ಸ್ವರ್ಗ ಹಾಗೂ ನರಕ ಪರಿಕಲ್ಪನೆಯಲ್ಲಿ ಈ ಬಾರಿಯ ಬಿಗ್ ಬಾಸ್ ಮನೆ ಆರಂಭದಲ್ಲೇ ರಣಾಂಗಣವಾಗುತ್ತಿದೆ. ನರಕದಲ್ಲಿರುವ ಸ್ಪರ್ಧಿ ಚೈತ್ರಾ ಈಗಾಗಲೇ ಸ್ವರ್ಗವಾಸಿಗಳಿಗೆ ನರಕ ತೋರಿಸಿದ್ದಾರೆ.
ಆರಂಭದಲ್ಲೇ ಬಿಗ್ ಬಾಸ್ ಮನೆಯ ಕಲರ್‌ಫುಲ್ ವಾತಾವರಣ ಬಿಸಿ ಏರಿಸಿದ ಚೈತ್ರಾ ಇದೀಗ ನಾಮಿನೇಟ್ ಆಗಿದ್ದಾರೆ. ಈ ಮೂಲಕ ಬಿಗ್ ಬಾಸ್ 11ರ ಮೊದಲ ವಾರದಲ್ಲಿ ನಾಮಿನೇಟ್ ಆದ ಮೊದಲ ಮತ್ತು ಏಕೈಕ ಸ್ಪರ್ಧಿಯಾಗಿದ್ದಾರೆ.
ಚೈತ್ರಾ ಕುಂದಾಪುರ ಎಲಿಮಿನೇಶನ್‌ಗೆ ಸ್ವರ್ಗವಾಸಿಗಳು ಒಕ್ಕೊರಲಿನಿಂದ ಮತ ಹಾಕಿದ್ದಾರೆ. ಆದರೆ ಬಿಗ್ ಬಾಸ್ ಮನೆಯಲ್ಲಿ ಚೈತ್ರಾ ಇವರ ಆಟಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರ. ಪರ ವಿರೋಧಗಳಿದ್ದರೂ ಆಟದ ವಿಚಾರದಲ್ಲಿ ಚೈತ್ರಾ ಜನರಿಂದ ಹೆಚ್ಚಿನ ಮತ ಪಡೆಯುವ ಸಾಧ್ಯತೆಗಳಿವೆ.
ಚೈತ್ರಾ ಗೂಗ್ಲಿಗೆ ಆರಾಮವಾಗಿದ್ದ ಸ್ವರ್ಗವಾಸಿಗಳು ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಚೈತ್ರಾ ಮಾತು, ಗೇಮ್ ಪ್ಲಾನ್‌ಗೆ ಸ್ವರ್ಗವಾಸಿಗಳು ಕಕ್ಕಾಬಿಕ್ಕಿಯಾಗಿದ್ದಾರೆ. ಸ್ವರ್ಗವಾಸಿಗಳಿಗಿಂತ ನರಕವಾಸಿಗಳೇ ಹೆಚ್ಚಿನ ಖುಷಿ, ಸಂಭ್ರಮದಲ್ಲಿರುವಂತೆ ಕಂಡುಬಂತು.
ಇಷ್ಟು ದಿನ ಬಿಗ್ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ ಈ ಗಳಿಗೆಗಾಗಿಯೇ ಕಾಯುತ್ತಿದ್ದರು. 95 ದಿನಗಳ ಕಾಲ ಬಿಗ್ಬಾಸ್ ಮನೆಯಲ್ಲಿ ಉಳಿದುಕೊಂಡಿದ್ದ ಫೈರ್ ಬ್ರ್ಯಾಂಡ್ ಚೈತ್ರಾ ಕುಂದಾಪುರ ಜೀವನದಲ್ಲೇ ಬಹಳ ಸುಂದರವಾದ ಕ್ಷಣವಿದು.
ಹೌದು, ಬಿಗ್ಬಾಸ್ ಸೀಸನ್ 11 ಶುರುವಾಗಿ ಇಂದಿಗೆ 95 ದಿನಗಳು ಕಳೆದಿವೆ. ಇಷ್ಟು ದಿನಗಳ ಕಾಲ ಬಿಗ್ಬಾಸ್ ಮನೆಯಲ್ಲಿ ಉಳಿದುಕೊಂಡಿದ್ದ ಸ್ಪರ್ಧಿಗಳಿಗೆ ಈ ವಾರ ತುಂಬಾನೇ ಸ್ಪೆಷಲ್ ಆಗಿತ್ತು. ಏಕೆಂದರೆ ಈ ವಾರ ಬಿಗ್ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬಸ್ಥರು ಎಂಟ್ರಿ ಕೊಟ್ಟು ಮಕ್ಕಳಿಗೆ ಹೊಸ ಹುರುಪನ್ನು ತುಂಬಿದ್ದರು.
