ಚಲಿಸುತ್ತಿದ್ದ ಬಸ್ಸಿನಲ್ಲಿ ವ್ಯಕ್ತಿಯೊಬ್ಬ ಮುಂಭಾಗದಲ್ಲಿ ಕುಳಿತ್ತಿದ್ದ ಮಹಿಳೆಯೊಬ್ಬರ ಜಡೆ ಸವರಿ , ತೀಟೆ ತೀರಿಸಿದ್ದು ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಬಂಟ್ವಾಳ : ಚಲಿಸುತ್ತಿದ್ದ ಬಸ್ಸಿನಲ್ಲಿ ವ್ಯಕ್ತಿಯೊಬ್ಬ ಮುಂಭಾಗದಲ್ಲಿ ಕುಳಿತ್ತಿದ್ದ ಮಹಿಳೆಯೊಬ್ಬರ ಜಡೆ ಸವರಿ , ತೀಟೆ ತೀರಿಸಿದ್ದು ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಹಿಂದು ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಘಟಕ ಬಂಟ್ವಾಳ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಆರೋಪಿಯನ್ನು ಬಂಧಿಸಿ ಕಾನೂನುಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.
ಧರ್ಮಸ್ಥಳ ಮತ್ತು ಮಂಗಳೂರು ನಡುವೆ ಸಂಚರಿಸುವ ಸರಕಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ನಡು ಹರೆಯದ ವ್ಯಕ್ತಿಯೊಬ್ಬ ಈ ಹೀನ ಕೃತ್ಯ ಎಸಗಿದ್ದಾನೆ.
ಹಿಂಬದಿ ಸೀಟಿನಲ್ಲಿ ಕುಳಿತುಕೊಂಡ ಅಪರಿಚಿತ ವ್ಯಕ್ತಿಯೋರ್ವ ಮಹಿಳೆಯ ಜಡೆಯನ್ನು ಸವರಿದ ವಿಡಿಯೋವನ್ನು ಬಸ್ಸಿನಲ್ಲಿದ್ದ ಸಹಪ್ರಯಾಣಿಕರು ತಮ್ಮ ಮೊಬೈಲ್ ಮೂಲಕ ವಿಡಿಯೋ ಮಾಡಿದ್ದಾರೆ.
ಇದೀಗ ಬಂಟ್ವಾಳ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಈ ಬಗ್ಗೆ ಬಂಟ್ವಾಳ ಠಾಣೆಗೆ ದೂರು ನೀಡಿದ್ದಾರೆ.
ಇನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಘಟನೆಯ ಕುರಿತು ಆರೋಪಿ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಬಂಟ್ವಾಳ ಡಿ.ವೈ.ಎಸ್.ಪಿ.ಅವರಿಗೆ ಸೂಚನೆ ನೀಡಿದ್ದಾರೆ.