Connect with us

BANTWAL

Bantwala: ವಿದ್ಯಾರ್ಥಿಗಳಿಂದ ಬಸ್‌ ಪಾಸ್‌ನ ಹೆಚ್ಚುವರಿ ಹಣ ವಸೂಲಿ – KSRTC ಅಧಿಕಾರಿಗಳ ವಿರುದ್ಧ ಆಕ್ರೋಶ

Published

on

ಬಿ ಸಿ ರೋಡಿನ ಕೆಎಸ್.ಆರ್.ಟಿ.ಸಿ.ಬಸ್ ನಿಲ್ದಾಣದಲ್ಲಿ ಬಸ್ ಪಾಸ್ ಮಾಡಲು ಬರುತ್ತಿರುವ ವಿದ್ಯಾರ್ಥಿಗಳಿಂದ ಸರಕಾರದ ನಿಗದಿ ಮಾಡಿದ ದರಕ್ಕಿಂತ ಹೆಚ್ಚು ಹಣವನ್ನು ಇಲ್ಲಿನ ಅಧಿಕಾರಿಯೋರ್ವ ವಸೂಲಿ ಮಾಡುವ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಬಂಟ್ವಾಳ ನಗರ ಠಾಣಾ ಪೋಲಿಸರಿಗೆ ಮೌಖಿಕ ದೂರು ನೀಡಿದ್ದಾರೆ.

ಬಂಟ್ವಾಳ: ಬಿ ಸಿ ರೋಡಿನ ಕೆಎಸ್.ಆರ್.ಟಿ.ಸಿ.ಬಸ್ ನಿಲ್ದಾಣದಲ್ಲಿ ಬಸ್ ಪಾಸ್ ಮಾಡಲು ಬರುತ್ತಿರುವ ವಿದ್ಯಾರ್ಥಿಗಳಿಂದ ಸರಕಾರದ ನಿಗದಿ ಮಾಡಿದ ದರಕ್ಕಿಂತ ಹೆಚ್ಚು ಹಣವನ್ನು ಇಲ್ಲಿನ ಅಧಿಕಾರಿಯೋರ್ವರು ವಸೂಲಿ ಮಾಡುವ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಬಂಟ್ವಾಳ ನಗರ ಠಾಣಾ ಪೋಲಿಸರಿಗೆ ಮೌಖಿಕ ದೂರು ನೀಡಿದ್ದಾರೆ.

ಶಾಲಾ ಮಕ್ಕಳ ಬಸ್ ಪಾಸ್ ಸೌಲಭ್ಯವನ್ನು ಪಡೆಯಬೇಕಾದರೆ ವಿದ್ಯಾರ್ಥಿಗಳು ಸರಕಾರಿ ವ್ಯವಸ್ಥೆಯಂತೆ ಶಾಲಾ ಮೊಹರಿನ ಜೊತೆ ಹತ್ತಿರದ ಕೆ.ಎಸ್.ಆರ್.ಟಿ.ಸಿ.ವಿಭಾಗಕ್ಕೆ ತೆರಳಿ ಅಲ್ಲಿನ ವಿಭಾಗದ ಟಿ.ಸಿ.ಯವರಿಂದ ಸರಕಾರಕ್ಕೆ ನಿಗದಿಪಡಿಸಿದ ದರವನ್ನು ನೀಡಿ ಪಾಸ್ ಪಡೆಯಲು ಅವಕಾಶವಿದೆ.

ಆದರೆ ಬಿಸಿರೋಡಿನ ಕೆ.ಎಸ್.ಆರ್.ಟಿ.ಸಿ.ಯಲ್ಲಿ ವಿಚಿತ್ರ ರೀತಿಯ ಕಾನೂನು ಎಂದು ಮಕ್ಕಳ ಪೋಷಕರು ದೂರಿದ್ದಾರೆ.

ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಗಳ ಅಧಿಕೃತ ವಿವರದೊಂದಿಗೆ ಪಾಸ್ ಗಾಗಿ ಅರ್ಜಿ ಸಲ್ಲಿಸಿದರೆ, ಬಸ್ ಪಾಸ್ ನೀಡುತ್ತಾರೆ ಅದರೆ ಹೆಚ್ಚುವರಿ ಹಣಕ್ಕಾಗಿ ಪೀಡಿಸುತ್ತಾರೆ ಎಂದು ಪೋಲೀಸರಿಗೆ ದೂರು ನೀಡಿದ್ದಾರೆ.

