Connect with us

BANTWAL

Bantwala: ತುಳುನಾಡಿನ ವಿಶಿಷ್ಟ ಆಚರಣೆ- ಮಾರಿ ಕಳೆವ ಆಟಿ ಕಳೆಂಜ

Published

on

ಆಟಿ ಕಳೆಂಜ ತುಳುನಾಡಿನ ಒಂದು ಶ್ರೇಷ್ಠ ಆಚರಣೆಯಾಗಿದೆ.  ತುಳುನಾಡಿನಲ್ಲಿ ವಿಪರೀತ ಮಳೆಯ ಸಮಯವಾದ ಆಟಿ ತಿಂಗಳಿನಲ್ಲಿ ಊರಿಗೆ ಅಂಟಿರುವ ಮಾರಿಯನ್ನು ಹೋಗಲಾಡಿಸಲು ಮನೆಮನೆಗೆ ಆಟಿ ಕಳೆಂಜ ಬರುವ ಪದ್ಧತಿ ಹಿಂದಿನಿಂದಲೂ ರೂಢಿಯಲ್ಲಿದೆ.

ಬಂಟ್ವಾಳ: ಆಟಿ ಕಳೆಂಜ ತುಳುನಾಡಿನ ಒಂದು ಶ್ರೇಷ್ಠ ಆಚರಣೆಯಾಗಿದೆ.  ತುಳುನಾಡಿನಲ್ಲಿ ವಿಪರೀತ ಮಳೆಯ ಸಮಯವಾದ ಆಟಿ ತಿಂಗಳಿನಲ್ಲಿ ಊರಿಗೆ ಅಂಟಿರುವ ಮಾರಿಯನ್ನು ಹೋಗಲಾಡಿಸಲು ಮನೆಮನೆಗೆ ಆಟಿ ಕಳೆಂಜ ಬರುವ ಪದ್ಧತಿ ಹಿಂದಿನಿಂದಲೂ ರೂಢಿಯಲ್ಲಿದೆ.


ತುಳುವಿನ ಆಟಿ (ಆಷಾಢ: ಚಾಂದ್ರಮಾನದಲ್ಲಿ ನಾಲ್ಕನೆಯ ತಿಂಗಳು) ತಿಂಗಳಲ್ಲಿ ನಲಿಕೆ ಅಥವಾ ಪಾಣಾರ ಜನವರ್ಗದವರು ಆಟಿಕಳೆಂಜ ವೇಷವನ್ನು ಹಾಕಿಕೊಂಡು ಮನೆ ಮನೆಗೆ ಹೋಗಿ ಕುಣಿಯುತ್ತಾರೆ.

ಸಣ್ಣ ಬಾಲಕನಿಗೆ ತಾಳೆಗರಿಯ ತತ್ರ (ಛತ್ರಿ) ಕೊಟ್ಟು ಕುಣಿಯಲು ಹಿಮ್ಮೇಳದಲ್ಲಿ ‘ತೆಂಬರೆ’-ಯನ್ನು (ಚರ್ಮ ವಾದ್ಯ)ಪುರುಷ ವ್ಯಕ್ತಿ ನುಡಿಸುತಿರುತ್ತಾನೆ.

ಕಳೆಂಜನ ವೇಷ ಭೂಷಣದಲ್ಲಿ ಮುಖ್ಯವಾಗಿ ಸೊಂಟಕ್ಕೆ ತೆಂಗಿನ ತಿರಿ, ಕಾಲಿಗೆ ಗಗ್ಗರ, ಅಥವಾ ಕೈಗೆ-ಮೈಗೆ ಬಣ್ಣ, ಮುಖ್ಯವಾಗಿ ಗಡ್ಡ ಮತ್ತು ಮೀಸೆ, ಅಡಿಕೆ ಹಾಳೆಯಿಂದ ಮಾಡಿದ ಮತ್ತು ಕಿಸಗಾರ ಹೂವಿನಿಂದ ಸಿಂಗರಿಸಿದ ಟೊಪ್ಪಿಗೆ ಇವುಗಳು ಆಟಿಕಳೆಂಜನ ವೇಷಗಳು.

