ಕನ್ನಡದ ಬಿಗ್ಬಾಸ್ ಅಚ್ಚರಿಯ ರೀತಿಯಲ್ಲಿ ಎಂಟ್ರಿ ಕೊಟ್ಟಿದ್ದರು ಚೈತ್ರಾ ಕುಂದಾಪುರ. ಯಾರೂ ಊಹಿಸಿರಲಿಲ್ಲ ಚೈತ್ರಾ ಕುಂದಾಪುರ ಬಿಗ್ಬಾಸ್ ಮನೆಗೆ ಎಂಟ್ರಿ ಕೊಡ್ತಾರೆ ಎಂದು. ತುಂಬಾ ಖುಷಿಯಾಗಿ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದ ಚೈತ್ರಾ ಈಗ ಪಶ್ಚಾತಾಪದ ಮಾತುಗಳನ್ನು ಆಡುತ್ತಿದ್ದಾರೆ.
ಬಿಗ್ಬಾಸ್ಗೆ ಬಂದ ಮೊದ ಮೊದಲು ಚೆನ್ನಾಗಿಯೇ ಇದ್ದ ಚೈತ್ರಾ ಏಕಾಏಕಿ ಡಲ್ ಹೊಡೆದಿದ್ದಾರೆ. ಕೆಲವು ದಿನಗಳಿಂದ ಚೈತ್ರಾ ಕುಂದಾಪುರ ಮಾತಿನ ರೀತಿ ಬದಲಾಗಿದೆ. ಯಾವುದೇ ಸಂದರ್ಭದಲ್ಲಿಯೂ ಕುಗ್ಗದ ಚೈತ್ರಾ ಕುಂದಾಪುರ ಈಗ ಸಖತ್ ಸೈಲೆಂಟ್ ಆಗಿದ್ದಾರೆ. ನನಗೆ ಈ ವೇದಿಕೆ ಅಲ್ಲ ಅಂತ ನಿನ್ನೆಯ ಸಂಚಿಕೆಯಲ್ಲಿ ಬೇಸರ ಹೊರ ಹಾಕಿದ್ದಾರೆ.
ನಿನ್ನೆಯ ಸಂಚಿಕೆಯಲ್ಲಿ ಚೈತ್ರಾ ಕುಂದಾಪುರ ಭವ್ಯಾ ಗೌಡ ಮುಂದೆ ಈ ಪಶ್ಚಾತಾಪದ ಮಾತಾಡಿದ್ದಾರೆ. ಏಕೆಂದರೆ ವೀಕೆಂಡ್ ಎಪಿಸೋಡ್‌ನಲ್ಲಿ ಚೈತ್ರಾ ಕುಂದಾಪುರ ಅವರನ್ನು ಮನೆಮಂದಿ ಕಸಕ್ಕೆ ಹೋಲಿಸಿದ್ದರು. ಸುಖಾ ಸುಮ್ಮನೆ ಮಾತಾಡುತ್ತಲೇ ಇರುತ್ತಾರೆ. ಸುಮ್ನೆ ಇರಿ ಚೈತ್ರಾಕ್ಕ ಅಂದ್ರು ಮಾತುಗಳನ್ನು ಕೇಳುವುದೇ ಇಲ್ಲ ಅಂತ ಹೇಳಿದ್ದಾರೆ. ಇದೇ ಮಾತುಗಳು ಚೈತ್ರಾಗೆ ಬೇಸರ ತಂದಿದೆ.
ಬಿಗ್ಬಾಸ್ ನನಗೆ ಅಲ್ಲ. ತಪ್ಪು ನಿರ್ಧಾರ ತೆಗೆದುಕೊಂಡೆ. ಶಾಲೆಗೆ ಹೋಗುವವರು ಶಾಲೆಗೆ ಹೋಗಬೇಕು. ದೇವಸ್ಥಾನಕ್ಕೆ ಹೋಗುವವರು ಶಾಲೆಗೆ ಹೋಗಬೇಕು. ಪಬ್ಗೆ ಹೋಗುವವರು ಪಬ್ಗೆ ಹೋಗಬೇಕು. ನನ್ನಂಥವಳು ಇಲ್ಲಿಗೆ ಬರಬಾರದಾಗಿತ್ತು ಎಂದು ಚೈತ್ರಾ ಕುಂದಾಪುರ ಅವರು ಹೇಳಿದ್ದಾರೆ. ಇಲ್ಲಿನ ಪರಿಸ್ಥಿತಿಯನ್ನು ಎದುರಿಸಬೇಕು ಅಂತ ತುಂಬಾ ಸಲ ಅಂದುಕೊಳ್ಳುತ್ತೇನೆ. ಆದರೆ ಆಗಲ್ಲ. ನನ್ನ ಮಾತು ಕಿರಿಕಿರಿ ಅಂತ ಯಾರೂ ಹೇಳಿರಲಿಲ್ಲ. ಮಾತು ನನಗೆ ಅನ್ನ ಕೊಟ್ಟಿದೆ, ಬದುಕನ್ನು ಕೊಟ್ಟಿದೆ. ಕಿರಿಕಿರಿ ಅಂತ ಯಾರೂ ಹೇಳಿರಲಿಲ್ಲ ಎಂದು ಹೇಳಿಕೊಂಡು ಚೈತ್ರಾ ಕುಂದಾಪುರ ಅವರು ಕಣ್ಣೀರು ಹಾಕಿದ್ದಾರೆ. ಆಗ ಭವ್ಯಾ ಗೌಡ ಚೈತ್ರಾಗೆ ಅವರಿಗೆ ಸಮಾಧಾನ ಮಾಡಿ ಬುದ್ಧಿ ಮಾತು ಹೇಳಿದ್ದಾರೆ.
ಮಂಗಳೂರು/ಮಧುಗಿರಿ: ಕೃಷಿ ಹೊಂಡದಲ್ಲಿ ಸ್ಪೋಟ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಡ್ರೋನ್ ಪ್ರತಾಪ್ ಅವರಿಗೆ ಜಾಮೀನು ಮಂಜೂರಾಗಿದೆ.
ಸೋಮವಾರ (ಡಿ.23 ರಂದು) ಮಧುಗಿರಿ 4ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಡ್ರೋನ್ ಪ್ರತಾಪ್ ಗೆ ಜಾಮೀನು ನೀಡಿದೆ.
ಸೋಡಿಯಂ ಮೆಟಲ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಡ್ರೋನ್ ಪ್ರತಾಪ್ ಗೆ ಜಾಮೀನು ಮಂಜೂರು ಆಗಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಬಳಿ ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಡ್ರೋನ್ ಪ್ರತಾಪ್ ಸ್ಪೋಟ ಮಾಡಿದ್ದರು. ಈ ಸಂಬಂಧ ಅವರನ್ನು ಮಿಡಿಗೇಶಿ ಠಾಣೆಯ ಪೊಲೀಸರು ಸ್ವಯಂ ಪ್ರಕರಣವನ್ನು ದಾಖಲಿಸಿಕೊಂಡು ಬಂಧಿಸಿದ್ದರು.
ಪ್ರತಾಪ್ ಅವರನ್ನು ಡಿ.16 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಆ ಬಳಿಕ ನ್ಯಾಯಾಲಯ ಅವರಿಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿತ್ತು. ಡಿಸೆಂಬರ್ 26ರ ತನಕ ಅವರು ನ್ಯಾಯಾಂಗ ಬಂಧನದಲ್ಲಿ ಇರಬೇಕಾಗಿತ್ತು.
ಪ್ರಕರಣ ಸಂಬಂಧ ಪ್ರತಾಪ್ ಅವರ ಕ್ಯಾಮೆರಾ ಮ್ಯಾನ್ ವಿನಯ್ ಹಾಗೂ ಸೋಡಿಯಂ ಕೊಡಿಸಿದ್ದ ಪ್ರಜ್ವಲ್ ಅವರನ್ನು ಬಂಧಿಸಿದ್ದರು.
