Connect with us

    International news

    ಐಪಿಎಲ್ ಹರಾಜಿನಲ್ಲಿ ಬದಲಾವಣೆ ತಂದ ಬಿಸಿಸಿಐ; ಏನು ಗೊತ್ತಾ!?

    Published

    on

    ಬೆಂಗಳೂರು/ಮುಂಬೈ: ಐಪಿಎಲ್ ಸೀಸನ್ 18ರ ಮೆಗಾ ಹರಾಜು ಪ್ರಕ್ರಿಯೆ ನಾಳೆಯಿಂದ ಸೌದಿ ಅರೇಬಿಯಾದ ಜಿದ್ದಾದಲ್ಲಿ ನಡೆಯಲಿದೆ. ಆದರೆ ಐಪಿಎಲ್ ಹರಾಜಿನ ನಡುವೆ ಬಿಸಿಸಿಐ ಹೊಸ ಟ್ವಿಸ್ಟ್ ಕೊಟ್ಟಿದೆ.

    ಈ ಬಾರಿಯ ಮೆಗಾ ಹರಾಜಿನಲ್ಲಿ 577 ಆಟಗಾರರು ಕಾಣಿಸಿಕೊಳ್ಳಲಿದ್ದಾರೆ. 204 ಸ್ಥಾನಗಳಿಗೆ ನಡೆಯುವ ಈ ಹರಾಜು ಪ್ರಕ್ರಿಯೆಯಲ್ಲಿ ಭಾರತದ ಹಾಗೂ ವಿದೇಶಿ ಆಟಗಾರರು ಕೋಟಿ-ಕೋಟಿ ಮೌಲ್ಯದಲ್ಲಿ ವಿವಿಧ ತಂಡಗಳಿಗೆ ಸೇರಿಕೊಳ್ಳಲಿದ್ದಾರೆ. 10 ಫ್ರಾಂಚೈಸಿಗಳು ಮುಂಬರುವ ಐಪಿಎಲ್ ಸೀಸನ್ ಗಾಗಿ ತಮ್ಮ ತಂಡಗಳನ್ನು ರೂಪಿಸಿಕೊಳ್ಳಲಿದೆ. ಆದರೆ ಬಿಸಿಸಿಐ ಮೆಗಾ ಹರಾಜಿನ ಸಮಯವನ್ನು ಸ್ವಲ್ಪ ಬದಲಾಯಿಸಿದೆ.

    ಇದನ್ನೂ ಓದಿ :ಜೈಲಲ್ಲಿ ರಜತ್ ಹೊಸ ವರಸೆ.. ಕಂಬಿ ಹಿಂದೆ ಇದ್ದುಕೊಂಡೇ ಎದುರಾಳಿಗಳ ಆಟವಾಡಿಸಿದ ಸ್ಪರ್ಧಿ..!
    ಈಗಗಾಲೇ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಟೆಸ್ಟ್ ಪಂದ್ಯಾಟ ಆಸ್ಟ್ರೇಲಿಯಾದ ಪರ್ತ್ ನಲ್ಲಿ ನಡೆಯುತ್ತಿದೆ. ಅದೇ ದಿನ ಮೊದಲ ಟೆಸ್ಟ್ ನ ಮೂರನೇ ಮತ್ತು ನಾಲ್ಕನೇ ದಿನದ ಆಟ ನಡೆಯಲಿದೆ. ಟೆಸ್ಷ್ ಪಂದ್ಯವು ಮಧ್ಯಾಹ್ನ 2:50ಕ್ಕೆ ಮುಕ್ತಾಯವಾಗಲಿದೆ. ಒಂದು ವೇಳೆ ಬದಲಾದ ಸಂದರ್ಭದಲ್ಲಿ ಪಂದ್ಯ ಮುಂದುವರಿದರೆ ಮಧ್ಯಾಹ್ನ 3:20ರವರೆಗೂ ನಡೆಯಲಿದೆ. ನಿಗದಿಯಂತೆ ಹರಾಜು ಪ್ರಕ್ರಿಯೆ ನಡೆದರೆ ನೇರ ಪ್ರಸಾರಕ್ಕೆ ತೊಂದರೆಯಾಗಲಿದೆ.
    ಪ್ರಸಾರಕರ ಕೋರಿಕೆ ಮೆರೆಗೆ ಬಿಸಿಸಿಐ ಐಪಿಎಲ್ ಹರಾಜಿನ ಸಮಯವನ್ನು ಮಧ್ಯಾಹ್ನ 3ರಿಂದ 3:30ಕ್ಕೆ ಬದಲಾಯಿಸಿದೆ. ಈ ಮೊದಲು ನಿಗಧಿಯಂತೆ 3:30ಕ್ಕೆ ಹರಾಜು ಪ್ರಕ್ರಿಯೆ ಆರಂಭವಾಗಬೇಕಿತ್ತು. ಇದರಿಂದ ನಾಳೆಯ ಹರಾಜು ಪ್ರಕ್ರಿಯೆ ತೀವ್ರ ಕುತೂಹಲ ಕೆರಳಿಸಿದೆ.

