Tuesday, October 19, 2021

ಅನೈತಿಕ ಪೊಲೀಸ್‌ಗಿರಿ ಬಗ್ಗೆ ಸಿಎಂ ಪ್ರಸ್ತಾಪ: ಟ್ವಿಟ್ವರ್‌ನಲ್ಲಿ ‘ಆ್ಯಕ್ಷನ್‌ ರಿಯಾಕ್ಷನ್‌’

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರು ಭೇಟಿ ವೇಳೆ ಅನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿ ಹೇಳಿಕೆ ನೀಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ‘ರಿಸೈನ್ ಕರ್ನಾಟಕ ಸಿಎಂ’ (#ResignKarnatakaCM) , ‘ಸಿಎಂ ಸಪೋರ್ಟ್ ಮಾರಲ್ ಪೊಲೀಸಿಂಗ್’ (#CMSupportsMoralPolicing) ಹ್ಯಾಷ್‌ಟ್ಯಾಗ್‌ನಡಿ ನೀಡುತ್ತಿರುವ ಪ್ರತಿಕ್ರಿಯೆಗಳು ಟ್ರೆಂಡ್ ಆಗಿವೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಹಿತ ಹಲವರು ಮುಖ್ಯಮಂತ್ರಿ ಹೇಳಿಕೆಯನ್ನು ಖಂಡಿಸಿದ್ದಾರೆ.


ನಿನ್ನೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ “ನೈತಿಕ ಪೊಲೀಸ್‌ಗಿರಿ, ಇದು ಬಹಳ ಸೂಕ್ಷ್ಮವಾಗಿರುವ ವಿಚಾರ. ಸಮಾಜದಲ್ಲಿ ನಾವೆಲ್ಲರೂ ಜವಾಬ್ದಾರಿ ಹೊಂದಬೇಕಾಗುತ್ತದೆ.

ಸಮಾಜದಲ್ಲಿ ಹಲವಾರು ಭಾವನೆಗಳ ಜನರಿದ್ದಾರೆ. ಈ ಭಾವನೆಗಳಿಗೆ ಧಕ್ಕೆ ಆಗದ ಹಾಗೆ ನಾವು ನಡೆದುಕೊಳ್ಳಬೇಕಾಗುತ್ತದೆ. ಆ ಭಾವನೆಗಳಿಗೆ ಧಕ್ಕೆ ಬಂದಾಗ ಸಹಜವಾಗಿ ಆಕ್ಷನ್ ಮತ್ತು ರಿಯಾಕ್ಷನ್ ಆಗುತ್ತದೆ,” ಎದಿದ್ದರು.
ಸಿದ್ದರಾಮಯ್ಯ ಟ್ವೀಟ್ ಮಾಡಿ, “ನಾಳೆಯಿಂದ ರಾಜ್ಯದಲ್ಲ ಹೆಣ್ಣುಮಕ್ಕಳ ಮೇಲೆ ಅನೈತಿಕ ಪೊಲೀಸ್‌ಗಿರಿಯನ್ನು ಯಾರೇ ನಡೆಸಲಿ, ಅವರದ್ದು ಮುಖವಾಡ ಮಾತ್ರ. ಅಸಲಿ ಮುಖ ಅಂತಹ ಕೃತ್ಯಕ್ಕೆ ಪ್ರಚೋದನೆ, ಉತ್ತೇಜನ ಮತ್ತು ರಕ್ಷಣೆ ನೀಡುವ ಕೆಲಸ ನಿಮ್ಮದು ಎಂದು ತಿಳಿದುಕೊಳ್ಳಬಹುದೇ? ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

#MoralPolicing ಹ್ಯಾಷ್ ಟ್ಯಾಗ್‌ನಡಿ “ಆ್ಯಕ್ಷನ್ ಗೆ ರಿಯಾಕ್ಷನ್ ಇರುತ್ತದೆ ಎಂದು ಹೇಳುವ ಮೂಲಕ ಯಾವ ಕಾಡಿನ ನ್ಯಾಯವನ್ನು ಪಾಠ ಮಾಡುತ್ತಿದ್ದೀರಿ @BSBommai ಅವರೇ ಪೊಲೀಸ್ ಇಲಾಖೆಯನ್ನು ರದ್ದು ಮಾಡಿ ನಿಮ್ಮ ಪರಿವಾರಕ್ಕೆ ಕಾನೂನು ಪಾಲನೆಯ ಕೆಲಸವನ್ನು ವಹಿಸಿಕೊಡುವ ದುಷ್ಟ ಉದ್ದೇಶವೇನಾದರೂ ನಿಮಗೆ ಇದೆಯೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದಕ್ಕೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿದ ಸಿಎಂ, ಸಿದ್ದರಾಮಯ್ಯನವರೇ ನಿಮ್ಮ ಅಧಿಕಾರದಲ್ಲಿ ಹಿಂದೂಗಳ ಹತ್ಯೆಯಾದಾಗ ನೀವು ಕುರುಡ, ಕಿವುಡ ಮತ್ತು ಮೂಗರಾಗಿದ್ದೀರಿ. ಮತ್ತೂ ಮುಂದುವರೆದು ಟ್ವೀಟ್‌ ಮಾಡಿ ನಾನು ಹೇಗೆ ಅಧಿಕಾರ ನಡೆಸಬೇಕು ಎಂಬುವುದನ್ನು ನಿಮ್ಮಿಂದ ಕಲಿಯಬೇಕಾಗಿಲ್ಲ ಎಂದು ಟ್ವೀಟ್‌ ಮಾಡಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...