ಮಂಗಳವಾರ (ಡಿ.24ರಂದು) ಜಾಮೀನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅವರು ಜೈಲಿನಿಂದ ಹೊರಬರುವ ಸಾಧ್ಯತೆಯಿದೆ.
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 11 ಇವತ್ತು ಮತ್ತೊಂದು ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಕಳೆದ ವಾರದ ಎಲಿಮಿನೇಷನ್ ಟ್ವಿಸ್ಟ್‌ಗೆ ಇವತ್ತು ಮೆಗಾ ಕ್ಲೈಮ್ಯಾಕ್ಸ್ ಕಾದಿದೆ. ಬಿಗ್ ಬಾಸ್ ವೀಕ್ಷಕರ ಕುತೂಹಲ ಹಾಗೂ ಕಾಡುತ್ತಿರುವ ಪ್ರಶ್ನೆಗೆ ಕೆಲವೇ ಕ್ಷಣದಲ್ಲಿ ಉತ್ತರ ಸಿಗುತ್ತಿದೆ.
ಬಿಗ್ ಬಾಸ್ ಸೀಸನ್ 11 ಸ್ಪರ್ಧಿಗಳ ಜಿದ್ದಾಜಿದ್ದಿ ಜೋರಾಗಿದೆ. 12ನೇ ವಾರದಲ್ಲಿ ಯಾರು ಎಲಿಮಿನೇಟ್ ಆಗುತ್ತಾರೆ ಅನ್ನೋ ಕುತೂಹಲ ಹಾಗೇ ಉಳಿದಿದೆ. ಸೂಪರ್ ಸಂಡೇ ವಿತ್ ಬಾದ್ ಷಾ ಎಪಿಸೋಡ್‌ನಲ್ಲಿ ಐಶ್ವರ್ಯ ಹಾಗೂ ತ್ರಿವಿಕ್ರಮ್ ಡೇಂಜರ್ ಝೋನ್ ತಲುಪಿದ್ದರು. ಕೊನೆಗೆ ತ್ರಿವಿಕ್ರಮ್ ಅವರೇ ಎಲಿಮಿನೇಟ್ ಎಂದು ಘೋಷಣೆ ಮಾಡಲಾಗಿದ್ದು, ಬಿಗ್ ಬಾಸ್ ಆದೇಶದಂತೆ ತ್ರಿವಿಕ್ರಮ್ ಬಿಗ್ ಬಾಸ್ ಗೇಟ್ ಓಪನ್ ಮಾಡಲಾಗಿದೆ.
ತ್ರಿವಿಕ್ರಮ್ ಅವರು ಈ ವಾರ ಎಲಿಮಿನೇಟ್ ಆಗಿದ್ದಾರಾ ಅನ್ನೋದು ಸದ್ಯ ಕುತೂಹಲಕ್ಕೆ ಕಾರಣವಾಗಿದೆ. ಬಿಗ್ ಬಾಸ್ ವೀಕ್ಷಕರಿಗೆ ಇವತ್ತು ಮೆಗಾ ಟ್ವಿಸ್ಟ್ ಕಾದಿದೆ. ಬಿಗ್ ಬಾಸ್ ಮನೆಯ ಸದಸ್ಯರು ಕೂಡ ತ್ರಿವಿಕ್ರಮ್ ಈ ವಾರ ಎಲಿಮಿನೇಟ್ ಆಗಿದ್ದಾರೆ ಅನ್ನೋದನ್ನ ಈಗಲೂ ನಂಬುತ್ತಿಲ್ಲ. ಮತ್ತೊಂದು ಸರ್‌ಪ್ರೈಸ್ ಕಾದಿದೆ ಅಂದುಕೊಂಡೇ ಕಾಲ ಕಳೆಯುತ್ತಿದ್ದಾರೆ.