    Click to comment

    Leave a Reply

    Your email address will not be published. Required fields are marked *

    BIG BOSS

    ಉಪಚುನಾವಣೆಯಲ್ಲಿ ಗೆಲುವು; ಪಟಾಕಿ ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ

    Published

    on

    ಮಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು, ಮಲ್ಲಿಕಟ್ಟೆಯಲ್ಲಿರುವ ಕಚೇರಿಯೆದುರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಜಮೀರ್ ಅಹಮದ್ ಖಾನ್ ಪರ ಘೋಷಣೆ ಕೂ

    ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ ಮಾತನಾಡಿ, ‘ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವು ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳಿಗೆ ಹಿಡಿದ ಕನ್ನಡಿಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಗೆಲುವಿನ ನಿರೀಕ್ಷೆ ಇತ್ತು. ಆದರೆ, ಚುನಾವಣೋತ್ತರ ಸಮೀಕ್ಷೆಗಳು ಹೇಳಿದ್ದ ಫಲಿತಾಂಶ ತಲೆಕೆಳಗಾಗಿದೆ’ ಎಂದರು.

    ‘ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಚುನಾವಣೆಯಲ್ಲಿ ಸೋತಿದ್ದಾರೆ‌. ಇದು ರಾಜ್ಯದ ಜನರು ಕಾಂಗ್ರೆಸ್ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಬಿಜೆಪಿ ಮೈತ್ರಿಕೂಟದ ಬಗೆಗಿರುವ ಅಪನಂಬಿಕೆಗೆ ಸಾಕ್ಷಿಯಾಗಿದೆ. ಇನ್ನಾದರೂ ಬಿಜೆಪಿ ಜಾತಿ, ಧರ್ಮಗಳ ನಡುವೆ ದ್ವೇಷ ಬಿತ್ತುವ ಕೆಲಸ ಬಿಟ್ಟು, ಅಭಿವೃದ್ಧಿ ಬಗ್ಗೆ ಯೋಚಿಸಲಿ’ ಎಂದು ಹೇಳಿದರು

    Continue Reading

    BIG BOSS

    ಮಂಗಳೂರು: ಪತಿಯ ಅ*ನೈತಿಕ ಸಂಬಂಧ; ತ್ರಿವಳಿ ತಲಾಕ್ ಮೂಲಕ ಪತ್ನಿಗೆ ವಿಚ್ಚೇದನ

    Published

    on

    ಮಂಗಳೂರು: ತಂದೆಯನ್ನು ಮನೆಗೆ ಕರೆದು ತಂದೆಯ ಎದುರಿನಲ್ಲಿ ಪತಿ ನನಗೆ ತ್ರಿವಳಿ ತಲಾಕ್ ನೀಡಿದ್ದಾರೆ ಎಂದು ಮಹಿಳೆಯೊಬ್ಬರು ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ.

    ಉಳ್ಳಾಲದ ಸಮ್ಮರ್ ಸ್ಯಾಂಡ್ ಬಳಿಯ ನಿವಾಸಿಯಾಗಿರುವ ಮಹಮ್ಮದ್ ದಿಲ್ಫಾಜ್‌ ಎಂಬವರ ವಿರುದ್ಧ ಈ ದೂರು ದಾಖಲಾಗಿದೆ. 2019 ರಲ್ಲಿ ಪ್ರೀತಿಸಿ ಮದುವೆಯಾಗಿದ್ದು, ಕೆಲ ಕಾಲ ಚೆನ್ನಾಗಿ ಸಂಸಾರ ಕೂಡಾ ನಡೆಸಿ ಬಳಿಕ ಪತಿ ಪರ ಸ್ತ್ರೀಯ ಜೊತೆ ಸಂಬಂಧ ಬೆಳೆಸಿದ್ದಾಗಿ ಆರೋಪಿಸಲಾಗಿದೆ.

