Connect with us

BANTWAL

ಬಂಟ್ವಾಳ: ಅಪರಿಚಿತ ವ್ಯಕ್ತಿಯೋರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

Published

on

ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಬಂಟ್ವಾಳ ತಾಲೂಕಿನ ನರಿಕೊಂಬುವಿನಲ್ಲಿ ಪತ್ತೆಯಾಗಿದೆ.

ಬಂಟ್ವಾಳ: ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಬಂಟ್ವಾಳ ತಾಲೂಕಿನ ನರಿಕೊಂಬುವಿನಲ್ಲಿ ಪತ್ತೆಯಾಗಿದೆ.

40ರಿಂದ 50ರ ವಯಸ್ಸಿನ ಗಂಡಸ್ಸಿನ ಮೃತದೇಹ ಎಂದು ಗುರುತಿಸಲಾಗಿದೆ.

ಇಲ್ಲಿನ ಗುಡ್ಡದ ಪಕ್ಕದ ಜಮೀನಿನ ವ್ಯಕ್ತಿಯೊಬ್ಬರು ತೋಟಕ್ಕೆ ನೀರು ಬಿಡಲು ಹೋದ ವೇಳೆ ಗುಡ್ಡೆಯಲ್ಲಿ ವಾಸನೆ ಬರುತ್ತಿದೆ ಎಂದು ಹೋಗಿ ನೋಡಿದಾಗ ಮರದಲ್ಲಿ ಒಬ್ಬರ ಮೃತದೇಹ ನೇತಾಡುತ್ತಿರುವುದು ಗಮನಕ್ಕೆ ಬಂದಿದೆ.

ಆ ಕೂಡಲೇ ಅವರು ಬಂಟ್ವಾಳ ನಗರ ಠಾಣಾ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.

ಆ ಮೃತದೇಹ ಕೊಲೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮುಖದ ಗುರುತು ಪತ್ತೆ ಹಚ್ಚಲು ಕಷ್ಟವಾಗಿದೆ.

ಅಂದಾಜಾಗಿ ಹದಿಹರೆಯದ ವ್ಯಕ್ತಿಯ ದೇಹವನ್ನು ಹೋಲುತ್ತಿದ್ದು, ಪ್ಯಾಂಟ್ ಮತ್ತು ಟೀ ಶರ್ಟ್ ಧರಿಸಿದ್ದಾನೆ ಎಂದು ಹೇಳಿದ್ದಾರೆ.

ಸದ್ಯಕ್ಕೆ ತಾಲೂಕಿನ ಠಾಣೆಗಳಲ್ಲಿ ಯಾವುದೇ ಕಾಣೆಯಾದ ಪ್ರಕರಣ ದಾಖಲಾಗಿರುವುದು ಕಂಡುಬಂದಿಲ್ಲವಾದ ಕಾರಣ ಆತ ತಾಲೂಕಿನ ವ್ಯಕ್ತಿಯಾ ಅಥಾವ ಬೇರೆ ತಾಲೂಕಿ ವ್ಯಕ್ತಿಯ ಎಂದು ಸಂಶಯ ವ್ಯಕ್ತವಾಗಿದೆ.

ಇದು ಆತ್ಮಹತ್ಯೆ ಪ್ರಕರಣ ಅಥಾವ ಇನ್ನು ಬೇರೆ ಕಾರಣಗಳಿರಬಹುದಾ ? ಎಂದು ಪೊಲೀಸರು ಹೇಳಿದ್ದು, ಮೃತದೇಹದ ಮರಣೋತ್ತರ ಪರೀಕ್ಷೆ ಬಳಿಕ ತಿಳಿಯಬಹುದು ಎಂದಿದ್ದಾರೆ.

ಅಪರಿಚಿತ ಶವವನ್ನು ಗುರುತು ಪತ್ತೆ ಹಚ್ಚಲು ಕೋರಿದ ಅವರು ಮೃತದೇಹವನ್ಹು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂಟ್ವಾಳ ‌ನಗರ ಠಾಣಾ ಎಸ್. ಐ.ರಾಮಕೃಷ್ಣ ಅವರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದರೆ.

ಇದೀಗ ತನಿಖೆ ಮುಂದುವರಿದಿದೆ ಎನ್ನಲಾಗಿದೆ.

Click to comment

Leave a Reply

Your email address will not be published. Required fields are marked *

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

BANTWAL

ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು

Published

on

ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್‌ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.


ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು

ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.

Continue Reading

BANTWAL

ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು

Published

on

ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಲೋಕೇಶ್ ಅವರು  ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.

ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್

ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್‌ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Trending