Connect with us

BANTWAL

Bantwala: ಯುವತಿ ಸ್ನಾನ ಮಾಡುತ್ತಿದ್ದ ವಿಡಿಯೋ ಚಿತ್ರೀಕರಣ- ಆರೋಪಿ ಅರೆಸ್ಟ್..!

Published

on

ಯುವತಿಯೋರ್ವರು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುತ್ತಿರುವಾಗ ಅಪರಿಚಿತ ವ್ಯಕ್ತಿ ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ: ಯುವತಿಯೋರ್ವರು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುತ್ತಿರುವಾಗ ಅಪರಿಚಿತ ವ್ಯಕ್ತಿ ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಜಕ್ರಿಬೆಟ್ಟು ಎಂಬಲ್ಲಿ ಹಂಚಿನ ಮನೆಯೊಳಗೆ ಬಚ್ಚಲು ಕೋಣೆಯಲ್ಲಿ ರಾತ್ರಿ ವೇಳೆ ಯುವತಿಯೋರ್ವರು ಸ್ನಾನ ಮಾಡುತ್ತಿರುವ ವೇಳೆ ಅಪರಿಚಿತ ವ್ಯಕ್ತಿಯೋರ್ವ ಗೋಡೆಯ ಸೆರೆಯ ಮಧ್ಯೆ ಮೋಬೈಲ್ ನಲ್ಲಿ ವೀಡಿಯೋ ಮಾಡುತ್ತಿದ್ದ.

ಇದನ್ನು ಕಂಡ ಯುವತಿ ಜೋರಾಗಿ ಬೊಬ್ಬೆ ಹಾಕಿದ್ದರು ಆಗ ಅಪರಿಚಿತ ವ್ಯಕ್ತಿಯು ಅಲ್ಲಿಂದ ಓಡಿಹೋಗಿದ್ದಾನೆ.

ಯುವತಿಯ ಬೊಬ್ಬೆ ಕೇಳಿ ಇವಳ ತಾಯಿ ಹಾಗೂ ನೆರೆಮನೆಯವರು ಓಡಿ ಬಂದು ವಿಷಯ ಕೇಳಿ ಓಡಿಹೋದ ವ್ಯಕ್ತಿಯ ಹುಡುಕಾಟ ನಡೆಸಿದ್ದಾರೆ.

ಆದರೆ ಆತನ ಪತ್ತೆಯಾಗಿರಲಿಲ್ಲ.

ಘಟನೆಯ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆರೋಪಿ ವಶಕ್ಕೆ:

ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುತ್ತಿದ್ದ ಯುವತಿಯ ವಿಡಿಯೋ ಚಿತ್ರೀಕರಣ ಮಾಡಿದ ಆರೋಪಿಯನ್ನು ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ವಶಕ್ಕೆ ಪಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅಗ್ರಾರ್ ನಿವಾಸಿ ಜಗದೀಪ್ ಆಚಾರ್ಯ ಎಂಬವನನ್ನು ಪೋಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆ ಕುರಿತು ಪ್ರಕರಣ ದಾಖಲಾದ ಬೆನ್ನಲ್ಲೆ ಪೋಲೀಸರು ಕಾರ್ಯಚರಣೆ ಪ್ರಾರಂಭಿಸಿದ್ದರು.

ಸಂಶಯದ ಮೇಲೆ ವಶಕ್ಕೆಪಡೆದುಕೊಂಡು ವಿಚಾರಣೆ ನಡೆಸಿದಾಗ ಈತ ಸತ್ಯ ಬಾಯಿಬಿಟ್ಟಿದ್ದಾನೆ ಎಂಬುದು ತಿಳಿದು ಬಂದಿದೆ.

ಈತನ ಈ ಕೆಟ್ಟ ಚಾಳಿಯ ಬಗ್ಗೆ ಪೋಲೀಸರು ತನಿಖೆ ನಡೆಸುತ್ತಿದ್ದು, ಈತನಿಂದ ಇಂತಹ ಕೃತ್ಯಗಳು ಬೇರೆ ಎಲ್ಲಿಯಾದರೂ ಆಗಿದೆಯಾ ಅನ್ನುವ ತನಿಖೆಗಳು ನಡೆಯುತ್ತಿದೆ ಎನ್ನಲಾಗಿದೆ.

ಸದ್ಯ ಯಾವುದೇ ಸ್ಪಷ್ಟವಾದ ಮಾಹಿತಿ ತಿಳಿದು ಬಂದಿಲ್ಲ.

ಪೋಲೀಸ್ ತನಿಖೆಯ ಬಳಿಕ ಈತನ ಸಂಪೂರ್ಣ ಮಾಹಿತಿ ಸಿಗಲಿದೆ.