ಅದರಂತೆ ಮಂಗಳವಾರದ ಸಂಚಿಕೆಯಲ್ಲಿ ಬಿಗ್ಬಾಸ್ ಮನೆಗೆ ಭವ್ಯಾ ಗೌಡ, ತ್ರಿವಿಕ್ರಮ್ ಹಾಗೂ ರಜತ್ ಕಿಶನ್ ಫ್ಯಾಮಿಲಿಯವರು ಬಂದಿದ್ದರು. ನಿನ್ನೆ ಬಿಗ್ಬಾಸ್ ಮನೆಗೆ ಮೋಕ್ಷಿತಾ ಪೈ, ಉಗ್ರಂ ಮಂಜು ಹಾಗೂ ಗೌತಮಿ ಕುಟುಂಬಸ್ಥರು ಎಂಟ್ರಿ ಕೊಟ್ಟಿದ್ದರು. ಇಂದಿನ ಸಂಚಿಕೆಯಲ್ಲಿ ಬಿಗ್ ಮನೆಗೆ ಧನರಾಜ್ ಆಚಾರ್ಯ, ಹನುಮಂತ ಹಾಗೂ ಚೈತ್ರಾ ಕುಂದಾಪುರ ಫ್ಯಾಮಿಲಿಯವರು ಎಂಟ್ರಿ ಕೊಟ್ಟಿದ್ದಾರೆ.
ಬಿಗ್ಬಾಸ್ ಮನಗೆ ಚೈತ್ರಾ ಕುಂದಾಪುರ ತಾಯಿ ಹಾಗೂ ತಂಗಿ ಎಂಟ್ರಿ ಕೊಟ್ಟ. ಅಮ್ಮನನ್ನು ನೋಡುತ್ತಿದ್ದಂತೆ ಚೈತ್ರಾ ಭಾವುಕರಾಗಿದ್ದಾರೆ. ಆದ್ರೆ ತಾಯಿ ಆಡಿದ ಅದೊಂದು ಮಾತಿಗೆ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ ಚೈತ್ರಾ. ಹೌದು ಬಿಗ್ಬಾಸ್ ಮನೆಗೆ ಬಂದಿದ್ದ ಚೈತ್ರಾ ಕುಂದಾಪುರ ಸತತವಾಗಿ 4 ಬಾರಿ ಸ್ಪರ್ಧಿಗಳಿಂದ ಕಳಪೆ ಪಟ್ಟ ಸಿಕ್ಕಿತ್ತು. ಹೀಗಾಗಿ ಇದೇ ವಿಚಾರವಾಗಿ ಚೈತ್ರಾ ಅವರ ತಾಯಿ ಮಾತಾಡಿದ್ದಾರೆ. ನನ್ನ ಮಗಳಿಗೆ ಇಷ್ಟು ವಾರದಲ್ಲಿ ಕಳಪೆ ಕೊಟ್ಟಿದ್ಧೀರಾ, ಆದ್ರೆ ನಮ್ಮ ಮಗಳು ಯಾವತ್ತಿದ್ರೂ ನಮಗೆ ಉತ್ತಮನೇ ಅಂತ ಹೇಳುತ್ತಾ ಮೆಡಲ್ ಹಾಕಿದ್ದಾರೆ. ಇದಾದ ಬಳಿಕ ಮಾತಾಡಿದ ಚೈತ್ರಾ, ನನ್ನ ತಂಗಿ ಹುಟ್ಟಿದ್ದಾಗ ನಮಗೆ ನಿಜವಾದ ಚಾಲೆಂಜ್ ಶುರುವಾಗುತ್ತೆ, ಮೂರನೇದು ಹೆಣ್ಣಾಯ್ತು, ಅಪ್ಪ ಅಮ್ಮನ ಹೆಣಕ್ಕೆ ಬೆಂಕಿ ಇಡೋಕು ಇವರ ಮನೆಯಲ್ಲಿ ಗಂಡು ದಿಕ್ಕಿಲ್ಲ ಅಂತ ಜನ ಹೇಳಿದ್ದಾರೆ ಎಂದು ಕಣ್ಣೀರು ಹಾಕಿದ್ದಾರೆ.