    ಈ ವಿಚಾರವನ್ನು ಪ್ರಶ್ನೆ ಮಾಡಿದ ಪತ್ನಿಗೆ ದೈಹಿಕ ಹಿಂ*ಸೆ ನೀಡಲಾಗಿದ್ದು, ನಿರಂತರ ಕಿ*ರುಕುಳ ನೀಡಲಾದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಎರಡೂ ಮನೆಯವರೂ ರಾಜಿ ಪಂಚಾಯತಿ ನಡೆಸಿದ್ದರೂ ಸಂಸಾರ ಸರಿ ಹೋಗಿರಲಿಲ್ಲ. ಇದೀಗ ಹಣಕ್ಕಾಗಿ ಬೇಡಿಕೆ ಇಟ್ಟು ತಂದೆಯನ್ನು ಮನೆಗೆ ಕರೆಸಿ ಅವರ ಸಮ್ಮುಖದಲ್ಲಿ ಮೂರ ಬಾರಿ ತಲಾಕ್ ಹೇಳಿ ತವರು ಮನೆಗೆ ಕಳುಹಿಸಲಾಗಿದೆ ಎಂದು ನೊಂದ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

    ಈ ಬಗ್ಗೆ ಎಫ್‌ಐಆರ್ ದಾಖಲಿಸಿಕೊಂಡಿರುವ ಪಾಂಡೇಶ್ವರ ಮಹಿಳಾ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತ್ರಿವಳಿ ತಲಾಕ್ ಕಾನೂನನ್ನು ಕೇಂದ್ರ ಸರ್ಕಾರ ರದ್ದು ಮಾಡಿರುವುದರಿಂದ ಈ ದೂರಿಗೆ ಪೊಲೀಸರು ಹೆಚ್ಚಿನ ಮಾನ್ಯತೆ ನೀಡಿ ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

    Continue Reading

    BIG BOSS

    ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ ಸಂಚು ರೂಪಿಸುತ್ತಿದ್ದಾಗಲೇ ಅರೆಸ್ಟ್‌

    Published

    on

    ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ (43) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರ ತಂಡವು ನವೆಂಬರ್ 22ರ ಸಂಜೆ ಬಂಧಿಸಿದೆ.

    ಆರೋಪಿ ದಾವೂದ್ ಉಳ್ಳಾಲದ ಧರ್ಮನಗರ ನಿವಾಸಿ. ಅವನು ಮಂಗಳೂರಿನ ತಲಪಾಡಿ-ದೇವಿಪುರ ರಸ್ತೆ ಬಳಿ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರ ವಿರುದ್ಧ ಅಪರಾಧ ಎಸಗಲು ಸಂಚು ರೂಪಿಸುತ್ತಿದ್ದಾಗಲೇ ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಪಿಎಸ್ ಐ ನರೇಂದ್ರ ನೇತೃತ್ವದ ಸಿಸಿಬಿ ತಂಡ ರೌಡಿಶೀಟರ್‌ನನ್ನು ಬಂಧಿಸಲು ಮುಂದಾಗಿದೆ.

    ಕಾರ್ಯಾಚರಣೆ ವೇಳೆ ದಾವೂದ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಅಧಿಕಾರಿಗಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದು, ಪಿಎಸ್ ಐ ನರೇಂದ್ರ ಮತ್ತು ಇತರ ಸಿಬ್ಬಂದಿಗೆ ಗಾಯಗಳಾಗಿವೆ. ದಾಳಿಯ ಹೊರತಾಗಿಯೂ ಪೊಲೀಸ್ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಮುಂದಿನ ಕ್ರಮಕ್ಕಾಗಿ ದಾವುದ್‌ನನ್ನು ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

    ದಾವೂದ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್ ಐ ನರೇಂದ್ರ ಅವರ ದೂರಿನ ಮೇರೆಗೆ ಆರೋಪಿ ದಾವುದ್ ವಿರುದ್ಧ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ದಾವೂದ್ ಕೊಲೆ ಸೇರಿದಂತೆ ಹಲವು ಅಪರಾಧಗಳಲ್ಲಿ ಭಾಗಿಯಾಗಿರುತ್ತಾನೆ. ಉಳ್ಳಾಲ, ಮಂಗಳೂರು ದಕ್ಷಿಣ ಮತ್ತು ಬಜ್ಪೆ ಸೇರಿದಂತೆ ಇತರ ಸ್ಥಳಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದಾಗಿ ವರದಿಯಾಗಿದೆ .

    Continue Reading

    LATEST NEWS

    Trending