BANTWAL

ಬಂಟ್ವಾಳ: ಇಡಿ ಅಧಿಕಾರಿಗಳ ಸೋಗಿನಲ್ಲಿ ಹಣ ದೋಚಿದ ಮನೆಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ

Published

on

ಬಂಟ್ವಾಳ: ಇಡಿ ಅಧಿಕಾರಿಗಳ ಸೋಗಿನಲ್ಲಿ ಹಣ ದರೋಡೆಯಾಗಿರುವ ಬಂಟ್ವಾಳ ತಾಲೂಕಿನ ಬೋಳಂತೂರು ನಾರ್ಶದ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಅವರ ಮನೆಗೆ ಸ್ಪೀಕರ್ ಯು.ಟಿ. ಖಾದರ್, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ತಂಡ ಬುಧವಾರ ಬೆಳಗ್ಗೆ ಭೇಟಿ ನೀಡಿ ತನಿಖೆಯ ಪ್ರಗತಿ ಪರಿಶೀಲನೆ ಮತ್ತು ಕಾರ್ಯವಿಧಾನದ ಕುರಿತು ಮನೆಯವರ ಜೊತೆಗೆ ಗೌಪ್ಯ ಸಮಾಲೋಚನೆ ನಡೆಸಿದರು.

ಇದೇ ವೇಳೆ ಮಾತನಾಡಿದ ಸ್ಪೀಕರ್ ಯು.ಟಿ.ಖಾದರ್ ಅವರು, ತನಿಖೆ ಇನ್ನಷ್ಟು ತೀವ್ರಗೊಳಿಸಲು ಪೊಲೀಸ್ ಇಲಾಖೆಯು ಆಧುನಿಕ ತಂತ್ರಜ್ಞಾನದೊಂದಿಗೆ ಉನ್ನತ ಮಟ್ಟದ ತನಿಖೆ ನಡೆಸುತ್ತಿದೆ. ಇದಕ್ಕೆ ಊರವರ ಮತ್ತು ಮನೆಯವರ ಸಹಕಾರ ಅಗತ್ಯ. ಈಗಾಗಲೇ ಡಿವೈಎಸ್ಪಿ ನೇತೃತ್ವದ 4 ತಂಡಗಳನ್ನು ರಚಿಸಲಾಗಿದೆ. ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಈ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಶೀಘ್ರವೇ ದರೋಡೆಕೋರರ ಪತ್ತೆ ಹಚ್ಚುವಲ್ಲಿ ಕ್ರಮಕೈಗೊಳ್ಳಲಾಗುವುದು ಎಂದರು.

ಇದಕ್ಕೂ ಮುನ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್, ಡಿವೈಎಸ್ಪಿ ವಿಜಯ ಪ್ರಸಾದ್ ಜೊತೆಗೆ ದರೋಡೆಗೊಳಗಾದ ಮನೆಯ ಮಾಲಕ ಸುಲೈಮಾನ್ ಹಾಜಿ ಹಾಗೂ ಪುತ್ರ ಇಕ್ಬಾಲ್ ಜೊತೆಗೆ ಗೌಪ್ಯ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ, ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ಎಚ್.ಇ. ನಾಗರಾಜ್, ಸಬ್ ಇನ್ಸ್ ಪೆಕ್ಟರ್ ವಿದ್ಯಾ ಮೊದಲಾದವರು ಉಪಸ್ಥಿತರಿದ್ದರು.

Continue Reading

BANTWAL

ಬಂಟ್ವಾಳ: ನೇತ್ರಾವತಿ ನದಿಯ ದೋಣಿಯ ಅಂಬಿಗ ನಾಪತ್ತೆ

Published

on

ಬಂಟ್ವಾಳ: ನೇತ್ರಾವತಿ ನದಿಯ ದೋಣಿಯ ಅಂಬಿಗ ಬರಿಮಾರು ಕಡವಿನಬಾಗಿಲು ನಿವಾಸಿ ದಿವಾಕರ ನಾಪತ್ತೆಯಾಗಿದ್ದಾರೆ.

ದಿವಾಕರ ಅವರು ಸುಮಾರು 30 ವರ್ಷಗಳಿಂದ ಅಂಬಿಗನಾಗಿ ಕೆಲಸ ಮಾಡುತ್ತಿದ್ದು, ಇವರು ನುರಿತ ಈಜುಗಾರರಾಗಿದ್ದರು. ಬರಿಮಾರು-ಸರಪಾಡಿಗೆ ದೋಣಿ ಮೂಲಕ ಸಂಪರ್ಕ ಸೇತುವೆಯಾಗಿ ಇವರು ಪ್ರತಿದಿನ ಕೆಲಸ ಮಾಡುತ್ತಿದ್ದರು.

ಜ.3 ರ ಶುಕ್ರವಾರ ಬೆಳಿಗ್ಗೆ ಸುಮಾರು 9 ಗಂಟೆಗೆ ಬರಿಮಾರಿನಿಂದ ಸರಪಾಡಿಗೆ ಹೋಗಿ ಅಲ್ಲಿನ ಅಂಗಡಿಯೊಂದರಿಂದ ಮನೆಗೆ ತರಕಾರಿ ಪಡೆದು, ವಾಪಸ್ ತೆರಳಿದ್ದು, 11 ಗಂಟೆ ವೇಳೆ ದೋಣಿ ಬರಿಮಾರು ಕಡವಿನ ಬಾಗಿಲಿನಲ್ಲಿ ತೇಲಾಡುವ ಸ್ಥಿತಿಯಲ್ಲಿ ಕಂಡು ಬಂದಿದೆ. ದಿವಾಕರ ಅವರು ಕಾಣಿಸಿದ ಕಾರಣ ಅವರ ಪತ್ನಿ ಸರಪಾಡಿಯ ಅಂಗಡಿಯ ಮೂಲಕ ಮಾಲೀಕರಿಗೆ ಫೋನ್ ಮಾಡಿ ವಿಚಾರಿಸಿದ್ದರು.

ಬರಿಮಾರು ಕಡವಿನ ಬಾಗಿಲಿನಲ್ಲಿ ಹಸಿಹುಲ್ಲು ಕಟ್ಟು, ಮೊಬೈಲ್, ಚಪ್ಪಲಿ ಕಂಡು ಬಂದಿದೆ. ದಿವಾಕರ ಅವರಿಗೆ ಮೂರ್ಛೆ ರೋಗವಿದ್ದು, ಈ ಹಿಂದೆ ಕೂಡಾ ನದಿ ಬದಿಯಲ್ಲಿ ಬಿದ್ದ ಘಟನೆ ನಡೆದಿತ್ತು. ಇವತ್ತು ಕೂಡಾ ಮೂರ್ಛೆ ರೋಗ ಭಾದಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತದೆ. ಸ್ಥಳೀಯರು ನದಿ ಸುತ್ತಮುತ್ತ ಹುಡುಕಾಟ ನಡೆಸುತ್ತಿದ್ದು, ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.

Continue Reading

BANTWAL

ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಿಂದ ಕಳಚಿ ಬಿದ್ದ ಡೀಸೆಲ್ ಟ್ಯಾಂಕ್

Published

on

ವಿಟ್ಲ: ಇಲ್ಲಿನ ಮಾಣಿ ಸಮೀಪದ ಮಹಾವೀರ ಎಂಬಲ್ಲಿ ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕೆಎಸ್‌ಆರ್ ಟಿಸಿ ಬಸ್ಸಿನ ಡೀಸೆಲ್ ಟ್ಯಾಂಕ್ ಕಳಚಿ ಬಿದ್ದ ಘಟನೆ ಜ.2ರ ಗುರುವಾರದಂದು ನಡೆದಿದೆ.

ಸರಕಾರಿ ಬಸ್ಸೊಂದು ಮಂಗಳೂರಿನಿಂದ ಅರಸೀಕೆರೆಗೆ ಹೋಗುತ್ತಿದ್ದ ಸಂದರ್ಭ ಬಸ್ ನಿಂದ ಡಿಸೇಲ್ ಟ್ಯಾಂಕ್‌ ಹೆದ್ದಾರಿಗೆ ಕಳಚಿ ಬಿದ್ದಿದ್ದು, ತತ್ ಕ್ಷಣ ಬಸ್‌ ಸಂಚಾರ ಸ್ಥಗಿತಗೊಂಡಿದೆ.ಈ ನಡುವೆ ಪ್ರಯಾಣಿಕರಿಗೆ ತೊಂದರೆಯಾಗದಂತೆ ಬದಲಿ ಬಸ್ಸಿನ ಮೂಲಕ ಸಂಚರಿಸಲು ಅನುವು ಮಾಡಿಕೊಡಲಾಯಿತು. ಹೆದ್ದಾರಿ ಅವ್ಯವಸ್ಥೆಯಿಂದಾಗಿ ಈ ಘಟನೆ ಸಂಭವಿಸಿದ ಎಂದು ಸಾರ್ವಜನಿಕರು ದೂರಿದ್ದಾರೆ.

Continue Reading

LATEST NEWS

Trending

Exit mobile version