Tuesday, January 31, 2023

ತೆನೆ ಇಳಿಸಿ ಕಮಲದೆಡೆ ಹೊರಟು ನಿಂತ ಬಸವರಾಜ ಹೊರಟ್ಟಿ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ, ಜೆಡಿಎಸ್‌ನ ಹಿರಿಯ ನಾಯಕ ಬಸವರಾಜ ಹೊರಟ್ಟಿ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.


ತಾಜ್ ವೆಸ್ಟೆಂಡ್ ಹೋಟೆಲ್​ನಲ್ಲಿ ಸೇರ್ಪಡೆಯಾಗಿ ಮಾತನಾಡಿದ ಬಸವರಾಜ ಹೊರಟ್ಟಿ, ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಬಿಜೆಪಿಗೆ ಬರುವುದು ಒಳ್ಳೆಯದು ಎಂದು ಅಮಿತ್ ಶಾ ಹೇಳಿದರು.

ಜೆಡಿಎಸ್ ಬಗ್ಗೆ ನನಗೆ ಒಳ್ಳೆಯ ಅಭಿಪ್ರಾಯವಿದೆ. ಆದರೆ ಮತದಾರರ ಅಭಿಪ್ರಾಯದ ಮೇಲೆ ಬಿಜೆಪಿ ಸೇರ್ಪಡೆಯಾಗುತ್ತಿದ್ದೇನೆ ಎಂದು ತಿಳಿಸಿದರು.
ಇದೇ ತಿಂಗಳು 11ಕ್ಕೆ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ನೀಡಲಿದ್ದಾರೆ.

ಈ ಸಂದರ್ಭ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವರಾದ ಅರಗ ಜ್ಞಾನೆಂದ್ರ, ಆರ್ ಅಶೋಕ್, ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮತ್ತು ಇತರರು ಉಪಸ್ಥಿತರಿದ್ದರು.

ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಸತತವಾಗಿ ಏಳು ಬಾರಿ ವಿಧಾನ ಪರಿಷತ್‌ಗೆ ಆಯ್ಕೆಯಾದ ಇವರು ಮುಂದಿನ ಬಾರಿಯೂ ಇವರಿಗೆ ಬಿಜೆಪಿ ಪಕ್ಷದಿಂದ ಇದೇ ಕ್ಷೇತ್ರದಿಂದ ಟಿಕೆಟ್‌ ಪಡೆದು ಸ್ಪರ್ಧಿಸಲಿದ್ದಾರೆಂಬ ಮಾತುಗಳು ಕೇಳಿಬರುತ್ತಿದೆ.

ಹೊರಟ್ಟಿ ಸೇರ್ಪಡೆ ಬಗ್ಗೆ ಮಾತನಾಡಿದ ಸಚಿವ ಆರ್ ಅಶೋಕ್, 7 ಬಾರಿ ಎಂಎಲ್ಎ ಆಗಿ ಹಲವು ಹುದ್ದೆಗಳನ್ನ ನಿಭಾಯಿಸಿದ್ದಾರೆ.

ಹೊರಟ್ಟಿ ಸರಳ ಸಜ್ಜನ ರಾಜಕಾರಣಿ. ಇವರಿಂದ ಬಿಜೆಪಿಗೆ ಒಂದು ವರ್ಚಸ್ಸು ಬರುತ್ತದೆ. ಎಸ್ಎಂ ಕೃಷ್ಣಾರಂತವರು ಬಂದಿದ್ದಾರೆ. ಇವತ್ತು ಮತ್ತೊಬ್ಬ ಮುತ್ಸದ್ದಿ ಸೇರಿದ್ದಾರೆ ಎಂದರು.

LEAVE A REPLY

Please enter your comment!
Please enter your name here

Hot Topics

“ನಾಯಿ ಥರ ಅವರ ಹಿಂದೆ ಹೋಗ್ತಾರಲ್ವಾ..ನಾಚಿಕೆ ಇಲ್ವಾ.!?” ಉಳ್ಳಾಲ ಪೊಲೀಸರಿಗೆ ಶಾಸಕ ಖಾದರ್ ಕ್ಲಾಸ್..!

ಮಂಗಳೂರು: ಜನ ಸಾಮಾನ್ಯರ ಮನೆಯ ತಳಪಾಯ ಬಿದ್ದುಹೋಗುವ ಸ್ಥಿತಿ ನಿರ್ಮಾಣ ಮಾಡಿದ ಮರಳು ಮಾಫಿಯಾ ವಿರುದ್ದ ಉಳ್ಳಾಲ ಶಾಸಕ ಯು ಟಿ. ಖಾದರ್ ಗರಂ ಆಗಿದ್ದಾರೆ.ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ಮುಂದಾಗದ ಉಳ್ಳಾಲ ಪೊಲೀಸರು...

ಮಂಗಳೂರು ತಲಪಾಡಿ ಟೋಲ್ ಸಿಬ್ಬಂದಿ ಗೂಂಡಾಗಿರಿ :ಸಾಮಾಜಿಕ ಜಾಲತಾಣದಲ್ಲಿ ವೈರಲ್..!

ಉಳ್ಳಾಲ: ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆಯಿಂದ ಕಾರು ಚಾಲಕನ ಮೇಲೆ ಹಲ್ಲೆ ನಡೆದ ಘಟನೆ ತಲಪಾಡಿ ಟೋಲ್ ಪ್ಲಾಜಾದಲ್ಲಿ ಭಾನುವಾರ ನಡೆದಿರುವುದು, ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತ ವೀಡಿಯೋ ವೈರಲ್ ಆಗಿದೆ.ಕೇರಳ ಗಡಿಭಾಗದ...

ಮುಂಬೈ- ಅಹ್ಮದಾಬಾದ್ ಹೆದ್ದಾರಿಯಲ್ಲಿ ಬಸ್‌ ಗೆ ಕಾರು ಡಿಕ್ಕಿ : ನಾಲ್ವರು ಮೃತ್ಯು..!

ಮುಂಬೈ:ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ದಹಾನು ಎಂಬಲ್ಲಿ ಮುಂಬೈ-ಅಹ್ಮದಾಬಾದ್ ರಾಷ್ಟ್ರೀಯ ಹೆದ್ದಾರಿಯ ಚರೋಟಿಯಲ್ಲಿ  ಮುಂಜಾನೆ ಐಷಾರಾಮಿ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್...