BANTWAL
ಬಂಟ್ವಾಳ: ಬಡ ಕುಟುಂಬದ ಯವಕನ ಚಿಕಿತ್ಸೆಗೆ ನೆರವಾದ ವಿಶ್ವಹಿಂದೂಪರಿಷದ್ ಭಜರಂಗದಳ
ಕಷ್ಟದಲ್ಲಿ ಜೀವನ ನಡೆಸುತ್ತಿದ್ದ ಬಡ ಕುಟುಂಬದ ಯುವಕನ ಚಿಕಿತ್ಸೆಗೆ ವಿಶ್ವಹಿಂದೂಪರಿಷದ್ ಭಜರಂಗದಳ ಜೈ ಶ್ರೀ ಶಾಖೆ ಕುಂಟಾಲಫಲ್ಕೆ, ಪೆರಿಯಾರು ದೋಟ ಘಟಕ ಬಂಟ್ವಾಳ ಪ್ರಖಂಡ ನೇರವಾದರು.
ಬಂಟ್ವಾಳ: ಕಷ್ಟದಲ್ಲಿ ಜೀವನ ನಡೆಸುತ್ತಿದ್ದ ಬಡ ಕುಟುಂಬದ ಯುವಕನ ಚಿಕಿತ್ಸೆಗೆ ವಿಶ್ವಹಿಂದೂಪರಿಷದ್ ಭಜರಂಗದಳ ಜೈ ಶ್ರೀ ಶಾಖೆ ಕುಂಟಾಲಫಲ್ಕೆ, ಪೆರಿಯಾರು ದೋಟ ಘಟಕ ಬಂಟ್ವಾಳ ಪ್ರಖಂಡ ನೆರವಾದರು.
ಯುವಕನಿಗೆ ಅಕ್ಷಿಡೆಂಟ್ ಆಗಿ ಕೆಲಸಕ್ಕೆ ಹೋಗಲು ಸಾಧ್ಯವಾಗುತ್ತಿರಲಿಲ್ಲ. ಅಲ್ಲದೇ ಈತನ ಬಡ ಕುಟುಂಬ ಆದ ಕಾರಣ ಚಿಕಿತ್ಸೆಗೂ ಹಣದ ಸಮಸ್ಯೆಯಿತ್ತು.
ಇದನ್ನು ತಿಳಿದ ಭಜರಂಗದಳ ಕಾರ್ಯಕರ್ತ ಪ್ರದೀಪ್ ಬಾವಂತಬೆಟ್ಟು ಇವರ ಮನೆಯವರಿಗೆ ಸೇವಾ ಸುರಕ್ಷಾ ಸಂಸ್ಕಾರ ಧ್ಯೇಯ ವಾಕ್ಯದಂತೆ ಭಜರಂಗದಳ ಕಾರ್ಯಕರ್ತರು ಊರಿನ ಕೊಡುಗೈ ದಾನಿಗಳು ಬಿಜೆಪಿ ಸದಸ್ಯರು ಕಾರ್ಯಕರ್ತರು ಒಟ್ಟು ಸೇರಿ ಸುಮಾರು 58,000 ಧನಸಹಾಯ ಒಟ್ಟುಗೂಡಿಸಿ, ಭಜರಂಗದಳ ಪುತ್ತೂರು ಜಿಲ್ಲಾ ಸಹ ಸಂಚಾಲಕರಾದ ಗುರುರಾಜ್ ಬಂಟ್ವಾಳ ಪ್ರಸಾದ್ ಕುಮಾರ್ ರೈ ಸಮ್ಮುಖದಲ್ಲಿ ಪ್ರದೀಪ್ ಬಾವಂತಬೆಟ್ಟು ಮನೆಯವರಿಗೆ ಹಸ್ತಾಂತರ ಮಾಡಿದ್ದಾರೆ.
ಭಜರಂಗದಳ ಪುತ್ತೂರು ಜಿಲ್ಲಾ ಸಂಚಾಲಕರಾದ ಭರತ್ ಕುಮ್ದೇಲ್ ಶಿವಪ್ರಸಾದ್ ತುಂಬೆ ಸಂತೋಷ್ ಸರಪಾಡಿ ಕಿರಣ್ ಕುಮ್ದೇಲ್ ಪ್ರಸಾದ್ ಬೆಂಜನಪದವು ಪ್ರವೀಣ್ ಕುಂಟಾಲಫಲ್ಕೆ ಭಜರಂಗದಳ ಸದಸ್ಯರು ಕಾರ್ಯಕರ್ತರು ಬಿಜೆಪಿ ಯ ಸದಸ್ಯರು ಕಾರ್ಯಕರ್ತರು ಉಪಸ್ಥಿತರಿದ್ದರು.
BANTWAL
ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ
ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.
ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.
ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.
ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
BANTWAL
ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು
ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.
ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು
ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.