BANTWAL
Bantwala: ಒಡ್ಡೂರು ಫಾರ್ಮ್‌ನಲ್ಲಿ ಸಿಎನ್‌ಜಿ ಉತ್ಪಾದನಾ ಘಟಕ ಉದ್ಘಾಟಿಸಿದ ಕೇಂದ್ರ ಸಚಿವ ಭಗವಂತ ಖೂಬಾ
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಒಡ್ಡೂರು ಫಾರ್ಮ್ಸ್ ನಲ್ಲಿ ನಿರ್ಮಾಣಗೊಂಡ ಬಯೋವನ್ ಎನ್.ಜಿ. ಉತ್ಪಾದನೆ ಮಾಡುವ ಒಡ್ಡೂರು ಎನರ್ಜಿಯನ್ನು ಶುಕ್ರವಾರ ಸಂಜೆ ಕೇಂದ್ರ ಸಚಿವ ಭಗವಂತ ಖೂಬಾ ಉದ್ಘಾಟಿಸಿದರು.
ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಒಡ್ಡೂರು ಫಾರ್ಮ್ಸ್ ನಲ್ಲಿ ನಿರ್ಮಾಣಗೊಂಡ ಬಯೋವನ್ ಎನ್.ಜಿ. ಉತ್ಪಾದನೆ ಮಾಡುವ ಒಡ್ಡೂರು ಎನರ್ಜಿಯನ್ನು ಶುಕ್ರವಾರ ಸಂಜೆ ಕೇಂದ್ರ ಸಚಿವ ಭಗವಂತ ಖೂಬಾ ಉದ್ಘಾಟಿಸಿದರು.
ಬಳಿಕ ಸಚಿವ ಭಗವಂತ ಖೂಬಾ ಅವರು ಮಾತನಾಡಿ, ಬಯೋ ಗ್ಯಾಸ್ ಉತ್ಪಾದನೆ, ಗೊಬ್ಬರ ಉತ್ಪಾದನೆಗೆ ಸಬ್ಸಿಡಿ, ಸವಲತ್ತು ನೀಡಲಾಗುವುದು, ಅವುಗಳನ್ನು ಬ್ರಾಂಡಿಂಗ್ ಮಾಡುವ ಕಾರ್ಯಕ್ಕೆ ಕೇಂದ್ರ ಪ್ರೋತ್ಸಾಹ ನೀಡುತ್ತದೆ ಎಂದರು.
ದೇಶದಲ್ಲಿ 500 ಗಿಗಾವ್ಯಾಟ್ ನವೀಕರಿಸಬಹುದಾದ ಇಂಧನವನ್ನು 2030ರೊಳಗೆ ಉತ್ಪಾದನೆ ಮಾಡುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ.
ಸವಾಲುಗಳನ್ನು ಸ್ವೀಕರಿಸುವ ಮೂಲಕ ಶಾಸಕ ರಾಜೇಶ್ ನಾಯ್ಕ್ ಅವರು ಬಯೋ ಸಿ.ಎನ್.ಜಿ. ಘಟಕ ಆರಂಭಿಸಿದ್ದು, ಮಾದರಿಯಾಗಿದೆ ಎಂದರು.
ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಸರಕಾರಗಳಿಗೆ ಪ್ರೇರಣೆ ನೀಡುವ ಕಾರ್ಯವನ್ನು ಶಾಸಕರು ತನ್ನ ಜಾಗದಲ್ಲಿ ಮಾಡಿದ್ದಾರೆ.
ಪ್ರಕೃತಿಗೆ ಪೂರಕವಾದ ಮಾದರಿ ಘಟಕ ಎಂದರು.
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಮಾತನಾಡಿ, ಬಿಸಾಡುವಂಥ ವಸ್ತುಗಳನ್ನು ಜೋಡಿಸುವ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ಶ್ಲಾಘಿಸಿದರು.
ಮಂಗಳೂರು ಉತ್ತರ ಶಾಸಕರಾದ ಡಾ.ವೈ.ಭರತ್ ಶೆಟ್ಟಿ, ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಉಡುಪಿ ಶಾಸಕ ಯಶಪಾಲ್ ಸುವರ್ಣ, ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ವಿಧಾನಪರಿಷತ್ತು ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಪಾಲುದಾರ ಉನ್ನತ್ ನಾಯ್ಕ್ ಉಪಸ್ಥಿತರಿದ್ದರು.
