LATEST NEWS
ತಿರುಪತಿ ಲಡ್ಡಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ; ಗುಣಮಟ್ಟ ಪರೀಕ್ಷೆಗೆ ಸಮಿತಿ ರಚನೆ
ಮಂಗಳೂರು/ಆಂಧ್ರ : ದೇಶ – ವಿದೇಶದ ಭಕ್ತರನ್ನು ಹೊಂದಿರುವ ದೇಶದ ಪ್ರಸಿದ್ಧ ದೇವಸ್ಥಾನ ತಿರುಪತಿಯಲ್ಲಿ ಪ್ರಸಾದ ರೂಪವಾಗಿ ನೀಡುವ ಲಡ್ಡು ಅಪವಿತ್ರವಾಗಿರುವ ವಿಚಾರ ಬೆಳಕಿಗೆ ಬಂದಿದೆ. ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಆರೋಪದ ಬಳಿಕ ಲ್ಯಾಬ್ ಪರೀಕ್ಷೆಯಲ್ಲಿ ಲಡ್ಡು ಅಪವಿತ್ರವಾಗಿರುವುದು ಸಾಬೀತಾಗಿದೆ. ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಇದೀಗ ತುಪ್ಪದ ಗುಣಮಣ್ಣ ಪರೀಕ್ಷೆಗೆ ಸಮಿತಿಯನ್ನು ರಚಿಸಲಾಗಿದೆ.
ಡಾ.ಸುರೇಂದ್ರನಾಥ್, ಡಾ.ವಿಜಯ್ ಭಾಸ್ಕರ್ ರೆಡ್ಡಿ, ಡಾ.ಸ್ವರ್ಣಲತಾ ಮತ್ತು ಡಾ.ಮಹದೇವನ್ ಅವರನ್ನೊಳಗೊಂಡ ನಾಲ್ಕು ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ಒಂದು ವಾರದ ಒಳಗಾಗಿ ವರದಿ ನೀಡಲಿದೆ ಎಂದು ಟಿಟಿಡಿ ಕಾರ್ಯನಿರ್ವಹಣಾಧಿಕಾರಿ ಜೆ. ಶ್ಯಾಮಲಾ ರಾವ್ ಮಾಹಿತಿ ನೀಡಿದ್ದಾರೆ. ತುಪ್ಪ ಸರಬರಾಜು ಮಾಡಲು ಟೆಂಡರ್ ಪಡೆದವರು ಕಳಪೆ ತುಪ್ಪ ಪೂರೈಕೆ ಮಾಡಿದ್ರೆ, ಕಠಿಣ ಕ್ರಮ ಜರುಗಿಸುವ ಎಚ್ಚರಿಕೆಯನ್ನೂ ನೀಡಲಾಗಿದೆ. ಕಲಬೆರಕೆಯ ಪರೀಕ್ಷಾ ಸಾಧನಗಳಿಲ್ಲದ ಕಾರಣ ಈ ಪ್ರಮಾದ ಉಂಟಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಉದ್ಯಮಿ ಮನೆ ದರೋಡೆ ಪ್ರಕರಣ; ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರ ಬಂಧನ
ತಿರುಪತಿಯ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಹಾಗೂ ಮೀನಿನ ಎಣ್ಣೆಯ ಬಳಕೆ ಬಗ್ಗೆ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದು ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ಉಂಟು ಮಾಡಿದ ಪ್ರಕರಣವಾಗಿದ್ದು, ಅಸಂಖ್ಯಾತ ಹಿಂದೂಗಳಿಗೆ ಇದರಿಂದ ನೋವು ಉಂಟಾಗಿದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಇದರಲ್ಲಿ ಭಾಗಿಯಾಗಿರುವ ಆಂಧ್ರ ಪ್ರದೇಶದ ಹಿಂದಿನ ವೈಎಸ್.ಆರ್ ಸರಕಾರದ ಎಲ್ಲರನ್ನೂ ತನಿಖೆಗೆ ಒಳಪಡಿಸಬೇಕು ಎಂದು ವಿಶ್ವಹಿಂದೂ ಪರಿಷತ್ ಆಗ್ರಹಿಸಿದೆ.
