಿ ಬಿದ್ದಿದ್ದು, ವಿದ್ಯುತ್ ಕಂಬಗಳು ಧರೆಗುರುಳಿರುವುದು ಬಿಟ್ಟರೆ, ಪಕ್ಕದಲ್ಲಿದ್ದ ಪ್ರಯಾಣಿಕರ ತಂಗುದಾಣ, ಅಂಗಡಿಗೆ ಯಾವುದೇ ಹಾನಿಯಾಗಿಲ್ಲ.

ಮರ ಬೀಳುವ ಕೆಲ ಹೊತ್ತಿನ ಮೊದಲೇ ಶಾಲಾ ಬಸ್ಸುಗಳು, ಇತರ ವಾಹನಗಳು ಮರದ ಬಿದ್ದಿರುವ ಭಾಗದಲ್ಲೇ ಹಾದು ಹೋಗಿದ್ದವು.

ಜತೆಗೆ ಬೀಳುವ ಹೊತ್ತಿನಲ್ಲೂ ದೂರದಲ್ಲಿ ದ್ವಿಚಕ್ರ ವಾಹನಗಳು ಅದೇ ಭಾಗಕ್ಕೆ ಆಗಮಿಸುತ್ತಿತ್ತು.

ಬೀಳುವ ಹೊತ್ತಿನಲ್ಲಿ ಜೋರಾದ ಶಬ್ದ ಕೇಳಿಬಂದಿದ್ದು, ತಂಗುದಾಣದಲ್ಲಿ ಕೂತವರು ಕೂಡ ಮರ ಬೀಳುತ್ತಿದ್ದಂತೆ ಹೆದರಿ ದೂರಕ್ಕೆ ಓಡಿದ್ದಾರೆ.

ಇನ್ನು ಇದೇ ದೇವಸ್ಥಾನದ ವಠಾರದಲ್ಲಿ ಫೆಬ್ರವರಿ 6 ರಂದು ಯಕ್ಷಗಾನ ಸೇವೆಯಾಟ ನಡೆದಿದ್ದು, ಆ ಸಂದರ್ಭದಲ್ಲಿ ಬುಡದಲ್ಲೇ ಹತ್ತಾರು ವಾಹನಗಳು ನಿಂತಿದ್ದವು.

ಆ ವೇಳೆ ಬಿದ್ದಿದ್ದರೆ ಜೀವಹಾನಿಯ ಜತೆಗೆ ಅನೇಕ ವಾಹನಗಳೂ ಜಖಂಗೊಳ್ಳುತ್ತಿದ್ದವು.

ಈ ರೀತಿಯಲ್ಲಿ ಜೀವಕ್ಕೆ ಒಂದು ಸಣ್ಣ ಹಾನಿಯನ್ನೂ ಮಾಡದೆ ಅಶ್ವತ್ಥ ಮರ ಬಿದ್ದಿರುವುದಕ್ಕೆ ಶ್ರೀ ಶರಭೇಶ್ವರ ದೇವರ ಪವಾಡವೆಂದೇ ಗ್ರಾಮಸ್ಥರು ಅಭಿಪ್ರಾಯ ವ್ಯಕ್ತಡಿಸುತ್ತಿದ್ದಾರೆ.

BANTWAL

ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

Published

on

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2017 ರಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಪಾಲಮ ಹೆಹರು ತಾಲೂಕಿನ ಚಿನ್ನಪಳ್ಳಿ ಪೆದ್ದ ಗ್ರಾಮದ ನಿವಾಸಿ ಬಿ. ಮೌಲಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ 6 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಿ. ಮೌಲಾ ಉಳ್ಳಾಲ ತಾಲೂಕಿನ ದೇರಳಕಟ್ಟೆಯ ಕುತ್ತಾರು ಎಂಬಲ್ಲಿ ಇದ್ದಾನೆ ಎಂಬುದಾಗಿ ಲಭಿಸಿದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಅಲ್ಲಿಗೆ ತೆರಳಿ ಆತನನ್ನು ಬಂಧಿಸಿದರು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿ, ನ್ಯಾಯಾಲಯವು ಆರೋಪಿಗೆ ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯ ಹೆಡ್‌ ಕಾನ್‌ ಸ್ಟೆಬಲ್‌ ಗಣೇಶ್ ಪ್ರಸಾದ್ ಮತ್ತು ಕಾನ್‌ ಸ್ಟೆಬಲ್‌ ವಿಜಯ ಕುಮಾರ ಅವರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

 

Continue Reading

BANTWAL

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಬಾಲವಿಕಾಸದ ವಿದ್ಯಾರ್ಥಿನಿಗೆ ಪ್ರಶಸ್ತಿ

Published

on

ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಪೆರಾಜೆ, ಶಾಲಾ ಶಿಕ್ಷಣ ಇಲಾಖೆ ಮತ್ತು ಮಂಗಳೂರಿನ ರಾಮಕೃಷ್ಣ ಹೈ ಸ್ಕೂಲ್ ಬಂಟ್ಸ್ ಹಾಸ್ಟೆಲ್  ಇದರ ಜಂಟಿ ಆಶ್ರಯದಲ್ಲಿ ಡಿ.1ರಂದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ನಡೆದಿತ್ತು.


ಈ ಪ್ರತಿಭಾ ಕಾರಂಜಿಯಲ್ಲಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ದೇವಿಕಾ ಕೆ ಭಾಗವಹಿಸಿ ಪ್ರೌಢ ಶಾಲಾ ವಿಭಾಗದ ಕನ್ನಡ ಕವನ ವಾಚನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಇವರನ್ನು ಶಾಲಾ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

Continue Reading

BANTWAL

Bnatwala: ಡಿ.3ರಂದು ಅಕ್ಷಯ ಪಾತ್ರ ಪ್ರತಿಷ್ಠಾನದ ಕೇಂದ್ರೀಕೃತ ಅಡುಗೆ ಮನೆ ಉದ್ಘಾಟನೆ

Published

on

ಬಂಟ್ವಾಳ: ಅಕ್ಷಯ ಪಾತ್ರ ಫೌಂಡೇಶನ್ ಇದರ ಅಡುಗೆ ಮನೆಯ ಉದ್ಘಾಟನಾ ಸಮಾರಂಭವು ಡಿ. 3 ರಂದು ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜು ಸಮೀಪ ನಡೆಯಲಿದೆ.

ಅಕ್ಷಯ ಫೌಂಡೇಶನ್ ಮಕ್ಕಳ ಹಸಿವನ್ನು ಹೋಗಲಾಡಿಸುವ ತನ್ನ ಅಚಲವಾದ ಕಾರ್ಯಕ್ಕೆ ಹೆಸರುವಾಸಿಯಾಗಿದ್ದು, ಮಂಗಳೂರಿನಲ್ಲಿ ತನ್ನ ಕೇಂದ್ರೀಕೃತ ಅಡುಗೆ ಮನೆಯ ಉದ್ಘಾಟನೆಯೊಂದಿಗೆ ಮಹತ್ವದ ಮೈಲಿಗಲ್ಲು ತಲುಪಿದೆ. ದಾನಿಗಳಾದ ಜಿಟಿ ಫೌಂಡೇಶನ್ ಮತ್ತು ದಿಯಾ ಸಿಸ್ಟಮ್ಸ್ (ಮಂಗಳೂರು) ಪ್ರೈ.ಲಿ. ಲಿಮಿಟೆಡ್‌ನ ವಿಜಯ್ ಮತ್ತು ಶಾಮ ಕೇಡಿಯಾ, ದಿವಂಗತ  ಡಾ. ವಿ ರವಿಚಂದ್ರನ್ ಅವರ ನಿರಂತರ ಬೆಂಬಲ ಮತ್ತು ದೂರದೃಷ್ಟಿ ಕೊಡುಗೆಯೇ ಈ ಅಡುಗೆ ಮನೆಯಾಗಿದೆ. ಈ ಸಮಾರಂಭವು ಉಡುಪಿಯ ಪುತ್ತಿಗೆ ಮಠದ ಜಗದ್ಗುರು ಶ್ರೀ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಡೆಯಲಿದೆ.

ಈ ಉದ್ಘಾಟನಾ ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್,  ಬೆಂಗಳೂರಿನ ಸೆಂಚುರಿ ರಿಯಲ್ ಎಸ್ಟೇಟ್ ಗ್ರೂಪ್‌ನ ಅಧ್ಯಕ್ಷ ಡಾ. ಪಿ ದಯಾನಂದ ಪೈ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಪಿ.ಮುಲ್ಲೈ ಮುಹಿಲನ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ ಕೆ, ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಕ್ಷಯ ಪಾತ್ರ ಪ್ರತಿಷ್ಠಾನದ ಅಧ್ಯಕ್ಷ ಮಧು ಪಂಡಿತ್ ದಾಸ ಮತ್ತು ಅಕ್ಷಯ ಪಾತ್ರ ಫೌಂಡೇಶನ್‌ನ ಉಪಾಧ್ಯಕ್ಷ ಚಂಚಲಪತಿ ದಾಸ ಅವರು ಉಪಸ್ಥಿತರಿರುವರು.

124 ಸರ್ಕಾರಿ ಮತ್ತು 41 ಸರ್ಕಾರಿ ಅನುದಾನಿತ ಸಂಸ್ಥೆಗಳು ಸೇರಿದಂತೆ 165 ಕ್ಕೂ ಹೆಚ್ಚು ಶಾಲೆಗಗಳಿಗೆ ಅಗತ್ಯ ಪೌಷ್ಟಿಕಯುತವಾದ 25,000 ಊಟವನ್ನು ಉತ್ಪಾದಿಸುವ ಸಾಮರ್ಥ್ಯದೊಂದಿಗೆ ಈ ಅಡುಗೆಕೋಣೆ ರೂಪುಗೊಂಡಿದೆ. ಅಡುಗೆಮನೆಯ ವೈವಿಧ್ಯಮಯ ಮೆನುವು ಸಮತೋಲಿತ ಪೋಷಣೆಯನ್ನು ಖಾತ್ರಿಗೊಳಿಸುತ್ತದೆ. ಸೌರಶಕ್ತಿ ಮತ್ತು ಸ್ವಚ್ಛ ಎಲ್ಪಿಜಿ ಯೊಂದಿಗೆ ಪರಿಸರಸ್ನೇಹಿ ಅಡುಗೆಮನೆ ಇದಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

LATEST NEWS

Trending