Saturday, September 18, 2021

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ..! ನಾಳೆ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶಿಗ್ಗಾವಿ ಶಾಸಕ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ.

ಮಂಗಳವಾರ ರಾತ್ರಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.

ನಾಳೆ ಬುಧವಾರವೇ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಅವರ ಮಗನಾದ ಬಸವರಾಜ ಬೊಮ್ಮಾಯಿ ಜನತಾ ಪರಿವಾರದಿಂದ ರಾಜಕಾರಣ ಆರಂಭಿಸಿ ಬಿಜೆಪಿಗೆ ಬಂದವರು.

ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದ ಬೊಮ್ಮಾಯಿ, ಮೂರು ಬಾರಿ ಶಿಗ್ಗಾವಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಇಂದು ಮಹತ್ವದ ಬಿಜೆಪಿ ಸಂಸದೀಯ ಮಂಡಳಿಯ ಸಭೆಯು, ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆಯಿತು. ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆಗಾಗಿ ಕೇಂದ್ರ ಸಚಿವರಾದಂತ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿಯವರು ವೀಕ್ಷಕರಾಗಿ ನೇಮಕಗೊಂಡಿದ್ದರು. ಹೀಗೆ ವೀಕ್ಷಕರಾಗಿ ನೇಮಕಗೊಂಡಿದ್ದಂತ ಇವರ ಮುಂದಾಳತ್ವದಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಹಂಗಾಮಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಿಮವಾಗಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ( Karnataka News Chief Minister ) ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಮತ್ತೆ ರಾಜ್ಯದ ಸಿಎಂ ( Karnataka CM ) ಆಗಿ ಲಿಂಗಾಯತ ಸಮುದಾಯದ ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಆ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಅಂದಹಾಗೇ, ಬಸವರಾಜ್ ಸೋಮಪ್ಪ ಬೊಮ್ಮಾಯಿಯವರು ( Basavaraj Bommai ) ಜನವರಿ 28, 1960ರಲ್ಲಿ ಜನಿಸಿದ್ದಾರೆ. ಕರ್ನಾಟಕದ ರಾಜಕಾರಣಿಯಾಗಿದ್ದು, ಅವರು ಕರ್ನಾಟಕದ ಗೃಹ ವ್ಯವಹಾರಗಳು, ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸಕಾಂಗದ ಪ್ರಸ್ತುತ ರಾಜ್ಯ ಸಚಿವರಾಗಿದ್ದಾರೆ. ಹಾವೇರಿ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಅವರು ಈ ಹಿಂದೆ ಕರ್ನಾಟಕ ಸರ್ಕಾರದಲ್ಲಿ ಜಲಸಂಪನ್ಮೂಲ ಮತ್ತು ಸಹಕಾರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.ಅವರು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಅವರ ಮಗ. ಮೆಕ್ಯಾನಿಕಲ್ ಎಂಜಿನಿಯರಿಂಗ್ ನಲ್ಲಿ ಪದವಿ ಪಡೆದ ಅವರು ಜನತಾ ದಳದಿಂದ ರಾಜಕೀಯ ಜೀವನವನ್ನು ಪ್ರಾರಂಭಿಸಿದ್ದರು.

ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿ, ಎರಡು ಬಾರಿ (1998 ಮತ್ತು 2004ರಲ್ಲಿ) ಧಾರವಾಡ ಸ್ಥಳೀಯ ಪ್ರಾಧಿಕಾರಗಳ ಕ್ಷೇತ್ರದಿಂದ ಆಯ್ಕೆಯಾದರು. ಅವರು ಜನತಾದಳ (ಯುನೈಟೆಡ್) ತೊರೆದು ಫೆಬ್ರವರಿ, 2008ರಲ್ಲಿ ಭಾರತೀಯ ಜನತಾ ಪಕ್ಷವನ್ನು ಸೇರಿದರು. 2008ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ, ಅವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಕ್ಷೇತ್ರದಿಂದ ಕರ್ನಾಟಕ ವಿಧಾನಸಭೆಗೆ ಆಯ್ಕೆಯಾದರು.ಪದವೀಧರ ಎಂಜಿನಿಯರ್ ಮತ್ತು ವೃತ್ತಿಯಲ್ಲಿ ಕೃಷಿಕ ಮತ್ತು ಕೈಗಾರಿಕೋದ್ಯಮಿ, ಅವರು ಅಸಂಖ್ಯಾತ ನೀರಾವರಿ ಯೋಜನೆಗಳಿಗೆ ನೀಡಿದ ಕೊಡುಗೆಗಳು ಮತ್ತು ಕರ್ನಾಟಕದ ನೀರಾವರಿ ವಿಷಯಗಳಿಗೆ ಸಂಬಂಧಿಸಿದಂತೆ ಆಳವಾದ ಜ್ಞಾನಕ್ಕಾಗಿ ವ್ಯಾಪಕವಾಗಿ ಮೆಚ್ಚುಗೆ ಪಡೆದರು. ಕರ್ನಾಟಕದ ಹಾವೇರಿ ಜಿಲ್ಲೆಯ ಶಿಗ್ಗಾಂವ್ ನಲ್ಲಿ ಭಾರತದ ಮೊದಲ 100% ಕೊಳವೆ ನೀರಾವರಿ ಯೋಜನೆಯನ್ನು ಜಾರಿಗೊಳಿಸಿದ ಕೀರ್ತಿಯೂ ಅವರಿಗೆ ಸಲ್ಲುತ್ತದೆ.ಹೀಗೆ ರಾಜಕೀಯ ಹಿನ್ನಲೆ, ಉತ್ತಮ ನಡೆ, ವಿದ್ಯಾರ್ಹತೆ ಹೊಂದಿರುವವರು, ರಾಜಕೀಯ ಅನುಭವ ಹೊಂದಿರುವಂತ ಬಸವರಾಜ ಬೊಮ್ಮಾಯಿಯವರನ್ನು ಬಿಎಸ್ ಯಡಿಯೂರಪ್ಪ ನಂತ್ರ, ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಈ ಮೂಲಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ಆಯ್ಕೆಯಾಗಿದ್ದಾರೆ. ಆ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

 

 

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...