Wednesday, December 1, 2021

ಮಡಿಕೇರಿ ಹೋಂಸ್ಟೇಯಲ್ಲಿ ಯುವತಿ ಅನುಮಾನಾಸ್ಪದವಾಗಿ ಸಾವು

ಮಡಿಕೇರಿ: ಕೊಡಗಿಗೆ ಪ್ರವಾಸಕ್ಕೆಂದು ಬಂದು ಮಡಿಕೇರಿಯ ಹೋಂಸ್ಟೇ ಯಲ್ಲಿ ತಂಗಿದ್ದ ಯುವತಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

ಮುಂಬೈ ಮೂಲದ ಈಶ್ವರ್ ಅವರ ಮಗಳು ವಿಘ್ನೇಶ್ವರಿ(24) ಮೃತ ಯುವತಿಯಾಗಿದ್ದು, ಇದೇ ಶನಿವಾರ ಕೊಡಗು ಜಿಲ್ಲೆಗೆ ತನ್ನ ನಾಲ್ವರು ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದಿದ್ದರು.

ಮಡಿಕೇರಿ ನಗರದ ನ್ಯೂ ಕೂರ್ಗ್ ವ್ಯಾಲಿ ಹೋಂಸ್ಟೇನಲ್ಲಿ ತಂಗಿದ್ದರು. ಬಳಿಕ ಕೊಡಗಿನ ಪ್ರವಾಸಿತಾಣಗಳಿಗೆ ಭೇಟಿ ನೀಡಿದ ಯುವತಿಯರ ತಂಡ ಭಾನುವಾರವೂ ಜಿಲ್ಲೆಯ ವಿವಿಧ ಪ್ರವಾಸಿತಾಣಗಳಿಗೆ ಭೇಟಿ ನೀಡಿದ್ದಾರೆ.

ಭಾನುವಾರ ರಾತ್ರಿ ಸ್ನಾನಕ್ಕೆಂದು ವಿಘ್ನೇಶ್ವರಿ ಬಾತ್ ರೂಮಿಗೆ ತೆರಳಿದ್ದ ಯುವತಿ ಬಾತ್ ರೂಮಿನಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಬಾತ್ ರೂಮಿಗೆ ಅಳವಡಿಸಿದ್ದ ಗೀಸರ್ ನಿಂದ ಗ್ಯಾಸ್ ಲೀಕ್ ಆಗಿ ಯುವತಿ ಮೃತಪಟ್ಟಿರಬಹುದು ಎನ್ನಲಾಗಿದೆ. ಯುವತಿ ಮೃತಪಟ್ಟಿರುವುದು ತಿಳಿಯುತ್ತಿದ್ದಂತೆ ಜೊತೆಯಲ್ಲಿದ್ದ ಉಳಿದ ನಾಲ್ವರು ಯುವತಿಯರು ಹೋಂಸ್ಟೇ ಮಾಲೀಕನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

ನಂತರ ತಕ್ಷಣವೇ ಮಾಲೀಕ ಮುಕ್ತರ್ ಸ್ಥಳಕ್ಕೆ ಬಂದಿದ್ದಾರೆ. ಆದರೆ ಅಷ್ಟರಲ್ಲಿ ಯುವತಿ ಮೃತಪಟ್ಟಿದ್ದಾಳೆ. ಯುವತಿಯ ಮೃತದೇಹವನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ಮಾಡಿ ಬಳಿಕ ಪೋಷಕರಿಗೆ ಹಸ್ತಾಂತರ ಮಾಡಿದ್ದಾರೆ.

ಘಟನೆ ಸಂಬಂಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕರಿತಂತೆ ಮಾತನಾಡಿರುವ ಯುವತಿಯ ತಂದೆ ಈಶ್ವರ್, ನನ್ನ ಮಗಳು ಆರೋಗ್ಯವಾಗಿದ್ದಳು.

ನಿತ್ಯ ವಾಕ್ ಕೂಡ ಮಾಡುತ್ತಿದ್ದಳು. ಎರಡು ದಿನ ಕೊಡಗಿನ ಪ್ರವಾಸಿ ಸ್ಥಳಗಳಲ್ಲಿ ಚೆನ್ನಾಗಿಯೇ ಓಡಾಡಿ ನೋಡಿದ್ದಾಳೆ. ಆದರೆ ನಿನ್ನೆ ರಾತ್ರಿ ಇದ್ದಕ್ಕಿದ್ದಂತೆ ಮೃತಪಟ್ಟಿರುವುದು ಅನುಮಾನ ಮೂಡಿಸಿದೆ.

ಈ ಕುರಿತು ಸರಿಯಾದ ತನಿಖೆ ಮಾಡಿ ನಮಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಇನ್ನು ಹೋಂಸ್ಟೇ ಮಾಲೀಕ ಮುಕ್ತರ್ ಗ್ಯಾಸ್ ಗೀಜರ್ ಗೆ ಕನೆಕ್ಷನ್ ಕೊಟ್ಟಿಲ್ಲ. ಹೇಗೆ ಮೃತಪಟ್ಟಿದ್ದಾರೆ ಎನ್ನುವುದರ ಬಗ್ಗೆ ಮಾಹಿತಿ ಇಲ್ಲ ಎಂದಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...