ಇಲ್ಲಿನ ಟಿ.ಸಿ‌.ವಿನ್ಸೆಂಟ್ ಎನ್ನುವವರು ವಿದ್ಯಾರ್ಥಿಗಳಿಂದ ಹೆಚ್ಚುವರಿ ಹಣ ಪಡೆಯುತ್ತಾರೆ ಎಂದು ಅರೋಪ ಮಾಡಿದ್ದಾರೆ.

ಸರಕಾರ ನಿಗದಿ ಮಾಡಿದ ಹಣದ ಜೊತೆ ವಿದ್ಯಾರ್ಥಿಗಳು ಹೆಚ್ಚುವರಿ ಹಣವನ್ನು ನೀಡುವಂತೆ ಈತ ಪೀಡಿಸುತ್ತಿದ್ದಾನೆ ಎಂದು ವಿದ್ಯಾರ್ಥಿಗಳು ಮನೆಯಲ್ಲಿ ಪೋಷಕರಿಗೆ ತಿಳಿಸಿದ್ದು, ಪೋಷಕರು ಬಂಟ್ವಾಳ ನಗರ ಪೋಲೀಸರಿಗೆ ಮೌಖಿಕ ದೂರು ನೀಡಿದ್ದಾರೆ.

ಪೋಲೀಸರು ಅಧಿಕಾರಿಯನ್ನು ಠಾಣೆಗೆ ಬರುವಂತೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಅನೇಕ ವಿದ್ಯಾರ್ಥಿಗಳಿಂದ ಈತ ಹೆಚ್ಚುವರಿ ಹಣ ವಸೂಲಿ ಮಾಡಿದ್ದು, ಈತನ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಪೋಷಕರು ಒತ್ತಾಯ ಮಾಡಿದ್ದಾರೆ.

Click to comment

Leave a Reply

Your email address will not be published. Required fields are marked *

BANTWAL

ULLALA : ನೇಣಿಗೆ ಶರಣಾದ ಇಬ್ಬರು ಪುಟ್ಟ ಮಕ್ಕಳ ತಂದೆ

Published

on

ಉಳ್ಳಾಲ :   ಎರಡು ಪುಟ್ಟ ಮಕ್ಕಳ ತಂದೆಯೋರ್ವರು ನೇಣಿಗೆ ಶರಣಾದ ಘಟನೆ ಉಳ್ಳಾಲದ ಕುಂಪಲದ ಹನುಮಾನ್ ನಗರದಲ್ಲಿ ಸೋಮವಾರ(ಏ. 29) ಮುಂಜಾನೆ ನಡೆದಿದೆ. 44 ವರ್ಷ ಯೋಗೀಶ್ ಆತ್ಮಹ*ತ್ಯೆಗೈದ ವ್ಯಕ್ತಿ.

ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಯೋಗೀಶ್ ಸೋಮವಾರ ಬೆಳಗ್ಗೆ ತಮ್ಮ ಮನೆಗೆ ತಾಗಿಕೊಂಡಿರುವ ಶೌಚಾಲಯದಲ್ಲಿ ನೇಣಿಗೆ ಶರಣಾಗಿದ್ದಾರೆ. ಯೋಗೀಶ್ ಸ್ವಸಹಾಯ ಗುಂಪೊಂದರ ಸದಸ್ಯರಾಗಿದ್ದು, ಸಂಘದ ನಲ್ವತ್ತು ಸಾವಿರ ರೂಪಾಯಿಗಳನ್ನ ಬ್ಯಾಂಕಿಗೆ ಕಟ್ಟದೆ ಖರ್ಚು ಮಾಡಿದ್ದರು ಎನ್ನಲಾಗಿದೆ.

ಈ ಬಗ್ಗೆ ಸಂಘದ ಉಳಿದ ಸದಸ್ಯರು ಭಾನುವಾರ ಬೆಳಗ್ಗೆ ಮತ್ತು ಸಂಜೆ ಯೋಗೀಶ್ ಅವರ ಮನೆಗೆ ತೆರಳಿ ಹಣ ಕಟ್ಟುವಂತೆ ಪೀಡನೆ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿದೆ. ಇದೇ ಅವಮಾನದಲ್ಲಿ ಯೋಗೀಶ್ ಆತ್ಮಹ*ತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ.