ಆಟಿಕಳೆಂಜ ಕುಣಿತದ ಉದ್ದೇಶ:

ಮನುಷ್ಯನಿಗಾಗಲಿ, ಪ್ರಾಣಿ ಪಶುಗಳಿಗಾಗಲಿ ಬಂದ ಮಾರಿಯನ್ನು ಅಥವಾ ರೋಗವನ್ನು ಓಡಿಸುವುದು ಆಟಿಕಳೆಂಜನ ಕಾರ್ಯ ಎಂಬುದಾಗಿ ತುಳು ಪಾಡ್ದನದಿಂದ ತಿಳಿದು ಬರುವುದು.

ತುಳುವಿನಲ್ಲಿ ಆಷಾಡ ಆರಂಭವಾಗುವುದು ಎಂದರೆ ಮಳೆಗಾಲದ ಆರಂಭವೆಂದರ್ಥ, ಕೆಲವೊಮ್ಮೆ ಮಳೆ ಬೀಳದಿದ್ದರೆ ಬಿಸಿ ಹೆಚ್ಚಾಗಿ ಕೆರೆ-ಕುಂಟೆಗಳು ಬತ್ತಲಾರಂಭಿಸಿ ಜನ ನೀರಿಗಾಗಿ ಪರಿತಪಿಸುವರು, ಸಹಜವಾಗಿ ರೋಗ ರುಜಿನ ಹುಟ್ಟಿಕೊಳ್ಳುವುದು.

ಮಳೆಗಾಲ ಆರಂಭ ಹಾಗೂ ಬೇಸಿಗೆಯ ಕೊನೆಯ ಈ ಕಾಲವು ಸಂಕ್ರಮಣದ ಸ್ಥಿತಿಯನ್ನು ತಂದೊಡ್ಡುತ್ತವೆ.

ಆಟಿ ಅಥವಾ ಆಷಾಡ ತಿಂಗಳಲ್ಲಿ ಬಿಸಿಲು ಕಾದರೆ ಆನೆಯ ಬೆನ್ನೂ ಬಿರಿಯುವುದೆಂಬುದಾಗಿ ತುಳುನಲ್ಲಿ ಗಾದೆಯಿದೆ (ಆಟಿದ ದೊಂಬು ಆನೆತ ಬೆರಿ ಪುಡಪು) ಹೀಗಾಗಿ ಆಟಿಕಳೆಂಜ ಬಂದರೆ ರೋಗ ರುಜಿನಗಳನ್ನು ನಿವಾರಣೆ ಮಾಡುತ್ತಾನೆ ಎನ್ನುವ ನಂಬಿಕೆ ಜನರಲ್ಲಿ ಇದೆ.

ಹೀಗಾಗಿ ಆಟಿಕಳಂಜನಿಗೆ ತುಳುನಾಡಿನಲ್ಲಿ ಮಹತ್ವದ ಸ್ಥಾನವಿದೆ.

ಪದ್ದತಿಯನ್ನು ಉಳಿಸುವುದೇ ಮೂಲ ಉದ್ದೇಶ:

ವಿಟ್ಲ ಸಮೀಪದ ಮಂಗಲಪದವು ಸುರುಳಿಮೂಲೆ ನಿವಾಸಿ ಸೋಮಪ್ಪ ಸುರುಳಿಮೂಲೆ ಅವರ ಈ ಆಟಿ ಕಳೆಂಜದ ಪದ್ದತಿಯನ್ನು ಉಳಿಸಿಕೊಂಡು ಬಂದಿದ್ದಾರೆ.

ಕೆಲಿಂಜ, ಒಕ್ಕೆತ್ತೂರು ಹಾಗೂ ವೀರಕಂಭ ಈ ಮೂರುಗ್ರಾಮಗಳ ಪ್ರತಿ ಹಿಂದು ಧರ್ಮದ ಮನೆಗಳಿಗೆ ಬೇಟಿ ನೀಡುತ್ತೇವೆ ಎಂದು ಅವರು ತಿಳಿಸಿದರು.

