Connect with us

    DAKSHINA KANNADA

    ಮಂಗಳೂರು ನವಭಾರತ ಸರ್ಕಲಿಗೆ ನವಸ್ಪರ್ಶ : ಕಂಗೊಳಿಸುತ್ತಿದೆ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ವೃತ್ತ..!

    Published

    on

    ಮಂಗಳೂರು : ಪ್ರಪ್ರಥಮ ಬಾರಿಗೆ ಕನ್ನಡಕ್ಕೆ ರಾಷ್ಟ್ರಕವಿ ಗೌರವವನ್ನು ತಂದುಕೊಟ್ಟ, ಗಡಿನಾಡು ಮಂಜೇಶ್ವರದಲ್ಲಿ ಹುಟ್ಟಿದರೂ ಶಿಕ್ಷಣವನ್ನು ಮಂಗಳೂರಿನಲ್ಲಿ ಮಾಡಿ ಇಡೀ ರಾಷ್ಟ್ರವೇ ಬೆರಗಾಗುವಂತಹ ಕೃತಿಗಳನ್ನು ಸೃಷ್ಟಿಸಿದವರು ಶ್ರೀಯುತ ಮಂಜೇಶ್ವರ ಗೋವಿಂದ ಪೈ.

    ಅವರ ಹೆಸರಿನಲ್ಲಿರುವ ಮಂಗಳೂರಿನ ಕೊಡಿಯಾಲ್ ಬೈಲ್ ನ ವೃತ್ತ ಹೊಸ ರೂಪದೊಂದಿಗೆ ಮೈದಳೆದುಕೊಂಡಿದೆ.

    ಸಾಂಪ್ರದಾಯಿಕ ವಿನ್ಯಾಸದೊಂದಿಗೆ ಆಧುನಿಕತೆಯ ಸ್ಪರ್ಶ ಪಡೆದು ಸಿದ್ಧಗೊಂಡಿರುವ ಈ ವೃತ್ತ ಭವಿಷ್ಯದ ಪೀಳಿಗೆಗೆ ಸಾಹಿತ್ಯಲೋಕದ ಧ್ರುವತಾರೆ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಗಳ ನೆನಪನ್ನು ಮನಸ್ಸಿನಲ್ಲಿ ಅಚ್ಚೊತ್ತುವಂತೆ ಮಾಡಲಿದೆ.

    ರಾಷ್ಟ್ರಕವಿ ಗೋವಿಂದ ಪೈಗಳು ಕೈಯಲ್ಲಿ ನವಭಾರತ ಪತ್ರಿಕೆ ಯನ್ನು ಹಿಡಿದು ಓದುತ್ತಾ ಕುಳಿತಿರುವ ಭಂಗಿಯಲ್ಲಿರುವ ಕಂಚಿನ ಪುತ್ಥಳಿ ಇಲ್ಲಿ ಸ್ಥಾಪಿಸಲಾಗುತ್ತಿದ್ದು, ಅದರ ನಿರ್ಮಾಣವನ್ನು ಕಾರ್ಕಳದ ಶಿಲ್ಪಿ ಕೃಷ್ಣ ಆಚಾರಿಯವರ ತಂಡದವರು ಮಾಡಿದ್ದಾರೆ.

    ದೇಶ, ವಿದೇಶಗಳಿಂದ ಮಂಗಳೂರಿಗೆ ಬರುವ ಅತಿಥಿಗಳು ಉಳಿದುಕೊಳ್ಳುವ ಓಶಿಯನ್ ಪರ್ಲ್ ಹೋಟೇಲಿನ ಎದುರಿನಲ್ಲಿರುವ ಈ ವೃತ್ತ ಮಂಗಳೂರಿನ ಸೌಂದರ್ಯವನ್ನು ಹೆಚ್ಚಿಸುವಲ್ಲಿ ಸಹಜವಾಗಿ ಆಕರ್ಷಣೀಯ ಕೇಂದ್ರಬಿಂದುವಾಗಲಿದೆ.

    ವೃತ್ತದ ಒಳಗಿರುವ ಪುರಾತನ ಕಾಲದ ಬಾವಿಯನ್ನು ಹಾಗೆ ಉಳಿಸಲಾಗಿದ್ದು, ಅದರ ನೀರನ್ನೇ ಕಾರಂಜಿಯಂತೆ ವೃತ್ತದಲ್ಲಿ ಚಿಮ್ಮಿಸಿ ಇನ್ನಷ್ಟು ಆಕರ್ಷಣೀಯವಾಗಿಸುವ ಯೋಜನೆ ಮಾಡಲಾಗಿದೆ.