FILM
ಶೀಘ್ರದಲ್ಲಿ ತೆರೆಗೆ ಬರಲಿದೆ ‘ದೃಶ್ಯಂ-3’..! ಕ್ಲೂ ಕೊಟ್ಟ ಚಿತ್ರ ತಂಡ..!
ಮಂಗಳೂರು : ಮುಂದೇನಾಗುತ್ತದೆ ಎಂದು ಚಿತ್ರ ಪ್ರೇಮಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿದ್ದ ಸಿನೆಮಾ ತನ್ನ ಮೂರನೇ ಅಧ್ಯಾಯದಲ್ಲಿ ಉತ್ತರ ನೀಡಲು ಮುಂದಾಗಿದೆ. ಸಿನಿಮಾ ಇಂಡಸ್ಟ್ರೀಯಲ್ಲಿ ಸಾಕಷ್ಟು ಸದ್ದು ಮಾಡಿದ್ದ ‘ದೃಶ್ಯಂ’ ಸಿನೆಮಾ ಈಗಾಗಲೇ ‘ದೃಶ್ಯಂ2’ ಮೂಲಕ ಕಥಾನಾಯಕನ ಕ್ರಿಮಿನಲ್ ಮೈಂಡ್ ಬಗ್ಗೆ ಚರ್ಚೆ ಹುಟ್ಟು ಹಾಕಿತ್ತು. ಇದೀಗ ‘ದೃಶ್ಯಂ3’ ಮೂಲಕ ಈ ಕಥೆಗೆ ಅಂತ್ಯ ಹಾಡಲು ಚಿತ್ರ ತಂಡ ಸಿದ್ಧವಾಗಿದೆ.
ಕೇವಲ ಮಲೆಯಾಳಂ ಮಾತ್ರವಲ್ಲದೆ ಇಡೀ ಸಿನೆಮಾ ಇಂಡಸ್ಟ್ರೀಯಲ್ಲೇ ಸಂಚಲನ ಮೂಡಿಸಿದ ಸಿನೆಮಾ ‘ದೃಶ್ಯಂ’. ಸಸ್ಪೆನ್ಸ್ ಥ್ರಿಲರ್ ಸಿನೆಮಾವಾಗಿ ಜನರಿಗೆ ಇಷ್ಟವಾಗಿದ್ದ ಈ ಸಿನೆಮಾ ‘ದೃಶ್ಯಂ2’ ಮೂಲಕ ಇಡೀ ಸಿನೆಮಾ ಇಂಡಸ್ಟ್ರೀಯನ್ನೇ ಅಲ್ಲಾಡಿಸಿತ್ತು. ಕಥೆಯನ್ನೂ ಹೀಗೂ ಬರೆಯಬಹುದು ಅನ್ನೋದನ್ನ ‘ದೃಶ್ಯಂ’ ಮತ್ತು ‘ದೃಶ್ಯಂ2’ ಮೂಲಕ ಜೀತು ಜೋಸೆಫ್ ತೋರಿಸಿಕೊಟ್ಟಿದ್ದರು.
ತನ್ನ ಕುಟುಂಬದ ರಕ್ಷಣೆಗಾಗಿ ಕಥಾನಾಯಕ ಯಾವ ರೀತಿ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ಯಶಸ್ವಿಯಾಗಿದ್ದ ಮತ್ತು ಮೃತ ದೇಹವನ್ನು ಹೇಗೆ ಅಡಗಿಸಿ ಇಟ್ಟಿದ್ದ ಅನ್ನೋದು ‘ದೃಶ್ಯಂ’ ಸಿನೆಮಾದ ಕಥಾವಸ್ತು. ಇನ್ನು ‘ದೃಶ್ಯಂ2’ ನಲ್ಲಿ ಕಥಾ ನಾಯಕನ ಪ್ಲ್ಯಾನ್ ಬಿ ಪ್ರಕಾರ ಮೆಡಿಕಲ್ ಕಾಲೇಜಿನಲ್ಲಿ ಮೃತದೇಹದ ಅಸ್ತಿಗಳನ್ನು ಬದಲಾಯಿಸಿ ತನ್ನ ಕುಟುಂಬವನ್ನು ಕಾಪಾಡುವುದು ಕಥಾವಸ್ತುವಾಗಿತ್ತು.
ಇದನ್ನೂ ಓದಿ : ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಬೆಂಗಳೂರಿನಲ್ಲಿ ಡ್ರ*ಗ್ ಮಾಫಿಯಾ ಕಿಂಗ್ ಪಿನ್ ಅರೆಸ್ಟ್
ಕಥಾನಾಯಕನ ಈ ಕ್ರಿಮಿನಲ್ ಬುದ್ದಿಗೆ ಕೊನೆ ಇಲ್ಲವಾ ಎಂದು ‘ದೃಶ್ಯಂ2’ ನೋಡಿದ ಚಿತ್ರ ಅಭಿಮಾನಿಗಳು ಪ್ರಶ್ನೆ ಮಾಡಿದ್ದರು. ಇದೀಗ ‘ದೃಶ್ಯಂ3’ ಮೂಲಕ ಚಿತ್ರತಂಡ ಅಭಿಮಾನಿಗಳಿಗೆ ಮತ್ತೊಂದು ಸಸ್ಪೆನ್ಸ್ ಮೂಲಕ ಉತ್ತರ ನೀಡಲು ಮುಂದಾಗಿದೆ.
2025 ರ ಡಿಸೆಂಬರ್‌ನಲ್ಲಿ ಕ್ರಿಸ್‌ಮಸ್ ವೇಳೆ ಚಿತ್ರವನ್ನು ತೆರೆ ಮೇಲೆ ತರಲು ಸಿದ್ಧತೆ ನಡೆಸಿದೆ. ಸಿನೆಮಾದ ಚಿತ್ರೀಕರಣ ಆರಂಭವಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ಹರಡಿದೆ. ಚಿತ್ರದ ಕಥೆ ಸಿದ್ದವಾಗಿದ್ದು, ‘ಕ್ಲಾಸಿಕ್ ಕ್ರಿಮಿನಲ್ ಈಸ್ ಬ್ಯಾಕ್’ ಎಂದು ಅಭಿಮಾನಿಗಳು ಪೋಸ್ಟರ್ ಹಂಚಿಕೊಳ್ಳುತ್ತಿದ್ದಾರೆ.
DAKSHINA KANNADA
ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಬೆಂಗಳೂರಿನಲ್ಲಿ ಡ್ರ*ಗ್ ಮಾಫಿಯಾ ಕಿಂಗ್ ಪಿನ್ ಅರೆಸ್ಟ್
ಮಂಗಳೂರು : ಡ್ರ*ಗ್ಸ್ ಜಾಲದ ಬೆನ್ನು ಹತ್ತಿ ಬೇಟೆಯಾಡಿದ ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಆರು ಕೋಟಿ ರೂ. ಮೌಲ್ಯದ ಡ್ರ*ಗ್ಸ್ ವಶಪಡಿಸಿಕೊಂಡಿದ್ದಾರೆ. ಡ್ರ*ಗ್ ಫ್ರೀ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತರು ಕೈಗೊಂಡ ಕಟ್ಟು ನಿಟ್ಟಿನ ಕ್ರಮಕ್ಕೆ ಇದೊಂದು ದೊಡ್ಡ ಗೆಲುವಾಗಿದೆ. ಈ ಕಾರ್ಯಾಚರಣೆಯ ವಿಚಾರವಾಗಿ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಸೆಪ್ಟಂಬರ್ 29 ರಂದು ಪಂಪ್‌ವೆಲ್ ಬಳಿಯ ಲಾಡ್ಜ್ ಒಂದರಲ್ಲಿ ಹೈದರ್ ಎಂಬಾತನನ್ನು ಮಂಗಳೂರು ಪೂರ್ವ ಪೊಲೀಸರು ಡ್ರಗ್ ಸಮೇತ ಬಂಧಿಸಿದ್ದರು. ಬಳಿಕ ಈ ಪ್ರಕರಣವನ್ನು ಸಿಸಿಬಿಗೆ ಹಸ್ತಾಂತರಿಸಲಾಗಿದ್ದು, ಸಿಸಿಬಿ ಪೊಲೀಸರು ಆರೋಪಿಗೆ ಡ್ರ*ಗ್ ಪೂರೈಕೆ ಮಾಡುವ ಜಾಲದ ತನಿಖೆ ಆರಂಭಿಸಿದ್ದರು.
ಆರೋಪಿಯಿಂದ ಹಲವು ಮಾಹಿತಿ ಪಡೆದುಕೊಂಡ ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿದ್ದ ನೈಜೇರಿಯಾ ಮೂಲದ ಪೀಟರ್ ಅಕೆಡಿ ಬೆಲನೋವು ಎಂಬಾತನ ಮನೆಗೆ ದಾಳಿ ಮಾಡಿದ್ದಾರೆ. ಈ ವೇಳೆ ಆತನ ಮನೆಯಲ್ಲಿ ಒಟ್ಟು 6 ಕೋಟಿ ಮೌಲ್ಯದ 6 ಕೆಜಿ 310 ಗ್ರಾಂ ಎಂಡಿಎಂಎ ಪತ್ತೆಯಾಗಿದೆ.
ಇದನ್ನೂ ಓದಿ : ಕೇಕ್ ತಿಂದು ಒಂದೇ ಕುಟುಂಬದ ಮೂವರು ಅಸ್ವಸ್ಥ; 5 ವರ್ಷದ ಮಗು ದಾರುಣ ಸಾ*ವು
ಈತ ಕರ್ನಾಟಕ, ಕೇರಳ ಸೇರಿದಂತೆ ಹಲವು ರಾಜ್ಯಗಳಿಗೆ ಈ ಮಾ*ದಕ ವಸ್ತು ಪೂರೈಕೆ ಮಾಡುತ್ತಿದ್ದ ಎಂಬ ವಿಚಾರ ಕೂಡ ತಿಳಿದು ಬಂದಿದೆ. ಈತನ ಮೇಲೆ ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಮಾ*ದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಈ ಹಿಂದೆಯೇ ಪ್ರಕರಣ ದಾಖಲಾಗಿದೆ.
BIG BOSS
ಇತಿಹಾಸದಲ್ಲೇ ಮೊದಲು.. ಬಿಗ್ಬಾಸ್ ಕಂಟೆಸ್ಟಂಟ್ ಆಗಿ ಮನೆಗೆ ಎಂಟ್ರಿ ಕೊಟ್ಟ ಕತ್ತೆ; ಏನಿದರ ಗುಟ್ಟು?
ಈಗಂತೂ ಎಲ್ಲಾ ಭಾಷೆಯಗಳಲ್ಲಿ ಬಿಗ್ಬಾಸ್ನದ್ದೇ ಹವಾ ಸೃಷ್ಟಿಯಾಗಿದೆ. ಭಾರತದಲ್ಲಿ ಹಲವು ಭಾಷೆಗಳಲ್ಲಿ ಬಿಗ್ಬಾಸ್ ಕಾರ್ಯಕ್ರಮ ಪ್ರಸಾರವಾಗುತ್ತಿದೆ. ಕೆಲವೊಂದು ಭಾಷೆಯಲ್ಲಿ ಈಗಾಗಲೇ ಬಿಗ್ಬಾಸ್ ಸೀಸನ್ ಮುಕ್ತಾಯಗೊಂಡಿದೆ. ಹೀಗೆ ಬಿಗ್ಬಾಸ್ ಕಾರ್ಯಕ್ರಮ ಅಪಾರ ಪ್ರೇಕ್ಷಕರ ಬಳಗವನ್ನು ಹೊಂದಿಕೊಂಡು ಮುನ್ನುಗ್ಗುತ್ತಿದೆ.
