Wednesday, October 20, 2021

ಯಡಿಯೂರಪ್ಪ ಪದತ್ಯಾಗದ ಖುಷಿಗೆ ಗಡ್ಡ ಬೋಳಿಸಿದ ಶಾಸಕ ಯತ್ನಾಳ್‌

ಬೆಂಗಳೂರು: ಯಡಿಯೂರಪ್ಪ ರಾಜೀನಾಮೆ ನೀಡುವ ವರೆಗೆ ಗಡ್ಡ ತೆಗೆಯುವುದಿಲ್ಲ ಎಂದಿದ್ದ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಕ್ಲೀನ್‌ ಶೇವ್‌ ಮಾಡುವ ಮೂಲಕ ನನ್ನ ಒತ್ತಾಯ ಈಡೇರಿದೆ ಎಂಬ ಸಂದೇಶ ನೀಡಿದರು.


ಈ ವೇಳೆ ಮಾದ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಹಿಂದೆ ಶಿವಾಜಿಯಾಗಿದ್ದೆ ಈಗ ಬಸವಣ್ಣನಾಗಿದ್ದೆ ಎಂದು ಹಾಸ್ಯ ಚಟಾಕಿ ಹಾರಿಸಿದ್ದರು. ಹೈ ಕಮಾಂಡ್‌ ಕುಟುಂಬ ರಾಜಕಾರಣಕ್ಕೆ ಇತಿಶ್ರೀ ಹಾಡಿದೆ. ಬಸವರಾಜ್‌ ಬೊಮ್ಮಾಯಿ ಅವರಿಗೂ ಹೈಕಮಾಂಡ್‌ ಸ್ಪಷ್ಟ ನಿರ್ದೇಶನ ನೀಡಿದೆ ಯಾವುದೇ ಕಾರಣಕ್ಕೂ ಕುಟುಂಬ ರಾಜಕಾರಣಕ್ಕೆ ಅವಕಾಶವಿಲ್ಲ ಎಂದು ಅವರು ಹೇಳಿದರು. ಜೊತೆಗೆ ಈ ವೇಳೆ ಯಡಿಯೂರಪ್ಪನವರನ್ನು ಈಗ ದ್ವೇಷಿಸುವುದಿಲ್ಲ. ಬದಲಾಗಿ ಅವರ ಮುಂದಿನ ಜೀವನಕ್ಕೆ ಶುಭ ಹಾರೈಸುತ್ತೇನೆ ಎಂದಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...