Connect with us

    BANTWAL

    Bantwala: ಪೆಟ್ರೋಲ್ ಬಂಕ್ ಮ್ಯಾನೇಜರ್ ಹೃದಯಘಾತದಿಂದ ನಿಧನ..!

    Published

    on

    ಬಿಸಿರೋಡಿನ ಪೆಟ್ರೋಲ್ ಬಂಕ್ ಒಂದರ ಮ್ಯಾನೇಜರ್ ಹೃದಯಘಾತದಿಂದ ಮಧ್ಯ ರಾತ್ರಿ ವೇಳೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

    ಬಂಟ್ವಾಳ: ಬಿಸಿರೋಡಿನ ಪೆಟ್ರೋಲ್ ಬಂಕ್ ಒಂದರ ಮ್ಯಾನೇಜರ್ ಹೃದಯಘಾತದಿಂದ ಮಧ್ಯ ರಾತ್ರಿ ವೇಳೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

    ಬಿಸಿರೋಡಿನ ಸರ್ಕಲ್ ಬಳಿಯಲ್ಲಿರುವ ಪೆಲತ್ತಿಮಾರ್ ನಿವಾಸಿ ಸಂಜೀವ ಅವರ ಪುತ್ರ ಪುರುಷೋತ್ತಮ ಪೂಜಾರಿ ( ಪರುಷಣ್ಣ) (45) ಮೃತಪಟ್ಟ ವ್ಯಕ್ತಿ.

    ಪುರುಷೋತ್ತಮ ಅವರು ಕೃಷಿಕನಾಗಿದ್ದುಕೊಂಡು ಬಿಸಿರೋಡಿನ ಸುತ್ತಮುತ್ತಲಿನ ಜನರ ಅಚ್ಚುಮೆಚ್ಚಿನ ಪುರುಷಣ್ಣ ಎಂದೇ ಹೆಸರುವಾಸಿಯಾಗಿ ಸಾಮಾಜಿಕ ಸೇವೆಯ ಮೂಲಕ ಚಿರಪರಿಚಿತರಾಗಿದ್ದರು.

    ನೇರ ನಡೆ ನುಡಿಯ ವ್ಯಕ್ತಿಯಾಗಿದ್ದ ಇವರು ಬಿಸಿರೋಡಿನ ಗುರುಕೃಪ ಪೆಟ್ರೋಲ್ ಪಂಪ್ ನಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

    ಶನಿವಾರ ರಾತ್ರಿ ವೇಳೆ ‌ಸುಮಾರು 12 ಗಂಟೆಯ ವರೆಗೂ ಇವರು ಎಸ್. ಆರ್.ಗ್ರೂಪ್ ನಲ್ಲಿ ಮೆಸೇಜ್ ಚಾಟಿಂಗ್ ಮಾಡುತ್ತ ಇದ್ದ ಬಗ್ಗೆ ಅವರ ಸ್ನೇಹಿತ ಸದಾಶಿವ ಕೈಕಂಬ ನೆನಪಿಸಿಕೊಂಡರು.

    ರಾತ್ರಿ ಸುಮಾರು ಒಂದು ಗಂಟೆ ವೇಳೆ ಇವರಿಗೆ ಹೃದಯ ನೋವು ಕಾಣಿಸಿಕೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸಿದೆ ಅವರು ಮೃತಪಟ್ಟ ಬಗ್ಗೆ ತಿಳಿದುಬಂದಿದೆ.

    BANTWAL

    ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

    Published

    on

    ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

    ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

    ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

    ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

    Continue Reading

    BANTWAL

    ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

    Published

    on

    ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

    Continue Reading

    BANTWAL

    ಬಂಟ್ವಾಳ: ಹಂಚಿಕಟ್ಟೆಯಲ್ಲಿ ಸಾಗಾಟದ ಲಾರಿಯಲ್ಲಿದ್ದ ಸಿಎನ್‌ಜಿ ಸೋರಿಕೆ

    Published

    on

    ಬಂಟ್ವಾಳ: ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಯ ವಗ್ಗ ಸಮೀಪದ ಹಂಚಿಕಟ್ಟೆಯಲ್ಲಿ ಗೇಲ್ ಕಂಪನಿಯ ಸಿಎನ್‌ಜಿ ಗ್ಯಾಸ್ ಸಾಗಾಟದ ಲಾರಿಯಲ್ಲಿದ್ದ ಸಿಎನ್‌ಜಿ ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾದ ಘಟನೆ ನಡೆದಿದೆ.

    ಸಿಎನ್‌ಜಿ ಸೋರಿಕೆ ಗಮನಕ್ಕೆ ಬಂದ ತಕ್ಷಣ ಲಾರಿ ಚಾಲಕ ಹೆದ್ದಾರಿ ಬದಿಗೆ ನಿಲ್ಲಿಸಿದ್ದು, ಬಳಿಕ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿದ್ದಾರೆ.

    ಅದಾಗಲೇ ಸೋರಿಕೆಯನ್ನು ಚಾಲಕ ಹಾಗೂ ಸ್ಥಳೀಯರು ಸೇರಿ ತಡೆದಿದ್ದಾರೆ.

    Continue Reading

    LATEST NEWS

    Trending