Monday, May 17, 2021

ಬೆಡ್ ಬ್ಲಾಕಿಂಗ್ ಕರಾಳ ದಂಧೆ ;ಕೃತಕ ಅಭಾವ ಸೃಷ್ಟಿಸಿದ್ದ ಇಬ್ಬರು ಅರೆಸ್ಟ್..!

ಬೆಂಗಳೂರು: ಇನ್ನು  ನಗರದ ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಬೆಡ್ ಬ್ಲಾಕಿಂಗ್ ದಂಧೆ ಬಯಲು ಮಾಡಿದ ಬೆನ್ನಲ್ಲೇ ಈ ಕೃತ್ಯದಲ್ಲಿ ತೊಡಗಿದ್ದ ಮಹಿಳೆ ಸೇರಿ ಇಬ್ಬರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.ರೋಹಿತ್ ಹಾಗೂ ನೇತ್ರಾ ಬಂಧಿತ ಆರೋಪಿಗಳು. ಸಮಾಜ ಸೇವಕನ ಸೋಗಿನಲ್ಲಿ‌ ರೋಹಿತ್ ಗುರುತಿಸಿಕೊಂಡಿದ್ದ. ಈತನ ಪಕ್ಕದ ಮನೆಯಲ್ಲಿ ನೇತ್ರಾ ವಾಸವಾಗಿದ್ದು, ಈಕೆ ಕೂಡ ರೋಹಿತ್​ ಜೊತೆ ಕೈಜೋಡಿಸಿದ್ದಾಳೆ.

ಕೊರೊನಾ ಸಂಕಷ್ಟವನ್ನೇ ಬಂಡವಾಳ ಮಾಡಿಕೊಂಡ ಆರೋಪಿಗಳು ಆಸ್ಪತ್ರೆಗಳಲ್ಲಿ ಐಸಿಯು ಬೆಡ್ ಕೊಡಿಸುತ್ತೇವೆ. ಜೊತೆಗೆ ಆಕ್ಸಿಜನ್ ಹಾಗೂ ವೆಂಟಿಲೇಟರ್ ಸೌಲಭ್ಯವಿರುವ ಆಸ್ಪತ್ರೆಯನ್ನು ಶಿಫಾರಸು ಮಾಡುತ್ತೇವೆ ಎಂದು ವಾಟ್ಸಾಪ್ ಗ್ರೂಪ್ ಗಳಲ್ಲಿ ಹರಿಬಿಡುತ್ತಿದ್ದರು ಎನ್ನಲಾಗುತ್ತಿದೆ. ಬೆಡ್ ಬುಕ್ಕಿಂಗ್ ದಂಧೆ ಬಹಿರಂಗಪಡಿಸಿದ ಸಂಸದ ತೇಜಸ್ವಿ ಸೂರ್ಯ  ಬೆಡ್ ಕೋರಿ ಬಿಬಿಎಂಪಿ ವಾರ್ ರೂಂಗೆ ಕರೆ ಮಾಡುವ ರೋಗಿಗಳ ಕುಟುಂಬಸ್ಥರನ್ನು ಸಂಪರ್ಕಿಸಿ, ಐಸಿಯು ಬೆಡ್ ಕೊಡಿಸುವುದಾಗಿ ನಂಬಿಸುತ್ತಿದ್ದ ಇವರು, ಒಬ್ಬೊಬ್ಬರಿಂದ ಸುಮಾರು 25 ಸಾವಿರ ಹಣ ಪಡೆದು ವಂಚಿಸುತ್ತಿದ್ದರು ಎಂದು ತಿಳಿದುಬಂದಿದೆ.

ಬೆಡ್ ಕೊಡಿಸುವ ಸೋಗಿನಲ್ಲಿ ಹಲವರಿಗೆ ಮೋಸ ಮಾಡಿರುವ ಬಗ್ಗೆ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...