Connect with us

    LATEST NEWS

    ‘ವಿಶ್ವ ಕೊಂಕಣಿ ಸರ್ದಾರ್‌’ ಬಸ್ತಿ ವಾಮನ ಶೆಣೈ ಇನ್ನಿಲ್ಲ

    Published

    on

    ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಬಸ್ತಿ ವಾಮನ ಶೆಣೈ (88) ಇಂದು ನಿಧನರಾಗಿದ್ದಾರೆ.

    ಕಳೆದ ಕೆಲವು ತಿಂಗಳುಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಮಧ್ಯಾಹ್ನ 12.15ರ ಮಾರಿಗೆ ಕೊನೆಯುಸಿರೆಳೆದಿದ್ದಾರೆ.

    ಬಸ್ತಿ ವಾಮನ ಶೆಣೈ ಅವರ ಪಾರ್ಥಿವ ಶರೀರರ ಅಂತಿಮ ದರ್ಶನಕ್ಕಾಗಿ ನಾಳೆ ಬೆಳಿಗ್ಗೆ 9 ಗಂಟೆಯಿಂದ 10 ಗಂಟೆಯವರೆಗೆ ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಬಳಿಕ ಹುಟ್ಟೂರು ಬಂಟ್ವಾಳದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಪುತ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

    1934ರಲ್ಲಿ ಬಂಟ್ವಾಳದ ಬಸ್ತಿಪಡ್ಪು ಎಂಬಲ್ಲಿ ಜನಿಸಿದ ವಾಮನ ಶೆಣೈ ವಿಶ್ವ ಕೊಂಕಣಿ ಸರ್ದಾರ್‌ ಎಂದು ಪ್ರಖ್ಯಾತಿ ಪಡೆದಿದ್ದರು. ಶಕ್ತಿನಗರದಲ್ಲಿರುವ ವಿಶ್ವ ಕೊಂಕಣಿ ಕೇಂದ್ರದ ಸ್ಥಾಪಕರು ಆಗಿ ಕಾರ್ಯ ನಿರ್ವಹಿಸಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಕಾರ್ಮಿಕ ಸಂಘಟನೆಯಾದ ಇಂಟಕ್‌ನಲ್ಲಿ ಕಾರ್ಯ ನಿರ್ವಹಿಸಿದ್ದರು.
    ಕೊಂಕಣಿ ಭಾಷೆ ಮೇಲೆ ಅಪಾರ ಪ್ರೀತಿ , ಕಾಲಜಿ ಹೊಂದಿದ ಅವರು ಅನೇಕ ನಾಟಕ ಹಾಗೂ ರಂಗಭೂಮಿಯಲ್ಲಿ ಸೇವೆ ಸಲ್ಲಿಸಿದ್ದಾರೆ.

    LATEST NEWS

    ಚಿನ್ನದ ಹುಡುಗ ನೀರಜ್ ಚೋಪ್ರಾ ಪತ್ನಿ ಯಾರು ಗೊತ್ತಾ!? ಆಕೆಯೂ ಕ್ರೀಡಾಪಟು!

    Published

    on

    ಮಂಗಳೂರು/ಹರ್ಯಾಣ : ಭಾರತದ ಸ್ಟಾರ್ ಜಾವೆಲಿನ್ ಆಟಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ. ಎರಡು ಬಾರಿ ಒಲಿಂಪಿಕ್ ಪದಕ ವಿಜೇತರಾಗಿರುವ ನೀರಜ್ ಸದ್ದಿಲ್ಲದೆ ವಿವಾಹವಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ತನ್ನ ಮದುವೆಯ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಈ ವಿಚಾರ ಬಹಿರಂಗ ಪಡಿಸಿದ್ದಾರೆ.

    ಜೀವನದ ಹೊಸ ಅಧ್ಯಾಯನವನ್ನು  ಕುಟುಂಬದೊಂದಿಗೆ ಶುರು ಮಾಡಿದ್ದೇನೆ. ನಮ್ಮನ್ನು ಈ ಹಂತಕ್ಕೆ ತಲುಪಿಸಿದ ಪ್ರತಿಯೊಂದು ಆಶೀರ್ವಾದಕ್ಕೂ ಕೃತಜ್ಞ.  ಸಂತೋಷ, ಪ್ರೀತಿಯಿಂದ ಬಂಧ ಬೆಸೆದಿದೆ. ನೀರಜ್ – ಹಿಮಾನಿ ಎಂದು ಶೀರ್ಷಿಕೆ ಬರೆದು ಫೋಟೋಗಳನ್ನು ಹಂಚಿಕೊಂಡಿದ್ದಾರೆ ನೀರಜ್. ಹಿಮಾನಿ ಮೋರ್ ಸೋನಿಪತ್ ಮೂಲದವರಾಗಿದ್ದು, ಯುಎಸ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ನವದಂಪತಿ ಹನಿಮೂನ್‌ಗೆ ತೆರಳಿದ್ದಾರೆ ಎನ್ನಲಾಗಿದೆ.

