Connect with us

BANTWAL

ಬಂಟ್ವಾಳ: ಬೀಡಿ ಕಾರ್ಮಿಕರ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ

Published

on

ಬಂಟ್ವಾಳ: ಬೀಡಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ದೇಶಾದ್ಯಂತ ಪ್ರತಿಭಟನೆಯ ಭಾಗವಾಗಿ ಇಂದು ಬಿ.ಸಿ ರೋಡ್ ನಲ್ಲಿರುವ ಬಂಟ್ವಾಳ ತಾಲೂಕು ಕಚೇರಿಯೆದುರು ಬೀಡಿ ಕಾರ್ಮಿಕರು CITU ನೇತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಿದರು.


ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬೀಡಿ ಕಾರ್ಮಿಕರ ಸಂಘಟನೆಯ ರಾಜ್ಯಾಧ್ಯಕ್ಷರಾದ ಜೆ ಬಾಲಕೃಷ್ಣ ಶೆಟ್ಟಿ, ದೇಶಾದ್ಯಂತ ಸುಮಾರು 65 ಲಕ್ಷ ಕಾರ್ಮಿಕರು ಬೀಡಿ ಉದ್ಯಮವನ್ನು ನಂಬಿ ಬದುಕುತ್ತಿದ್ದು, ಪರೋಕ್ಷವಾಗಿ 3 ಕೋಟಿಯಷ್ಟು ಕಾರ್ಮಿಕರು ಜೀವನ ನಡೆಸುತ್ತಿದ್ದಾರೆ. ಆದರೆ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳಿಂದ ಬೀಡಿ ಉದ್ಯಮ ತೀರಾ ಸಂಕಷ್ಟದಲ್ಲಿದ್ದು, ಕಾರ್ಮಿಕರ ಬದುಕು ಡೋಲಾಯಮಾನವಾಗಿದೆ.

ಕನಿಷ್ಟ ಕೂಲಿ, ತುಟಿ ಭತ್ತೆ ಹೆಚ್ಚಳ, ಪರ್ಯಾಯ ಉದ್ಯೋಗ ಸೇರಿದಂತೆ ಹಲವು ಬೇಡಿಕೆಗಳನ್ನು ಸರಕಾರಗಳ ಮುಂದಿಟ್ಟರೂ ಸರಕಾರಗಳು ದಿವ್ಯ ಮೌನ ವಹಿಸಿದೆ ಎಂದು ದೂರಿದರು.


CITU ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಮಾತನಾಡಿ, ಬಾಯಿ ಬಿಟ್ಟರೆ ಅಭಿವೃದ್ಧಿಯ ಮಂತ್ರ ಜಪಿಸುವ ಡಬ್ಬಲ್ ಇಂಜಿನ್ ಸರಕಾರಗಳು ಬೀಡಿ ಕಾರ್ಮಿಕರ ಏಳಿಗೆಗಾಗಿ ಕಿಂಚಿತ್ತೂ ಗಮನ ನೀಡಿಲ್ಲ. ಮಾತ್ರವಲ್ಲದೆ ವಿಧಾನಸಭೆ ಸಂಸತ್ತಿನಲ್ಲಿ ಶಾಸಕ ಸಂಸದರು ಒಂದು ಶಬ್ದನೂ ಮಾತನಾಡಿಲ್ಲ ಎಂದು ಹೇಳಿದರು.

ಪ್ರತಿಭಟನೆ ಬಳಿಕ ತಹಶೀಲ್ದಾರ್ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ನೀಡಲಾಯಿತು.

CITU ನಾಯಕರಾದ ಉದಯ ಕುಮಾರ್‌, ಜಯಂತಿ ಬಿ ಶೆಟ್ಟಿ, ಜಯಲಕ್ಷ್ಮಿ, ಬೀಡಿ ಕಾರ್ಮಿಕರ ಮುಖಂಡರಾದ ಲೋಲಾಕ್ಷಿ ಬಂಟ್ವಾಳ, ಗಿರಿಜಾ,ವಿಮಲ, ಸರಸ್ವತಿ, ಚಂದ್ರ ಪೂಜಾರಿ, ಜನಾರ್ದನ ಕುಲಾಲ್ ಮುಂತಾದವರು ವಹಿಸಿದ್ದರು.