ಪ್ರಶಾಂತ್ ಲಕ್ಷ್ಮಣ ದೇವಾಡಿಗ ಘಟಕದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಉಪಸ್ಥಿತರಿದ್ದರು. ಬಂಟ್ವಾಳ ಶಾಸಕ, ಒಡ್ಡೂರು ಫಾರ್ಮ್ಸ್ ಮಾಲೀಕ ರಾಜೇಶ್ ನಾಯ್ಕ್ ಸ್ವಾಗತಿಸಿದರು.
BANTWAL
ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ-ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ.
ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸುವ ಕಾರ್ಯ ಮಾಡಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ನೀಡಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
BANTWAL
Bantwala: ಹೃದಯ ಸಂಬಂಧಿ ಖಾಯಿಲೆಯಿಂದ 4 ವರ್ಷದ ಬಾಲಕಿ ನಿಧನ..!
ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ಬಂಟ್ವಾಳದ ಮಿತ್ತೂರಿನಲ್ಲಿ ನಡೆದಿದೆ.
ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ನಡೆದಿದೆ.
ಮೃತ ಬಾಲಕಿಯನ್ನು ಬಂಟ್ವಾಳ ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ತಿಳಿದು ಬಂದಿದೆ.
ಜಮೀಲಾ ಬಾಲಕಿ ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿದ್ದಳು.
ಈಕೆ ಅನಾರೋಗ್ಯದಿಂದ ಇದ್ದು, ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
BANTWAL
Bantwala: ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾ – ಕರೆಂಟ್ ಕಂಬಕ್ಕೆ ಗುದ್ದಿದ ಬಸ್..!
ಬಂಟ್ವಾಳ: ಸರಕಾರಿ ಬಸ್ ಒಂದು ಓವರ್ ಟೇಕ್ ಮಾಡುತ್ತಿದ್ದ ಟೆಂಪೋ ರಿಕ್ಷಾವನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಗುದ್ದಿದ ಘಟನೆ ಬಂಟ್ವಾಳದ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ.
ಮೆಲ್ಕಾರಿನಿಂದ ಬರುತ್ತಿದ್ದ ಇಲ್ಯಾಸ್ ಟೆಂಪೋ ರಿಕ್ಷಾ ಚಾಲಕನು ಕಂದೂರಿನ ಬಜಾರ್ ಅಡಿಟೋರಿಯಮ್ ಬಳಿ ಬರುತ್ತಿದ್ದ ಆಕ್ಟಿವಾ ಗಾಡಿಯೊಂದನ್ನು ಓವರ್ ಟೇಕ್ ಮಾಡುತ್ತಿದ್ದ.
ಈ ವೇಳೆ ಮುಡಿಪು ಮಾರ್ಗವಾಗಿ ಬರುತ್ತಿದ್ದ ಕಾಸರಗೋಡು ಬಿ.ಸಿ.ರೋಡ್ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಬಸ್ ಗುದ್ದಿದ್ದ ರಭಸಕ್ಕೆ ಕರೆಂಟ್ ಕಂಬ ತುಂಡಾಗಿದೆ.
ಬಸ್ಸಿನಲ್ಲಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೋಲಿಸರು ಆಗಮಿಸಿ, ಪರಿಶೀಲನೆ ನಡೆಸಿದರು.
- FILM7 days ago
ಕುರೂಪಿಯಾದ ಹಾಲಿವುಡ್ ನಟಿ ಆ್ಯಮಿ ಜಾಕ್ಸನ್..!
- DAKSHINA KANNADA7 days ago
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ರಾಂಬೋ ಸರ್ಕಸ್- ಜನರನ್ನು ಬೆರಗುಗೊಳಿಸುವ ವಿಸ್ಮಯ ಪ್ರದರ್ಶನ..!
- FILM7 days ago
Film: ಹಂದಿ ಮಾಂಸ ಸೇವಿಸಿದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು ಶಿಕ್ಷೆ..!
- bangalore6 days ago
ಹುಡುಗಿ ಚೇಂಜ್ ಆದ್ರೂ ಡ್ರೆಸ್ ಚೇಂಜ್ ಆಗಿಲ್ಲ ಅಲ್ವಾ ಶೆಟ್ರೇ?