Connect with us

    BANTWAL

    Bantwala: ತಾಯಿ ಮಗಳಿಗೆ ಚೂರಿ ತೋರಿಸಿ ದರೋಡೆ- 6 ಮಂದಿಯ ಬಂಧನ..!

    Published

    on

    ಬಂಟ್ವಾಳ: ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗದಲ್ಲಿ ನಡೆದಿದ್ದ ದರೋಡೆ ಪ್ರಕರಣವನ್ನು ವಿಶೇಷ ಪೊಲೀಸ್ ತಂಡ ಬೇದಿಸಿ,  ದರೋಡೆ ನಡೆಸಿದ ಆರೋಪಿಗಳ ಸಹಿತ ಕದ್ದ ಚಿನ್ನವನ್ನು ಖರೀದಿಸಿದ ಆರೋಪಿಗಳನ್ನು ಬಂದಿಸಿದ್ದಾರೆ.

    ಆರೋಪಿಗಳ ಪತ್ತೆಗಾಗಿ ರಚಿಸಲಾಗಿದ್ದ ವಿಶೇಷ ತನಿಖಾ ತಂಡವು, ಕಾರ್ಕಳ ತಾಲೂಕಿನ ಮಾಳ ಗ್ರಾಮದ ಗಣೇಶ ನಾಯ್ಕ (26), ದಿನೇಶ್‌ ನಾಯ್ಕ (22), ಸಾಗರ ಶೆಟ್ಟಿ (21) ಮಂಗಳೂರು, ಐಕಳ ಗ್ರಾಮದ ರಾಕೇಶ್‌ ಎಲ್.‌ ಪಿಂಟೋ (29), ಕಡಬ ಬೆಳಂದೂರು ಗ್ರಾಮದ ಎಂ.ಸೀತಾರಾಮ ಪ್ರವೀಣ್‌ (36), ಸುಧೀರ್‌ (29) ಹಾಗೂ ದರೋಡೆಗೈದ ಚಿನ್ನಾಭರಣವನ್ನು ಸ್ವೀಕರಿಸಿದ ಮೂಲತ: ಬಂಟ್ವಾಳ ತಾಲೂಕಿನ, ಇರಾ ಗ್ರಾಮದವನಾದ ಪ್ರಸ್ತುತ ಗೌರಿ ಕಾಲುವೆ, ಚಿಕ್ಕಮಗಳೂರು ಜಿಲ್ಲೆ ವಾಸಿ ಮಹಮ್ಮದ್‌ ಹನೀಫ್‌ (49) ಎಬವರುಗಳನ್ನು ವಶಕ್ಕೆ ಪಡೆದು, ಆರೋಪಿಗಳಿಂದ ರೂ.3,15,000 ಮೌಲ್ಯದ ಚಿನ್ನಾಭರಣ ಹಾಗು ದರೋಡೆಗೆ ಬಳಸಿದ ಅಂದಾಜು ರೂ. 8 ಲಕ್ಷ ಮೌಲ್ಯದ ಇನ್ನೋವಾ ಕಾರು ಹಾಗು ಅಂದಾಜು ರೂ. 2 ಲಕ್ಷ ಮೌಲ್ಯದ ಟಾಟಾ ಇಂಡಿಕಾ ಕಾರು ವಶ ಪಡಿಸಿಕೊಂಡಿದ್ದಾರೆ.