ಮೂಲಗಳ ಪ್ರಕಾರ ತ್ರಿವಿಕ್ರಮ್ ಅವರು ಈ ವಾರ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗೋ ಸಾಧ್ಯತೆ ಕಡಿಮೆ ಇದೆ. ಪ್ರತಿ ಸೀಸನ್ ಅಂತೆ ತ್ರಿವಿಕ್ರಮ್ ಅವರನ್ನ ಬಿಗ್ ಬಾಸ್ ಸೀಕ್ರೆಟ್ ರೂಮ್‌ಗೆ ಕಳುಹಿಸಿರುವ ಸಾಧ್ಯತೆ ಇದೆ. ಮನೆಯವರ ಮಾತುಗಳನ್ನ ಕೇಳಿಸಿಕೊಂಡು ತ್ರಿವಿಕ್ರಮ್ ಅವರು ಬಿಗ್ ಬಾಸ್ ಮನೆಯಲ್ಲಿ ಸರ್‌ಪ್ರೈಸ್ ಆಗಿ ಎಂಟ್ರಿ ಕೊಡಬಹುದು ಎನ್ನಲಾಗಿದೆ.
ಬಿಗ್ ಬಾಸ್ ಕೊಟ್ಟ ಎಲ್ಲಾ ಟಾಸ್ಕ್‌ಗಳಲ್ಲೂ ತ್ರಿವಿಕ್ರಮ್ ಅವರು ಚೆನ್ನಾಗಿಯೇ ಆಟ ಆಡಿಕೊಂಡು ಬಂದಿದ್ದಾರೆ. ಇದರ ಜೊತೆಗೆ ಈ ವಾರ ಬಿಗ್ ಬಾಸ್ ಎಲಿಮಿನೇಷನ್‌ನಿಂದ ವೀಕ್ಷಕರ ವೋಟಿಂಗ್ ಕೂಡ ಓಪನ್ ಆಗಿಲ್ಲ. ಹೀಗಾಗಿ ತ್ರಿವಿಕ್ರಮ್ ಅವರು ಎಲ್ಲರ ನಿರೀಕ್ಷೆಯಂತೆ ಎಲಿಮಿನೇಟ್ ಆಗದೆ ಇಂದು ಮತ್ತೆ ಬಿಗ್ ಬಾಸ್ ಮನೆಗೆ ರೀ ಎಂಟ್ರಿ ಕೊಡುವ ಸಾಧ್ಯತೆ ಇದೆ.
ಕಿಚ್ಚ ಸುದೀಪ್ ಅವರು ನಡೆಸಿಕೊಡುವ ಕನ್ನಡದ ಬಿಗ್ಬಾಸ್ ಸೀಸನ್ 11 ಯಶಸ್ವಿಯಾಗಿ ಸಾಗುತ್ತಿದ್ದು 14ನೇ ವಾರಕ್ಕೆ ಎಂಟ್ರಿಕೊಟ್ಟಿದೆ. ಬಿಗ್ಬಾಸ್ ಕೊನೆ ಹಂತಕ್ಕೆ ಬರುವುದರಿಂದ ಸ್ಪರ್ಧಿಗಳಲ್ಲಿ ಪೈಪೋಟಿ ಹೆಚ್ಚಾಗಿ ನಡೆದಿದೆ. ಒಬ್ಬರ ಮೇಲೆ ಒಬ್ಬರು ಕುದಿಯುತ್ತಿದ್ದು ತಮ್ಮನ್ನು ತಾವು ಎಚ್ಚರಿಸಿಕೊಳ್ಳಬೇಕಿದೆ. ಸೂಪರ್ ಸಂಡೇಯಲ್ಲಿ ಕಿಚ್ಚನಿಂದ ಭವ್ಯಗೌಡ ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಐಶ್ವರ್ಯ ಮುಖಕ್ಕೆ ಭವ್ಯ ಟೀ ಚೆಲ್ಲಿದ್ದಾರೆ.