ಈ ವಾರ ಬಿಗ್ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬಸ್ಥರು ಒಬ್ಬೊಬ್ಬರೇ ಬಂದು ಹೋಗ್ತಿದ್ದಾರೆ. ಅಂತೆಯೇ ಧನರಾಜ್ ಅವರ ದೊಡ್ಡ ಕುಟುಂಬ ಬಿಗ್ಬಾಸ್ ಮನೆಗೆ ಎಂಟ್ರಿಯಾಗಿದೆ.
ಕುಟುಂಬದ ಸದಸ್ಯರನ್ನು ನೋಡಿದ ಧನರಾಜ್ ಫುಲ್ ಖುಷ್ ಆಗಿದ್ದಾರೆ. ಅವರ ಪತ್ನಿ ಪ್ರಜ್ಞಾ ತಮ್ಮದೇ ಸ್ಟೈಲ್ನಲ್ಲಿ ಪತಿಯ ಕಾಲೆಳೆದು ಕ್ಲಾಸ್ ತೆಗೆದುಕೊಂಡಿದ್ದಾರೆ. ನಾನು ಇಲ್ಲದೇ ನಿಮಗೆ ಭಾರೀ ಖುಷಿಯಾಗಿದೆ ಎಂದು ಪ್ರೀತಿಯಿಂದ ಹೊಡೆಯಲು ಶುರು ಮಾಡಿದ್ದಾರೆ. ಎಲ್ಲದಕ್ಕೂ ಐಶು ಹೆಸರು ತೆಗೆದುಕೊಳ್ತಿದ್ದೀರಿ. ನೀವು ಐಶುಗೆ ಲೈನ್ ಹೊಡೆಯುತ್ತಿದ್ದೀರಾ ಅಂತಾ ಡೌಟ್ ಎಂದು ಬಾರಿಸಿದ್ದಾರೆ. ಇವರಿಬ್ಬರ ಕ್ಯೂಟ್ ಕಿತ್ತಾಟವನ್ನು ನೋಡಿದ ಇತರೆ ಸ್ಪರ್ಧಿಗಳು ನಕ್ಕಿದ್ದಾರೆ.
ಅದಲ್ಲದೇ ಧನರಾಜ್ ಅವರ ಕೂಡು ಕುಟುಂಬ ಮನೆಗೆ ಎಂಟ್ರಿ ನೀಡಿದೆ. ಬಿಗ್ಬಾಸ್ ಮನೆಗೆ ಬಂದಿರುವ ಸದಸ್ಯರು ಹಲಿ ಕುಣಿತಕ್ಕೆ ಹೆಜ್ಜೆ ಹಾಕಿದೆ. ವಿಶೇಷವಾಗಿ ಧನರಾಜ್ ಅವರ ಮಗುವನ್ನು ಕೂಡ ಬಿಗ್ಬಾಸ್ ಮನೆಗೆ ಬಂದಿದೆ. ಇಂದು ರಾತ್ರಿ ಧನರಾಜ್ ದಂಪತಿಗೆ ಸಂಬಂಧಿಸಿದ ಎಪಿಸೋಡ್ ಪ್ರಸಾರ ಆಗಲಿದೆ. ಬಿಗ್ಬಾಸ್ ವೀಕ್ಷಕರು ಅದನ್ನು ಕಣ್ತುಂಬಿಕೊಳ್ಳಲು ಫುಲ್ ಎಕ್ಸೈಟ್ ಆಗಿದ್ದಾರೆ.
ಬರೀ ಕಿತ್ತಾಟ, ಗಲಾಟೆಯಿಂದ ತುಂಬಿರುತ್ತಿದ್ದ ಬಿಗ್ಬಾಸ್ ಮನೆ ಕಳೆದ ಎರಡು ದಿನಗಳಿಂದ ಭಾವನಾತ್ಮಕ ಘಳಿಗೆಗಳಿಗೆ ಸಾಕ್ಷಿ ಆಗ್ತಿದೆ. ಸ್ಪರ್ಧಿಗಳ ಕುಟುಂಬಸ್ಥರು ಒಬ್ಬೊಬ್ಬರೇ ಎಂಟ್ರಿ ಆಗ್ತಿದ್ದು, ವೀಕ್ಷಕರಿಗೆ ಸ್ಪೆಷಲ್ ಮನರಂಜನೆಯ ಬೂಸ್ಟ್ ಸಿಗ್ತಿದೆ. ಜೊತೆಗೆ ಸ್ಪರ್ಧಿಗಳಿಗೂ ಎನರ್ಜಿ ಸಿಗ್ತಿದೆ.