    ಬಂಟ್ವಾಳ ತಾಲೂಕಿನ ವಗ್ಗದಲ್ಲಿ ಜ. 11 ರಂದು ದರೋಡೆ ನಡೆದಿತ್ತು. ವಗ್ಗದ ತಾಯಿ- ಮಗಳಿಗೆ ಚೂರಿ ತೋರಿಸಿದ ನಾಲ್ವರು ಮುಸುಕುಧಾರಿಗಳು ದರೋಡೆ ನಡೆಸಿ 2.90 ಲಕ್ಷ ರೂಮೌಲ್ಯದ ಚಿನ್ನ, 30 ಸಾವಿರ ನಗದಿನೊಂದಿಗೆ ಪರಾರಿಯಾಗಿದ್ದರು. ಪ್ಲೋರಿನ್ ಪಿಂಟೋ ಎಂಬವರ ಹೊಸ ಮನೆಗೆ ನುಗ್ಗಿ ದರೋಡೆ ನಡೆದಿದ್ದು ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೊ ಮಗಳು ಮರಿನಾ ಪಿಂಟೋ ಇಬ್ಬರು ಮಾತ್ರ ಇದ್ದಾಗ ಬೆಳಿಗ್ಗೆ ಸುಮಾರು 6.30ರ ಸಮಯದಲ್ಲಿ ದರೋಡೆ ನಡೆದಿದೆ. ಬೆಲ್ ಹಾಕಿದಾಗ ಬಾಗಿಲು ತೆಗೆದ ತಕ್ಷಣ ನಾಲ್ವರು ಮುಸುಕುದಾರಿಗಳು ಮನೆಯೊಳಗೆ ನುಗ್ಗಿ ಬೆದರಿಕೆಗೆ ಬಗ್ಗದಾಗ ಚೂರಿ ತೋರಿಸಿ ಕೊಲ್ಲುವ ಬೆದರಿಕೆ ಹಾಕಿ ದರೋಡೆ ಮಾಡಿದ್ದರು. ಈ ವೇಳೆ ಅಡ್ಡ ಬಂದ ಮಗಳು ಮರೀನಾ ಪಿಂಟೋ ಕೈಗೆ ಗಾಯವಾಗಿತ್ತು. ತನಿಕೆಗಾಗಿ ಎಸ್ಪಿ ರಿಷ್ಯಂತ್ ವಿಶೇಷ ತನಿಕಾ ತಂಡ ರಚಿಸಿದ್ದರು. ಸದ್ರಿ ಆರೋಪಿಗಳ ಪೈಕಿ ಗಣೇಶ ನಾಯ್ಕ ಎಂಬಾತನು 2023ರಲ್ಲಿ ಮಂಗಳೂರು ನಗರ ವ್ಯಾಪ್ತಿಯ ಮುಲ್ಕಿಯಲ್ಲಿ ಐಕಳ ಹರೀಶ್‌ ಶೆಟ್ಟಿ ಎಂಬವರ ಮನೆಯಿಂದ ಅಪಾರ ಮೊತ್ತದ ನಗದು, ಚಿನ್ನಾಭರಣ, ವಜ್ರ ಕಳವು ಮಾಡಿದ ಮುಖ್ಯ ಆರೋಪಿಯಾಗಿದ್ದಾನೆ. ಉಳಿದಂತೆ ಸೀತಾರಾಮ  ಪ್ರವೀಣ್‌, ಸುಧೀರ್‌ ಹಾಗೂ ಮಹಮ್ಮದ್‌ ಹನೀಫ್‌ ರವರ ವಿರುದ್ದ ದ.ಕ.ಜಿಲ್ಲೆ ಹಾಗು ಇನ್ನಿತರ ಜಿಲ್ಲೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿರುವ ಬಗ್ಗೆ ತನಿಖೆಯಿಂದ ತಿಳಿದು ಬಂದಿದೆ.

    BANTWAL

    ಕಲ್ಲಡ್ಕದಲ್ಲಿ ಸರ್ವೀಸ್ ರಸ್ತೆಗೆ ಡಾಮರು

    Published

    on

    ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.

    ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    Continue Reading

    BANTWAL

    ಮಂಗಳೂರು: ಯುವತಿ ವಿಚಾರದಲ್ಲಿ ಯುವಕನಿಗೆ ಥಳಿತ; ಆರೋಪಿಗಳು ಅರೆಸ್ಟ್

    Published

    on

    ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್‌ ಸಪ್ವಾನ್( 25), ಮಹಮ್ಮದ್‌ ರಿಜ್ವಾನ್‌ (25), ಇರ್ಪಾನ್‍(27), ಅನೀಸ್‍ ಅಹಮ್ಮದ್‍ (19), ನಾಸೀರ್‍ (27), ಇಬ್ರಾಹಿಂ, ಶಾಕೀರ್‍ (18)ನನ್ನು ಬಂಧಿಸಲಾಗಿದೆ.

    ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್‍ ಮುಸ್ತಾಫ್‍ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.

     

    ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ

     

    ಮಹಮ್ಮದ್‍ ಮುಸ್ತಾಫ್‍ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್‍ ಮುಸ್ತಾಫ್‍ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.

    Continue Reading

    BANTWAL

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕ ಆತ್ಮಹ*ತ್ಯೆ

    Published

    on

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.

    ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.

    ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    Continue Reading

    LATEST NEWS

    Trending