ಆಟಿ ಕಳೆಂಜ ಮನೆಗೆ ಬಂದಾಗ ಪ್ರತಿಯೊಬ್ಬರು ಸಂತೋಷದಿಂದ ಹಳೆಯ ಪದ್ದತಿಯಂತೆ ಆಚರಣೆ ಮಾಡುತ್ತಾರೆ ಎನ್ನುವ ಮಾತನ್ನು ಅವರು ಹೇಳುತ್ತಾರೆ.

ಇವರ ಮಗ ತಿಲಕ್ ರಾಜ್ ಆಟಿ ಕಳೆಂಜ ವೇಷವನ್ನು ಹಾಕಿರುವುದಾಗಿ ತಿಳಿಸಿದ ಅವರು, ಈತ ಡಿಪ್ಲೊಮಾ ವನ್ನು ಪ್ರಥಮ ಶ್ರೇಣಿಯಲ್ಲಿ ಮುಗಿಸಿದ್ದಾನೆ, ಮುಂದೆ ಮತ್ತೆ ವಿದ್ಯಾಭ್ಯಾಸ ಮುಂದುವರಿಸುತ್ತಾನೆ, ಜೊತೆಗೆ ನಮ್ಮ ಹಳೇಯ ಪದ್ದತಿ,ಸಂಪ್ರದಾಯ, ಆಚರಣೆಯನ್ನು ಉಳಿಸಿಕೊಂಡು ಬರುತ್ತೇವೆ ಎಂದು ಅತ್ಯಂತ ಖುಷಿಯಿಂದ ಹೇಳಿದರು.

ನನಗೆ ನನ್ನ ತಂದೆ ಕಲಿಸಿದ್ದಾರೆ ಹಾಗೆ ಮುಂದಿನ ದಿನಗಳಲ್ಲಿ ಮಕ್ಕಳು ಉಳಿಸಿಕೊಂಡು ಹೋಗಬೇಕು ಎಂಬುದೇ ನನ್ನ ಆಸೆ.

ಆಟಿ ಕಳೆಂಜ ಸಂಪ್ರದಾಯ ಮತ್ತು ಅಚರಣೆ ಮುಂದಿನ ಪೀಳಿಗೆಗೆ ತಿಳಿಸುವ ಮತ್ತು ಉಳಿಸುವ ಕಾರ್ಯವನ್ನು ಇವರು ಮಾಡುತ್ತಿರುವುದು ಹೆಮ್ಮೆಯ ವಿಷಯ.

BANTWAL

Bantwala: ಕಾರುಗಳ ನಡುವೆ ಸರಣಿ ಅಪಘಾತ..!

Published

on

ಪಾಣೆಮಂಗಳೂರು ಸೇತುವೆಯಲ್ಲಿ 2 ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸುಮಾರು ಒಂದು ತಾಸಿಗಿಂತಲೂ ಅಧಿಕವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಂದರೆಯಾದ ಘಟನೆ ನಡೆದಿದೆ.

ಬಂಟ್ವಾಳ: ಪಾಣೆಮಂಗಳೂರು ಸೇತುವೆಯಲ್ಲಿ 2 ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸುಮಾರು ಒಂದು ತಾಸಿಗಿಂತಲೂ ಅಧಿಕವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಂದರೆಯಾದ ಘಟನೆ ನಡೆದಿದೆ.

ಪಾಣೆಮಂಗಳೂರು ಸೇತುವೆಯಲ್ಲಿ ಎರಡು ಕಾರುಗಳು ಡಿಕ್ಕಿಯಾಗಿದ್ದು, ಇದರ ಹಿಂಬದಿಯಿಂದ ಬಂದ ಮತ್ತೆ ಎರಡು ವಾಹನಗಳು ಢಿಕ್ಕಿ ಯಾಗಿದೆ.