     ಹಿಮಾನಿಯೂ ಕ್ರೀಡಾಪಟು:

    ನೀರಜ್ ಚೋಪ್ರಾ ಮದುವೆ ಫೋಟೋಗಳನ್ನು ಹಂಚಿಕೊಂಡ ಮೇಲೆಯೆ ಅವರು ವಿವಾಹವಾಗಿರುವ ವಿಚಾರ ಗೊತ್ತಾಗಿದೆ. ಫೋಟೋ ವೈರಲ್ ಆಗುತ್ತಿದ್ದಂತೆ ನೀರಜ್ ಚೋಪ್ರಾ ಕೈ ಹಿಡಿದ ಯುವತಿ ಯಾರು ಎಂಬ ಕುತೂಹಲ ಮನೆ ಮಾಡಿದೆ. ಗೂಗಲ್‌ನಲ್ಲಿ ಹಿಮಾನಿ ಬಗ್ಗೆ ಹುಡುಕಾಟ ನಡೆಸಲಾಗಿದೆ.

    ಹಿಮಾನಿ ಮೋರ್ ಟೆನಿಸ್ ತಾರೆಯೂ ಹೌದು. ಸೋನಿಪತ್‌ನ ಲಿಟಲ್ ಏಂಜಲ್ಸ್‌ ಶಾಲೆಯಲ್ಲಿ ಓದಿದ್ದಾರೆ. ಲೂಯಿಸಿಯಾನ ವಿಶ್ವವಿದ್ಯಾನಿಲಯದಲ್ಲಿ ಉನ್ನತ ಶಿಕ್ಷಣ ಪಡೆದಿದ್ದಾರೆ. ಫ್ರಾಂಕ್ಲಿನ್ ಪಿಯರ್ಸ್ ವಿಶ್ವವಿದ್ಯಾನಿಲಯದಲ್ಲಿ ಟೆನಿಸ್ ಕೋಚ್ ಆಗಿಯೂ ಕೆಲಸ ಮಾಡಿದ್ದಾರೆ.

    ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಮಿರಾಂಡಾ ಹೌಸ್‌ನಲ್ಲಿ ರಾಜ್ಯ ಶಾಸ್ತ್ರ ಮತ್ತು ಭೌತಿಕ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಸದ್ಯ ಯುಎಸ್‌ಯಲ್ಲಿ ಓದುತ್ತಿದ್ದಾರೆ. ಅಂದಹಾಗೆ ಹಿಮಾನಿ ಸಹೋದರ ಹಿಮಾಂಶು ಕೂಡ ಟೆನಿಸ್ ಆಟಗಾರ ಎಂದು ತಿಳಿದುಬಂದಿದೆ.

    ಅಭಿಮಾನಿಗಳಿಂದ ಶುಭಾಶಯ :

    ಒಂದಿಂಚು ಮಾಹಿತಿ ನೀಡದೆ ಮದುವೆಯಾಗಿ ಶಾ*ಕ್ ಕೊಟ್ಟಿದ್ದಾರೆ ನೀರಜ್ ಚೋಪ್ರಾ. ನೀರಜ್ ಚೋಪ್ರಾ ಫೋಟೋ ಹಂಚಿಕೊಳ್ಳುತ್ತಿದ್ದಂತೆ ಅವರ ಅಭಿಮಾನಿಗಳು ಶುಭಹಾರೈಸುತ್ತಿದ್ದಾರೆ. ನವದಂಪತಿಗೆ ಅಭಿನಂದನೆಗಳು. ಚೆನ್ನಾಗಿರಿ ಎಂದು ಕಮೆಂಟ್ಸ್ ಮಾಡುತ್ತಿದ್ದಾರೆ.

    ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ಬರೆದಿದ್ದ ನೀರಜ್ ಚೋಪ್ರಾ ಎಲ್ಲರ ಮನ ಗೆದ್ದಿದ್ದರು. ಪ್ಯಾರೀಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದಿದ್ದರು. ಈ ಮೂಲಕ ಸತತ 2 ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಭಾರತದ ಮೂರನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

    Continue Reading

    DAKSHINA KANNADA

    ಮಂಗಳೂರಿನ ಜನತೆಗೆ ಕಲುಷಿತ ನೀರು; ಎಸ್‌ಟಿಪಿಯಲ್ಲಿ ಜನರೇಟರ್ ಇಲ್ಲ, ಮನೆಯಲ್ಲಿರುವ 13 ಸಿಬ್ಬಂದಿಗೆ ಸಂಬಳ : ಐವಾನ್ ಡಿಸೋಜಾ

    Published

    on

    ಮಂಗಳೂರು : ಮಹಾನಗರಕ್ಕೆ ಪೂರೈಕೆಯಾಗುತ್ತಿರುವ ನೀರು ಕಲುಷಿತವಾಗಿದೆ. ಎಸ್ ಟಿಪಿಗಳು ನೀರಿನ ಮೂಲವನ್ನು ಸೇರುತ್ತಿದ್ದು, ಕೊಳಚೆ ನೀರನ್ನೇ ಜನರಿಗೆ ಪೂರೈಕೆ ಮಾಡಲಾಗುತ್ತಿದೆ. ಈ ಬಗ್ಗೆ ಮೇಯರ್ ಅವರಿಗೆ ಈಗಾಗಲೇ ಎರಡು ಬಾರಿ ಮನವಿ ಮಾಡಿ ಸದನದ ಬಾವಿಗಿಳಿದರೂ ಪ್ರಯೋಜನವಾಗಿಲ್ಲ. ಸತ್ಯಶೋಧನಾ ಸಮಿತಿ ರಚಿಸುವುದಕ್ಕೂ ಪಾಲಿಕೆಯ ಆಡಳಿತ ಮುಂದಾಗಿಲ್ಲ. ಹೀಗಾಗಿ ನಾವೇ ಸಮಿತಿ ರಚಿಸಿ ತನಿಖೆ ಮಾಡಿದ್ದೇವೆ. ಎಲ್ಲಿ ಎಸ್‌ಟಿಪಿ ಕೊಳಚೆ ನೀರು ಸೇರುತ್ತಿದೆಯೋ ಅಲ್ಲಿ ಹೋಗಿ ಪ್ರತ್ಯಕ್ಷ ವರದಿ ತಯಾರಿಸಿ ಅದನ್ನು ಮೊನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರು ಭೇಟಿಯ ಸಂದರ್ಭದಲ್ಲಿ ನೀಡಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.

    ಈ ಬಗ್ಗೆ ತನಿಖೆ ಮಾಡುವಂತೆ ಪಾಲಿಕೆಯ ನೂತನ ಕಮಿಷನರ್ ಅವರಿಗೆ ಸತ್ಯಶೋಧನಾ ವರದಿ ನೀಡಿದ್ದೇವೆ. ನಾವು ದೂರು ಕೊಟ್ಟು ಸುಮ್ಮನೆ ಇರುವುದಿಲ್ಲ. ಅದು ನಿಜವೇ ಸುಳ್ಳೇ ಎಂಬ ಬಗ್ಗೆ ತನಿಖೆ ಮಾಡುತ್ತೇವೆ. ಪಚ್ಚನಾಡಿ, ಬಜಾಲ್, ಮಧ್ಯದಲ್ಲಿರುವ ಎಸ್ ಟಿಪಿಯನ್ನು ನಿರ್ವಹಣೆ ಮಾಡಲು ಎಂಆರ್ ಪಿಎಲ್ ಕಂಪೆನಿಗೆ ಒಪ್ಪಿಸಬೇಕಿದೆ. ಇದರಿಂದ ನಿರ್ವಹಣೆ ವೆಚ್ಚ ಕಡಿಮೆಯಾಗುವುದಲ್ಲದೆ ಮಂಗಳೂರಿನ ಜನರಿಗೆ ಶುದ್ಧ ಕುಡಿಯುವ ನೀರು ಸಿಗುತ್ತದೆ. ಮಧ್ಯದಲ್ಲಿರುವ ಎಸ್ ಟಿಪಿಯಲ್ಲಿ ನೀರು ಶುದ್ಧೀಕರಣಗೊಳ್ಳುತ್ತಿಲ್ಲ. ಇದರಿಂದಾಗಿ ಅಲ್ಲಿಗೆ ಸಮೀಪದ ಖಂಡಿಗೆ ಎಂಬಲ್ಲಿ ತೋಡು, ಕೆರೆಯ ನೀರು ಕಲುಷಿತಗೊಂಡಿದೆ. ಪರಿಣಾಮ ವರ್ಷಕ್ಕೊಮ್ಮೆ ನಡೆಯುವ ಖಂಡಿಗೆ ಮೀನು ಹಿಡಿಯುವ ಜಾತ್ರೆಗೆ ಕಂಟಕ ಎದುರಾಗಿದೆ.

    ಕೆರೆಗೆ ಇಳಿದರೆ ಮಾರಕ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಸೃಷ್ಟಿಯಾಗಿದೆ. ಈ ಬಗ್ಗೆ ಪ್ರಶ್ನೆ ಮಾಡಿದರೆ ನಿಮ್ಮ ಆಡಳಿತದಲ್ಲಿ ಹೀಗಿರಲಿಲ್ವಾ ಅಂತಾ ಕೇಳ್ತಾರೆ. ಹೌದು ನಮ್ಮ ಕಾಲದಲ್ಲಿ ಕೆರೆಯ ನೀರಲ್ಲಿ ಬಟ್ಟೆ ತೊಳೆಯುತ್ತಿದ್ದರು. ಮೀನು ಹಿಡೀತಿದ್ದರು. ಈಗ ನೀರಿನ ಮೂಲಗಳಿಗೆ ಇಳಿಯುವ ಹಾಗೇ ಇಲ್ಲ. ಇದಕ್ಕೆ ಯಾರು ಹೊಣೆ? ಎಂದು ವಾಗ್ದಾಳಿ ನಡೆಸಿದರು.

    ಇದನ್ನೂ ಓದಿ : ಮಹಾಕುಂಭಮೇಳ 2025: ಸೆಲ್ಫಿ ಜಾಸ್ತಿಯಾಯಿತು… ಮೋನಾಲಿಸನನ್ನು ಮನೆಗೆ ಕಳುಹಿಸಿದ ತಂದೆ

    ಎಸ್ ಟಿಪಿ ಚಾಲನೆ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬೀಗ ಜಡಿದು ಪ್ರತಿಭಟನೆ ಮಾಡುತ್ತೇವೆ. ಅಲ್ಲಿ 13 ಜನರಿಗೆ ನಿರ್ವಹಣೆಗೆ ಸಂಬಳ ನೀಡಲಾಗುತ್ತದೆ. ಆದರೆ ಯಾರೂ ಅಲ್ಲಿಲ್ಲ. ಕರೆಂಟ್ ಹೋದರೆ ಜನರೇಟರ್ ಇಲ್ಲ. ಒಂದು ಎಸ್ ಟಿಪಿಗೆ ವರ್ಷಕ್ಕೆ ಒಂದೂವರೆ ಕೋಟಿಯಂತೆ ಮೂರು ಎಸ್ ಟಿಪಿಗೆ ನಾಲ್ಕೂವರೆ ಕೋಟಿ ಹಣ ಪಡೆಯುತ್ತಾರೆ. ಇದೆಂತ ಸಾಧನೆ? ಇನ್ನಾದರೂ ಈ ಬಗ್ಗೆ ಕ್ರಮ ಜರುಗಿಸದೆ ಇದ್ದರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

    ಪತ್ರಿಕಾಗೋಷ್ಟಿಯಲ್ಲಿ ಅನಿಲ್ ಕುಮಾರ್, ನವೀನ್ ಡಿಸೋಜಾ, ಅಶ್ರಫ್, ಲ್ಯಾನ್ಸ್ ಲಾಟ್ ಪಿಂಟೋ, ನವೀನ್ ಚಂದ್ರ ಆಳ್ವ, ಶಶಿಧರ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

    Continue Reading

    International news

    ಇಂದು ಟ್ರಂಪ್ ಪದಗ್ರಹಣ; ಎಪ್ರಿಲ್‌ನಲ್ಲಿ ಭಾರತಕ್ಕೆ ?

    Published

    on

    ಮಂಗಳೂರು/ವಾಷಿಂಗ್ಟನ್ : ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕರಿಸಲಿದ್ದು, ಎಪ್ರಿಲ್‌ನಲ್ಲಿ ಭಾರತಕ್ಕೆ ಪ್ರವಾಸ ಕೈಗೊಳ್ಳುವ ಸಾಧ್ಯತೆಗಳಿವೆ.

