Connect with us

LATEST NEWS

ಜ್ಞಾನವಾಪಿ ಮಸೀದಿ ನಿರ್ಮಾಣ ಮಾಡುವ ಮೊದಲೇ ಅಲ್ಲಿ ಹಿಂದೂ ದೇವಾಲಯ ಇತ್ತು-ವಕೀಲ ವಿಷ್ಣು ಶಂಕರ್

Published

on

ಲಕ್ನೋ: ಅಲಹಾಬಾದ್ ಕೋರ್ಟ್ ನಿರ್ದೇಶನದ ಮೇರೆಗೆ ಕಾಶಿ ವಿಶ್ವನಾಥ ಮಂದಿರದ ಪಕ್ಕದಲ್ಲೇ ಇರುವ ಜ್ಞಾನವಾಪಿ ಮಸೀದಿಯಲ್ಲಿ ಭಾರತೀಯ ಪುರಾತತ್ವ ಇಲಾಖೆಯಿಂದ ನಡೆಸಲಾಗಿದ್ದ ವೈಜ್ಞಾನಿಕ ಸಮೀಕ್ಷಾ ವರದಿ ಬಹಿರಂಗಗೊಂಡಿದೆ.


ಜ್ಞಾನವಾಪಿ ಮಸೀದಿ ಜಾಗದಲ್ಲಿ ಮೊದಲು ಹಿಂದೂ ದೇವಾಲಯ ಇತ್ತು ಅಂತಾ ಪುರಾತತ್ವ ಸರ್ವೇಕ್ಷಣಾ ವರದಿ ಹೇಳಿದೆ ಎಂದು ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಹೇಳಿದ್ದಾರೆ. ಕೋರ್ಟ್ ಆದೇಶದನ್ವಯ ವರದಿ ಪಡೆದಿರುವ ಅವರು ಸುದ್ದಿಗೋಷ್ಠಿ ನಡೆಸಿ ವರದಿಯಲ್ಲಿರುವ ಪ್ರಮುಖ ಅಂಶಗಳ ಬಗ್ಗೆ ಮಾಹಿತಿ ನೀಡಿದ್ದಾರೆ.


ಉತ್ತರ ಪ್ರದೇಶದ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ನಡೆಸಿದ ಸರ್ವೇಯ ವರದಿ ಬಹಿರಂಗವಾಗಿದೆ. ದೇವಸ್ಥಾನ ಮತ್ತು ಮಸೀದಿಯ ಪರ ವಕೀಲರಿಗೆ 839 ಪುಟಗಳ ಸಮೀಕ್ಷಾ ವರದಿಯ ಹಾರ್ಡ್ ಕಾಪಿ ನೀಡಲಾಗಿದ್ದು, ಈ ವಿಚಾರಕ್ಕೆ ವಕೀಲ ವಿಷ್ಣು ಶಂಕರ್, ಎಎಸ್​ಐ ಸರ್ವೇಯ ವರದಿ ನಂತರ ಗೊಂದಲಗಳೆಲ್ಲವೂ ಕ್ಲೀಯರ್ ಆಗಿವೆ. ಯಾರಾದರೂ ಹೊಂದಾಣಿಕೆ ಮಾತನಾಡಿದರೆ ಒಪ್ಪಿಕೊಳ್ಳುವ ಮಾತೇ ಇಲ್ಲ. ಮುಸ್ಲಿಂ ಕಡೆಯವರು ಜಾಗ ಖಾಲಿ ಮಾಡುವುದೊಂದೇ ಇದಕ್ಕೆ ಪರಿಹಾರ ಎಂದು ಪ್ರತಿಪಾದಿಸಿದ್ದಾರೆ. ನಾವು ಕೋರ್ಟ್ ಮೂಲಕ ನಮ್ಮ ದೇವಾಲಯವನ್ನು ವಾಪಸ್ ಪಡೆಯುತ್ತೇವೆ. ಇನ್ಮುಂದೆ ಹಿಂದೂ ಕಡೆಯವರು ಮುಸಲ್ಮಾನರ ಕಡೆಯಿಂದ ಈ ವಿಚಾರದಲ್ಲಿ ಯಾವುದೇ ರಾಜೀ ಮಾಡಿಕೊಳ್ಳುವುದಿಲ್ಲ. ಮುಸ್ಲಿಂ ಕಡೆಯವರು ದೇವಸ್ಥಾನವನ್ನು ಹಿಂದೂಗಳಿಗೆ ಹಸ್ತಾಂತರ ಮಾಡಬೇಕು. ದೇವಸ್ಥಾನ ಕೆಡವಿ ಮಸೀದಿ ನಿರ್ಮಿಸಿರೋದು ಸರ್ವೇ ವರದಿಯಿಂದ ಸ್ಪಷ್ಟವಾಗಿದೆ ಎಂದಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀರ

Published

on

ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್‌ ಹಾನಿಗೊಂಡಿದೆ.

ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

accident

ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.

