BANTWAL
ಬಂಟ್ವಾಳ: ನೇತ್ರಾವತಿ ಹಳೆ ಸೇತುವೆಯ ತಳಭಾಗದಲ್ಲಿ ಎಗ್ಗಿಲ್ಲದೆ ಮರಳುಗಾರಿಕೆ- ಸ್ಥಳೀಯರಿಂದ ಆರೋಪ
Published
2 years agoon
By
Adminದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ನೇತ್ರಾವತಿ ಹಳೆಯ ಸೇತುವೆ ತಳಭಾಗದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಮರಳುಗಾರಿಕೆ ವಿರುದ್ಧ ಸ್ಥಳೀಯರು ಗರಂ ಆಗಿದ್ದಾರೆ.
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ನೇತ್ರಾವತಿ ಹಳೆಯ ಸೇತುವೆ ತಳಭಾಗದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಮರಳುಗಾರಿಕೆ ವಿರುದ್ಧ ಸ್ಥಳೀಯರು ಗರಂ ಆಗಿದ್ದಾರೆ.
ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾದ ಪಾಣೆ ಮಂಗಳೂರು ಹಳೆಯ ಸೇತುವೆ ಪಿಲ್ಲರ್ ಗಳ ಅಡಿಭಾಗದಲ್ಲಿ ಕಳೆದ ಮೂರು ತಿಂಗಳಿನಿಂದ ಅಕ್ರಮವಾಗಿ ಮರಳು ತೆಗೆಯಲಾಗುತ್ತಿದೆ ಎಂಬ ಆರೋಪವನ್ನು ಸ್ಥಳೀಯರು ಮಾಡುತ್ತಿದ್ದಾರೆ.
ಮಳೆ ಇಲ್ಲದ ಕಾರಣ ನೇತ್ರಾವತಿ ನದಿಯಲ್ಲಿ ನೀರು ಗಣನೀಯ ಪ್ರಮಾಣದಲ್ಲಿ ಕಡಿಮೆ ಆಗಿದೆ.
ನದಿಯಲ್ಲಿ ಮರಳು ದಿಬ್ಬಗಳು ಕಾಣುತ್ತಿವೆ. ಇಂತಹ ಮರಳಿನ ದಿಬ್ಬಗಳು ಹಗಲು ಹೊತ್ತಲ್ಲಿ ಕಾಣ ಸಿಕ್ಕಿದರೆ ರಾತ್ರಿ ವೇಳೆ ಎಲ್ಲವೂ ಮಾಯವಾಗುತ್ತದೆ.
ಸೇತುವೆಯ ಸನಿಹದಲ್ಲಿ ಸರಕಾರದ ನಿಯಮದಂತೆ ಅವರು ನಿಗದಿಪಡಿಸಿದ ದೂರದವರೆಗೆ ಸೇತುವೆ ಭದ್ರತೆಯ ದೃಷ್ಟಿಯಿಂದ ಮರಳು ತೆಗೆಯುವ ಹಾಗಿಲ್ಲ.
ಕಾನೂನು ಮೀರಿ ಯಾವುದರ ಪರಿಜ್ಞಾನವಿಲ್ಲದೆ, ಯಾರ ಹೆದರಿಕೆಯೂ ಇಲ್ಲದೆ, ರಾತ್ರಿ ಸುಮಾರು 9ಗಂಟೆಯಿಂದ ಬೆಳಿಗ್ಗೆ ವರೆಗೆ ಮರಳು ತೆಗೆಯಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಹಳೇಯ ಕಾಲದ ಬ್ರಿಟಿಷರ ಅವಧಿಯಲ್ಲಿ ನಿರ್ಮಾಣ ಮಾಡಲಾದ ಈ ಉಕ್ಕಿನ ಸೇತುವೆಯನ್ನು ಕನಿಷ್ಟ ಪಳೆಯುಳಿಕೆ ರೀತಿಯಲ್ಲಿ ಉಳಿಸಬೇಕಾದ ಕನಸು ಹೊತ್ತಿರುವ ಸ್ಥಳೀಯರಿಗೆ ಅಕ್ರಮ ಮರಳುಗಾರಿಕೆ ಸಿಂಹಸ್ವಪ್ನವಾಗಿ ಕಾಡುತ್ತಿದೆ.
ಇನ್ನು ಈ ಅಕ್ರಮ ಮರಳುಗಾರಿಕೆ ವಿರುದ್ದ ಸಂಬಂಧಪಟ್ಟವರು ಕಠಿಣ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನು ಸ್ಥಳೀಯರು ನೀಡಿದ್ದಾರೆ.
ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.
ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್ ಸಪ್ವಾನ್( 25), ಮಹಮ್ಮದ್ ರಿಜ್ವಾನ್ (25), ಇರ್ಪಾನ್(27), ಅನೀಸ್ ಅಹಮ್ಮದ್ (19), ನಾಸೀರ್ (27), ಇಬ್ರಾಹಿಂ, ಶಾಕೀರ್ (18)ನನ್ನು ಬಂಧಿಸಲಾಗಿದೆ.
ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್ ಮುಸ್ತಾಫ್ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.
ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ
ಮಹಮ್ಮದ್ ಮುಸ್ತಾಫ್ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್ ಮುಸ್ತಾಫ್ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.
ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.
ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
LATEST NEWS
ಮಾರ್ಚ್ 14 ರಿಂದ ಐಪಿಎಲ್ ಆರಂಭ
ಮಂಗಳೂರು: ಟ್ರಾಯ್ನಿಂದ ಕರೆ; 1.71 ಕೋ.ರೂ ವಂಚನೆ
ಭಜನಾ ಗುರು ಅಶೋಕ್ ನಾಯ್ಕ್ ಕಳಸಬೈಲ್ ಗೆ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’
ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?
ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ
ಪ್ರತಿವರ್ಷ ಅಯ್ಯಪ್ಪ ಮಾಲೆ ಹಾಕುವ ಸ್ವಾಮಿಗಳ ಹೆಸರು ಯಾವುದು ಗೊತ್ತಾ ??
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS5 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LATEST NEWS2 days ago
ಡೇಟಿಂಗ್ಗೆ 11,650 ರೂ. , ಫೋಟೋಗೆ 760 ರೂ. ಕ್ಯಾಶ್ ರಿವಾರ್ಡ್: ಟೆಕ್ ಕಂಪನಿ