ಬಿಗ್ಬಾಸ್ ಮನೆಯಲ್ಲಿ ಎಚ್ಚೆತ್ತಿಕೊಳ್ಳಿ ಎಂದು ಟಾಸ್ಕ್ ಶುರುವಾಗಿದ್ದು ಸ್ಪರ್ಧಿಗಳ ಮುಖಕ್ಕೆ ಟೀ ಅನ್ನು ಹಾಕಲಾಗಿದೆ. ಇದರಲ್ಲಿ ಕೇವಲ ಐಶ್ವರ್ಯ ಮುಖಕ್ಕೆ ಭವ್ಯ ಮಾತ್ರ ಟೀ ಚೆಲ್ಲಿಲ್ಲ. ಇದೇ ರೀತಿ ಎಚ್ಚೆತ್ತುಕೊಳ್ಳಿ ಎಂದು ಹನುಮಂತು ಮುಖಕ್ಕೆ ಧನರಾಜ್, ಗೌತಮಿ ಮುಖಕ್ಕೆ ರಜತ್, ಚೈತ್ರಾ ಮುಖಕ್ಕೆ ಮಂಜು, ಮಂಜು ಮುಖಕ್ಕೆ ಗೌತಮಿ, ಮೋಕ್ಷಿತಾ ಮುಖಕ್ಕೂ ಚಹಾ ಚೆಲ್ಲಲಾಗಿದೆ. ಅಂದರೆ ಇವರೆಲ್ಲಾ ಮನೆಯಲ್ಲಿ ಎಚ್ಚೆತ್ತುಕೊಳ್ಳಬೇಕಿದೆ ಎಂದು ಹೇಳಲಾಗಿದೆ.
ಮನೆಯಲ್ಲಿ ಸದಸ್ಯರ ಪೈಕಿ ಎಚ್ಚೆತ್ತುಕೊಳ್ಳಬೇಕಿರುವ ಸದಸ್ಯ ಯಾರು ಎಂದು ಘೋಷಿಸಬೇಕಿದೆ. ಇದು ಬಿಗ್ ಬಾಸ್ ಆರ್ಡರ್ ಆಗಿದೆ. ಈ ಹಿನ್ನೆಲೆಯಲ್ಲಿ ಗೌತಮಿ, ಹನುಮಂತು, ಚೈತ್ರಾ, ಮೋಕ್ಷಿತಾ, ಮಂಜು ಇವರು ಇನ್ನಷ್ಟು ಎಚ್ಚೆತ್ತುಕೊಂಡು ಸ್ಪರ್ಧೆ ಮಾಡಬೇಕಿದೆ. ನೀವು ಟಾಸ್ಕ್ನಲ್ಲಿ ಇನ್ನಷ್ಟು ಸುಧಾರಿಸಿಕೊಳ್ಳಬೇಕು ಎಂದು ಟೀ ಚೆಲ್ಲಲಾಗಿದೆ. ಗೌತಮಿಗೆ ಹೆದರಿಕೊಂಡು ಮಂಜು ಮಾತನಾಡಲ್ಲ ಎನ್ನಲಾಗಿದೆ.
ಚೈತ್ರಾ ಕುಂದಾಪುರ ಹಾಗೂ ಐಶ್ವರ್ಯ ನಡುವೆ ಮಾತಿನ ಸಮರ ನಡೆದಿದೆ. ನಿಮ್ಮ ಆಟಗಳಿಗೆ ಈ ವಾರ ನಾನು ಬಲಿಪಶು ಆದೆ ಎಂದು ಚೈತ್ರಾಗೆ, ಐಶ್ವರ್ಯ ಕೋಪದಲ್ಲಿ ಚೀರಿಕೊಂಡು ಹೇಳಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿನ ವಾಕ್ಸಮರ ನಡೆದಿದ್ದು ಕಿಚ್ಚು ಬಿದ್ದಂತೆ ಆಗಿದೆ. ನೀನು ಯಾವಳೇ ಎ.. ಅನ್ನೋಕೆ ಎಂದು ಚೈತ್ರಾ ಏಕವಚನದಲ್ಲೇ ಮಾತನಾಡಿದ್ದಾರೆ. ಬಾಯಿ ಮುಚ್ಚೆ ಸಾಕು ಎಂದು ಐಶ್ವರ್ಯ ತಿರುಗೇಟು ಕೊಟ್ಟಿದ್ದಾರೆ.