ಇದನ್ನೂ ಓದಿ : ಮೇ 3 ರಂದು ಕುದ್ರೆಬೆಟ್ಟು ಕಾರಣಿಕದ ಕಲ್ಲುರ್ಟಿ ದೈವಸ್ಥಾನದ ಪುನ: ಪ್ರತಿಷ್ಠಾ ಮಹೋತ್ಸವ; ಈ ದೈವಸ್ಥಾನದ ಹಿಂದಿದೆ ರೋಚಕ ಕಥೆ!

ಉಳ್ಳಾಲ ಠಾಣಾ ಪೊಲೀಸರು ಮೃ*ತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.

ಯೋಗೀಶ್ ಪತ್ನಿಯೂ ಆತ್ಮಹತ್ಯೆಗೆ ಯತ್ನ:

ಯೋಗೀಶ್ ಸಾ*ವನ್ನಪ್ಪಿದನ್ನು ಕಂಡ ಪತ್ನಿಯೂ ನೇಣು ಬಿಗಿದು ಆತ್ಮ ಹ*ತ್ಯೆಗೈಯಲು ಮುಂದಾಗಿದ್ದಾರೆ. ಘಟನಾ ಸ್ಥಳದಲ್ಲಿ ನೆರೆದಿದ್ದ ಸ್ಥಳೀಯರು ಆಕೆಯನ್ನ ತಡೆದು ಸಂತೈಸಿದ್ದಾರೆ. ಮೃ*ತ ಯೋಗೀಶ್ ಇಬ್ಬರು ಪುಟ್ಟ ಗಂಡು ಮಕ್ಕಳು, ಪತ್ನಿ, ತಾಯಿಯನ್ನು ಅಗಲಿದ್ದಾರೆ.

Continue Reading

BANTWAL

ಮೇ 3 ರಂದು ಕುದ್ರೆಬೆಟ್ಟು ಕಾರಣಿಕದ ಕಲ್ಲುರ್ಟಿ ದೈವಸ್ಥಾನದ ಪುನ: ಪ್ರತಿಷ್ಠಾ ಮಹೋತ್ಸವ; ಈ ದೈವಸ್ಥಾನದ ಹಿಂದಿದೆ ರೋಚಕ ಕಥೆ!

Published

on

ಬಂಟ್ವಾಳ : ಕಲ್ಲಡ್ಕ ಬಾಳ್ತಿಲ ಗ್ರಾಮದಲ್ಲಿದೆ ಕಾರಣಿಕದ ಕರ್ಲುರ್ಟಿ ಕ್ಷೇತ್ರ. ಈ ದೈವಸ್ಥಾನದ ಹಿಂದಿದೆ ರೋಚಕ ಕಥೆ.  ಈ ದೈವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಮಹೋತ್ಸವದ ಸಿದ್ಧತೆ ಭರದಿಂದ ಸಾಗುತ್ತಿದೆ.

ಪವಾಡ ತೋರಿದ್ದ ಕಲ್ಲುರ್ಟಿ :

ಈಗಾಗಲೇ ತಿಳಿಸಿದಂತೆ ಈ ದೈವಸ್ಥಾನ ಹಿಂದು -ಮುಸಲ್ಮಾನ ಭಾಂದವರ ಭಾವೈಕ್ಯತೆಯ ಸಾನಿಧ್ಯ. ಕುದ್ರೆಬೆಟ್ಟುವಿನ ಒಂದು ಮುಸನ್ಮಾನ ಕುಟುಂಬ ಕಲ್ಲುರ್ಟಿ ದೈವವನ್ನು ನಂಬುತ್ತಿದ್ದರು. ಐಸಮ್ಮ ಎಂಬ ಮಹಿಳೆಯ ಕುಟುಂಬ ಕಷ್ಟ ಕಾರ್ಪಣ್ಯಗಳನ್ನು ಅನುಭವಿಸುತ್ತಿದ್ದರು. ಇದರಿಂದ ಬೇಸತ್ತ ಕುಟುಂಬಕ್ಕೆ ಆ ಜಾಗದಲ್ಲಿ ಅಗೋಚರ ಶಕ್ತಿಯೊಂದು ಇರುವುದು ತಿಳಿಯುತ್ತದೆ. ನಂತರ ಅವರು ‘ಕಲ್ಲುರ್ಟಿ’ಯನ್ನು ಕಲ್ಲಿನ ರೂಪದಲ್ಲಿ ನಂಬಲು ಆರಂಭಿಸುತ್ತಾರೆ. ಕಷ್ಟ ಎಂದು ತನ್ನಲ್ಲಿಗೆ ಬಂದವರಿಗೆ ಐಸಮ್ಮ ಕಲ್ಲುರ್ಟಿಯ ಸ್ಮರಿಸಿ ಕಪ್ಪು ದಾರ ನೀಡುತ್ತಿದ್ದರು. ಇದರಿಂದ ಅವರ ತೊಂದರೆಗಳೆಲ್ಲ ನಿವಾರಣೆಯಾಗುತ್ತಿತ್ತು ಎಂಬ ನಂಬಿಕೆಯಿದೆ.