Click to comment

Leave a Reply

Your email address will not be published. Required fields are marked *

BANTWAL

ಬೈಕ್‌ಗಳು ಪರಸ್ಪರ ಮು*ಖಾಮು*ಖಿ ; ಬಾಲಕಿ ಸಾ*ವು

Published

on

ಬಂಟ್ವಾಳ: ಬೈಕ್ ಗಳ ನಡುವೆ ಭೀ*ಕರ ಅ*ಪಘಾ*ತ ಸಂಭವಿಸಿ ಬೈಕ್ ನಲ್ಲಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃ*ತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಿನ್ನೆ (ಜ.14) ರಾತ್ರಿ ನಡೆದಿದೆ.

ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಮೃ*ತ ಬಾಲಕಿ ಎಂದು ಗುರುತಿಸಲಾಗಿದೆ.

ಬಾಲಕಿಯ ತಂದೆ ಬೈಕ್ ಚಾಲಕ ಅಬ್ದುಲ್ ರಹಮಾನ್ ಕೂಡ ಗಾ*ಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

ಇದನ್ನೂ ಓದಿ : ಮಂಗಳೂರು: ಕೈದಿಗಳಿಂದ ಜೈಲು ಅಧಿಕಾರಿ, ಸಿಬಂದಿಯ ಕರ್ತವ್ಯಕ್ಕೆ ಅಡ್ಡಿ

 

ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ರಾಂಗ್ ಸೈಡ್ ನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬಾತ ಬಿ.ಸಿ ರೋಡಿನ ಕಡೆಯಿಂದ ತುಂಬೆ ಕಡೆಗೆ ಸರಿಯಾದ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿ*ಕ್ಕಿ ಹೊಡೆದಿದ್ದಾನೆ. ರಂಜಿತ್ ಗೆ ಕೂಡ ಗಾ*ಯವಾಗಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.

ಅ*ಪಘಾ*ತ ನಡೆದ ರಭಸಕ್ಕೆ ಬೈಕ್ ಸಂಪೂರ್ಣ ಜ*ಖಂಗೊಂಡಿದೆ. ಘಟನಾ ಸ್ಥಳಕ್ಕೆ ಪಾಣೆಮಂಗಳೂರು ಟ್ರಾಫಿಕ್ ಎಸ್.ಐ ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

BANTWAL

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆ

Published

on

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಿನ್ನೆ ಸಂಜೆ ಮತ್ತು ರಾತ್ರಿ ಮಳೆಯಾಗಿದ್ದು, ಕೆಲವೆಡೆ ಮಳೆಗಾಲದಂತೆ ಜೋರಾಗಿ ಮಳೆಯಾಗಿದೆ.

ಬೆಳ್ತಂಗಡಿ,ಸುಳ್ಯ ತಾಲೂಕಿನಲ್ಲಿ ಮಳೆಯಿಂದಾಗಿ ರೈತರು ಒಣ ಹಾಕಿದ್ದ ಅಡಿಕೆಗಳು ಒದ್ದೆಯಾಗಿ ನಷ್ಟ ಉಂಟಾಗಿದೆ. ಬಂಟ್ವಾಳದಲ್ಲಿ ಸಾಧಾರಣ ಮಳೆಯಾಗಿದ್ದು, ಮೆಲ್ಕಾರಿನಲ್ಲಿ ನಡೆಯುತ್ತಿದ್ದ ಕಟೀಲು ಯಕ್ಷಗಾನ ಬಯಲಾಟ ವೀಕ್ಷಣೆ ಮಾಡುತ್ತಿದ್ದವರು ಎದ್ದು ಮಳೆಯಿಂದ ರಕ್ಷಣೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಮಂಗಳೂರಿಗೆ ಆಗಮಿಸಲಿದ್ದಾರೆ ಡಾಲಿ ಚಾಯ್ ವಾಲ

ಮಂಗಳೂರು ಸುತ್ತಮುತ್ತ ಕೂಡಾ ಮಳೆಯಾಗಿದ್ದು ,ಉಳ್ಳಾಲದಲ್ಲಿ ಅರ್ಧಗಂಟೆಗೂ ಅಧಿಕ ಕಾಲ ಮಳೆ ಸುರಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಧ್ಯ ಪಾಕಿಸ್ತಾನ ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ಉಂಟಾದ ಹವಾಮಾನ ವೈಪರೀತ್ಯದಿಂದ ಈಶಾನ್ಯ ಅರೇಬಿಯನ್ ಸಮುದ್ರದಿಂದ ಪಶ್ಚಿಮ ಮಾರುತ ಬೀಸುತ್ತಿರುವುದು ಈ ಮಳೆಗೆ ಕಾರಣ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Continue Reading

BANTWAL

ಬಂಟ್ವಾಳ: ಇಡಿ ಅಧಿಕಾರಿಗಳ ಸೋಗಿನಲ್ಲಿ ಹಣ ದೋಚಿದ ಮನೆಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ

Published

on

ಬಂಟ್ವಾಳ: ಇಡಿ ಅಧಿಕಾರಿಗಳ ಸೋಗಿನಲ್ಲಿ ಹಣ ದರೋಡೆಯಾಗಿರುವ ಬಂಟ್ವಾಳ ತಾಲೂಕಿನ ಬೋಳಂತೂರು ನಾರ್ಶದ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಅವರ ಮನೆಗೆ ಸ್ಪೀಕರ್ ಯು.ಟಿ. ಖಾದರ್, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ತಂಡ ಬುಧವಾರ ಬೆಳಗ್ಗೆ ಭೇಟಿ ನೀಡಿ ತನಿಖೆಯ ಪ್ರಗತಿ ಪರಿಶೀಲನೆ ಮತ್ತು ಕಾರ್ಯವಿಧಾನದ ಕುರಿತು ಮನೆಯವರ ಜೊತೆಗೆ ಗೌಪ್ಯ ಸಮಾಲೋಚನೆ ನಡೆಸಿದರು.

ಇದೇ ವೇಳೆ ಮಾತನಾಡಿದ ಸ್ಪೀಕರ್ ಯು.ಟಿ.ಖಾದರ್ ಅವರು, ತನಿಖೆ ಇನ್ನಷ್ಟು ತೀವ್ರಗೊಳಿಸಲು ಪೊಲೀಸ್ ಇಲಾಖೆಯು ಆಧುನಿಕ ತಂತ್ರಜ್ಞಾನದೊಂದಿಗೆ ಉನ್ನತ ಮಟ್ಟದ ತನಿಖೆ ನಡೆಸುತ್ತಿದೆ. ಇದಕ್ಕೆ ಊರವರ ಮತ್ತು ಮನೆಯವರ ಸಹಕಾರ ಅಗತ್ಯ. ಈಗಾಗಲೇ ಡಿವೈಎಸ್ಪಿ ನೇತೃತ್ವದ 4 ತಂಡಗಳನ್ನು ರಚಿಸಲಾಗಿದೆ. ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಈ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಶೀಘ್ರವೇ ದರೋಡೆಕೋರರ ಪತ್ತೆ ಹಚ್ಚುವಲ್ಲಿ ಕ್ರಮಕೈಗೊಳ್ಳಲಾಗುವುದು ಎಂದರು.

ಇದಕ್ಕೂ ಮುನ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್, ಡಿವೈಎಸ್ಪಿ ವಿಜಯ ಪ್ರಸಾದ್ ಜೊತೆಗೆ ದರೋಡೆಗೊಳಗಾದ ಮನೆಯ ಮಾಲಕ ಸುಲೈಮಾನ್ ಹಾಜಿ ಹಾಗೂ ಪುತ್ರ ಇಕ್ಬಾಲ್ ಜೊತೆಗೆ ಗೌಪ್ಯ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ, ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ಎಚ್.ಇ. ನಾಗರಾಜ್, ಸಬ್ ಇನ್ಸ್ ಪೆಕ್ಟರ್ ವಿದ್ಯಾ ಮೊದಲಾದವರು ಉಪಸ್ಥಿತರಿದ್ದರು.

Continue Reading

LATEST NEWS

Trending

Exit mobile version