ಡಿಕ್ಕಿಯ ರಭಸಕ್ಕೆ ಎರಡು ಕಾರುಗಳು ಜಖಂಗೊಂಡಿದೆ.

ಆದರೆ ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯವಾಗದೆ ಪಾರಾಗಿದ್ದಾರೆ.

ಇದರ ಜೊತೆಗೆ ಸೇತುವೆ ಸಮೀಪ ನೆಹರು ನಗರ ಎಂಬಲ್ಲಿ ಲಾರಿಯೊಂದರ ಟಯರ್ ಕೆಟ್ಟು ಹೋಗಿ ನಿಂತಿತ್ತು.

ಹೀಗಾಗಿ ತಾಸುಗಟ್ಟಲೆ ವಾಹನಗಳು ಸಾಲಾಗಿ ನಿಂತಿದ್ದವು.

ಸೇತುವೆಯಲ್ಲಿ ಅಪಘಾತ ಸಂಭವಿಸಿದ ಪರಿಣಾಮ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು.

ವಾಹನಗಳನ್ನು ಕ್ಲಿಯರ್ ಮಾಡಲು ಟ್ರಾಫಿಕ್ ಪೋಲೀಸರು ಹರಸಹಾಸ ಪಟ್ಟರು.

ಅಪಘಾತ ನಡೆದು ಕೆಲವೇ ಹೊತ್ತಿನಲ್ಲಿ ವಾಹನಗಳ ಸಾಲು ಸುಮಾರು ಉದ್ದಕ್ಕೆ ತಲುಪಿತ್ತು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾದ ಹಿನ್ನೆಲೆಯಲ್ಲಿ ವಾಹನ ಸವಾರರು ಪಾಣೆಮಂಗಳೂರು ‌ಪೇಟೆ ಮೂಲಕ ಹಳೆ ಸೇತುವೆ ಮೂಲಕ ಸಂಚಾರಕ್ಕೆ ಪ್ರಯತ್ನ ಮಾಡಿದರಾದರೂ ಅಲ್ಲಿಯೂ ಟ್ರಾಫಿಕ್ ಸಮಸ್ಯೆ ಉಂಟಾಯಿತು.

ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ವಾಹನಗಳು ಹೋಗಿ ಸಾಲು ಸಾಲಾಗಿ ನಿಂತಿರುವ ಪೋಟೋ ವೈರಲ್ ಆಗಿದೆ.

ರಾತ್ರಿ ಹೊತ್ತು ವಾಹನಗಳ ಲೈಟ್ ಮತ್ತು ನೇತ್ರಾವತಿ ನದಿಯ ನೀರು ಕಂಗೊಳಿಸುವ ಚಿತ್ರವನ್ನು ಪಾಣೆಮಂಗಳೂರು ಮಂಗಳೂರು ಹೊಸ ಸೇತುವೆಯಿಂದ ಕ್ಲಿಕ್ ಮಾಡಿದ್ದಾರೆ.

ಪೊಲೀಸ್ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನ ಮಾಡಿದರು.

Continue Reading

BANTWAL

Bantwala: ಇಲೆಕ್ಟ್ರಾನಿಕ್ ಅಂಗಡಿಗೆ ಬೆಂಕಿ- ಕರಕಲಾದ ಲಕ್ಷಾಂತರ ರೂ. ವಸ್ತುಗಳು..!

Published

on

ಆಕಸ್ಮಿಕವಾಗಿ ಬೆಂಕಿ ತಗುಲಿ ಇಲೆಕ್ಟ್ರಾನಿಕ್ ಅಂಗಡಿಯೊಂದು ಬಾಗಶ: ಬೆಂಕಿಗಾಹುತಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮಂಗಳವಾರ ಮಧ್ಯಾಹ್ನದ ವೇಳೆ ನಡೆದಿದೆ.