    ವೃತ್ತದ ಒಳಗೆ ಹೂಗಳನ್ನು ಮತ್ತು ಹಚ್ಚಹಸುರಿನ ಹುಲ್ಲುಗಳನ್ನು ಬೆಳೆಸಲಾಗುತ್ತಿದ್ದು, ಅದಕ್ಕಾಗಿ ಪ್ರತ್ಯೇಕ ಸ್ಥಳಗಳನ್ನು ಖ್ಯಾತ ಸೌಂದರ್ಯ ವಿನ್ಯಾಸಕಾರರಾದ ಸುಜಯ್ ಲೋಬೋ ಅವರು ಗುರುತಿಸಿ ಅಭಿವೃದ್ಧಿಪಡಿಸಿದ್ದಾರೆ.

    ವೃತ್ತದ ಸುತ್ತಲೂ ಕೆತ್ತನೆಯ ಕಬ್ಬಿಣದ ಗ್ರೀಲ್ ಗಳನ್ನು ಅಳವಡಿಸಲಾಗಿದ್ದು, ಅದರಲ್ಲಿ ಸಾಂಪ್ರದಾಯಿಕ ಕುಸುರಿ ಕೆಲಸ ಮಾಡಲಾಗಿದೆ.

    ಕಾರಂಜಿ ಮತ್ತಿತರ ವಿದ್ಯುತ್ ಅಲಂಕಾರಿಕ ವಸ್ತುಗಳ ಅಳವಡಿಕೆ ಯನ್ನು ಗಣೇಶ್ ಎಲೆಕ್ಟ್ರಿಕಲ್ ನ ಸೀತಾರಾಂ ಅವರು ವಹಿಸಿಕೊಂಡಿದ್ದರು.

    ಗೋವಿಂದ ಪೈಯವರ ಕಂಚಿನ ಮೂರ್ತಿಯ ನಿರ್ಮಾಣ ರಥಬೀದಿಯ ಗೋವರ್ಧನ್ ಮೆಟಲ್ಸ್ ನವರು ಮಾಡಿರುತ್ತಾರೆ.

    ಇದರ ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿರುವ ಖ್ಯಾತ ಬಿಲ್ಡರ್ ಗಿರಿಧರ್ ಶೆಟ್ಟಿ ಈ ಬಗ್ಗೆ ಮಾಹಿತಿ ನೀಡಿ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಈ ವೃತ್ತದ ಪುನರ್ ನಿರ್ಮಾಣದಲ್ಲಿ ಮಹತ್ತರ ಪಾತ್ರ ವಹಿಸಿದ್ದು, ಟ್ರಸ್ಟಿನ ಅಧ್ಯಕ್ಷರಾದ, ಶಾಸಕ ವೇದವ್ಯಾಸ ಕಾಮತ್ ಅವರ ಅಪೇಕ್ಷೆಯಂತೆ ಈ ವೃತ್ತ ಇತಿಹಾಸ ಮತ್ತು ಪ್ರಸ್ತುತ ಮಾದರಿಯ ಶೈಲಿಯ ಸಮರ್ಪಕ ಮಿಳಿತದೊಂದಿಗೆ ರಚನೆಯಾಗಿದೆ ಎಂದು ತಿಳಿಸಿದ್ದಾರೆ.

    ಈ ವೃತ್ತದ ನಿರ್ಮಾಣದಲ್ಲಿ ಸೂಕ್ತ ಸಲಹೆ, ಸಹಕಾರ ನೀಡಿದ ಉದ್ಯಮಿ ಮಂಗಲ್ಪಾಡಿ ನರೇಶ್ ಶೆಣೈಯವರ ಸಹಕಾರ ಕೂಡ ಉಪಯುಕ್ತವಾಗಿದೆ ಎಂದು ಅವರು ಹೇಳಿದ್ದಾರೆ.

    ಫುಜ್ಲಾನಾ ಗ್ರೂಪಿನಿಂದ ಈ ವೃತ್ತದ ನವೀಕರಣದ ಯೋಜನೆ ಮಾಡಲಾಗಿದ್ದು, ವನಿತಾ ಅಚ್ಯುತ್ ಪೈ ಅವರ ಸ್ಮರಣಾರ್ಥ ಅವರ ಮಕ್ಕಳ ಕೊಡುಗೆಯಾಗಿ ಈ ವೃತ್ತ ರಚನೆಯಾಗಿದೆ.

    *ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಈ ವೃತ್ತದ ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿದ್ದು, ಮಂಗಳೂರು ಮಹಾನಗರ ಪಾಲಿಕೆ ಅದಕ್ಕೆ ಅಧಿಕೃತವಾಗಿ ಲಿಖಿತ ಒಪ್ಪಿಗೆ ನೀಡಿರುತ್ತಾರೆ.

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending