Connect with us

    BANTWAL

    ರಾಜ್ಯ ಸರಕಾರದಿಂದ ವಿದ್ಯುತ್ ದರ ಹೆಚ್ಚಳ : ಬಂಟ್ವಾಳ ಬಿಜೆಪಿಯಿಂದ ಪ್ರತಿಭಟನೆ

    Published

    on

    ರಾಜ್ಯ ಸರಕಾರ ವಿದ್ಯುತ್ ದರ ಹೆಚ್ಚಳ ಮಾಡಿರುವುದನ್ನು ಖಂಡಿಸಿ, ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ ಬಿ.ಸಿ.ರೋಡ್‌ ನ ಫ್ಲೈ ಓವರ್ ಬಳಿ ಇಂದು ಪ್ರತಿಭಟನೆ ನಡೆಯಿತು.

    ಬಂಟ್ವಾಳ: ರಾಜ್ಯ ಸರಕಾರ ವಿದ್ಯುತ್ ದರ ಹೆಚ್ಚಳ ಮಾಡಿರುವುದನ್ನು ಖಂಡಿಸಿ, ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ ಬಿ.ಸಿ.ರೋಡ್‌ ನ ಫ್ಲೈ ಓವರ್ ಬಳಿ ಇಂದು ಪ್ರತಿಭಟನೆ ನಡೆಯಿತು.

    ಈ ವೇಳೆ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ ಅವರು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ ಗ್ಯಾರಂಟಿಯಲ್ಲಿ ಯಾವ ಕ್ಲಾರಿಟಿಯೂ ಇಲ್ಲ.

    ಅದರಿಂದ ಬಡವರ ಮನೆ ಉದ್ಧಾರ ಆಗುವುದಿಲ್ಲ. ಪಾಕಿಸ್ತಾನ, ಶ್ರೀ ಲಂಕಾ ಮಾದರಿಯಲ್ಲಿ ಸೋಮಾರಿಯನ್ನಾಗಿ ಮಾಡುವ ಯೋಜನೆಯಾಗಿದ್ದು ಇಂತಹ ಯೋಜನೆಯಿಂದ ದೇಶ ದಿವಾಳಿಯಾಗಬಹುದು ಎಂದರು.

    ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್‌ದಾಸ್ ಬಂಟ್ವಾಳ, ರಾಜ್ಯ ವಕ್ತಾರ ವಿಕಾಸ್ ಪುತ್ತೂರು ಸಂದರ್ಭೋಚಿತವಾಗಿ ಮಾತನಾಡಿದರು.

    ಈ ಸಂದರ್ಭ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಮುಖರಾದ ಮಾಧವ ಮಾವೆ, ಸುಲೋಚನಾ ಜಿ.ಕೆ.ಭಟ್, ಕಮಲಾಕ್ಷಿ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

    BANTWAL

    ಬಂಟ್ವಾಳ | ಗಣೇಶೋತ್ಸವ ಶೋಭಾಯಾತ್ರೆ ವೇಳೆ ಪಾನೀಯ, ಸಿಹಿತಿಂಡಿ ನೀಡಬೇಡಿ: ಮಸೀದಿಗೆ ಭಜನಾ ಮಂದಿರದಿಂದ ಪತ್ರ

    Published

    on

    ಕೋಮು ಸೂಕ್ಷ್ಮ ಪ್ರದೇಶವಾಗಿ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬೋಳಂತೂರಿನಲ್ಲಿ ಈ ಹಿಂದೆ ಗಣೇಶೋತ್ಸವ ಮೆರವಣಿಗೆ ವೇಳೆ ಮುಸ್ಲಿಮರು ಸಿಹಿ ತಿಂಡಿ, ಪಾನೀಯ ಹಂಚಿ ಸೌಹಾರ್ದತೆಯನ್ನು ಮೆರೆದಿದ್ದರು. ಅದು ಭಾರೀ ಸುದ್ದಿಯಾಗಿತ್ತು. ಆದರೆ, ಈ ಬಾರಿ ಕಳೆದ ವರ್ಷದಂತೆ ಸಿಹಿ ತಿಂಡಿ, ಪಾನೀಯ ಹಂಚಬಾರದು ಎಂದು ಗಣೇಶೋತ್ಸವ ಆಯೋಜಿಸುವ ಸಮಿತಿಯವರೇ ಮುಸ್ಲಿಂ ಸಮುದಾಯದವರಿಗೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಹಿಂದೂ – ಮುಸ್ಲಿಂ ಸೌಹಾರ್ದತೆಗೆ ಬ್ರೇಕ್‌ ಬಿದ್ದಿದೆ. ಮಸೀದಿಯೊಂದಕ್ಕೆ ಗಣೇಶೋತ್ಸವ ಆಯೋಜಕರು ಬರೆದ ಪತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

    ಕಳೆದ ವರ್ಷ ಗಣೇಶೋತ್ಸವದ ವೇಳೆ ಇಲ್ಲಿನ ಮುಸಲ್ಮಾನ ಸಮಾಜ ಬಾಂಧವರು ಹಂಚಿದ ಸಿಹಿ ತಿಂಡಿ ತಿಂದು ನಮ್ಮ ಕೆಲವು ಮಕ್ಕಳು ಅಸ್ವಸ್ಥರಾಗಿದ್ದಾರೆ. ಹೀಗಾಗಿ ಈ ಬಾರಿ ಗಣೇಶೋತ್ಸವ ಮೆರವಣಿಗೆಯಲ್ಲಿ ಸಿಹಿ ತಿಂಡಿ, ತಂಪು ಪಾನೀಯ ಹಂಚಬೇಡಿ ಎಂದು ಶ್ರೀ ಸಿದ್ಧಿವಿನಾಯಕ ವಿಶ್ವಸ್ಥ ಮಂಡಳಿಯಿಂದ ಬೋಳಂತೂರು ಮಸೀದಿಗೆ ಪತ್ರ ಬರೆದು ಮನವಿ ಮಾಡಲಾಗಿದೆ. ಕಳೆದ ವರ್ಷ ಮಾತ್ರವಲ್ಲದೆ, ಕಳೆದ ಕೆಲವು ವರ್ಷಗಳಿಂದ ಗಣೇಶೋತ್ಸವ ಮೆರವಣಿಗೆ ವೇಳೆ ಮುಸ್ಲಿಂ ಸಮಾಜದವರು ಸಿಹಿ ತಿಂಡಿ ಹಂಚುತ್ತಿರುವುದು ನಡೆದುಕೊಂಡು ಬಂದಿತ್ತು.

    ಆದರೆ, ಕಳೆದ ವರ್ಷ ತಂಪು ಪಾನೀಯ, ಸಿಹಿ ತಿಂಡಿ ಸೇವಿಸಿದ ಹಿಂದೂ ಮಕ್ಕಳು ಅಸ್ವಸ್ಥರಾದ ಆರೋಪದಲ್ಲಿ ಈ ಬಾರಿ ಅದಕ್ಕೆ ಅವಕಾಶ ನಿರಾಕರಿಸಲಾಗಿದೆ. ಇದರಿಂದಾಗಿ ಎರಡು ಸಮುದಾಯಗಳ ನಡುವಣ ಸಾಮರಸ್ಯ ಕೆಡುವ ಆತಂಕವೂ ಎದುರಾಗಿದೆ. ಸಿದ್ಧಿವಿನಾಯಕ ವಿಶ್ವಸ್ಥ ಮಂಡಳಿಯು ಮಸೀದಿಗೆ ಬರೆದಿರುವ ಪತ್ರದ ಬಗ್ಗೆ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆಯಾಗುತ್ತಿದೆ. ಕಳೆದ ವರ್ಷದ ಸಾರ್ವಜನಿಕ ಗಣೇಶೋತ್ಸವದ ಮೆರವಣಿಗೆ ಸಂದರ್ಭದಲ್ಲಿ ಪಾನೀಯ ಮತ್ತು ಸಿಹಿತಿಂಡಿ ವಿತರಣೆಯನ್ನು ತಮ್ಮ ಸಮಾಜ ಬಾಂಧವರು ನೀಡಿರುತ್ತಾರೆ.

    ಅದನ್ನು ಸ್ವೀಕರಿಸಿದ ನಮ್ಮ ಕೆಲವು ಮಕ್ಕಳು ಅಸ್ವಸ್ಥರಾಗಿರುತ್ತಾರೆ. ಇದರಿಂದ ನಮ್ಮ ಸಾಮರಸ್ಯ ಕೆಡುತ್ತದೆ. ಇದರ ಮುಂಜಾಗ್ರತೆಗಾಗಿ ತಮ್ಮಲ್ಲಿ ಮನವಿ ಮಡುವುದೇನೆಂದರೆ, ಇನ್ನು ಮುಂದಕ್ಕೆ ಶೋಭಾಯಾತ್ರೆಯಲ್ಲಿ ತಮ್ಮ ಸಮಾಜ ಬಾಂಧವರು ಯಾವುದೇ ಪಾನೀಯ ಹಾಗೂ ತಿಂಡಿ ತಿನಿಸುಗಳನ್ನು ನೀಡಬಾರದಾಗಿ ಈ ಮೂಲಕ ವಿನಂತಿಸುತ್ತೇವೆ. ಆದ್ದರಿಂದ ನಮ್ಮ ಶೋಭಾಯಾತ್ರೆಗೆ ನಿಮ್ಮ ಎಲ್ಲಾ ಸಮಾಜ ಬಾಂಧವರು ಸಹಕರಿಸುವಂತೆ ನಿಮ್ಮಲ್ಲಿ ಈ ಮೂಲಕ ಮನವಿ ಮಾಡುತ್ತೇವೆ’’ ಎಂದು ಸಿದ್ಧಿವಿನಾಯಕ ವಿಶ್ವಸ್ಥ ಮಂಡಳಿ ಬರೆದಿದ್ದು ಎನ್ನಲಾದ ವೈರಲ್ ಆಗಿರುವ ಪತ್ರದಲ್ಲಿ ಉಲ್ಲೇಖವಾಗಿದೆ.

    Continue Reading

    BANTWAL

    ಕಾರು-ಲಾರಿ ಮುಖಾಮುಖಿ ಡಿಕ್ಕಿ; ಕಾರಿನಲ್ಲಿದ್ದ ವ್ಯಕ್ತಿ ಗಂಭೀ*ರ

    Published

    on

    ಬಂಟ್ವಾಳ: ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪದ ಮಾರ್ನಬೈಲು ಎಂಬಲ್ಲಿ ಕ್ರೆಟ್ಟಾ ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಎರಡೂ ವಾಹನಗಳು ಅತ್ಯಂತ ವೇಗವಾಗಿ ಸಂಚರಿಸುತ್ತಿದ್ದ ಸಂದರ್ಭದಲ್ಲಿ ನಡೆದ ಈ ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಸಜಿಪ ಎಂಬಲ್ಲಿ ಅಂಗಡಿ ನಡೆಸುತ್ತಿದ್ದ ಬೋಳಂಗಡಿಯ ಮುಸ್ತಾಫ ಎಂಬವರಿಗೆ ಸೇರಿದ ಕಾರು ಇದಾಗಿದ್ದು ಕಾರಿನಲ್ಲಿದ್ದ ಮುಸ್ತಾಫ ಅವರಿಗೆ ಗಂಭೀರ ಗಾಯವಾಗಿದೆ.

     

    ಅಪಘಾತ ನಡೆದ ತಕ್ಷಣ ಸ್ಥಳೀಯರು ಕಾರಿನಲ್ಲಿ ಸಿಲುಕಿದ್ದ ಮುಸ್ತಾಫ ಅವರನ್ನು ಕಾರಿನಿಂದ ಹೊರಗೆ ತೆಗೆದು ಆಸ್ಪತ್ರೆಗೆ ರವಾನಿಸಿದ್ದಾರೆ.

    ಪ್ರೀತಿಗಾಗಿ ಪೀಡಿಸಿದ ಅನ್ಯಮತೀಯ ಯುವಕ ಪೊಲೀಸ್ ವಶಕ್ಕೆ..!

    ತೀವ್ರ ಸ್ವರೂಪದ ಗಾಯವಾಗಿರುವ ಮುಸ್ತಾಫ ಅವರಿಗೆ ಬಂಟ್ವಾಳದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದೆ. ಗಾಯಾಳು ಮುಸ್ತಾಫ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

    Continue Reading

    BANTWAL

    ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ; ಎಲ್ಲೆಲ್ಲಿ?

    Published

    on

    ಮಂಗಳೂರು : ರಾಜ್ಯದ ಹಲವು ಭಾಗಗಳು ಭಾರಿ ಮಳೆಯಿಂದ ಹೈರಾಣಾಗಿದ್ದವು. ಆ ಬಳಿಕ ಕೊಂಚ ವಿರಾಮ ಪಡೆದಿದ್ದ ಮಳೆ ಮತ್ತೆ ಆರ್ಭಟಿಸುವ ಲಕ್ಷಣ ಕಾಣುತ್ತಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
    ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

    ಎಲ್ಲೆಲ್ಲಿ ಮಳೆ ?

    ದಕ್ಷಿಣ ಒಳನಾಡಿನ‌ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ.

    ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಾದ್ಯಂತ ರಭಸವಾಗಿ ಗಾಳಿ ಬೀಸಲಿದೆ. ಜೊತೆಗೆ ಭಾರೀ ಮಳೆ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗಲಿದೆ.

    ಶಿವಮೊಗ್ಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ ನೀಡಿದೆ.

    Continue Reading

    LATEST NEWS

    Trending