Monday, August 15, 2022

ಭಾರತ್‌ ಬಂದ್‌: ಬಂಟ್ವಾಳದಲ್ಲಿ ಪ್ರತಿಭಟನೆಗೆ ಮಾಜಿ ಸಚಿವ ರಮಾನಾಥ್‌ ರೈ ಬೆಂಬಲ

ಬಂಟ್ವಾಳ: ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಗೆ ಬೆಂಬಲ ವ್ಯಕ್ತಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲೂ ಸಮಾನ ಮನಸ್ಕ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.


ಬಿ.ಸಿ.ರೋಡಿನ ಮಿನಿ ವಿಧಾನಸೌಧ ಮುಂಭಾಗದಿಂದ ನಾರಾಯಣಗುರು ವೃತ್ತದವರೆಗೆ ಜಾಥಾ ನಡೆದು ಬಳಿಕ ಪ್ರತಿಭಟನಾ ಸಭೆ ನಡೆಯಿತು.

ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಂಘಟನೆಗಳ ಪ್ರಮುಖರು ಕೃಷಿ ಕಾಯ್ದೆಯ ವಿಚಾರದಲ್ಲಿ ಕೇಂದ್ರ ಹಾಗು ರಾಜ್ಯ ಸರಕಾರ ನಡೆಯನ್ನು ಖಂಡಿಸಿದರು.

ಮಾಜಿ ಸಚಿವ ಬಿ.ರಮಾನಾಥ ರೈ, ಚಂದ್ರಪ್ರಕಾಶ್ ಶೆಟ್ಟಿ, ಕೃಷ್ಣಪ್ಪ ಸಾಲಿಯಾನ್, ರವಿಕಿರಣ್ ಪುಣಚ, ಯಾದವ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಮುನೀರ್ ಕಾಟಿಪಳ್ಳ ಸೇರಿದಂತೆ ಹಲವಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಇದೇ ವೇಳೆ ಎಸ್‌ಡಿಪಿಐ ಸಂಘಟನೆ ಸಹ ಪ್ರತಿಭಟನೆಗೆ ಬೆಂಬಲ ನೀಡಿತು.

LEAVE A REPLY

Please enter your comment!
Please enter your name here

Hot Topics

“ಬಂಟನಾಗಬೇಕಾದರೆ ಆತನಿಗೆ ಎಂಟೆದೆ ಬೇಕು ಅದು ನಿಮ್ಮ ರಕ್ತದಲ್ಲಿದೆ”

ಮಂಗಳೂರು: ಬಂಟನಾಗಬೇಕಾದರೆ ಆತನಿಗೆ ಎಂಟೆದೆ ಬೇಕು. ಅದು ನಿಮ್ಮ ರಕ್ತದ ಕಣದಲ್ಲಿದೆ. ಯಾವುದು ಜಗತ್ತಿಗೆ ಅಸಾಧ್ಯವೋ ಅದನ್ನು ನೀವು ಸಾಧ್ಯ ಮಾಡಿ ತೋರಿಸಿದ್ದು ಬಂಟರು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಮಹಾರಾಷ್ಟ್ರದ...

ಖಾಸಗಿ ಕಾಲೇಜಿನಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಾಧ್ಯಾಪಕರ ವಿರುದ್ಧ FIR

ಉಡುಪಿ: ತಾಲೂಕಿನ ಬ್ರಹ್ಮಾವರ ಖಾಸಗಿ ಪದವಿ ಪೂರ್ವ ಕಾಲೇಜಿನಲ್ಲಿ ಇಬ್ಬರು ಸಹಾಯಕ ಪ್ರಾಧ್ಯಾಪಕರು ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡಿದ್ದು, ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಇಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದೆ.ದೂರು ಬಾರ್ಕೂರು ಖಾಸಗಿ ಪದವಿ ಪೂರ್ವ ಕಾಲೇಜಿನ...

ಕಲ್ಮಾಡಿ ಸ್ಟೆಲ್ಲಾ ಮಾರಿಸ್ ಚರ್ಚ್‌ನಲ್ಲಿ ವೆಲಂಕಣಿ ಮಾತೆಯ ಮೂರ್ತಿ ಮೆರವಣಿಗೆ

ಉಡುಪಿ: ಕಲ್ಮಾಡಿಯಲ್ಲಿರುವ ಸ್ಟೆಲ್ಲಾ ಮಾರಿಸ್ ಚರ್ಚ್‌ನ 50ನೇ ವರ್ಷಾಚರಣೆ ಹಾಗೂ ಪುಣ್ಯಕ್ಷೇತ್ರ ಘೋಷಣೆಯ ಪ್ರಯುಕ್ತ ವೆಲಂಕಣಿ ಮಾತೆಯ ಪವಿತ್ರ ಮೆರವಣಿಗೆ ನಡೆಯಿತು. ಇದಕ್ಕೆ ಉಡುಪಿ ಶಾಸಕ ಕೆ. ರಘುಪತಿ ಭಟ್ ರವರು ಚಾಲನೆ...