    ಟ್ರಂಪ್ ಪ್ರಮಾಣವಚನ ಸ್ವೀಕರಿಸಿದ ಮೊದಲ ದಿನವೇ ಶ್ವೇತಭವನದಲ್ಲಿ 100ಕ್ಕೂ ಅಧಿಕ ಕಾರ್ಯಕಾರಿ ಆದೇಶಗಳಿಗೆ ಸಹಿ ಹಾಕಲಿದ್ದಾರೆ. ಟ್ರಂಪ್ ಅವರ ತಂಡವು ಈಗಾಗಲೇ ಅಗತ್ಯ ಸಿದ್ದತೆ ಮಾಡಿಕೊಂಡಿದ್ದು, ಓವಲ್ ಕಚೇರಿಯಲ್ಲಿರುವ ಡೆಸ್ಕ್‌ನಲ್ಲಿ ಆದೇಶ ಪ್ರತಿಗಳು ಸಿದ್ದಗೊಂಡಿದೆ. ಎರಡನೇ ಅವಧಿಗೆ ಅಧ್ಯಕ್ಷರಾಗುತ್ತಿದ್ದಂತೆಯೇ, ಒಂದು ನಿಮಿಷವೂ ವ್ಯರ್ಥ ಮಾಡದಂತೆ, ಚುನಾವಣೆ ಸಂದರ್ಭದಲ್ಲಿ ನೀಡಿದ ಹಲವು ಭರವಸೆಗಳನ್ನು ಈಡೇರಿಸುವ ನಿರೀಕ್ಷೆಗಳಿವೆ.

    ಟ್ರಂಪ್ ಭಾರತ ಪ್ರವಾಸ
    ಡೊನಾಲ್ಡ್ ಟ್ರಂಪ್ ಅವರು ಈ ವರ್ಷದ ಎಪ್ರಿಲ್‌ನಲ್ಲಿ ಭಾರತಕ್ಕೆ ಪ್ರವಾಸ ಕೈಗೊಳ್ಳುವ ಸಾಧ್ಯತೆಗಳಿವೆ. ಈ ಬಗ್ಗೆ ಅವರು ತಮ್ಮ ಸಲಹೆಗಾರರ ಜತೆಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ತಿಂಗಳು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅಮೆರಿಕ ಭೇಟಿ ವೇಳೆ ಈ ಕುರಿತು ಪ್ರಾಥಮಿಕ ಚರ್ಚೆಗಳು ನಡೆದಿವೆ ಎನ್ನಲಾಗಿದೆ.

    ಚೀನ ಜತೆಗೆ ಉತ್ತಮ ಬಾಂಧವ್ಯ ಹೊಂದಲು ನಿರ್ಧರಿಸಿರುವ ಟ್ರಂಪ್, ಅಧಿಕಾರ ಸ್ವೀಕಾರ ಬಳಿಕ ಚೀನದ ರಾಜಧಾನಿ ಬೀಜಿಂಗ್‌ಗೆ ಭೇಟಿ ನೀಡಲು ಸಹ ಬಯಸಿರುವುದಾಗಿ ತಮ್ಮ ಸಲಹೆಗಾರರಿಗೆ ಹೇಳಿದ್ದಾರೆ ಎಂದು ವರದಿಯಾಗಿದೆ.

    ಭಾರತ ಕ್ವಾಡ್ ಶೃಂಗಸಭೆಯ ಆತಿಥ್ಯ
    ಭಾರತ, ಅಮೆರಿಕ, ಜಪಾನ್ ಒಳಗೊಂಡ ಕ್ವಾಡ್ ಶೃಂಗಸಭೆಯ ಆತಿಥ್ಯವನ್ನು ಈ ಬಾರಿ ಭಾರತ ವಹಿಸಲಿದೆ. ಹೀಗಾಗಿ ಟ್ರಂಪ್ ಭಾರತ ಭೇಟಿ ಎಪ್ರಿಲ್ ಅಥವಾ ಈ ವರ್ಷದ ಕೊನೆಗೆ ನಡೆಯಬಹುದು ಎನ್ನಲಾಗಿದೆ. ಜೊತೆಗೆ ಇದೇ ವರ್ಷದಲ್ಲಿ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೂಡ ಅಮೆರಿಕಕ್ಕೆ ಆಹ್ವಾನಿಸುವ ಸಾಧ್ಯತೆಗಳಿವೆ.

     

    Continue Reading

    LATEST NEWS

    Trending