ಅಂತೆಯೇ ಧನರಾಜ್ ಆಚಾರ್ಯ ಅವರ ಕೂಡು ಕುಟುಂಬ ಬಿಗ್ಬಾಸ್ ಮನೆಗೆ ಎಂಟ್ರಿ ನೀಡಿದೆ. ಇಡೀ ಕುಟುಂಬವನ್ನು ಕಂಡ ಧನರಾಜ್ ಫುಲ್ ಖುಷ್ ಆಗಿದ್ದಾರೆ. ಮನೆಗೆ ಎಂಟ್ರಿ ಆಗ್ತಿದ್ದಂತೆಯೇ ಕುಟುಂಬದ ಸದಸ್ಯರೆಲ್ಲರೂ ಹುಲಿ ಕುಣಿತದ ಸ್ಟೆಪ್ಸ್ ಹಾಕಿದ್ದಾರೆ.
ವಿಶೇಷ ಅಂದರೆ ಅವರ ಮುದ್ದಿನ ಮಗಳು ಕೂಡ ಬಿಗ್ಬಾಸ್ ಮನೆಗೆ ಬಂದಿದ್ದಾಳೆ. ಮೊದಲಿಗೆ ತೊಟ್ಟಿಲಲ್ಲಿ ಹಾಯಾಗಿ ಮಲಗಿರುವ ಮಗುವನ್ನು ಸ್ಕ್ರೀನ್ ಮೇಲೆ ತೋರಿಸಲಾಗಿತ್ತು. ಇದನ್ನು ನೋಡಿದ ಧನು, ಪ್ಲೀಸ್ ಮಗುವನ್ನು ಎತ್ತಿಕೊಳ್ಳಲು ಬಿಡಿ ಎಂದು ಬಿಗ್ಬಾಸ್ಗೆ ಮನವಿ ಮಾಡಿಕೊಂಡಿದ್ದಾರೆ. ಧನು ಭಾವುಕರಾಗಿದ್ದನ್ನು ನೋಡಿದ ಬಿಗ್ಬಾಸ್, ಕೊನೆಗೂ ಮಗುವನ್ನು ಎತ್ತಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದಾರೆ. ಓಡಿ ಹೋಗಿ ಮಗುವನ್ನು ಎತ್ತಿಕೊಂಡ ಧನು, ಭಾವುಕರಾಗಿ ಎತ್ತಿ ಮುದ್ದಾಡಿದ್ದಾರೆ. ಮಗುವಿನ ಪಕ್ಕದಲ್ಲಿ ಮಲಗಿ ಕೆಲ ಸಮಯ ಕಳೆದಿದ್ದಾರೆ. ಅಂದ್ಹಾಗೆ ಧನರಾಜ್-ಪ್ರಜ್ಞಾ ದಂಪತಿಗೆ ಸೆಪ್ಟೆಂಬರ್ 20 ರಂದು ಹೆಣ್ಣು ಮಗು ಜನಿಸಿದೆ.
ಇನ್ನು, ಪತ್ನಿ ಪ್ರಜ್ಞಾ ಧನುಗೆ ಮುದ್ದಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ನಾನು ಇಲ್ಲದೇ ನಿಮಗೆ ಭಾರೀ ಖುಷಿಯಾಗಿದೆ ಎಂದು ಪ್ರೀತಿಯಿಂದ ಹೊಡೆಯಲು ಶುರು ಮಾಡಿದ್ದಾರೆ. ಎಲ್ಲದಕ್ಕೂ ಐಶು ಹೆಸರು ತೆಗೆದುಕೊಳ್ತಿದ್ದೀರಿ. ನೀವು ಐಶುಗೆ ಲೈನ್ ಹೊಡೆಯುತ್ತಿದ್ದೀರಾ ಅಂತಾ ಡೌಟ್ ಎಂದು ಬಾರಿಸಿದ್ದಾರೆ. ಇವರಿಬ್ಬರ ಕ್ಯೂಟ್ ಕಿತ್ತಾಟವನ್ನು ನೋಡಿದ ಇತರೆ ಸ್ಪರ್ಧಿಗಳು ನಕ್ಕಿದ್ದಾರೆ. ಇವತ್ತು ರಾತ್ರಿ ಈ ಎಪಿಸೋಡ್ ಪ್ರಸಾರವಾಗಲಿದೆ.