Connect with us

    DAKSHINA KANNADA

    ಸಾರಾ ಅಬೂಬಕ್ಕರ್‌ಗೆ ‘ಬರಗೂರು ಪ್ರಶಸ್ತಿ’ ಪ್ರಕಟ: ಮಾ.29ರಂದು ಪ್ರದಾನ

    Published

    on

    ಬೆಂಗಳೂರು: ಕರಾವಳಿಯ ಅತ್ಯಂತ ಪ್ರಸಿದ್ಧ ಹಿರಿಯ ಕನ್ನಡ ಲೇಖಕಿ ಸಾರಾ ಅಬೂಬಕ್ಕರ್ (85) ಅವರಿಗೆ ನಾಡೋಜ ಬರಗೂರು ಪ್ರತಿಷ್ಠಾನ ಕೊಡಮಾಡುವ ಬರಗೂರು ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ.


    ಪ್ರಶಸ್ತಿಯನ್ನು ಸಾರಾ ಅಬೂಬಕ್ಕರ್ ಅವರ ಮಂಗಳೂರಿನ ಹ್ಯಾಟ್‌ಹಿಲ್‌ನಲ್ಲಿರುವ ನಿವಾಸದಲ್ಲೇ ಮಾರ್ಚ್ 29ರಂದು ಮಧ್ಯಾಹ್ನ 12 ಗಂಟೆಗೆ ಪ್ರದಾನ ಮಾಡಲಾಗುವುದು ಎಂದು ನಾಡೋಜ ಬರಗೂರು ಪ್ರತಿಷ್ಠಾನ ಪ್ರಕಟಿಸಿದೆ. ಪ್ರಶಸ್ತಿಯು 25 ಸಾವಿರ ರೂಪಾಯಿ ನಗದು ಮತ್ತು ಚಿನ್ನದ ಪದಕ ಒಳಗೊಂಡಿದೆ.

    ಮಲೆಯಾಳಂ ಸಾಹಿತಿ ವೈಕಂ ಮಹಮದ್ ಬಷೀರ್‌ ಅವರ ಕಾದಂಬರಿಗಳ ಓದಿನ ಪ್ರಭಾವದಿಂದ ಬರೆಯಬೇಕೆಂಬ ಅಂತರಾಳದ ಒತ್ತಡದಿಂದ ಸಾಮಾಜಿಕ ಸಮಸ್ಯೆಗಳ ಮಥನದಿಂದಾಗಿ ಸಾರಾ ಅಬೂಬಕ್ಕರ್ ಬರೆಯಲು ಪ್ರಾರಂಭಿಸಿದರು.

    ಅವರು ಬರೆದ ಮೊದಲ ಕಾದಂಬರಿ ‘ಚಂದ್ರಗಿರಿಯ ತೀರದಲ್ಲಿ’ ಲಂಕೇಶ್ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿತು. ಈ ಕಥೆಯಲ್ಲಿ ಹೊರಹೊಮ್ಮಿದ ವಾಸ್ತವಿಕ ಬದುಕಿನ ಚಿತ್ರಣ ಮತ್ತು ಧರ್ಮದ ಕಟ್ಟುಪಾಡುಗಳಲ್ಲಿ ಶೋಷಿತಗೊಂಡ ಮಹಿಳೆಯರ ದ್ವನಿಗಳು ಅಸಂಖ್ಯಾತ ಓದುಗರ ಹೃದಯವನ್ನು ತಟ್ಟಿ ಈ ಕಾದಂಬರಿ ಎಲ್ಲೆಡೆಯು ಮೆಚ್ಚುಗೆ ಪಡೆಯಿತು.

