Connect with us

    LATEST NEWS

    ತಿರುಪತಿ ಲಡ್ಡಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ; ಗುಣಮಟ್ಟ ಪರೀಕ್ಷೆಗೆ ಸಮಿತಿ ರಚನೆ

    Published

    on

    ಮಂಗಳೂರು/ಆಂಧ್ರ : ದೇಶ – ವಿದೇಶದ ಭಕ್ತರನ್ನು ಹೊಂದಿರುವ ದೇಶದ ಪ್ರಸಿದ್ಧ ದೇವಸ್ಥಾನ ತಿರುಪತಿಯಲ್ಲಿ ಪ್ರಸಾದ ರೂಪವಾಗಿ ನೀಡುವ ಲಡ್ಡು ಅಪವಿತ್ರವಾಗಿರುವ ವಿಚಾರ ಬೆಳಕಿಗೆ ಬಂದಿದೆ. ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಆರೋಪದ ಬಳಿಕ ಲ್ಯಾಬ್‌ ಪರೀಕ್ಷೆಯಲ್ಲಿ ಲಡ್ಡು ಅಪವಿತ್ರವಾಗಿರುವುದು ಸಾಬೀತಾಗಿದೆ. ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಇದೀಗ ತುಪ್ಪದ ಗುಣಮಣ್ಣ ಪರೀಕ್ಷೆಗೆ ಸಮಿತಿಯನ್ನು ರಚಿಸಲಾಗಿದೆ.

    ಡಾ.ಸುರೇಂದ್ರನಾಥ್, ಡಾ.ವಿಜಯ್ ಭಾಸ್ಕರ್ ರೆಡ್ಡಿ, ಡಾ.ಸ್ವರ್ಣಲತಾ ಮತ್ತು ಡಾ.ಮಹದೇವನ್ ಅವರನ್ನೊಳಗೊಂಡ ನಾಲ್ಕು ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ಒಂದು ವಾರದ ಒಳಗಾಗಿ ವರದಿ ನೀಡಲಿದೆ ಎಂದು ಟಿಟಿಡಿ ಕಾರ್ಯನಿರ್ವಹಣಾಧಿಕಾರಿ ಜೆ. ಶ್ಯಾಮಲಾ ರಾವ್ ಮಾಹಿತಿ ನೀಡಿದ್ದಾರೆ. ತುಪ್ಪ ಸರಬರಾಜು ಮಾಡಲು ಟೆಂಡರ್ ಪಡೆದವರು ಕಳಪೆ ತುಪ್ಪ ಪೂರೈಕೆ ಮಾಡಿದ್ರೆ, ಕಠಿಣ ಕ್ರಮ ಜರುಗಿಸುವ ಎಚ್ಚರಿಕೆಯನ್ನೂ ನೀಡಲಾಗಿದೆ. ಕಲಬೆರಕೆಯ ಪರೀಕ್ಷಾ ಸಾಧನಗಳಿಲ್ಲದ ಕಾರಣ ಈ ಪ್ರಮಾದ ಉಂಟಾಗಿದೆ ಎಂದು ಹೇಳಿದ್ದಾರೆ.

    ಇದನ್ನೂ ಓದಿ : ಉದ್ಯಮಿ ಮನೆ ದರೋಡೆ ಪ್ರಕರಣ; ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರ ಬಂಧನ

    ತಿರುಪತಿಯ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಹಾಗೂ ಮೀನಿನ ಎಣ್ಣೆಯ ಬಳಕೆ ಬಗ್ಗೆ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದು ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ಉಂಟು ಮಾಡಿದ ಪ್ರಕರಣವಾಗಿದ್ದು, ಅಸಂಖ್ಯಾತ ಹಿಂದೂಗಳಿಗೆ ಇದರಿಂದ ನೋವು ಉಂಟಾಗಿದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಇದರಲ್ಲಿ ಭಾಗಿಯಾಗಿರುವ ಆಂಧ್ರ ಪ್ರದೇಶದ ಹಿಂದಿನ ವೈಎಸ್‌.ಆರ್ ಸರಕಾರದ ಎಲ್ಲರನ್ನೂ ತನಿಖೆಗೆ ಒಳಪಡಿಸಬೇಕು ಎಂದು ವಿಶ್ವಹಿಂದೂ ಪರಿಷತ್ ಆಗ್ರಹಿಸಿದೆ.

     

    LATEST NEWS

    ಅಮಾನವೀಯ ಕೃತ್ಯ; ಲೈಂಗಿಕ ಕಿರುಕುಳ ನಿಡಿ ಬಾಲಕಿಯ ಹತ್ಯೆ

    Published

    on

    ಮಂಗಳೂರು/ಚಿಕ್ಕಮಗಳೂರು: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಪ್ರಯತ್ನಿಸಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಜಿಲ್ಲೆಯ ಅಜ್ಜಂಪುರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


    ಜ್ವರವಿದ್ದ ಕಾರಣ ಅಂಗನವಾಡಿಗೆ ಹೋಗದೆ ಮನೆಯಲ್ಲಿ ಬಾಲಕಿಯೊಬ್ಬಳೆ ಇದ್ದ ವಿಚಾರ ತಿಳಿದುಕೊಂಡು ಮನೆಗೆ ನುಗ್ಗಿದ ದುರುಳರು ಅತ್ಯಾಚಾರಕ್ಕೆ ಯತ್ನಿಸಿ ಕೊಲೆಗೈದಿದ್ದಾರೆ. ನಂತರ ಬಾಲಕಿಯ ಮೃತದೇಹವನ್ನು ಬೆಡ್‌ಶೀಟ್‌ನಲ್ಲಿ ಸುತ್ತಿಟ್ಟು ಪರಾರಿಯಾಗಿದ್ದಾರೆ.
    ತಾಯಿ ಜಮೀನು ಕೆಲಸಕ್ಕೆ ಹೋಗಿದ್ದು ಮಗುವೊಂದೇ ಮನೆಯಲ್ಲಿದ್ದ ವೇಳೆ ಮನೆಗೆ ನುಗ್ಗಿದ ಕಾಮುಕರು ಏಕಾಏಕಿ ಮಗು ಮೇಲೆ ಅಮಾನುಷವಾಗಿ ಹಿಂಸೆನೀಡಿ ಕೊಲೆ ಮಾಡಿರುವುದಾಗಿ ವರದಿಯಾಗಿದೆ. ತಾಯಿ ಕೆಲಸ ಮುಗಿಸಿ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಅಜ್ಜಂಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ.

    Continue Reading

    LATEST NEWS

    ಹೈಕೋರ್ಟ್‌ ನ್ಯಾಯಾಧೀಶರ ಹೇಳಿಕೆ ವಿಚಾರದಲ್ಲಿ ಸುಪ್ರೀಂಕೋರ್ಟ್ ಎಂಟ್ರಿ..!

    Published

    on

    ಮಂಗಳೂರು/ ನವದೆಹಲಿ : ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರ ವಿವಾದಾತ್ಮಕ ಹೇಳಿಕೆಯ ವಿಚಾರವನ್ನು ಸುಪ್ರೀಂಕೋರ್ಟ್‌ ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಂಡಿದೆ. ಸಾಮಾಜಿಕ ಜಾಲತಾಣದಲ್ಲಿ ನ್ಯಾಯಾಧೀಶರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ಐವರು ನ್ಯಾಯಾಧೀಶರ ಪೀಠವು ಈ ವಿಚಾರ ಕೈಗೆತ್ತಿಕೊಂಡಿದೆ.

    ಇತ್ತೀಚೆಗೆ ವಿಚಾರಣೆಯ ವೇಳೆ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರು ಬೆಂಗಳೂರಿನಲ್ಲಿ ಮುಸ್ಲಿಂ ಪ್ರಾಬಲ್ಯ ಇರುವ ಪ್ರದೇಶವನ್ನು “ಪಾಕಿಸ್ತಾನ” ಎಂದು ಕರೆದು ಇದೇ ಸತ್ಯ ಎಂದು ಹೇಳಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿ ನ್ಯಾಯಮೂರ್ತಿಯ ಈ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

    ಭೂ ಮಾಲೀಕ ಹಾಗೂ ಹಿಡುವಳಿದಾರರ ಜಮೀನು ವಿವಾದದ ಕುರಿತಾದ ವಿಚಾರಣೆಯಲ್ಲಿ ನ್ಯಾಯಮೂರ್ತಿ ಶ್ರೀಶಾನಂದ ಅವರು ಈ ಹೇಳಿಕೆಯನ್ನು ನೀಡಿದ್ದರು. ಇಷ್ಟೇ ಅಲ್ಲದೆ, ಮಹಿಳಾ ವಕೀಲರ ವಿರುದ್ಧ ಸ್ತ್ರೀ ದ್ವೇಷದ ಹೇಳಿಕೆ ಕೂಡ ನೀಡಿದ್ದರು.

    ಸುಪ್ರೀಂ ಕೋರ್ಟ್‌ ಈ ವಿಚಾರವಾಗಿ ಹೇಳಿದ್ದೇನು ?

    ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರನ್ನೊಳಗೊಂಡ ಸುಪ್ರೀಂ ಕೋರ್ಟ್‌ ಪೀಠವು, ನ್ಯಾಯಾಂಗದ ಸೌಹಾರ್ದತೆಯನ್ನು ಕಾಪಾಡಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದೆ. ನ್ಯಾಯಾಲಯದ ವಿಚಾರಣೆಯ ಸಮಯದಲ್ಲಿನ ಈ ಹೇಳಿಕೆಗಳಿಗೆ ಸಂಬಂಧಿಸಿದಂತೆ ಸಾಂವಿಧಾನಿಕ ನ್ಯಾಯಾಲಯದ ನ್ಯಾಯಾಧೀಶರಿಗೆ ಸ್ಪಷ್ಟ ಮಾರ್ಗಸೂಚಿಗಳನ್ನು ಸ್ಥಾಪಿಸುವ ಅಗತ್ಯವನ್ನು ಒತ್ತಿಹೇಳಿತು.

    ಸಾಮಾಜಿಕ ಮಾಧ್ಯಮಗಳು ನ್ಯಾಯಾಲಯದ ಕಲಾಪಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಅದನ್ನು ಹಂಚಿಕೊಳ್ಳುತ್ತಿದೆ. ಹೀಗಾಗಿ ನ್ಯಾಯಾಂಗದ ಹೇಳಿಕೆಗಳು ನ್ಯಾಯಾಲಯದ ಪ್ರಚಲಿತ ವಿಚಾರಗಳ ಜೊತೆ  ಹೊಂದಿಕೆಯಾಗುವುದನ್ನು ಖಚಿತಪಡಿಸಿಕೊಳ್ಳುವುದು ತುರ್ತು ಎಂದು ಪೀಠವು ಹೇಳಿದೆ.

    ಇದನ್ನೂ ಓದಿ : ಗಂಭೀರ ಆರೋಪದ ಸುಳಿಯಲ್ಲಿ ಸಿಕ್ಕ ಬಿಜೆಪಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್‌

    “ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಗಳು ಮಾಡಿದ ಕಾಮೆಂಟ್‌ಗಳ ಮಾಧ್ಯಮ ವರದಿಗಳ ಬಗ್ಗೆ ಗಮನ ಸೆಳೆಯಲಾಗಿದೆ. ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಿಂದ ಸೂಚನೆಗಳನ್ನು ಪಡೆದ ನಂತರ ವರದಿಯನ್ನು ಸಲ್ಲಿಸುವಂತೆ ನಾವು ಕರ್ನಾಟಕ ಹೈಕೋರ್ಟ್‌ಗೆ ವಿನಂತಿಸುತ್ತೇವೆ” ನ್ಯಾಯಮೂರ್ತಿ ಚಂದ್ರಚೂಡ್ ತಿಳಿಸಿದ್ದಾರೆ.

    Continue Reading

    LATEST NEWS

    ಗಂಭೀರ ಆರೋಪದ ಸುಳಿಯಲ್ಲಿ ಸಿಕ್ಕ ಬಿಜೆಪಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್‌

    Published

    on

    ಮಂಗಳೂರು/ಬೆಂಗಳೂರು : ಗುತ್ತಿಗೆದಾರನಿಗೆ ಬೆದರಿ*ಕೆ, ಜಾತಿ ನಿಂದನೆ ಹಾಗೂ ಹಣದ ಆಮಿಷ ಒಡ್ಡಿದ ಆರೋಪದಲ್ಲಿ ಜೈಲು ಪಾಲಾಗಿದ್ದ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಜಾಮೀನು ಮೇಲೆ ಬಿಡುಗಡೆಯಾಗಿದ್ದಾರೆ. ಆದ್ರೆ ಜಾಮೀನು ಪಡೆದು ಹೊರಬರುತ್ತಿದ್ದಂತೆ, ಶಾಸಕ ಹೊರಬರುತ್ತಿದ್ದಂತೆ ಅತ್ಯಾಚಾ*ರ ಪ್ರಕರಣದಲ್ಲಿ ರಾಮನಗರ ಪೊಲೀಸರು ಮುನಿರತ್ನರನ್ನ ಬಂಧಿಸಿದ್ದಾರೆ.

    ಗುತ್ತಿಗೆದಾರನಿಗೆ ಜೀವ* ಬೆದರಿ*ಕೆ ಹಾಕಿದ ಪ್ರಕರಣದಲ್ಲಿ ಮುನಿರತ್ನ ಅಂದರ್ ಆಗುತ್ತಿದ್ದಂತೆ ಹಲವು ಶಾಕಿಂಗ್ ವಿಚಾರಗಳು ಬೆಳಕಿಗೆ ಬಂದಿವೆ. ಅತ್ಯಾಚಾ*ರ, ಎದುರಾಳಿಗಳನ್ನು ಮಟ್ಟ ಹಾಕಲು ಅವರ ಖಾಸಗಿ ವಿಡಿಯೋಗಳ ದುರ್ಬಳಕೆ, ಹನಿಟ್ರ್ಯಾಪ್‌ನಲ್ಲಿ ಹೆಚ್‌ಐವಿ ಸೋಂಕಿತರ ಬಳಕೆ ಹೀಗೆ ಅನೇಕ ಆರೋಪಗಳು ಮುನಿರತ್ನ ಮೇಲೆ ಕೇಳಿ ಬಂದಿದೆ. ಅತ್ಯಾಚಾ*ರ ಹಾಗೂ ಬೆದರಿ*ಕೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿದ್ದು,  ಪೊಲೀಸರು ಮುನಿರತ್ನರನ್ನು ಬಂಧಿಸಿದ್ದಾರೆ.

    ಮುನಿರತ್ನ ಮೇಲೆ ಇರುವ ಗಂಭೀರ ಆರೋಪಗಳು :

    ಅನೇಕ ಮಂದಿಯ ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಮುನಿರತ್ನ ಬ್ಲ್ಯಾಕ್​ಮೇಲ್ ಮಾಡುತ್ತಿದ್ದುದಲ್ಲದೆ, ರಾಜಕೀಯ ಎದುರಾಳಿಗಳನ್ನು ಮಣಿಸಲು ಅವುಗಳನ್ನು ಬಳಕೆ ಮಾಡುತ್ತಿದ್ದರು.  ಅವರು ಈ ವಿಡಿಯೋಗಳನ್ನು ಇಟ್ಟುಕೊಂಡು ಬೆದರಿ*ಕೆ ಹಾಕುತ್ತಿದ್ದಾರೆ ಅಂತ ಅತ್ಯಾಚಾ*ರದ ಸಂತ್ರ*ಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದೇ ಸಂ*ತ್ರಸ್ತೆಯ ವೀಡಿಯೋ ಇಟ್ಟುಕೊಂಡು ಹಲವರ ಹನಿಟ್ರ್ಯಾಪ್‌ಗೆ ಯತ್ನಿಸಿದ್ದರು ಮಾತ್ರವಲ್ಲದೆ ಹೆಚ್‌ಐವಿ ಸೋಂಕಿತರನ್ನೂ ಇದಕ್ಕಾಗಿ ಬಳಕೆ ಮಾಡಿದ್ದಾಗಿ ಆರೋಪಿಸಿದ್ದಾರೆ.

    ಇದನ್ನೂ ಓದಿ : ಬಸ್ ಚಾಲನೆ ವೇಳೆಯೇ ಚಾಲಕನಿಗೆ ಹೃದಯಘಾತ,; ಪೊಲೀಸರ ಸಮಯಪ್ರಜ್ಞೆಯಿಂದ ಉಳಿಯಿತು 45 ಜೀವ !

    ರಾಜಕೀಯ ಎದುರಾಳಿಗಳ ಹಣಿಯಲು ಮುನಿರತ್ನ ಅಟ್ರಾಸಿಟಿ ಕೇಸ್​​ಗಳ ದುರ್ಬ*ಳಕೆ ಮಾಡುತ್ತಿದ್ದರು ಎಂಬ ಆರೋಪವೂ ಈಗ ಕೇಳಿಬಂದಿದೆ. ಮುನಿರತ್ನ ಅಟ್ರಾಸಿಟಿ ಕೇಸ್​​ಗಳನ್ನೇ ದಾಳವನ್ನಾಗಿ ಬಳಸಿಕೊಳ್ಳುತ್ತಿದ್ದರು. ಹಣ ಕೊಟ್ಟು ಪ್ರಭಾವ ಬಳಸಿ ಅಟ್ರಾಸಿಟಿ ಕೇಸ್​​ಗಳನ್ನು ದಾಖಲಿಸುತ್ತಿದ್ದರು. ಈ ಹಿಂದೆ ಆರ್​ಆರ್ ನಗರದಲ್ಲಿ ಹಲವರ ವಿರುದ್ಧ ಅಟ್ರಾಸಿಟಿ ಕೇಸ್​ಗಳು ದಾಖಲಾಗಿದ್ದವು ಎಂದು ಮೂಲಗಳು ತಿಳಿಸಿವೆ.

    Continue Reading

    LATEST NEWS

    Trending