ಈಗಾಗಲೇ ಕನ್ನಡದ ದೊಡ್ಡ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ಶುರುವಾಗಿ ಒಂದು ವಾರ ಕಳೆದಿದೆ. ಇದರ ನಡುವೆ ನಿನ್ನೆ ಅಂದ್ರೆ ಭಾನುವಾರ ಹಿಂದಿ ಬಿಗ್ಬಾಸ್ ಸೀಸನ್ 18 ಶುರುವಾಗಿದೆ. ಹೌದು, ಹಿಂದಿ ಬಿಗ್ಬಾಸ್ ಸೀಸನ್ 18 ಶುರುವಾಗಿದೆ. ಆದರೆ ಬಿಗ್ಬಾಸ್ ಇತಿಹಾಸದ ಮೊಟ್ಟ ಮೊದಲ ಬಾರಿಗೆ ಸಾಕು ಪ್ರಾಣಿಯೊಂದನ್ನು ಮನೆಗೆ ಕಳುಹಿಸಲಾಗಿದೆ. ಒಟ್ಟು 19 ಕಂಟೆಸ್ಟೆಂಟ್ಗಳ ಜೊತೆಗೆ ಒಂದು ಕತ್ತೆ ಕೂಡ ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟಿದೆ.
ಸಲ್ಮಾನ್ ಖಾನ್ ನಡೆಸಿಕೊಡುತ್ತಿರೋ ಬಿಗ್ಬಾಸ್ ಸೀಸನ್ 18 ಕಾರ್ಯಕ್ರಮದಲ್ಲಿ ಈ ಕತ್ತೆ ಎಂಟ್ರಿ ಕೊಟ್ಟಿದೆ. ವೇದಿಕೆಗೆ 19ನೇ ಸ್ಪರ್ಧಿಯಾಗಿ ಬಂದ ಕತ್ತೆಯನ್ನು ನೋಡಿದ ವೀಕ್ಷಕರು ಫುಲ್ ಶಾಕ್ ಆಗಿದ್ದಾರೆ. ಬಿಗ್ಬಾಸ್ ಮನೆಗೆ ಬಂದ ‘ಗಧರಾಜ್’ ಕತ್ತೆಯನ್ನು ಕಂಡು ಮನೆ ಮಂದಿ ಫುಲ್ ಶಾಕ್ ಆಗಿದ್ದಾರೆ. ಸದ್ಯ ಹೊಸ ಪ್ರೋಮೋಗಳನ್ನು ನೋಡಿದ ವೀಕ್ಷಕರು ಕುತೂಹಲ ವ್ಯಕ್ತಪಡಿಸುತ್ತಿದ್ದಾರೆ.
- BIG BOSS3 days ago
ಕನ್ನಡ ಬಿಗ್ಬಾಸ್ನಿಂದ ಲಾಯರ್ ಜಗದೀಶ್ ಎಲಿಮಿನೇಷನ್..!
- LATEST NEWS6 days ago
Watch Video: ಕೋಚಿಂಗ್ ಸೆಂಟರ್ನಲ್ಲಿ ವಿದ್ಯಾರ್ಥಿನಿಯೊಂದಿಗೆ ಬಯಾಲಜಿ ಶಿಕ್ಷಕನ ರೊಮ್ಯಾನ್ಸ್
- LATEST NEWS4 days ago
ಗರ್ಲ್ಫ್ರೆಂಡ್ ಜೊತೆ ಜಾಲಿ ರೈಡಿಂಗ್; ಹೆಂಡತಿ ಎದುರು ಬಂದ್ರೆ …!?
- LATEST NEWS5 days ago
ರಾಜ್ಯ ಹೆದ್ದಾರಿಯಲ್ಲೇ ಖ್ಯಾತ ಉದ್ಯಮಿ ಶ*ವ ಪತ್ತೆ