 

ಮನೆಯಲ್ಲಿ ವಿಶೇಷ ಅಡುಗೆ ಮಾಡಿದರೆ, ಆಕೆ ದೈವಕ್ಕೆ ಬಡಿಸದೇ ಸೇವಿಸುತ್ತಿರಲಿಲ್ಲ. ಒಂದುವೇಳೆ ತಪ್ಪಿದ್ದಲ್ಲಿ ಅಡುಗೆ ಮಾಡಿಟ್ಟಿದ್ದ ಪಾತ್ರೆಯೇ ದೈವದ ಕಲ್ಲಿನತ್ತ ಚಲಿಸುತ್ತಿತ್ತಂತೆ. ಆದರೆ, ಕಾಲಕ್ರಮೇಣ ಆ ಕುಟುಂಬ ಮನೆಯನ್ನು ಮಾರಿ ಬೇರೆ ಕಡೆ ಹೊರಟು ಹೋಗಿದ್ದರು.

ಮತ್ತೆ ಬೆಳಕಿಗೆ ಬಂದ ಕ್ಷೇತ್ರ :

ಆ ಮುಸಲ್ಮಾನ ಕುಟುಂಬವೇನೋ ಹೊರಟು ಹೋಯಿತು. ಶಕ್ತಿ ಅಲ್ಲೇ ಉಳಿಯಿತು. ಈ ಘಟನೆ ನಡೆದು ಹಲವು ದಶಕಗಳೇ ಕಳೆದಿವೆ. 15 ವರ್ಷಗಳಿಂದ ಇಲ್ಲಿ ಹಲವು ಘಟನೆಗಳು ನಡೆಯುತ್ತಿವೆ. ಇತ್ತೀಚೆಗೆ ಮಣಿಕಂಠ ಯುವಶಕ್ತಿ ಕೇಂದ್ರ ಭಜನಾ ಮಂದಿರವೊಂದನ್ನು ಸ್ಥಾಪಿಸುವ ಕೆಲಸ ಆರಂಭಿಸಿತ್ತು. ಆದರೆ, ಇದಕ್ಕೆ ತಡೆ ಬರಲಾರಂಭಿಸಿದಾಗ, ಮಂದಿರದಲ್ಲಿ ಪ್ರಶ್ನೆ ಇಟ್ಟಾಗ ‘ಯುವಶಕ್ತಿ’ ಯ ಯುವಕರು ತಾಯಿ ಕಲ್ಲುರ್ಟಿಯನ್ನು ನಂಬಬೇಕು ಎಂಬ ಅಪ್ಪಣೆಯಾಯಿತು.

ನಾವು ಬಿಟ್ಟೆವೆಂದು ದೈವ ಬಿಡುವುದೇ..? ಪೂ – ನೀರ್(ಹೂ-ನೀರು) ಸಲ್ಲದೇ ಹೋದಲ್ಲಿ ಹೇಗೆ? ಅಂತೆಯೇ, ಹಳೆಯ ದೈವಸ್ಥಾನ ಜೀರ್ಣೋದ್ಧಾರಗೊಂಡು ಹೊಸ ರೂಪ ಪಡೆದು ನಿಂತಿದೆ.