ಬಂಟ್ವಾಳ: ಆಕಸ್ಮಿಕವಾಗಿ ಬೆಂಕಿ ತಗುಲಿ ಇಲೆಕ್ಟ್ರಾನಿಕ್ ಅಂಗಡಿಯೊಂದು ಬಾಗಶ: ಬೆಂಕಿಗಾಹುತಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮಂಗಳವಾರ ಮಧ್ಯಾಹ್ನದ ವೇಳೆ ನಡೆದಿದೆ.

ಬಂಟ್ವಾಳ ಪೇಟೆಯ ಬಡ್ಡಕಟ್ಟೆಯಲ್ಲಿರುವ ಪುರಸಭಾ ವಾಣಿಜ್ಯ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಹಲವು ಸೊತ್ತುಗಳು ಸುಟ್ಟುಹೋಗಿವೆ.

ಬಳಿಕ ಅಗ್ನಿಶಾಮಕ ಸಿಬಂದಿ ಸ್ಥಳೀಯರೊಂದಿಗೆ ಸೇರಿ ಬೆಂಕಿ ನಂದಿಸುವಲ್ಲಿ ಸಫಲರಾದರು.

ಅಂಗಡಿಯಲ್ಲಿದ್ದ ಸುಮಾರು ಲಕ್ಷಾಂತರ ರೂಪಾಯಿ ಬೆಲೆಬಾಳುವ ಟಿ.ವಿ.ಸಹಿತ ಅನೇಕ ಗೃಹೋಪಯೋಗಿ ಉಪಕರಣಗಳನ್ನು ಸುಟ್ಟು ಹೋಗಿದೆ ಎಂದು ಹೇಳಲಾಗಿದೆ.

ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

BANTWAL

ಬಂಟ್ವಾಳದಲ್ಲಿ ಹಗಲಿನ ವೇಳೆ ಮನೆಗೆ ನುಗ್ಗಿ ಕಳವು ಪ್ರಕರಣ: ಲಕ್ಷಾಂತರ ಮೌಲ್ಯದ ಸೊತ್ತು ವಶ-ಇಬ್ಬರ ಬಂಧನ

Published

on

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಠಾಣೆಯ ಪೊಲೀಸರು  ನಿನ್ನೆ ಭರ್ಜರಿ ಬೇಟೆಯಾಡಿದ್ದಾರೆ.

ಇಲ್ಲಿನ ಠಾಣಾ ವ್ಯಾಪ್ತಿಯಲ್ಲಿ ಹಗಲಿನ ವೇಳೆ ಮನೆಗಳಿಗೆ ನುಗ್ಗಿ ಕಳವು ಮಾಡುತ್ತಿದ್ದ ಪ್ರಕರಣವನ್ನು ಬೇಧಿಸಿದ್ದು, ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು  ಮಂಗಳೂರು  ಬೆಂಗ್ರೆ ಭದ್ರಪಳ್ಳಿ ನಿವಾಸಿ  ಫರಾಜ್ (27)   ಮತ್ತು  ಸುರತ್ಕಲ್ ತಾಲೂಕು  ಚೊಕ್ಕಬೆಟ್ಟು ಕೃಷ್ಣಾಪುರ 4ನೇ ಬ್ಲಾಕ್ ನ  ನಿವಾಸಿಯಾಗಿರುವ  ತೌಸಿಫ್ ಅಹಮ್ಮದ್ (34)  ಬಂಧಿತ ಆರೋಪಿಗಳು.

ಬಂಧಿತರಿಂದ 12,23,000 ಮೌಲ್ಯದ 223ಗ್ರಾಂ ಚಿನ್ನಾಭರಣ ಮತ್ತು ರೂ 3,000 ಮೌಲ್ಯದ ಬೆಳ್ಳಿ ವಸ್ತುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸುಮಾರು 3,30,000ಮೌಲ್ಯದ ಮಹೀಂದ್ರ ಕೈಲೋ ಕಾರು ಮತ್ತು ಮೋಟಾರ್ ಸೈಕಲ್ ಸೇರಿದಂತೆ ಒಟ್ಟು ರೂ 15,56,000 ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.

Continue Reading

LATEST NEWS

Trending