BANTWAL
Bantwala: ಕ್ರಶರ್ ಯಂತ್ರದ ಲಕ್ಷಾಂತರ ಮೌಲ್ಯದ ಸೊತ್ತು ಕಳವು-ಆರೋಪಿಗಳ ಬಂಧನ..!
ಜಲ್ಲಿ ಕ್ರಶರ್ ವೊಂದರಲ್ಲಿ ಕ್ರಶರ್ ಯಂತ್ರದ ಲಕ್ಷಾಂತರ ಮೌಲ್ಯದ ಸೊತ್ತೊಂದನ್ನು ಕಳವುಗೈದ ಇಬ್ಬರು ಆರೋಪಿಗಳ ಸಹಿತ ಸೊತ್ತುಗಳನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಟ್ವಾಳ: ಜಲ್ಲಿ ಕ್ರಶರ್ ವೊಂದರಲ್ಲಿ ಕ್ರಶರ್ ಯಂತ್ರದ ಲಕ್ಷಾಂತರ ಮೌಲ್ಯದ ಸೊತ್ತೊಂದನ್ನು ಕಳವುಗೈದ ಇಬ್ಬರು ಆರೋಪಿಗಳ ಸಹಿತ ಸೊತ್ತುಗಳನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ವಗ್ಗ ನಿವಾಸಿ ಸತೀಶ್ ಮತ್ತು ಬೆಳ್ತಂಗಡಿ ನಿವಾಸಿ ರೋಹಿತ್ ಎಂಬವರನ್ನು ಬಂಧಿಸಿ ,ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಬಿ.ಮೂಡ ಗ್ರಾಮದ ಪಲ್ಲಮಜಲು ಎಂಬಲ್ಲಿ ವಿನಯ ಶೆಟ್ಟಿ ಎಂಬವರಿಗೆ ಸೇರಿದ ಕ್ರಶರ್ ನಿಂದ ಕ್ರಶರ್ ಜಾಬ್ ಪ್ಲೇಟ್ ಒಂದು ವಾರಗಳ ಹಿಂದೆ ಕಳವಾಗಿತ್ತು.
450 ಕೆ.ಜಿ.ತೂಕದ ಸುಮಾರು 2,60,000 ಲಕ್ಷ ಮೌಲ್ಯದ ಸೊತ್ತುನ್ನು ಕಳವು ಮಾಡಲಾಗಿದೆ ಎಂದು ನಗರ ಪೋಲಿಸ್ ಠಾಣೆಗೆ ದೂರು ನೀಡಲಾಗಿತ್ತು.
ಈ ದೂರಿನ ಹಿನ್ನೆಲೆಯಲ್ಲಿ ಕಾರ್ಯಾ ಚರಣೆ ನಡೆಸಿದ ಬಂಟ್ವಾಳ ನಗರ ಠಾಣೆಯ ಪೊಲೀಸರು ಲಕ್ಷಾಂತರ ರೂಪಾಯಿ ಮೌಲ್ಯದ ಕಳವಾದ ಸೊತ್ತು ಹಾಗೂ ಕಳವಿಗೆ ಬಳಸಿದ ಕಾರನ್ನು ವಶಕ್ಕೆ ಪಡೆದುಕೊಂಡು, ಆರೋಪಿಗಳನ್ನು ಬಂಧಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ನಗರ ಠಾಣಾ ಎಸ್. ಐ.ರಾಮಕೃಷ್ಣ, ಅಪರಾಧ ವಿಭಾಗದ ಎಸ್.ಐ.ಕಲೈಮಾರ್ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
BANTWAL
ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ-ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ.
ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸುವ ಕಾರ್ಯ ಮಾಡಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ನೀಡಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
BANTWAL
Bantwala: ಹೃದಯ ಸಂಬಂಧಿ ಖಾಯಿಲೆಯಿಂದ 4 ವರ್ಷದ ಬಾಲಕಿ ನಿಧನ..!
ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ಬಂಟ್ವಾಳದ ಮಿತ್ತೂರಿನಲ್ಲಿ ನಡೆದಿದೆ.
ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ನಡೆದಿದೆ.
ಮೃತ ಬಾಲಕಿಯನ್ನು ಬಂಟ್ವಾಳ ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ತಿಳಿದು ಬಂದಿದೆ.
ಜಮೀಲಾ ಬಾಲಕಿ ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿದ್ದಳು.
ಈಕೆ ಅನಾರೋಗ್ಯದಿಂದ ಇದ್ದು, ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
BANTWAL
Bantwala: ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾ – ಕರೆಂಟ್ ಕಂಬಕ್ಕೆ ಗುದ್ದಿದ ಬಸ್..!
ಬಂಟ್ವಾಳ: ಸರಕಾರಿ ಬಸ್ ಒಂದು ಓವರ್ ಟೇಕ್ ಮಾಡುತ್ತಿದ್ದ ಟೆಂಪೋ ರಿಕ್ಷಾವನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಗುದ್ದಿದ ಘಟನೆ ಬಂಟ್ವಾಳದ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ.
ಮೆಲ್ಕಾರಿನಿಂದ ಬರುತ್ತಿದ್ದ ಇಲ್ಯಾಸ್ ಟೆಂಪೋ ರಿಕ್ಷಾ ಚಾಲಕನು ಕಂದೂರಿನ ಬಜಾರ್ ಅಡಿಟೋರಿಯಮ್ ಬಳಿ ಬರುತ್ತಿದ್ದ ಆಕ್ಟಿವಾ ಗಾಡಿಯೊಂದನ್ನು ಓವರ್ ಟೇಕ್ ಮಾಡುತ್ತಿದ್ದ.
ಈ ವೇಳೆ ಮುಡಿಪು ಮಾರ್ಗವಾಗಿ ಬರುತ್ತಿದ್ದ ಕಾಸರಗೋಡು ಬಿ.ಸಿ.ರೋಡ್ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಬಸ್ ಗುದ್ದಿದ್ದ ರಭಸಕ್ಕೆ ಕರೆಂಟ್ ಕಂಬ ತುಂಡಾಗಿದೆ.
ಬಸ್ಸಿನಲ್ಲಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೋಲಿಸರು ಆಗಮಿಸಿ, ಪರಿಶೀಲನೆ ನಡೆಸಿದರು.
- DAKSHINA KANNADA7 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- LATEST NEWS7 days ago
ವಾರವಿಡೀ ಕಾಡಿನಲ್ಲಿ ಸಿಲುಕಿದ್ದ ಯುವಕ- ಮನೆಗೆ ವಾಪಸ್ ಆಗುವಂತೆ ರಕ್ಷಣೆ ಮಾಡಿದ ಸಾಕುನಾಯಿ..!
- DAKSHINA KANNADA7 days ago
Puttur: ಕಾಲೇಜು ವಿದ್ಯಾರ್ಥಿನಿ ಜಿವಾಂತ್ಯ..!
- DAKSHINA KANNADA7 days ago
Ullala: ರೈಲಿನಡಿಗೆ ತಲೆಯಿಟ್ಟು ಅವಿವಾಹಿತ ವ್ಯಕ್ತಿ ಜೀವಾಂತ್ಯ..!