20 ದಿನಗಳಲ್ಲಿ ನಡೆಯಿತು ಜೀರ್ಣೋದ್ಧಾರ :

ದೈವದ ಅಭಯ ಯುವಕರ ಮೇಲಿತ್ತು. ಇಡೀ ಊರೇ ಅಚ್ಚರಿ ಪಡುವಂತೆ ತಾಯಿಯ ದೈವಸ್ಥಾನದ ಕಾರ್ಯ ನಡೆಯಿತು.  ಕೇವಲ 20 ದಿನಗಳಲ್ಲಿ ಅಪ್ಪೆ ಕಲ್ಲುರ್ಟಿಯ ಕ್ಷೇತ್ರ ತಲೆ ಎತ್ತಿ ನಿಂತಿತು ಅಂದರೆ ನೀವು ನಂಬಲೇ ಬೇಕು. ಕ್ಷೇತ್ರದ ಜೀರ್ಣೋದ್ಧಾರಕ್ಕಾಗಿ ಹಗಲಿರುಳು ಯುವಕರು ಶ್ರಮಿಸಿದ್ದಾರೆ. ಹುಬ್ಬೇರಿಸುವಂತಹ ಕೆಲಸ ಮಾಡಿದ ಶ್ರೀ ಮಣಿಕಂಠ ಯುವಶಕ್ತಿ ತಂಡದ ಈ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ.

ಕಾರ್ಯಕ್ರಮಗಳ ವಿವರ :

ಕುದ್ರೆಬೆಟ್ಟು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಮೇ.3 ರಂದು ಶ್ರೀ ಕಲ್ಲುರ್ಟಿ ದೈವದ ಪುನಃ ಪ್ರತಿಷ್ಠಾ ಮಹೋತ್ಸವ ಹಾಗೂ ಶ್ರೀ ಕಲ್ಲುರ್ಟಿ ಮತ್ತು ಗುಳಿಗ ದೈವಗಳ ಕೋಲ ನಡೆಯಲಿದೆ. ಮೇ.02 ರಂದು ಬೆಳಿಗ್ಗೆ ಶ್ರೀ ಮಣಿಕಂಠ ಸನ್ನಿಧಾನದಲ್ಲಿ ಗಣಹೋಮ, ಸಂಜೆ ಶಾಸ್ತ್ರ, ಕಲ್ಪೋಕ್ತ ಪೂಜೆ, ವಾಸ್ತು ಹೋಮಾದಿ ಅಧಿವಾಸ ನಡೆಯಲಿದೆ. ಸಂಜೆ 6.30 ರಿಂದ ‘ನಮ್ಮ ಕುಡ್ಲ’ ವಾಹಿನಿ ಖ್ಯಾತಿಯ ‘ಯಕ್ಷ ತೆಲಿಕೆ’ ಕಾರ್ಯಕ್ರಮ ನಡೆಯಲಿದೆ.

ಮೇ.03 ರಂದು ಬೆಳಿಗ್ಗೆ ಗಣಹೋಮ ಬಳಿಕ 10.00 ರಿಂದ 10.25ರ ಒಳಗೆ ಒದಗುವ ಮಿಥುನ ಲಗ್ನದ ಸುಮೂಹೂರ್ತದಲ್ಲಿ ಶ್ರೀ ಸೂರ್ಯನಾರಾಯಣ ಭಟ್ ಕಶೆಕೋಡಿ ಇವರ ವೈದಿಕತ್ವದಲ್ಲಿ ಶ್ರೀ ಕಲ್ಲುರ್ಟಿ ದೈವದ ಪ್ರತಿಷ್ಠೆ, ಸಾನಿಧ್ಯ ನವಕ ಕಲಶಾಭಿಷೇಕ, ಪರ್ವ ಸೇವೆ ನಡೆಯಲಿದೆ.

ಇದನ್ನೂ ಓದಿ : ಪುತ್ತೂರು: ಮಳೆಗಾಗಿ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ; ಶಾಸಕರು ಭಾಗಿ

ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಹಾಗೂ ಅನ್ನಸಂತರ್ಪಣೆ ನಡೆದು, ರಾತ್ರಿ ಶ್ರೀ ಕಲ್ಲುರ್ಟಿ ಮತ್ತು ಗುಳಿಗ ದೈವಗಳ ಕೋಲ ನಡೆಯಲಿದೆ.

Continue Reading

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

LATEST NEWS

Trending