 

Continue Reading

LATEST NEWS

60ನೇ ವಯಸ್ಸಿಗೆ “ಮಿಸ್ ಯುನಿವರ್ಸ್” ಕಿರೀಟ ಮುಡಿಗೇರಿಸಿಕೊಂಡ ಈಕೆ ಯಾರು ಗೊತ್ತಾ? ಈಕೆಯ ಸೌಂದರ್ಯಕ್ಕೆ ಬೆರಗಾದ್ರು ಜನ..!!

Published

on

ಹೆಚ್ಚಾಗಿ ಮಿಸ್​ ವರ್ಲ್ಡ್​​​, ಮಿಸ್​​ ಯುನಿವರ್ಸ್ ಇನ್ನೂ ಮುಂತಾದ ಸೌಂದರ್ಯ ಸ್ಪರ್ಧೆಯಲ್ಲಿ ಹದಿಹರೆಯದ ಸುಂದರಿಯರೇ ಭಾಗವಹಿಸುತ್ತಾರೆ. ಆದರೆ ಅಲೆಜಾಂಡ್ರಾ ಮಾರಿಸಾ ರೋಡ್ರಿಗಸ್ ಎಂಬ ಮಹಿಳೆ ತನ್ನ 60ನೇ ವಯಸ್ಸಿನಲ್ಲಿ ಮಿಸ್ ಯುನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾಳೆ.

ವೃತ್ತಿಯಲ್ಲಿ ವಕೀಲ ಮತ್ತು ಪತ್ರಕರ್ತೆಯಾಗಿರೋ ಅಲೆಜಾಂಡ್ರಾ ಅವರು 60ನೇ ವಯಸ್ಸಿನಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಮೊದಲ ಮಹಿಳೆ ಎಂಬ ದಾಖಲೆ ಪಡೆದುಕೊಂಡಿದ್ದಾರೆ. ಅರ್ಜೆಂಟೀನಾದ ಬ್ಯೂನಸ್ ಐರಿಸ್​​ನ ರಾಜಧಾನಿ ಲಾ ಪ್ಲಾಟಾದಲ್ಲಿ ನಡೆದ 2024ರ ಮಿಸ್‌ ಯೂನಿವರ್ಸ್ ಬ್ಯೂನಸ್ ಐರಿಸ್ ಸ್ಪರ್ಧೆಯಲ್ಲಿ ಗೆದ್ದು ಇಡೀ ಜಗತ್ತೆ ತಿರುಗಿ ನೋಡುವಂತೆ ಮಾಡಿದ್ದಾಳೆ.

ಇನ್ನೂ 60ನೇ ವಯಸ್ಸಿನಲ್ಲಿಯೂ ಈಕೆಯ ಸೌಂದರ್ಯ ಕಂಡು ನೆಟ್ಟಿಗರು ಫುಲ್​ ಶಾಕ್​ ಆಗಿದ್ದಾರೆ. ಅನೇಕರು ಆಕೆ ಮಿಸ್​​ ಯುನಿವರ್ಸ್​​ ಕಿರೀಟ ಪಡೆದುಕೊಂಡಿರೋದಕ್ಕೆ ಶುಭಾಶಯ ತಿಳಿಸುತ್ತಿದ್ದು ಇನ್ನೂ ಕೆಲವರು ಕಮೆಂಟ್ಸ್‌ಗಳನ್ನು ಹಾಕುತ್ತಿದ್ದಾರೆ.

Continue Reading

LATEST NEWS

ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

Published

on

ಪುತ್ತೂರು :  ಬೊಳ್ವಾರ್ ಬಸ್ ತಂಗುದಾಣದ ಪಕ್ಕದಲ್ಲಿದ್ದ ಬೃಹದಾಕಾರದ ಮರವೊಂದು ಉರುಳಿ ಬಿದ್ದಿದೆ. ಪರಿಣಾಮ ಹಲವು ವಾಹನಗಳು ಜಖಂಗೊಂಡಿವೆ. ವಾಹನ ಮಾಲಕರು ವಾಹನಗಳನ್ನು ಹೊರತೆಗೆಯಲು ಹರಸಾಹಸ ಪಡುವಂತಾಯಿತು.

ಬಿದ್ದ ಮರದಲ್ಲಿದ್ದ ಮಾವಿನಕಾಯಿಗಳನ್ನು ಕೊಯ್ಯಲು ಜನ ಮುಗಿಬಿದ್ದ ಘಟನೆಯೂ ನಡೆಯಿತು. ಬಳಿಕ ಸ್ಥಳೀಯರು ಮರದ ಕೊಂಬೆಗಳನ್ನು ಕಡಿದು ತೆರವುಗೊಳಿಸಿದರು.

ಮರ ಬೀಳುವ ಸಂದರ್ಭ ಯಾರೂ ಇಲ್ಲದ ಪರಿಣಾಮ ಭಾರೀ ದುರಂತವೊಂದು ತಪ್ಪಿದೆ.

ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!

Continue Reading

LATEST NEWS

Trending