    ವಜ್ರಗಳು, ಕದನವಿರಾಮ, ಸುಳಿಯಲ್ಲಿ ಸಿಕ್ಕವರು, ಪ್ರವಾಹ-ಸುಳಿ (ಸುಳಿಯಲ್ಲಿ ಸಿಕ್ಕವರು ಕೃತಿಯ ಭಾಗ-೨), ತಳ ಒಡೆದ ದೋಣಿ,ಪಂಜರ, ಕಾಣಿಕೆ, ಚಪ್ಪಲಿಗಳು, ಪಯಣ ಮತ್ತು ಇತರ ಕಥೆಗಳು, ಅರ್ಧರಾತ್ರಿಯಲ್ಲಿ ಹುಟ್ಟಿದ ಕೂಸು, ಖೆಡ್ಡ , ಸುಮಯ್ಯಾ (ಜನಪದ ಆಧರಿಸಿದ ಕಥೆಗಳು), ಕಮರಿದ ಕನಸು.ತೇಲಾಡುವ ಮೋಡಗಳು., ಹೀಗೂ ಒಂದು ಬದುಕು, ಮನೋಮಿ,ಐಷಾರಾಮದ ಆಳದಲ್ಲಿ ಪ್ರವಾಸಕಥನ ಇವು ಸಾರಾ ಅಬೂಬಕ್ಕರ್ ಅವರ ಇತರ ಪ್ರಮುಖ ಕೃತಿಗಳು.

    ಆ ನಂತರದಲ್ಲಿ ಸಾ.ರಾ.ಅಬೂಬಕ್ಕರ್ ಅವರು ಬರೆದ ಇತರ ಹಲವಾರು ಕಾದಂಬರಿಗಳು , ಸಣ್ಣ ಕತೆಗಳನ್ನು ಪ್ರಕಟಿಸಿದ್ದಾರೆ.
    ಇವರ ಅಗರ್ಭ ಸಾಹಿತ್ಯದ ಸಾಧನೆಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಬಿ. ಸರೋಜಾದೇವಿ ಪ್ರಶಸ್ತಿ, ವರ್ಧಮಾನ ಪ್ರಶಸ್ತಿ, ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ ಸಂದೇಶ ಪ್ರಶಸ್ತಿ.ಅನುಪಮ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ., ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ. ಮಾಸ್ತಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ ಸಹಿತ ಹಲವಾರು ಪ್ರಶಸ್ತಿಗಳನ್ನು ಸಾರಾ ಅಬೂಬಕ್ಕರ್ ಪಡೆದುಕೊಂಡಿದ್ದಾರೆ.

    ತಮ್ಮಂತೆಯೇ ಅನೇಕ ಮಹಿಳೆಯರು ಬರವಣಿಗೆಯಲ್ಲಿ ತೊಡಗಿಸಿಕೊಳ್ಳಬೇಕು ಎಂಬುದು ಸಾರಾ ಆಶಯ. 1987ರಲ್ಲಿ ಸಾರಾ ಅಬೂಬಕ್ಕರ್ ಮತ್ತು ಅವರ ವಾರಗೆಯ ಲೇಖಕಿಯರಾದ ಲೀಲಾವತಿ ಎಸ್. ರಾವ್, ಚಂದ್ರಕಲಾ ನಂದಾವರ, ಮನೋರಮಾ ಎಂ., ಪದ್ಮಾ ಶೆಣೈ ಸೇರಿ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘವನ್ನು ಸ್ಥಾಪಿಸಿದರು.

    ಬರಗೂರು ಪ್ರತಿಷ್ಠಾನದ ಅಧ್ಯಕ್ಷ ಮುರಳೀಧರ ಹಾಲಪ್ಪ, ಪ್ರತಿಷ್ಠಾನದ ಕಾರ್ಯದರ್ಶಿ ಡಾ. ಸುಂದರರಾಜ ಅರಸು ಪ್ರಶಸ್ತಿ ಪ್ರದಾನ ಮಾಡುವರು. ದಕ್ಷಿಣ ಕನ್ನಡ ಜಿಲ್ಲಾಡಳಿತದ ಪ್ರತಿನಿಧಿ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿರುವರು.

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending